ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಆಗಮಿಸಿರುವ ಕೋಟ್ಯಂತರ ಮಂದಿಯ ನಡುವೆ, ರುದ್ರಾಕ್ಷಿ ಸರ ಮಾರಾಟ ಮಾಡುತ್ತಿದ್ದ 16 ವರ್ಷದ ಹುಡುಗಿ ಮೊನಾಲಿಸಾ ಎಲ್ಲರನ್ನು ತನ್ನತ್ತ ಸೆಳೆಯುವ ಮೂಲಕ ರಾತ್ರೋ ರಾತ್ರಿ ಇಡೀ ದೇಶದ ಗಮನ ಸೆಳೆದಿದ್ದಳು. ಸೋಷಿಯಲ್ ಮೀಡಿಯಾಗಳಲ್ಲಿ ಈಕೆಯದ್ದೇ ಕಾರುಬಾರು. ಆದರೆ ಕೆಲವು ದಿನಗಳ ಹಿಂದೆ ಮೊನಾಲಿಸಾ ಕುಂಭಮೇಳದಿಂದ ಹೊರ ನಡೆದಿದ್ದಳು. ಆದರೆ ಮೊನಾಲಿಸಾ ಇದೀಗ ಗಂಭೀರವಾಗಿ ಅನಾರೋಗ್ಯಕ್ಕೆ ಒಳಗಾಗಿದ್ದಾಳೆ ಎಂಬ ಸುದ್ದಿ ಹರಿದಾಡುತ್ತಿದೆ.
ಮೊನಾಲಿಸಾ ಕುಟುಂಬ ಇತ್ತೀಚೆಗೆ ಒಂದು ಪುಟ್ಟ ಮನೆಯನ್ನು ಕಟ್ಟಿದೆ. ಆ ಮನೆ ಕಟ್ಟಲು ಸಾಲ ಮಾಡಿಕೊಂಡಿದೆ. ಆ ಸಾಲವನ್ನು ತೀರಿಸಲು ಮೊನಾಲಿಸಾ ಮಹಾಕುಂಭ ಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರಿ ಸ್ವಲ್ಪ ಹಣ ಸಂಪಾದನೆ ಮಾಡುತ್ತಿದ್ದಳು. ತುಂಬಾ ಸಾಲ ಮಾಡಿಕೊಂಡಿದ್ದ ತಂದೆಗೆ ಸಹಾಯ ಮಾಡಲು ಮೊನಾಲಿಸಾ ಮಹಾ ಕುಂಭ ಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರಿ ದಿನಕ್ಕೆ 500 ರಿಂದ 1000 ರೂಪಾಯಿ ಸಂಪಾದನೆ ಮಾಡಿಕೊಂಡು ಜೀವನ ನಡೆಸುತ್ತಿದ್ದಳು. ಆದರೀಗ ಸೆಲ್ಫಿಗಾಗಿ ಬಂದ ಜನ ರುದ್ರಾಕ್ಷಿ ಮಾಲೆ ಖರೀದಿ ಮಾಡದೆ ಫೋಟೋ ಕ್ಲಿಕ್ಕಿಸಿಕೊಂಡು ಎಸ್ಕೇಪ್ ಆಗುತ್ತಿದ್ದಾರೆ. ಆಕೆಯ ಸಮಯ ವ್ಯರ್ಥ ಮಾಡುವುದು ಮಾತ್ರವಲ್ಲದೆ ಆಕೆಯ ಹಿಂದೆ ಬಿದ್ದು ಆಕೆಯ ಕೆಲಸಕ್ಕೂ ತೊಂದರೆ ಕೊಡುತ್ತಿದ್ದಾರೆ.
