Tuesday, March 28, 2023

ನಾಳೆ ಕುದ್ರೋಳಿಯಲ್ಲಿ ದಸರಾ ವೈಭವದ ಶೋಭಾಯಾತ್ರೆ-ವಾಹನ ಸಂಚಾರಕ್ಕೆ ಬದಲಿ ರಸ್ತೆ ವ್ಯವಸ್ಥೆ

ಮಂಗಳೂರು: ನಗರದ ಶ್ರೀ ಗೋಕರ್ಣನಾಧೇಶ್ವರ ದೇವಸ್ಥಾನದಿಂದ ನವದುರ್ಗೆಯರು, ಶಾರದೆ, ಗಣೇಶ ವಿಗ್ರಹ, ವಿವಿಧ ಟ್ಯಾಬ್ಲೋಗಳ ಶೋಭಾಯಾತ್ರೆಗೆ ಅಪಾರ ಜನಸಂಖ್ಯೆ ಸೇರುವ ನಿರೀಕ್ಷೆ ಇರುವುದರಿಂದ ಕಾನೂನು ಸುವ್ಯವಸ್ಥೆ, ವಾಹನಗಳ ಸುಗಮ ಸಂಚಾರ ಹಾಗೂ ಸಾರ್ವಜನಿಕ ಸುರಕ್ಷತೆಯ ದೃಷ್ಠಿಯಿಂದ ಭಾರತೀಯ ಮೋಟಾರು ವಾಹನ ಕಾಯ್ದೆ 1988 ಕಲಂ 115 ಮತ್ತು 116ರಲ್ಲಿ ಪ್ರದತ್ತ ಅಧಿಕಾರವನ್ನು ಚಲಾಯಿಸಿ ನಾಳೆ ಮಧ್ಯಾಹ್ನ 2 ಗಂಟೆಯಿಂದ ಅ.06ರ ಗುರುವಾರ ಬೆಳಿಗ್ಗೆ 6 ಗಂಟೆಯವರೆಗೆ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಾಗಿದೆ.


ಕೊಟ್ಟಾರ ಚೌಕಿ ಜಂಕ್ಷನ್ ಮುಖಾಂತರ ನಗರಕ್ಕೆ ಬರುವ ವಾಹನಗಳ ನಗರ ಪ್ರವೇಶವನ್ನು ನಿಷೇಧಿಸಲಾಗಿದೆ ಹಾಗೂ ವಾಹನಗಳು ಕುಂಟಿಕಾನ, ಕೆ.ಪಿ.ಟಿ, ನಂತೂರು ಮಾರ್ಗವಾಗಿ ನಗರ ಪ್ರವೇಶಿಸುತ್ತದೆ.

ನಗರದಿಂದ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಮುಖೇನ ಕೊಟ್ಟಾರ ಚೌಕಿ ಕಡೆಗೆ ಸಂಚರಿಸುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ನಗರದಿಂದ ಲಾಲ್‍ಬಾಗ್ ಮಾರ್ಗವಾಗಿ ಕುಂಟಿಕಾನ ಹಾಗೂ ಕೆ.ಪಿ.ಟಿ ಕಡೆಗೆ ಸಂಚರಿಸುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಕೆ.ಎಸ್.ಆರ್ ರಸ್ತೆಯಿಂದ ಎಂ.ಜಿ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಪಿ.ವಿ.ಎಸ್ ಮಾರ್ಗವಾಗಿ ಬಂಟ್ಸ್ ಹಾಸ್ಟೆಲ್ ಮೂಲಕ ಸಂಚರಿಸುವುದು. ಅಂಬೇಡ್ಕರ್ ಸರ್ಕಲ್ ಮೂಲಕ ಎಂ.ಜಿ ರಸ್ತೆಗೆ ಸಾಗುವ ವಾಹನಗಳು ಬಂಟ್ಸ್ ಹಾಸ್ಟೆಲ್‍ನಿಂದ ಸಂಚರಿಸುವುದು.

ನ್ಯೂ ಚಿತ್ರಾ ಜಂಕ್ಷನ್‍ನಿಂದ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಮಾರ್ಗವಾಗಿ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಕಡೆಗೆ ಸಂಚರಿಸುವ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ, ವಾಹನಗಳು ನ್ಯೂ ಚಿತ್ರಾ ಜಂಕ್ಷನ್‍ನಿಂದ ಕಂಡತ್‍ಪಳ್ಳಿ, ಮಂಡಿ, ಕುದ್ರೋಳಿ, ಬೊಕ್ಕಪಟ್ಟ, ಸುಲ್ತಾನ್‍ಬತ್ತೇರಿ ಮೂಲಕ ಉರ್ವಮಾರ್ಕೆಟ್ ಮಾರ್ಗವಾಗಿ ನಗರದಿಂದ ಹೊರ ಹೋಗುವುದು ಹಾಗೂ ನ್ಯೂ ಚಿತ್ರಾ ಜಂಕ್ಷನ್‍ನಿಂದ ಡೊಂಗರಕೇರಿ ವೆಂಕಟರಮಣ ದೇವಸ್ಥಾನ ಜಂಕ್ಷನ್, ರಾಷ್ಟ್ರ ಕವಿ ಎಂ. ಗೋವಿಂದ ಪೈ ವೃತ್ತ, ಪಿ.ವಿ.ಎಸ್ ಮಾರ್ಗವಾಗಿ ಮುಂದುವರೆದು ಬಂಟ್ಸ್ ಹಾಸ್ಟೆಲ್ ಕಡೆಗೆ ಸಂಚರಿಸುವುದು.

ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಕಡೆಯಿಂದ ಕುದ್ರೋಳಿ ದೇವಸ್ಥಾನದ ಕಡೆಗೆ ಸಂಚರಿಸುವ ಎಲ್ಲಾ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಉರ್ವಾಸ್ಟೋರ್ ಕಡೆಯಿಂದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಕಡೆಗೆ ಬರುವ ವಾಹನಗಳು ಕೋಟೆಕಣಿ ರಸ್ತೆಯಾಗಿ ಕೊಟ್ಟಾರಕ್ರಾಸ್, ಕಾಪಿಕಾಡು, ಕೆ.ಎಸ್.ಆರ್.ಟಿ.ಸಿ, ಬಿಜೈ ಮಾರ್ಕೆಟ್ ಜಂಕ್ಷನ್ ಮೂಲಕ ಸಂಚರಿಸುತ್ತದೆ.

ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ ಕಡೆಯಿಂದ ಎಂ.ಜಿ. ರಸ್ತೆಗೆ (ಲಾಲ್‍ಬಾಗ್ ಜಂಕ್ಷನ್ ಕಡೆಗೆ) ಹಾಗೂ ಬಿಜೈ ಮಾರ್ಕೆಟ್ ಜಂಕ್ಷನ್ ಕಡೆಯಿಂದ ಕೆ.ಎಸ್.ಆರ್.ಟಿ.ಸಿ ಕಡೆಗೆ ಬರುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಕುಂಟಿಕಾನ ಕಡೆಯಿಂದ ಬರುವ ವಾಹನಗಳು ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ ಬಳಿ ಎಡಕ್ಕೆ ತಿರುಗಿ ಬಿಜೈ ಮಾರ್ಕೆಟ್ ಜಂಕ್ಷನ್ ಮೂಲಕ ಸಂಚರಿಸುವುದು.

ಬಿಜೈ ಮಾರ್ಕೆಟ್ ಜಂಕ್ಷನ್ ಕಡೆಯಿಂದ ಎಂ.ಜಿ ರಸ್ತೆಗೆ (ಲಾಲ್‍ಬಾಗ್ ಜಂಕ್ಷನ್ ಕಡೆಗೆ) ಬರುವ ವಾಹನಗಳು ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ ಬಳಿ `ಯು’ ತಿರುವು ಪಡೆದುಕೊಂಡು ಬಿಜೈ ಮಾರ್ಕೆಟ್ ಜಂಕ್ಷನ್ ಕಡೆಗೆ ಸಂಚರಿಸುವುದು.

ಪಶು ಆಸ್ಪತ್ರೆ ಜಂಕ್ಷನ್ (ಕಪುಚಿನ್ ಚರ್ಚ್)ನಿಂದ ಕೋರಿರೊಟ್ಟಿ ಜಂಕ್ಷನ್ (ಎಂ.ಜಿ.ರಸ್ತೆ) ಕಡೆಗೆ ಸಾಗುವ ಎಲ್ಲಾ ವಾಹನ ಸಂಚಾರ ನಿಷೇಧಿಸಲಾಗಿದೆ.

ಕೆ.ಎಸ್.ಆರ್.ಟಿ.ಸಿ. ಬಸ್ಸು ನಿಲ್ದಾಣಕ್ಕೆ ಬಂದು ಹೋಗುವ ಎಲ್ಲಾ ಕೆ.ಎಸ್.ಆರ್.ಟಿ.ಸಿ ಬಸ್ಸುಗಳ ಪೈಕಿ ಪಂಪ್‍ವೆಲ್ ಕಡೆಗೆ ಸಂಚರಿಸುವ ಬಸ್ಸುಗಳು ಕೆ.ಪಿ.ಟಿ ಜಂಕ್ಷನ್ ಮೂಲಕ ಮತ್ತು ಉಡುಪಿ ಕಡೆಗೆ ಸಂಚರಿಸುವ ಬಸ್ಸುಗಳು ಕುಂಟಿಕಾನ ಜಂಕ್ಷನ್ ಮೂಲಕ ಸಂಚರಿಸುತ್ತದೆ.

