Connect with us

    LATEST NEWS

    ಕುಂದಾಪುರ: ಈಜಲು ತೆರಳಿದ್ದ ಉಪನ್ಯಾಸಕ ಸೇರಿ ಇಬ್ಬರು ನೀರುಪಾಲು..!

    Published

    on

    ನದಿಗೆ ಈಜಲು ತೆರಳಿದ್ದ ಶಂಕರನಾರಾಯಣ ಮದರ್ ಥೇರಸಾ ಕಾಲೇಜಿನ ಉಪನ್ಯಾಸಕ ಸೇರಿ ಇಬ್ಬರು ನೀರು ಪಾಲಾದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಂದಾವರ ಗ್ರಾಮದ ಉಳ್ಳೂರು – ಕಾಡಿನಕೊಂಡ ಎಂಬಲ್ಲಿ ಕಂದಾವರ ಡಂಪಿಂಗ್ ಯಾರ್ಡ್‌ ಬಳಿ ಸಂಭವಿಸಿದೆ.

    ಉಡುಪಿ: ನದಿಗೆ ಈಜಲು ತೆರಳಿದ್ದ ಶಂಕರನಾರಾಯಣ ಮದರ್ ಥೇರಸಾ ಕಾಲೇಜಿನ ಉಪನ್ಯಾಸಕ ಸೇರಿ ಇಬ್ಬರು ನೀರು ಪಾಲಾದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಂದಾವರ ಗ್ರಾಮದ ಉಳ್ಳೂರು – ಕಾಡಿನಕೊಂಡ ಎಂಬಲ್ಲಿ ಕಂದಾವರ ಡಂಪಿಂಗ್ ಯಾರ್ಡ್‌ ಬಳಿ ಸಂಭವಿಸಿದೆ.

    ಉಪನ್ಯಾಸಕ ರಾಜೇಂದ್ರ ಶೆಟ್ಟಿಗಾರ (28) ಶಂಕರನಾರಾಯಣ ಹೈಸ್ಕೂಲ್ ವಿದ್ಯಾರ್ಥಿ ಭರತ್ ಶೆಟ್ಟಿಗಾರ (15) ನೀರಲ್ಲಿ ಮುಳುಗಿ ಮೃತರಾದ ದುರ್ದೈವಿಯಾಗಿದ್ದಾರೆ.

    ನಾಲ್ಕು ಎಕರೆ ವಿಸ್ತಾರದ ಮದಗಕ್ಕೆ ವಾರಾಹಿ ಏತ ನೀರಾವರಿ ಯೋಜನೆಯ ಮೂಲಕ ನೀರು ಹರಿದು ಬಂದಿರುವ ಉಳ್ಳೂರು – ಕಂದಾವರದ ಬೊಬ್ಬಯ೯ ಕೊಡ್ಲು ಮದಗಕ್ಕೆ 6 ಜನ ಈಜಲು ತೆರಳಿದ್ದಾರೆ.

    ಸುಮಾರು 10 ಪೀಟ್ ನೀರಿರುವ ಮದಗದಲ್ಲಿ ಭರತ್ ಆಯತಪ್ಪಿ ಮುಳುಗಿದ್ದನ್ನು ನೋಡಿದ ರಾಜೇಂದ್ರ ರಕ್ಷಣೆಗೆ ತೆರಳಿದಾಗ ಈಜು ಬಾರದ ಇಬ್ಬರೂ ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ.

    ಭರತ್ ರಜೆಯ ಕಾರಣ ತನ್ನ ತಾಯಿಯ ಮನೆಗೆ ಬಂದಿದ್ದ, ಬಹುಮುಖ ಪ್ರತಿಭಾವಂತ ರಾಜೇಂದ್ರ ಮಂಗಳೂರಿನ ಕಾಲೇಜೊಂದರಲ್ಲಿ ಸೇವೆ ಸಲ್ಲಿಸಿ, ಇತ್ತೀಚೆಗೆ ಶಂಕರನಾರಾಯಣ ಕಾಲೇಜಿಗೆ ಸೇರಿದ್ದರು.

    ಬಳಿಕ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದವರು ಇಬ್ಬರ ಶವವನ್ನು ಮೇಲಕ್ಕೆತ್ತಿದ್ದಾರೆ.