ಇದರಿಂದಾಗಿ ಮೊನಾಲಿಸಾ ಸಾಲ ತೀರಿಸುವುದು ಹೇಗೆ ಎನ್ನುವ ಚಿಂತೆಯಲ್ಲಿ ಹಾಸಿಗೆ ಹಿಡಿದಿದ್ದಾಳೆ ಎನ್ನಲಾಗುತ್ತಿದೆ. ಫೋಟೋ ತೆಗೆಸಿಕೊಳ್ಳಲು ಜನ ಧಮ್ಕಿ ಹಾಕುತ್ತಿದ್ದು, ಆಕೆಯ ಮನೆಗೆ ಬಂದು ತೊಂದರೆ ಕೊಡುತ್ತಿದ್ದು ಮೊನಾಲಿಸಾ ಸಿಕ್ಕಪಟ್ಟೆ ಭಯಗೊಂಡಿದ್ದಾಳೆ. ಭಯದಲ್ಲೇ ಆರೋಗ್ಯ ಸಮಸ್ಯೆ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ. ಇದರಿಂದಾಗಿ ಮೊನಾಲಿಸಾ ಆರೋಗ್ಯ ಹದಗೆಡುತ್ತಿದ್ದು ಕುಟುಂಬಸ್ಥರಿಗೆ ಆಕೆಯ ಆರೋಗ್ಯದ ಬಗ್ಗೆ ಚಿಂತೆ ಹೆಚ್ಚಾಗಿದೆ.
ಮಂಗಳೂರು : ಕಡಲ ಕೊರೆತ ಹಾಗೂ ಕಡಲಿನಿಂದ ಉಂಟಾಗುವ ಅಪಾಯಗಳನ್ನು ತಪ್ಪಿಸಲು ಕಡಲ ತೀರದಲ್ಲಿ ವಿಷ್ಣು ಸಹಸ್ರನಾಮ ಪಠಣ ಮಾಡಲಾಗಿದೆ.
ಕಾಸರಗೋಡಿನ ಕಣ್ಣೂರಿನಿಂದ ಉಡುಪಿಯ ಶಿರೂರು ವರೆಗೆ ಈ ವಿಷ್ಣು ಸಹಸ್ರನಾಮದ ಅಭಿಯಾನ ನಡೆಸಲಾಗಿದೆ. ಭಾನುವಾರ ಸಂಜೆ ನಾಲ್ಕು ಗಂಟೆಗೆ ಕಡಲ ತೀರದಲ್ಲಿ 108 ಜನರ ತಂಡವಾಗಿ ಕುಳಿತ ಸಾವಿರಾರು ಜನರು ಈ ವಿಷ್ಣು ಸಹಸ್ರನಾಮ ಅಭಿಯಾನದಲ್ಲಿ ಭಾಗಿಯಾಗಿದ್ದಾರೆ.
ವಿಷ್ಣು ಸಹಸ್ರನಾಮ ಸ್ತ್ರೋತ್ರ ಪಠಣ ಸಮಿತಿಯಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ವೇದ ಕೃಷಿಕ ಕೆ.ಎಸ್ ನಿತ್ಯಾನಂದ ಅವರು ಈ ವಿಷ್ಣು ಸಹಸ್ರನಾಮ ಸ್ತ್ರೋತ್ರ ಪಠಣದಿಂದ ಪ್ರಾಕೃತಿಕ ವಿಕೋಪ ತಡೆಗಟ್ಟಬಹುದು ಎಂದು ಕಂಡುಕೊಂಡಿದ್ದರು.
