Connect with us

    LATEST NEWS

    ಕುಂದಾಪುರ : ಸಕ್ಕರೆ ತುಂಬಿಕೊಂಡು ಸಾಗುತ್ತಿದ್ದ ಲಾರಿ ಪಲ್ಟಿ

    Published

    on

    ಕುಂದಾಪುರ : ಸಕ್ಕರೆ ತುಂಬಿಕೊಂಡು ಕೇರಳಕ್ಕೆ ತೆರಳುತ್ತಿದ್ದ ಲಾರಿಯೊಂದು ಚಾಲಕ ನಿಯಂತ್ರಣ ತಪ್ಪಿ ಇನ್ನೊಂದು ಲಾರಿಗೆ ಡಿ*ಕ್ಕಿ ಹೊಡೆದು ಪಲ್ಟಿಯಾದ ಘಟನೆ ಕುಂದಾಪುರ ತಾಲೂಕಿನ ಮಲ್ಲಿಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು(ಜು.5) ಬೆಳಿಗ್ಗೆ ಸಂಭವಿಸಿದೆ.

    ಲಾರಿಯು ಸೋಲಾಪುರದಲ್ಲಿ ಸಕ್ಕರೆ ತುಂಬಿಕೊಂಡು ಕೇರಳಕ್ಕೆ ತೆರಳುತ್ತಿತ್ತು. ಮಲ್ಲಿಕಟ್ಟೆ ಜಂಕ್ಷನ್ ನಲ್ಲಿ ಎದುರಿನಿಂದ ಬರುತ್ತಿದ್ದ ಲಾರಿಗೆ ಡಿ*ಕ್ಕಿ‌ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡ ಲಾರಿಯು ಇನ್ನೊಂದು ಲಾರಿಗೆ ಡಿ*ಕ್ಕಿ ಹೊಡೆದು ಪಲ್ಟಿಯಾಗಿದೆ.

    ಇದನ್ನೂ ಓದಿ : ಉಡುಪಿ : ಪ್ರೇಯಸಿಯೊಂದಿಗೆ ಜಗಳ; ಅರ್ಧ ದಾರಿಯಲ್ಲೇ ಬಸ್ ನಿಲ್ಲಿಸಿ ಹೋದ ಡ್ರೈವರ್!

    ಚಾಲಕ ಅಪಾಯದಿಂದ ಪಾರಾಗಿದ್ದು, ಹೆದ್ದಾರಿಯಲ್ಲಿ ಸಂಚಾರವು ಕೆಲಹೊತ್ತು ಅಸ್ತವ್ಯಸ್ತಗೊಂಡಿತ್ತು. ಗಂಗೊಳ್ಳಿ ಪೊಲೀಸರು ಹಾಗೂ ಹೆದ್ದಾರಿ ಗಸ್ತು ಸಿಬ್ಬಂದಿ ಸ್ಥಳಕ್ಕೆ ಬಂದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ದ.ಕನ್ನಡ ಸೇರಿದಂತೆ 5 ಜಿಲ್ಲೆಗಳಲ್ಲಿ ಎರಡು ದಿನ ಬಿರುಗಾಳಿ, ಭಾರೀ ಮಳೆಯ ಎಚ್ಚರಿಕೆ

    Published

    on

    ಬೆಂಗಳೂರು: ಉಡುಪಿ, ದ.ಕನ್ನಡ, ಉ.ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಸೋಮವಾರ ಹಾಗೂ ಮಂಗಳವಾರ ಭಾರಿ ಮಳೆ ಬೀಳುವ ಸಾಧ್ಯತೆ ಇದೆಯೆಂದು ತಿಳಿಸಿದ ಹವಾಮಾನ ಇಲಾಖೆ, ಆರೆಂಜ್​ ಅರ್ಲಟ್​ ಘೋಷಿಸಿದೆ. ಕರಾವಳಿ ತೀರದುದ್ದಕ್ಕೂ ಪ್ರತಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ ಎಂದಿದೆ.

    ಮೂಲ್ಕಿಯಿಂದ ಮಂಗಳೂರಿನವರೆಗೆ, ಉತ್ತರ ಕನ್ನಡದ ಮಾಜಾಳಿಯಿಂದ ಭಟ್ಕಳವರೆಗೆ ಎತ್ತರದ ಅಲೆಗಳು ಏಳಲಿವೆ. ಉಡುಪಿಯ ಬೈಂದೂರಿನ ಕಾಪುವರೆಗೆ ಹೈ ವೇವ್​ ವಾಚ್​ ಅರ್ಲಟ್​ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಇಲಾಖೆ ಎಚ್ಚರಿಕೆ ಕೊಟ್ಟಿದೆ. ಬೆಳಗಾವಿ, ಬೀದರ್​, ಕಲಬುರಗಿ, ಯಾದಗಿರಿಯಲ್ಲಿ ಜು.8ರಿಂದ ಮುಂದಿನ ಎರಡು ದಿನ ಯೆಲ್ಲೋ ಅರ್ಲಟ್​ ಇರಲಿದೆ.

    ಅರಬ್ಬಿ ಸಮುದ್ರದ ಕಡೆಯಿಂದ ಭಾರಿ ಗಾಳಿ ಬೀಸುತ್ತಿದ್ದು ಸಮುದ್ರ ಕೊರೆತ ಹೆಚ್ಚಿದೆ.

    Continue Reading

    DAKSHINA KANNADA

    ಕೇರಳದಲ್ಲಿ ಅಮೀಬಾ ಸೋಂಕಿಗೆ ನಾಲ್ಕು ಮಕ್ಕಳು ಬಲಿ..! ದ.ಕ ಜಿಲ್ಲೆಯಲ್ಲೂ ಹೈ ಅಲರ್ಟ್..!

