Connect with us

    LATEST NEWS

    ಕುಂದಾಪುರ: ಮನೆ ಮನೆ ಮತದಾನ ಮಾಡಿದ್ದ ವೃದ್ಧ ಅಸೌಖ್ಯದಿಂದ ಕೊನೆಯುಸಿರು

    Published

    on

    ಮನೆ ಮನೆಯಿಂದಲೇ ಮತದಾನ ಮಾಡಿ ಚುನಾವಣಾ ಫಲಿತಾಂಶ ಬರುವ ಮೊದಲೇ ವೃದ್ದರೋರ್ವರು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ತೆಕ್ಕಟ್ಟೆ ಎಂಬಲ್ಲಿ ನಡೆದಿದೆ.

    ಕುಂದಾಪುರ: ಮನೆ ಮನೆಯಿಂದಲೇ ಮತದಾನ ಮಾಡಿ ಚುನಾವಣಾ ಫಲಿತಾಂಶ ಬರುವ ಮೊದಲೇ ವೃದ್ದರೋರ್ವರು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ತೆಕ್ಕಟ್ಟೆ ಎಂಬಲ್ಲಿ ನಡೆದಿದೆ.

    ಇಲ್ಲಿನ ತೆಕ್ಕಟ್ಟೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ನಿವೃತ್ತ ಶಿಕ್ಷಕ 94 ವರ್ಷದ ಮಾಲಾಡಿ ಗುರುರಾಜ ಭಟ್‌ ನಿಧನರಾದ ವೃದ್ಧರಾಗಿದ್ದಾರೆ.

    ಅವರು ಎ.30 ರಂದು ಮನೆಯಿಂದಲೇ ತಮ್ಮ ಹಕ್ಕನ್ನು ಚಲಾಯಿಸಿದ್ದು, ಬುಧವಾರ ಅಸೌಖ್ಯದಿಂದ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

    ಮತಗಟ್ಟೆ ಸಂಖ್ಯೆ 82ರಲ್ಲಿ ಇರುವ ಇವರು ಮಕ್ಕಳೆಲ್ಲ ಹೊರ ಜಿಲ್ಲೆಗಳಲ್ಲಿ ಉದ್ಯೋಗದಲ್ಲಿರುವ ಹಿನ್ನೆಲೆಯಲ್ಲಿ ಮತಗಟ್ಟೆಯೆಡೆಗೆ ಬಂದು ಮತ ಚಲಾಯಿಸಲು ಕಷ್ಟಸಾಧ್ಯವಾದ ಪರಿಣಾಮ ಮನೆಯಿಂದಲೇ ಮತದಾನ ಮಾಡುವುದಾಗಿ ನೋಂದಾಯಿಸಿಕೊಂಡಿದ್ದರು.

    ಅದರಂತೆ ಮತಗಟ್ಟೆ ಅಧಿಕಾರಿಗಳು ಹಾಗೂ ಸಿಬ್ದಂದಿಗಳು ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಿದ್ದರು.

    ಆದರೆ ತಮ್ಮ ಹಕ್ಕು ಚಲಾಯಿಸಿದ ಹಿರಿಯರಾದ ಮಾಲಾಡಿ ಗುರುರಾಜ ಭಟ್‌ ಅವರು ಫಲಿತಾಂಶ ಬರುವ ಮೊದಲೇ ಸಾವನ್ನಪ್ಪಿದ್ದಾರೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಬಜೆಟ್ 2024: ಮೊದಲ ಬಾರಿಗೆ ಉದ್ಯೋಗ ಹುಡುಕುವವರಿಗೆ ಬಂಪರ್ ಉಡುಗೊರೆ.!

    Published

    on

    Union Budget 2024 : ಸರ್ಕಾರದ 9 ಆದ್ಯತೆಗಳಲ್ಲಿ ಒಂದು ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ. ಇದರ ಅಡಿಯಲ್ಲಿ, ಮೊದಲ ಬಾರಿಗೆ ಉದ್ಯೋಗಾಕಾಂಕ್ಷಿಗಳಾಗಿರುವವರಿಗೆ ದೊಡ್ಡ ಸಹಾಯ ದೊರೆಯಲಿದೆ. ಔಪಚಾರಿಕ ವಲಯದಲ್ಲಿ ಮೊದಲ ಬಾರಿಗೆ ಉದ್ಯೋಗ ಆರಂಭಿಸುವವರಿಗೆ ಒಂದು ತಿಂಗಳ ವೇತನವನ್ನು ಸರ್ಕಾರದ ವತಿಯಿಂದ ನೀಡಲಾಗುವುದು.

    ಈ ವೇತನವನ್ನು ನೇರ ನಗದು ವರ್ಗಾವಣೆ ಮೂಲಕ ಮೂರು ಕಂತುಗಳಲ್ಲಿ ಬಿಡುಗಡೆ ಮಾಡಲಾಗುವುದು. ಇದರ ಗರಿಷ್ಠ ಮೊತ್ತ 15 ಸಾವಿರ ರೂ. ಇಪಿಎಫ್​ಒನಲ್ಲಿ ನೋಂದಾಯಿಸಲ್ಪಟ್ಟವರು ಈ ಭತ್ಯೆ ಪಡೆಯಲಿದ್ದಾರೆ. ಅರ್ಹತೆಯ ಮಿತಿಯು ತಿಂಗಳಿಗೆ 1 ಲಕ್ಷ ರೂ. ಇದರಿಂದ 2.10 ಕೋಟಿ ಯುವಕರಿಗೆ ಅನುಕೂಲವಾಗಲಿದೆ.

    ಉದ್ಯೋಗ, ಕೌಶಲ್ಯ ತರಬೇತಿಗೆ ಸಂಬಂಧಿಸಿದ 5 ಯೋಜನೆಗಳಿಗೆ ₹2 ಸಾವಿರ ಕೋಟಿ

    ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ‘ಭಾರತದ ಆರ್ಥಿಕತೆಯ ಬೆಳವಣಿಗೆಯು ಅತ್ಯುತ್ತಮವಾಗಿ ಮುಂದುವರಿದಿದೆ. ಭಾರತದ ಹಣದುಬ್ಬರವು ಸ್ಥಿರವಾಗಿದೆ, 4% ಗುರಿಯತ್ತ ಸಾಗುತ್ತಿದೆ. ಬಡವರು, ಯುವಕರು, ಮಹಿಳೆಯರು, ರೈತರಂತಹ ಪ್ರಮುಖ ವರ್ಗಗಳನ್ನು ಕೇಂದ್ರೀಕರಿಸುವ ಪ್ರಯತ್ನ ಮಾಡಲಾಗುತ್ತಿದೆ. ಉದ್ಯೋಗ, ಕೌಶಲ್ಯ, ಎಂಎಸ್‌ಎಂಇ, ಮಧ್ಯಮ ವರ್ಗದವರಿಗೆ ನಿರಂತರ ಗಮನ ನೀಡಲಾಗುತ್ತಿದೆ. ಉದ್ಯೋಗ ಮತ್ತು ಕೌಶಲ್ಯ ತರಬೇತಿಗೆ ಸಂಬಂಧಿಸಿದ 5 ಯೋಜನೆಗಳಿಗೆ 2 ಸಾವಿರ ಕೋಟಿ ರೂಪಾಯಿ ಮೀಸಲಿಡಲಾಗುವುದು ಎಂದು ಹೇಳಿದರು.

    Continue Reading

    LATEST NEWS

    ಮಳೆ ಆರ್ಭಟ; ಕೃಷ್ಣೆಗೆ ಭಾಗಿನ ಅರ್ಪಿಸಲು ಹೋಗಿ ಯುವಕ ನೀರು ಪಾ*ಲು

    Published

    on

    ಮಳೆ ಬಂದ್ರೆ ಇಳೆಗೆ ಜೀವ ಕಳೆ. ಅದೇ ಮಳೆ ರೌದ್ರನರ್ತನ ಮೆರೆದ್ರೆ ಸಾ*ವು-ನೋವಿನ ಸೆಲೆ. ರಾಜ್ಯದ ಅಷ್ಟ ದಿಕ್ಕುಗಳಲ್ಲೂ ಅಬ್ಬಿರಿಸಿ ಬೊಬ್ಬರಿಯುತ್ತಿರೋ ವರುಣ ಸಾ*ವು ನೋವಿನ ಸಂಕಷ್ಟಗಳ ಸರಮಾಲೆಗೆ ಸಾಕ್ಷಿಯಾಗಿದ್ದಾನೆ.

    ಕೃಷ್ಣಾ ನದಿಗೆ ಭಾಗಿನ ಅರ್ಪಿಸಲು ಹೋದ ಯುವಕ ಸಾ*ವು

    ಕೃಷ್ಣಾ ನದಿಯ ಹಿನ್ನೀರಿನಲ್ಲಿ ಭಾಗಿನ ಅರ್ಪಿಸಲು ಹೋದ ಯುವಕ ನೀರುಪಾ*ಲಾಗಿರೋ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿದೆ.

    ಈಜಲು ಬರದ ಹಿನ್ನಲೆ 28 ವರ್ಷದ ಯುವಕ ರೋಹಣ ಪಾಟೀಲ ಆಯತಪ್ಪಿ ನೀರಿಗೆ ಬಿದ್ದು ಸಾ*ವನ್ನಪ್ಪಿದ್ದಾನೆ. ಸ್ಥಳೀಯರ ಸಹಾಯದಿಂದ ಬೋಟ್ ಮೂಲಕ ರೋಹಣ ಪಾಟೀಲ ಮೃ*ತದೇಹ ಹೊರ ತೆಗೆಯಲಾಗಿದೆ.

    Continue Reading

    LATEST NEWS

    ಕೇಂದ್ರ ಬಜೆಟ್ 2024 : ಗಮನ ಸೆಳೆದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೀರೆ

    Published

    on

    ಮಂಗಳೂರು / ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಕೇಂದ್ರ ಬಜೆಟ್ 2024 ಅನ್ನು ಮಂಡಿಸಲಿದ್ದಾರೆ.  ಪ್ರತೀ ವರ್ಷದಂತೆ ಈ ವರ್ಷವೂ ಅವರ ಸೀರೆ ಗಮನ ಸೆಳೆದಿದೆ. ಅವರು ಮೆಜೆಂಟಾ ಮತ್ತು ಗೋಲ್ಡ್ ಬಾರ್ಡರ್ ಹೊಂದಿರುವ ಬಿಳಿ ಚೆಕ್ ಸೀರೆಯನ್ನು ಉಟ್ಟಿದ್ದಾರೆ.


    ಸತತ ಏಳನೇ ಬಜೆಟ್ ಮಂಡಿಸುತ್ತಿರುವ ಮೊದಲ ಹಣಕಾಸು ಸಚಿವೆಯಾಗಿ ನಿರ್ಮಲಾ ಸೀತಾರಾಮನ್ ಹೊರಹೊಮ್ಮಿದ್ದಾರೆ. ಇದು ಭಾರತದ ಇತಿಹಾಸದ ಪುಟ ಸೇರಿದೆ.

    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಲ್ಲಿ ಕೈಮಗ್ಗ ಸೀರೆ ಸಂಗ್ರಹ ಅಧಿಕ. ಹೀಗಾಗಿ ಇದು ಎಲ್ಲರ ಗಮನ ಸೆಳೆಯುತ್ತದೆ. ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ 2024 ಅನ್ನು ಮಂಡಿಸಲು ಸಂಸತ್ತಿಗೆ ತೆರಳುತ್ತಿದ್ದಾಗ,  ತಮ್ಮ ತಂಡದೊಂದಿಗೆ ಫೋಟೋಗೆ ಫೋಸ್ ನೀಡಿದರು. ಅವರು ಚೌಕಾಕಾರದ ಚೆಕ್ ಮತ್ತು ಚಿನ್ನದ ಕಸೂತಿಯೊಂದಿಗೆ ಅಗಲವಾದ ಮೆಜೆಂಟಾ ಬಾರ್ಡರ್ ಹೊಂದಿರುವ ಆಫ್-ವೈಟ್ ಬೇಸ್ ಕೈಮಗ್ಗ ಸೀರೆಯಲ್ಲಿ ಕಂಗೊಳಿಸುತ್ತಿದ್ದರು.

    Continue Reading

    LATEST NEWS

    Trending