ಇದರ ಭಾಗವಾಗಿ ಈ ಹಿಂದೆ ಎರಡು ಬಾರಿ ಇದರ ಪ್ರಾಯೋಗಿಕ ಪ್ರಯೋಗ ಮಾಡಿ ಯಶಸ್ವಿಯಾಗಿತ್ತು. ಈ ಹಿನ್ನಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಇದರಲ್ಲಿ ಭಾಗವಹಿಸಿ ಕರಾವಳಿಯ ಕಡಲ ತೀರದ ಸುರಕ್ಷತೆಯಲ್ಲಿ ಪಾಲ್ಗೊಳ್ಳಲು ಕಾಸರಗೋಡಿನ ಕಣ್ಣೂರಿನಿಂದ ಉಡುಪಿಯ ಶಿರೂರು ತನಕ ಈ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಸಂಜೆ ಸರಿಯಾಗಿ ನಾಲ್ಕು ಗಂಟೆಗೆ ಜನರು ಕಡಲ ಕಿನಾರೆಯಲ್ಲಿ ಸೇರಿ ಎರಡು ಗಂಟೆಗಳ ಕಾಲ ನಿರಂತರ ಎರಡು ಬಾರಿ ವಿಷ್ಣು ಸಹಸ್ರನಾಮ ಪಠಿಸುವಂತೆ ಕರೆನೀಡಲಾಗಿತ್ತು. ಮಂಗಳೂರಿನಲ್ಲಿ ಉಳ್ಳಾಲದಿಂದ ಸಸಿ ಹಿತ್ಲು ವರೆಗಿನ ಕಡಲ ಕಿನಾರೆಯಲ್ಲಿ ಹಲವೆಡೆ ಈ ಅಭಿಯಾನ ನಡೆದಿದೆ. ಚಿತ್ರಾಪುರ ಕಡಲತೀರದಲ್ಲಿ ಉಡುಪಿ ಚಿತ್ರಾಪುರ ಮಠದ ಯತಿಗಳು ಈ ಅಭಿಯಾನದಲ್ಲಿ ಭಾಗಿಯಾಗಿದ್ದಾರೆ.
90 ರ ದಶಕದಲ್ಲಿ ಜನಪ್ರಿಯರಾಗಿದ್ದ ರವೀನಾ ಟಂಡನ್ ಪುತ್ರಿ ರಶಾ ಥಡಾನಿ ಈಗ ಬಾಲಿವುಡ್‌ನಲ್ಲಿ ಸದ್ದು ಮಾಡಲು ಸಿದ್ಧರಾಗಿದ್ದಾರೆ. ಸದ್ಯ ಆಕೆಯೇ ಮನೆಮಾತಾಗಿದ್ದಾಳೆ. ಜನವರಿ 17 ರಂದು ಬಿಡುಗಡೆಯಾದ ಆಜಾದ್ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದರು. ಈ ಚಿತ್ರ ಬಿಡುಗಡೆಯಾದಾಗಿನಿಂದ ರಾಶಾಗೆ ಪ್ರಶಂಸೆಯ ಸುರಿಮಳೆಯಾಗುತ್ತಿದೆ. ಈ ಚಿತ್ರದಲ್ಲಿ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸದ್ಯ ರಾಶಾ ತಮ್ಮ ಚಿತ್ರದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ‘ ಮಿಸ್ ಮಾಲಿನಿ’ಗೆ ನೀಡಿದ ಸಂದರ್ಶನದಲ್ಲಿ ಅವರು ತನಗೆ ಸಂಬಂಧಿಸಿದ ಹಲವು ವಿಷಯಗಳನ್ನು ಹೇಳಿದ್ದಾರೆ.
ಸದ್ಯ ಆಕೆಯ ಉತ್ತರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ನಟಿಯ ಕ್ರಷ್ ಬಾಲಿವುಡ್‌ನಲ್ಲಿ ಈ ಸುಂದರ ಹಂಕ್ ಹಲವಾರು ಅಭಿಮಾನಿಗಳನ್ನು ಹೊಂದಿದ್ದಾರೆ. 40 ವರ್ಷದ ಆ ನಟ 2023 ರಲ್ಲಿ ವಿವಾಹವಾದರು. ರಾಶಾ ಅವರ ಕ್ರಷ್ ನಟ ಎಂದರೇ ಅದು ಬೇರಾರೂ ಅಲ್ಲ. ಸಿದ್ಧಾರ್ಥ್ ಮಲ್ಹೋತ್ರಾ. “ನಾನು ಮಾತ್ರವಲ್ಲ, ಆಲ್‌ಮೋಸ್ಟ್ ಎಲ್ಲ ಹುಡಗಿಯರಿಗೂ ಈ ನಟನೆಂದರೇ ತುಂಬಾ ಇಷ್ಟ. ಸ್ಟೂಡೆಂಟ್ಆಫ್ ದ ಇಯರ್‌ನಿಂದ ಸಿದ್ಧಾರ್ಥ್ ಮತ್ತು ಆಲಿಯಾ ಅವರನ್ನು ಇಷ್ಟಪಡುತ್ತಿದ್ದೇನೆ. ಸಿದ್ದಾರ್ಥ ನನ್ನ ಕ್ರಷ್” ಎಂದು ರಾಶಾ ಹೇಳಿದ್ದಾರಳೆ. ಸದ್ಯ ಅವರ ಉತ್ತರ ಸೋಷಿಯಲ್ ಮಿಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ.
