Connect with us

    LATEST NEWS

    ಕುಂದಾಪುರ: ಹಲ್ಲೆ ನಡೆಸಲು ಯತ್ನ-ಇಬ್ಬರ ಬಂಧನ

    Published

    on

    ಕುಂದಾಪುರ: ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡ್ತಾ ಇರುವ ಹಿಜಾಬ್ ವಿವಾದ ಮುಂದೆ ಯಾವ ರೀತಿಯ ಸ್ವರೂಪವನ್ನು ಪಡೆದುಕೊಳ್ಳುತ್ತೊ ಗೊತ್ತಿಲ್ಲ.

    ಸದ್ಯ ಭುಗಿಲೆಗಿದ್ದಿರುವ ಹಿಜಾಬ್ ವಿವಾದವನ್ನು ಶಮನಗೊಳಿಸುವುದಕ್ಕೆ ರಾಜ್ಯದ ಎಲ್ಲ ಖಾಸಗಿ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಸಮವಸ್ತ್ರವನ್ನು ಕಡ್ಡಾಯಗೊಳಿಸಿ ಸರಕಾರ ಆದೇಶ ಹೊರಡಿಸಿದೆ.


    ಈ ನಡುವೆ ಉಡುಪಿ ಕುಂದಾಪುರದ ಸರಕಾರಿ ಜೂನಿಯರ್‌ ಆವರಣದಲ್ಲಿ ಹಿಜಾಬ್ ಪ್ರತಿಭಟನೆಯ ವೇಳೆ ಪ್ರತಿಭಟನಾ ಸ್ಥಳಕ್ಕೆ ಮಾರಕಾಯುಧ ಹಿಡಿದು ಬಂದಿದ್ದ ಐವರಲ್ಲಿ ಇಬ್ಬರನ್ನು  ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.

    ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಗಂಗೊಳ್ಳಿಯ ಮೂಲದ ಮಜೀದ್ ಮತ್ತು ರಜಾಬ್ ಎಂಬವರನ್ನು ಬಂಧನ ಮಾಡಲಾಗಿದೆ. ಇವರೆಲ್ಲರೂ  ಹಲ್ಲೆಯನ್ನು ನಡೆಸಲು ಹೊಂಚು ಹಾಕುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

    ನಿನ್ನೆ ಪ್ರತಿಭಟನೆಯ ನಡೆದ ಸ್ಥಳದಲ್ಲಿ ಇವರೆಲ್ಲರೂ ಅಡ್ಡಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು, ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಉಳಿದವರ ಬಂದನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಮಂಗಳೂರು: ಕೆ.ಎಸ್.ಆರ್.ಟಿ.ಸಿ. ದಸರಾ ವಿಶೇಷ ಪ್ರವಾಸ ಪ್ಯಾಕೇಜ್

    Published

    on

    ಮಂಗಳೂರು : ಕೆ.ಎಸ್.ಆರ್.ಟಿ.ಸಿ. ಮಂಗಳೂರು ವಿಭಾಗದ ವತಿಯಿಂದ ದಸರಾ ಪ್ರಯುಕ್ತ ಮಂಗಳೂರು, ಕೊಲ್ಲೂರು, ಮಡಿಕೇರಿ, ಮುರುಡೇಶ್ವರ ಸುತ್ತುಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅಕ್ಟೋಬರ್ 3 ರಿಂದ 12ರವರೆಗೆ ಆಯೋಜಿಸಲಾಗಿದೆ.

    ಮಂಗಳೂರು ಬಸ್ಸು ನಿಲ್ದಾಣದಿಂದ ಅಕ್ಟೋಬರ್ 3ರಂದು ಬೆಳಿಗ್ಗೆ 7 ಗಂಟೆಗೆ ಶರವು ಗಣಪತಿ ದೇವಸ್ಥಾನದ ಮುಂಭಾಗದಲ್ಲಿ ಪೂಜೆಯೊಂದಿಗೆ ಪ್ರವಾಸ ಆರಂಭಗೊಳ್ಳಲಿದೆ ಎಂದು ಕೆ.ಎಸ್.ಆರ್.ಟಿ.ಸಿ.  ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಇದನ್ನೂ ಓದಿ : ದೇವರನ್ನು ರಾಜಕೀಯದಿಂದ ದೂರವಿಡಿ ; ಸುಪ್ರೀಂ ಕೋರ್ಟ್ ಸೂಚನೆ..!

    ಹೆಚ್ಚಿನ ಮಾಹಿತಿಗೆ ಮಂಗಳೂರಿನ ಬಿಜೈನಲ್ಲಿರುವ ಕೆ.ಎಸ್.ಆರ್.ಟಿ.ಸಿ. ಮಂಗಳೂರು ವಿಭಾಗೀಯ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

    Continue Reading

    LATEST NEWS

    ದೇವರನ್ನು ರಾಜಕೀಯದಿಂದ ದೂರವಿಡಿ ; ಸುಪ್ರೀಂ ಕೋರ್ಟ್ ಸೂಚನೆ..!

