Connect with us

DAKSHINA KANNADA

ಕುಕ್ಕೆಯಲ್ಲಿ ಚಿನ್ನಾಭರಣ ಕಳವುಗೈದ ಮಹಿಳೆಯ ಬಂಧನ: 439.32 ಗ್ರಾಂ ಚಿನ್ನಾಭರಣ ವಶ

Published

on

ಬೆಂಗಳೂರು: ಪ್ರವಾಸಿಗರ ಸೋಗಿನಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿ ದೇವರ ದರ್ಶನಕ್ಕೆ ಬರುವ ಭಕ್ತರ ಬಳಿಯಿರುವ ಚಿನ್ನಾಭರಣ ಕಳವು ಮಾಡುತ್ತಿದ್ದವಳನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ. ಆಕೆಯ ಬಳಿ ಇದ್ದ 20.2 ಲಕ್ಷ ರೂ. ಮೌಲ್ಯದ 439.32 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.
ಆಂಧ್ರಪ್ರದೇಶದ ಮಮತಾ (38) ಬಂಧಿತ ಆರೋಪಿ


ಮತ್ತೊಬ್ಬ ಆರೋಪಿಯಾಗಿರುವ ಆಕೆಯ ಪತಿ ತಲೆ ಮರೆಸಿಕೊಂಡಿದ್ದು, ಆತನ ಪತ್ತೆಗೆ ಶೋಧ ನಡೆಸಲಾಗುತ್ತಿದೆ.

ಆರೋಪಿ ಮಮತಾಳ ಮೊದಲ ಪತಿ ಎರಡು ವರ್ಷಗಳ ಹಿಂದೆ ಮೃತಪಟ್ಟಿದ್ದರು. ಹೀಗಾಗಿ, ಹತ್ತಿರದ ಸಂಬಂಧಿ ಜತೆ ಇತ್ತೀಚೆಗೆ ಮಮತಾಳ ಎರಡನೇ ಮದುವೆಯಾಗಿತ್ತು.

ವಿವಾಹದ ಬಳಿಕ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವರ ದರ್ಶನ ಮಾಡಿ ನಂತರ ಬೆಂಗಳೂರಿಗೆ ಬಂದು ಜೀವನ ನಡೆಸಲು ನಿರ್ಧರಿಸಿದ್ದರು.

ಅದರಂತೆ ಆಗಸ್ಟ್‌ 19ರಂದು ಇಬ್ಬರೂ ಧರ್ಮಸ್ಥಳಕ್ಕೆ ಹೋಗಿ ದೇವರ ದರ್ಶನ ಮಾಡಿ ಮರುದಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೋಗಿದ್ದರು.
ಧರ್ಮಸ್ಥಳದ ಹೋಟೆಲ್‌ನಲ್ಲಿ ಉಪಾಹಾರ ಸೇವಿಸುವಾಗ ಪಕ್ಕದ ಟೇಬಲ್‌ನಲ್ಲಿ ಊಟ ಮಾಡುತ್ತಿದ್ದ ಪ್ರವಾಸಿಗರು ಬ್ಯಾಗ್‌ ಇಟ್ಟು ಕೈ ತೊಳೆಯಲು ಹೋಗಿದ್ದರು.

ಇತ್ತ ಹಣದ ಅವಶ್ಯಕತೆ ಇದ್ದ ಕಾರಣ ಆರೋಪಿಗಳು ಬ್ಯಾಗ್‌ ಕಳವು ಮಾಡಿ ಅಲ್ಲಿಂದ ಪರಾರಿಯಾಗಿದ್ದರು.

ನಿರ್ಜನ ಪ್ರದೇಶದಲ್ಲಿ ಬ್ಯಾಗ್‌ ತೆಗೆದು ನೋಡಿದಾಗ ಬೆಲೆ ಬಾಳುವ ಚಿನ್ನಾಭರಣ ಇರುವುದು ಗೊತ್ತಾಗಿ ಖುಷಿಯಿಂದ ಬೆಂಗಳೂರಿಗೆ ಬಂದು ಲಗ್ಗೆರೆಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ನೆಲೆಸಿದ್ದರು.
ಕಳವು ಮಾಡಿದ್ದ ಚಿನ್ನಾಭರಣದಲ್ಲಿ ಸ್ವಲ್ಪ ಅಡವಿಟ್ಟು ಬಂದ ಹಣದಲ್ಲಿ ಜೀವನ ಸಾಗಿಸುತ್ತಿದ್ದರು. ಆ. 25ರ ಬೆಳಗ್ಗೆ 10.20 ರಲ್ಲಿ ಯಶವಂತಪುರ 1ನೇ ಮುಖ್ಯರಸ್ತೆಯ ಎಸ್‌.ಕೆ. ಜ್ಯುವೆಲ್ಲರಿ ಅಂಗಡಿಯಲ್ಲಿ ಚಿನ್ನ ಮಾರಾಟ ಮಾಡಲು ಬಂದ ಮಮತಾ ಹಾಗೂ ಪತಿ ಅಂಗಡಿಯ ಸುತ್ತ ಅನುಮಾನಾಸ್ಪದವಾಗಿ ಓಡಾಡುತ್ತಿದ್ದರು.

ಇದನ್ನು ಗಮನಿಸಿದ ಗಸ್ತು ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆಯುತ್ತಿದ್ದಂತೆಯೇ ಪತಿ ತಪ್ಪಿಸಿಕೊಂಡಿದ್ದಾನೆ. ಮಮತಾಳನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದಾಗ ಚಿನ್ನದ ಅಂಗಡಿಗಳಲ್ಲಿ ಅಡವಿಟ್ಟ 10 ರಸೀದಿಗಳು ಮತ್ತು 4 ಗ್ರಾಂನ 2 ಉಂಗುರಗಳು ಪತ್ತೆಯಾಗಿವೆ. ಚಿನ್ನವನ್ನು ಕುಕ್ಕೆಯಲ್ಲಿ ಕಳವು ಮಾಡಿರುವ ವಿಷಯ ಬಾಯ್ಬಿಟ್ಟಿದ್ದಾಳೆ.

ತಲೆಮರೆಸಿಕೊಂಡಿರುವ ಆರೋಪಿಯನ್ನು ಬಂಧಿಸಲು ಬಲೆ ಬೀಸಲಾಗಿದೆ. ಆತನ ಪತ್ತೆ ಬಳಿಕ ಆರೋಪಿಗಳು ಬೇರೆ ಅಪರಾಧ ಚಟುವಟಿಕೆಯಲ್ಲಿ ತೊಡಗಿದ್ದರಾ ಎಂಬುದು ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಚುನಾವಣಾ ಆಯೋಗಕ್ಕೆ ದೂರು

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಪ್ರಕರಣ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

LATEST NEWS

Trending