Thursday, August 11, 2022

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮತ್ತೆ ಆಶ್ಲೇಷ ಬಲಿ ಸಹಿತ ಎಲ್ಲಾ ಸೇವೆ ಆರಂಭ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೋವಿಡ್‌ನಿಂದ ಹೇರಲಾಗಿದ್ದ ಸೇವೆಗಳ ನಿರ್ಬಂಧ ತೆರವು ಮಾಡಲಾಗಿದೆ.
ಈ ಹಿಂದೆ ಸರಕಾರದ ಆದೇಶದಂತೆ ಸೇವೆಗಳನ್ನು ರದ್ದು ಪಡಿಸಲಾಗಿತ್ತು.

ಇದೀಗ ಕೊರೊನಾ ಪ್ರಕರಣಗಳ ತೀವ್ರತೆ ಇಳಿಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಸರಕಾರದ ಆದೇಶದಂತೆ ಧಾರ್ಮಿಕ ಸ್ಥಳಗಳಲ್ಲಿ ದರ್ಶನ ಮತ್ತು ಸೇವೆಗಳಿಗೆ ಅನುಮತಿ ನೀಡಲಾಗಿದೆ.

ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಈ ಹಿಂದಿನಂತೆ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ ಸೇರಿದಂತೆ, ಎಲ್ಲಾ ಸೇವೆಗಳನ್ನು ನೆರವೇರಿಸಲು ಭಕ್ತಾದಿಗಳಿಗೆ ಅವಕಾಶ ಕಲ್ಪಿಸಿ ಕೊಡಲಾಗಿದೆ.

ಸೇವಾಕರ್ತರು ಕನಿಷ್ಠ ಕೋವಿಡ್ ಲಸಿಕೆ ಪಡೆದಿರುವ ಬಗ್ಗೆ ವರದಿ ಹಾಜರಿ ಪಡಿಸುವುದು ಮತ್ತು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಕಾಲು ಜಾರಿ ಹೊಳೆಗೆ ಬಿದ್ದ ಸನ್ನಿಧಿಯ ಅಂತ್ಯಕ್ರಿಯೆ: ಮುಗಿಲು ಮುಟ್ಟಿದ ಕುಟುಂಬಸ್ಥರು-ಸ್ನೇಹಿತರ ಆಕ್ರಂದನ

ಬೈಂದೂರು: ಕಾಲು ಜಾರಿ ಹೊಳೆಗೆ ಬಿದ್ದು ಮೃತಪಟ್ಟ ಬಾಲಕಿ ಸನ್ನಿಧಿ ಮೃತದೇಹ ಎರಡು ದಿನಗಳ ಬಳಿಕ ಪತ್ತೆಯಾಗಿದ್ದು, ಈಕೆ ಅಂತ್ಯ ಕ್ರಿಯೆಯನ್ನು ಮನೆ ಸಮೀಪದಲ್ಲೇ ನಿನ್ನೆ ನೆರವೇರಿಸಲಾಗಿದೆ. ಸರ್ಕಾರಿ‌ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ...

ಕಾಶ್ಮೀರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: 3 ಯೋಧರು ಹುತಾತ್ಮ -ಇಬ್ಬರು ಉಗ್ರರು ಉಡೀಸ್

ಶ್ರೀನಗರ: ಜಮ್ಮು- ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದು, ಮೂವರು ಯೋಧರು ಹುತಾತ್ಮರಾಗಿದ್ದಾರೆ. ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.ಘಟನೆಯಲ್ಲಿ ಇನ್ನಿಬ್ಬರು ಯೋಧರು ಗಾಯಗೊಂಡಿದ್ದು, ಅದರಲ್ಲಿ ಓರ್ವ ಸ್ಥಿತಿ...

ಪ್ರವೀಣ್ ಹತ್ಯೆ ಪ್ರಕರಣ: ಪ್ರಮುಖ ಮೂವರು ಆರೋಪಿಗಳ ಬಂಧನ-ಗೌಪ್ಯ ಸ್ಥಳದಲ್ಲಿ ತೀವ್ರ ವಿಚಾರಣೆ

ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಕೊನೆಗೂ ಪೊಲೀಸರು ಬಂಧಿಸಿದ್ದು, ಗೌಪ್ಯ ಸ್ಥಳದಲ್ಲಿ ಅವರನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.ಶಿಯಾಬ್, ಬಶೀರ್, ರಿಯಾಝ್ ಎಂದು...