ಇನ್ನು ನಟ ಸಿದ್ಧಾರ್ಥ್ ಮಲ್ಹೋತ್ರಾ ಕರಣ್ ಜೋಹರ್ ಅವರ ‘ ಸ್ಟೂಡೆಂಟ್ ಆಫ್ ದಿ ಇಯರ್ ‘ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು. ಅವರು ಹಲವು ವರ್ಷಗಳಿಂದ ಉದ್ಯಮದಲ್ಲಿ ಕೆಲಸ ಮಾಡುತ್ತಿದ್ದಾರೆ. 2023 ರಲ್ಲಿ ನಟಿ ಕಿಯಾರಾ ಅಡ್ವಾಣಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಆದರೆ ಅವರ ಮದುವೆಯ ಸುದ್ದಿ ಅನೇಕ ಯುವತಿಯರ ಹೃದಯವನ್ನು ಒಡೆಯಿತು.
ಬೆಂಗಳೂರು: ಬಿಗ್ ಬಾಸ್ ಕನ್ನಡ -11 ರ ಟ್ರೋಫಿಯನ್ನು ಹಳ್ಳಿಹೈದ ಹನುಮಂತು ಮುಡಿಗೇರಿಸಿಕೊಂಡಿದ್ದಾರೆ. ಅವರ ಗೆಲುವನ್ನು ಅಭಿಮಾನಿಗಳು ಅದ್ಧೂರಿಯಾಗಿಯೇ ಆಚರಿಸಿಕೊಂಡಿದ್ದಾರೆ.
ದೊಡ್ಮನೆ ಆಟಕ್ಕೆ ವೈಲ್ಡ್ ಕಾರ್ಡ್ ಆಗಿ ಎಂಟ್ರಿ ಕೊಟ್ಟಿದ್ದ ಹನುಮಂತು, ಟಾಕ್ – ಟಾಸ್ಕ್ ಎರಡರಲ್ಲೂ ಮೇಲುಗೈ ಸಾಧಿಸಿ 5 ಕೋಟಿ ವೋಟ್ಸ್ ಪಡೆದು ಬಿಗ್ ಬಾಸ್ ಕಪ್ ಎತ್ತಿಕೊಂಡಿದ್ದಾರೆ. ಅವರ ಗೆಲುವನ್ನು ದೊಡ್ಮನೆಯ ಸ್ಪರ್ಧಿಗಳು ಕೂಡ ಖುಷಿಪಟ್ಟಿದ್ದಾರೆ. ಸೆಕೆಂಡ್ ರನ್ನರ್ ಅಪ್ ಆಗಿ ಹೊರಹೊಮ್ಮಿದ ರಜತ್ ಕಿಶನ್ ಅವರು ಹನುಮಂತು ಗೆಲುವಿನ ಬಗ್ಗೆ ಖುಷಿಯಿಂದಲೇ ಮಾತನಾಡಿದ್ದಾರೆ.
“ಹನುಮಂತು ಮುಂದೆ ಗಾಂಧೀಜಿ ನಿಂತಿದ್ರೂ ಹನುಮಂತುನೇ ಗೆಲುತ್ತಿದ್ದ. ತೊಂದರೆ ಇಲ್ಲ. ಎಲ್ಲ ಆರಾಮವಾಗಿದ್ದೀವಿ. ಖುಷಿ ಆಗಿದ್ದೀವಿ. ಇಷ್ಟು ಸಣ್ಣ ಅವಧಿಯಲ್ಲಿ ಪ್ರೀತಿ – ಅಭಿಮಾನ ಸಿಗೋದು ತುಂಬಾ ಕಷ್ಟ. ಇದಕ್ಕೆ ಯಾವತ್ತೂ ಚಿರಋಣಿ” ಎಂದು ರಜತ್ ಹೇಳಿದ್ದಾರೆ.