    Published

    on

    ನವ ದೆಹಲಿ : ತಿರುಪತಿ ಲಡ್ಡು ವಿವಾದದಲ್ಲಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಸುಪ್ರೀಂ ಕೋರ್ಟ್‌ ಚಾಟಿ ಬೀಸಿದೆ. ದೇವರನ್ನು ರಾಜಕೀಯದಿಂದ ಹೊರಗೆ ಇಡಿ ಎಂದು ಕೋರ್ಟ್‌ ಹೇಳಿದೆ. ಕನಿಷ್ಟ ಪಕ್ಷ ದೇವರುಗಳನ್ನು ರಾಜಕೀಯದಿಂದ ದೂರ ಇಡಬೇಕು ಎಂದು ಹೇಳಿರುವ ಸುಪ್ರೀಂ ಕೋರ್ಟ್‌, ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಎಂದು ಸಿಎಂ ಚಂದ್ರಬಾಬು ನಾಯ್ಡು ಅವರ ಹೇಳಿಕೆಯನ್ನೇ ಪ್ರಶ್ನೆ ಮಾಡಿದೆ. ಸಿಎಂ ಮಾಡಿರುವ ಆರೋಪಕ್ಕೆ ಸಾಕ್ಷಿ ಒದಗಿಸುವಂತೆ ಕೋರ್ಟ್‌ ಸೂಚನೆ ನೀಡಿದೆ. ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆ.ವಿ ವಿಶ್ವನಾಥನ್‌ ಅವರ ಪೀಠವು ಸಿಎಂ ಚಂದ್ರಬಾಬು ನಾಯ್ಡು ಅವರು ನೀಡಿದ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದೆ.

    ಸಾಂವಿಧಾನಕವಾಗಿ ಉನ್ನತ ಹುದ್ದೆಯಲ್ಲಿ ಇರುವ ವ್ಯಕ್ತಿಯಾಗಿ ಈ ರೀತಿ ಕೋಟ್ಯಾಂತರ ಜನರ ಭಾವನೆ ಮೇಲೆ ಪರಿಣಾಮ ಬೀರುವ ಹೇಳಿಕೆ ನೀಡಬಾರದು ಎಂದು ಪೀಠ ಹೇಳಿದೆ. ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಎಂಬ ವಿಚಾರವಾಗಿ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಲು ಕೋರಿ ಸಲ್ಲಿಸಿದ ಅರ್ಜಿಗಳನ್ನು ಪೀಠವು ವಿಚಾರಣೆ ನಡೆಸುತ್ತಿದೆ. ಈ ಸಂದರ್ಭದಲ್ಲಿ ದೇವರನ್ನು ರಾಜಕೀಯದಿಂದ ದೂರ ಇಡಬೇಕು ಎಂದು ನಿರೀಕ್ಷಿಸುವುದಾಗಿ ಪೀಠ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಚಾಟಿ ಬೀಸಿದೆ. ಮುಂದಿನ ವಿಚಾರಣೆಯನ್ನು ಅಕ್ಟೋಬರ್ 3 ಕ್ಕೆ ಮುಂದೂಡಲಾಗಿದೆ.

    Continue Reading

    LATEST NEWS

    ಬಾವಿಯ ಕಾಂಪೌಂಡ್‌ ಸ್ವಚ್ಛಗೊಳಿಸುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾ*ವು

    Published

    on

    ಮಂಗಳೂರು: ಬಾವಿಯ ಕಾಂಪೌಂಡ್‌ ಸ್ವಚ್ಛಗೊಳಿಸುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾ*ವನ್ನಪ್ಪಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರುನಲ್ಲಿ ಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನೆತ್ತಿಲ ಎಂಬಲ್ಲಿ ನಡೆದಿದೆ.

    ನವೀನ್ ಬೆಳ್ಳಾಡ(48) ಮೃತ ವ್ಯಕ್ತಿ. ನವೀನ್ ಅವರು ಭಾನುವಾರ ಸಂಜೆ ಮನೆಯ ಹಿಂಭಾಗದ ಬಾವಿಯ ಕಾಂಪೌಂಡ್ ಸ್ವಚ್ಛಗೊಳಿಸುತ್ತಿದ್ದರು. ಈ ವೇಳೆ ಆಯ ತಪ್ಪಿ ಬಾವಿಗೆ ಬಿದ್ದು ಮೃ*ತಪಟ್ಟಿದ್ದಾರೆ. ಮನೆಯೊಳಗೆ ನವೀನ್ ಕಾಣದಾಗ ಪತ್ನಿ ಮತ್ತು ಮಕ್ಕಳು ಹುಡುಕಾಡಿ ಬಾವಿಯ ಬಳಿ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.

    ಸ್ಥಳೀಯರು ಸೇರಿ ನವೀನ್ ರನ್ನು ಬಾವಿಯಿಂದ ಮೇಲಕ್ಕೆತ್ತಿದ್ದು ಅದಾಗಲೇ ಅವರು ಮೃ*ತಪಟ್ಟಿದ್ದರು ಎನ್ನಲಾಗಿದೆ. ಸೆಂಟ್ರಿಗ್ ಕೆಲಸ ಮಾಡುತ್ತಿದ್ದ ನವೀನ್ ಅವರಿಗೆ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಪುತ್ರಿ ಮತ್ತು ನಾಲ್ಕನೇ ತರಗತಿ ಓದುತ್ತಿರುವ ಪುತ್ರನಿದ್ದಾನೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

    Continue Reading

    LATEST NEWS

    Trending