ಉಡುಪಿ: ಇಲ್ಲಿನ ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರ ಉಪ್ಪೂರುವಿನಲ್ಲಿ ದ್ವಿಚಕ್ರ ವಾಹನ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಇಂದು ನಡೆದಿದೆ.
ಮೃತರನ್ನು ಮಂಡ್ಯ ಮೂಲದ ನಾಗರಾಜು (40) ಎಂದು ಗುರುತಿಸಲಾಗಿದೆ. ಚಲಿಸುತ್ತಿದ್ದ ಸ್ಕೂಟರಿಗೆ ಕಾರು ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದು,
ಪರಿಣಾಮ ದ್ವಿಚಕ್ರ ವಾಹನ ಸವಾರ ರಸ್ತೆಗೆ ಉರುಳಿಬಿದ್ದು ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.