ಮೆರವಣಿಗೆ ಹಾದು ಹೋಗುವ ರಸ್ತೆಯ ಇಕ್ಕೆಲಗಳಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.
ಕುದ್ರೋಳಿ ನಾರಾಯಣಗುರು ಕಾಲೇಜು ಬಳಿಯಿಂದ ನವದುರ್ಗೆಯರ ಟ್ಯಾಬ್ಲೊಗಳು ತಯಾರಿಗೊಂಡು ದೇವಸ್ಥಾನಕ್ಕೆ ಬರಲಿರುವುದರಿಂದ ಕುದ್ರೋಳಿ ನಾರಾಯಣ ಗುರು ಕಾಲೇಜು ಜಂಕ್ಷನ್ ರಸ್ತೆಯಿಂದ ಬರ್ಕೆ ಜಂಕ್ಷನ್ ತನಕ ಮತ್ತು ಬರ್ಕೆ ಜಂಕ್ಷನ್‍ನಿಂದ ದುರ್ಗಾಮಹಲ್ ಜಂಕ್ಷನ್‍ವರೆಗೆ ಹಾಗೂ ದುರ್ಗಾಮಹಲ್ ಜಂಕ್ಷನ್‍ನಿಂದ ಅಳಕೆ ಬ್ರಿಡ್ಜ್ ತನಕ ರಸ್ತೆಯ ಇಕ್ಕೆಲಗಳಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.

ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳುವ ಎಲ್ಲಾ ಟ್ಯಾಬ್ಲೊಗಳು ಉರ್ವ ಮಾರ್ಕೆಟ್ ಜಂಕ್ಷನ್‍ನಿಂದ, ಗಾಂಧಿನಗರದಿಂದಾಗಿ ಮಣ್ಣಗುಡ್ಡ ಗುರ್ಜಿ ಜಂಕ್ಷನ್‍ನಲ್ಲಿ ಸರದಿ ಸಾಲಿನಲ್ಲಿ ಬಂದು ನಿಂತು ಅಲ್ಲಿಂದ ಸದರಿ ಟ್ಯಾಬ್ಲೊಗಳು ಮೆರವಣಿಗೆಯಲ್ಲಿ ಮುಂದುವರೆಯುವುದರಿಂದ ಮಣ್ಣಗುಡ್ಡ ಗುರ್ಜಿ ಜಂಕ್ಷನ್‍ನಿಂದ ಉರ್ವ ಮಾರ್ಕೆಟ್ ಜಂಕ್ಷನ್‍ವರೆಗಿನ ರಸ್ತೆಯ ಇಕ್ಕೆಲಗಳಲ್ಲಿ ಹಾಗೂ ಮಣ್ಣಗುಡ್ಡ ಗಾಂಧಿನಗರ ಪಾರ್ಕ್ ಮುಂಭಾಗದ ರಸ್ತೆ ಮತ್ತು ಗಾಂಧಿನಗರ 1ರಿಂದ 8ರವರೆಗಿನ ಅಡ್ಡ ರಸ್ತೆಗಳ ಇಕ್ಕೆಲಗಳಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು : ಅಡ್ಯಾರ್ ಬಳಿ ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸೊತ್ತು ನಾಶ..!

ಮಂಗಳೂರು ಹೊರವಲಯದ ಅಡ್ಯಾರ್ ಬಳಿ ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿದೆ.ಮಂಗಳೂರು : ಮಂಗಳೂರು ಹೊರವಲಯದ ಅಡ್ಯಾರ್ ಬಳಿ ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ...

ಕಾರ್ಕಳ : ಅನಾರೋಗ್ಯದಿಂದ ಸಾವನ್ನಪ್ಪಿದ ಮನೆ ಮಗನ ಆಘಾತದಿಂದ ತಾಯಿ ಜೀವಾಂತ್ಯ..!

ಮಗನನ್ನು ಕಳೆದುಕೊಂಡ ನೋವಿನಲ್ಲಿ ತಾಯಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದ ಬಂಗ್ಲೆಗುಡ್ಡೆಯಲ್ಲಿ ಸೋಮವಾರ ನಡೆದಿದೆ.ಕಾರ್ಕಳ : ಮಗನನ್ನು ಕಳೆದುಕೊಂಡ ನೋವಿನಲ್ಲಿ ತಾಯಿಯೊಬ್ಬರು...

puttur : ಉಪ್ಪಿನಂಗಡಿಯಲ್ಲಿ ಬೈಕುಗಳ ಮುಖಾಮುಖಿ ಢಿಕ್ಕಿ – ಓರ್ವ ಸ್ಥಳದಲ್ಲೇ ಮೃತ್ಯು..!

ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಕಕ್ಕೆಪದವಿನಲ್ಲಿ ನಿನ್ನೆ ಸೋಮವಾರ ಸಂಜೆ ನಡೆದಿದೆ. ಪುತ್ತೂರು: ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ...