Sunday, November 27, 2022

ಕುಂದಾಪುರ: ಮಗನನ್ನು ರಕ್ಷಿಸುವ ಭರದಲ್ಲಿ ನೀರುಪಾಲಾದ ತಾಯಿ-ತೀವ್ರ ಶೋಧ

ಕುಂದಾಪುರ: ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತ ಮಹಿಳೆಯೊಬ್ಬರು ಸೌಪರ್ಣಿಕ ನದಿಯಲ್ಲಿ ಕೊಚ್ಚಿ ಹೋದ ಘಟನೆ ಕುಂದಾಪುರದಲ್ಲಿ ನಿನ್ನೆ ಸಂಜೆ ನಡೆದಿದೆ.

ಮುರುಗನ್ ಎಂಬವರ ಪತ್ನಿ ಚಾಂದಿ ಶೇಖರನ್ (42) ನೀರುಪಾಲಾದ ಮಹಿಳೆ.


ಮಹಿಳೆಗಾಗಿ ಅಗ್ನಿಶಾಮಕ ದಳ, ಕೊಲ್ಲೂರು ಪೊಲೀಸರು ಹಾಗೂ ಗ್ರಾಮಸ್ಥರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಕೇರಳ ಮೂಲದ ಇವರು ಸೆ.10ರಂದು ತಿರುವನಂತಪುರದಿಂದ ಕೊಲ್ಲೂರು ದೇಗುಲಕ್ಕೆ ಆಗಮಿಸಿದ್ದು ನಿನ್ನೆ ಸಂಜೆ ವೇಳೆ ಸೌಪರ್ಣಿಕಾ ಸ್ನಾನಘಟ್ಟಕ್ಕೆ ತೆರಳಿದ್ದರು.

ಈ ವೇಳೆ ನೀರಿಗಿಳಿದ ಗಂಡ ಮುರುಗನ್ ನೀರಿನ ಸೆಳೆತಕ್ಕೆ ಸಿಲುಕಿದಾಗ ಪುತ್ರ ಆದಿತ್ಯ ರಕ್ಷಣೆಗೆ ಮುಂದಾಗಿದ್ದಾನೆ. ಇದೇ ವೇಳೆ ಮಗನು ನೀರಿನ ಸೆಳೆತಕ್ಕೆ ಸಿಲುಕಿದನ್ನು ನೋಡೊ ಚಾಂದಿ ಅವರು ಕೂಡನ ಈಜು ಬಾರದಿದ್ದರೂ ನದಿಗೆ ಧುಮುಕಿದ್ದಾರೆ.

ಇದೇ ವೇಳೆ ಬೊಬ್ಬೆ ಕೇಳಿ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಮುರುಗನ್ ಮತ್ತು ಆದಿತ್ಯ ಅವರನ್ನು ರಕ್ಷಿಸಿದ್ದಾರೆ.

ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ಸುಳ್ಯ: ಸಚಿವ ಅಂಗಾರ ಅವರಿಗೆ ಡೆಂಗ್ಯೂ ದೃಢ-ಆಸ್ಪತ್ರೆಗೆ ದಾಖಲು

ಸುಳ್ಯ: ಶಾಸಕ, ಬಂದರು, ಮೀನುಗಾರಿಕೆ ಹಾಗೂ ಒಳ ನಾಡು ಜಲ ಸಾರಿಗೆ ಸಚಿವ ಎಸ್‌. ಅಂಗಾರ ಅವರಿಗೆ ಡೆಂಗ್ಯೂ ದೃಢಪಟ್ಟ ಕಾರಣ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.  ಈ ಹಿನ್ನೆಲೆ ಅವರು ಸುಳ್ಯ ಕೆವಿಜಿ ಆಸ್ಪತ್ರೆಗೆ ದಾಖಲಾಗಿರುವುದಾಗಿ...

ಉಡುಪಿ: ಹೊಟೇಲ್‌ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ….

ಉಡುಪಿ: ಹೊಟೇಲ್‌ವೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ ಸಂಭವಿಸಿದ್ದು, ಅಗ್ನಿಶಾಮಕದಳದ ಸಿಬ್ಬಂದಿ ಸಕಾಲಿಕ ಕಾರ್ಯಾಚರಣೆಯಿಂದ ಸಂಭಾವ್ಯ ಅವಘಡವೊಂದು ತಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.ಇಲ್ಲಿನ ಸಿಟಿ ಬಸ್ ನಿಲ್ದಾಣ ಸಮಿಪದಲ್ಲಿರುವ ಟಾಪ್ ಟೌನ್...

ಬಂಟ್ವಾಳದಲ್ಲಿ ಪಿಕಪ್ ವಾಹನಕ್ಕೆ ಗುದ್ದಿದ ಕಾರು..

ಬಂಟ್ವಾಳ: ವಿರುದ್ಧ ದಿಕ್ಕಿನಲ್ಲಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನಕ್ಕೆ ಡಿಕ್ಕಿಯಾಗಿ ಬಳಿಕ ಪಿಕಪ್ ವಾಹನ ರಸ್ತೆಯ ಬದಿಯಲ್ಲಿರುವ ಮನೆಗೆ ನುಗ್ಗಿ ಗೋಡೆ ಜರಿದು ಬಿದ್ದಂತಹ ಘಟನೆ ದಕ್ಷಿಣ ಕನ್ನಡ...