    Published

    on

    ಮಂಗಳೂರು: ಕೇರಳದಲ್ಲಿ ಅಮೀಬಾ ಸೋಂಕಿನ ಪ್ರಕರಣಗಳು ಹೆಚ್ಚಾಗಿದ್ದು ಆತಂಕ ಸೃಷ್ಠಿಯಾಗಿದೆ. ಕೇರಳದಲ್ಲಿ ಇದೂವರೆಗೂ ನಾಲ್ಕು ಮಕ್ಕಳು ಅಮೀಬಾ ಸೋಂಕಿಗೆ ಬಲಿಯಾಗಿದ್ದಾರೆ. ಗಡಿನಾಡು ದ.ಕ ಜಿಲ್ಲೆಗಳಲ್ಲೂ ಅಮೀಬಾ ಸೋಂಕಿನ ಹಿನ್ನೆಲೆ ಕಟ್ಟೆಚ್ಚರ ವಹಿಸಲಾಗಿದೆ. ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಮಾಹಿತಿ ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದು, ಆರೋಗ್ಯ ಇಲಾಖೆಯಲ್ಲಿ ಈ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ.


    ಕಲುಷಿತ ನೀರಿನಲ್ಲಿರುವ ಪರಾವಲಂಬಿಯಲ್ಲದ ಅಮೀಬಾ ಎಂಬ ಬ್ಯಾಕ್ಟೀರಿಯಾದಿಂದ ಈ ಸೋಂಕು ಹರಡುತ್ತದೆ. ಮೂಗಿನ ಮೂಲಕ ನಮ್ಮ ಶರೀರ ಸೇರುವ ಸೂಕ್ಷ್ಮಾಣು ಜೀವಿ, ಮೆದುಳಿನ ಅಂಗಾಂಶಕ್ಕೆ ಭಾರೀ ಹಾನಿ ಉಂಟುಮಾಡುತ್ತದೆ. ಇದರಿಂದ ಸಾವು ಕೂಡ ಸಂಭವಿಸುತ್ತದೆ. ಕಲುಷಿತ ನೀರಿನಲ್ಲಿಈಜಾಡುವವರಿಗೆ ಈ ಸೋಂಕು ಹರಡುತ್ತದೆ. ಮಳೆ ನೀರು, ನಿಂತ ನೀರುಗಳಿಂದ ಈ ಸೋಂಕು ಹರಡುವ ಸಾಧ್ಯತೆ ಇದೆ. ಮುಕ್ತ-ಜೀವಂತ, ಪರಾವಲಂಬಿಯಲ್ಲದ ಅಮೀಬಾ ಬ್ಯಾಕ್ಟೀರಿಯಾಗಳು ಕಲುಷಿತ ನೀರಿನಿಂದ ಮೂಗಿನ ಮೂಲಕ ದೇಹವನ್ನು ಪ್ರವೇಶಿಸಿದಾಗ ಸೋಂಕು ಸಂಭವಿಸುತ್ತದೆ ಎಂದು ವೈದ್ಯಕೀಯ ತಜ್ಞರು ಹೇಳಿದ್ದಾರೆ.

    ಕೇರಳದಲ್ಲಿ ಅಮೀಬಾ ಕಾಯಿಲೆಗೆ 3 ಮಕ್ಕಳ ಬಲಿ..!

    ಕೇರಳದಲ್ಲಿ ಅಮೀಬಾ ಸೋಂಕು ಹಿನ್ನಲೆ ಮುಖ್ಯಮಂತ್ರಿ ಪಿಣರಾಯಿ ತುರ್ತು ಸಭೆ ಕರೆದಿದ್ದಾರೆ. ಕಲುಷಿತ ನೀರುಗಳಲ್ಲಿ ಈಜಾಡದಂತೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲು ಸೂಚನೆ ನೀಡಿದ್ದಾರೆ. ಇನ್ನು ಈಜುವಾಗ ಮೂಗಿನ ಕ್ಲಿಪ್‌ಗಳನ್ನು ಹಾಕುವಂತೆ ಸೂಚನೆ ನೀಡಿದ್ದಾರೆ. ಈಜುಕೊಳದಲ್ಲಿ ಕ್ಲೋರಿನೇಷನ್ ಆಗಿರಬೇಕು. ಈ ಸೋಂಕಿಗೆ ಮಕ್ಕಳೇ ಬಲಿಯಾಗುತ್ತಿರುವುದರಿಂದ ಜಾಗರೂಕರಾಗಿರಬೇಕು ಎಂದು ಹೇಳಿದ್ದಾರೆ.

    Continue Reading

    DAKSHINA KANNADA

    ಮಂಗಳೂರು ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಇಂದು(ಜು.8)ರಜೆ

    Published

    on

    ಮಂಗಳೂರು : ಮಂಗಳೂರು ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದೆ. ಮುಂಜಾಗೃತಾ ಕ್ರಮವಾಗಿ ತಾಲೂಕಿನ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.8ರಂದು ರಜೆ ಘೋಷಿಸಲಾಗಿದೆ.


    ಭಾರೀ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಮಂಗಳೂರು ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಮಂಗಳೂರು ತಹಶೀಲ್ದಾರ್ ರಜೆ ಘೋಷಿಸಿ ಆದೇಶಿಸಿದ್ದಾರೆ.

    Continue Reading

    LATEST NEWS

    Trending