    ಈ ಬಗ್ಗೆ ಕಂಡ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರು ಪ*ಲ್ಟಿ; ಓರ್ವ ಸಾ*ವು, ಹಲವರ ಸ್ಥಿತಿ ಗಂಭೀ*ರ

    Published

    on

    ಶಿವಮೊಗ್ಗ: ಶಿವಮೊಗ್ಗದ ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರೊಂದು ಪ*ಲ್ಟಿಯಾಗಿರುವ ಘಟನೆ ಸಂಭವಿಸಿದೆ. ಪರಿಣಾಮ ಕಾರಿನಲ್ಲಿದ್ದ ಬೆಂಗಳೂರು ಮೂಲದ ಯುವಕ ಮೃ*ತಪಟ್ಟಿದ್ದಾನೆ. ನೆಲಮಂಗಲದ ಚಂದನ್‌ (26) ಮೃ*ತ ಯುವಕ.

    ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಕೆರೆಕೋಡಿ ಬಳಿ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಭತ್ತದ ಗದ್ದೆಗೆ ಪ*ಲ್ಟಿಯಾಗಿದೆ.  ಕೊಡುಗು ಮೂಲದ ನಂದನ್‌, ಕೋಲಾರದ ಕೋದಂಡ, ಹಾಸನದ ಭರತ್‌, ಮಂಡ್ಯ ಜಿಲ್ಲೆಯ ಯೋಗೇಶ್‌ ಎಂಬವರಿಗೆ ಗಂ*ಭೀರ ಗಾ*ಯವಾಗಿದೆ.

    ಇದನ್ನೂ ಓದಿ : ನಟಿ ಓವಿಯಾ ಖಾಸಗಿ ವಿಡಿಯೋ ಲೀಕ್​? ನಿಜಾನಾ ಎಂದು ಕೇಳಿದ್ದಕ್ಕೆ ಎಂಜಾಯ್​ ಮಾಡಿ ಎಂದ ಕಿರಾತಕ ಬೆಡಗಿ

    ಯುವಕರ ತಂಡ ಬೆಂಗಳೂರಿನಿಂದ ಸಿಗಂದೂರಿಗೆ ಪ್ರವಾಸಕ್ಕೆ ಬಂದಿತ್ತು. ಸ್ಥಳಕ್ಕೆ ಕುಂಸಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃ*ತದೇಹವನ್ನು ಮ*ರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

    Continue Reading

    LATEST NEWS

    ಪೊಳಲಿ ಸೇತುವೆ ಬಂದ್: ಮಂಗಳವಾರ ಗ್ರಾಮಸ್ಥರಿಂದ ಪ್ರತಿಭಟನೆ

    Published

    on

    ಮಂಗಳೂರು: ಘನ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿದ್ದ ಸೇತುವೆಯ ಬಗ್ಗೆ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

    ಪೊಳಲಿ – ಅಡ್ಡೂರಿನ ಪಲ್ಗುಣಿ ನದಿಯ ಸೇತುವೆ ಬಿರುಕು ಬಿಟ್ಟ ಕಾರಣಕ್ಕೆ ಘನ ವಾಹನ ಸಂಚಾರ ಸ್ಥಗಿತ ಮಾಡಲಾಗಿತ್ತು. ಸಂಬಂಧಪಟ್ಟ ಇಲಾಖೆ ಸೇತುವೆಯ ಸಾಮರ್ಥ್ಯವನ್ನು ಯಂತ್ರದ ಮೂಲಕ ಪರಿಶೀಲನೆ ನಡೆಸಿ ಎರಡು ತಿಂಗಳಾದ್ರೂ ಏನಾಗಿದೆ ಎಂಬ ಬಗ್ಗೆ ಜನರಿಗೆ ಮಾಹಿತಿಯೇ ಇಲ್ಲ. ಇದರಿಂದ ತೊಂದರೆಗೆ ಒಳಗಾಗಿರುವ ಅಮ್ಮುಂಜೆ , ಕರಿಯಂಗಳ, ಬಡಗಬೆಳ್ಳೂರು, ತೆಂಕಬೆಳ್ಳೂರು ಮತ್ತು ಸುತ್ತಮುತ್ತಲಿನ ಜನ ಸಭೆ ನಡೆಸಿದ್ದಾರೆ. ಜನರ ಸಮಸ್ಯೆಗೆ ಸ್ಪಂದನೆಯೇ ನೀಡದ ಜನಪ್ರತಿಧಿಗಳು, ಹಾಗೂ ಅಧಿಕಾರಿಗಳ ವಿರುದ್ಧ ಅಕ್ಟೋಬರ್ 15 ರಂದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

    ಪೊಳಲಿಯ ರಾಮಕೃಷ್ಣ ತಪೋವನ ರಾಜರಾಜೇಶ್ವರಿ ಸಭಾಂಗಣದಲ್ಲಿ ಸಭೆ ನಡೆಸಲಾಗಿದ್ದು, ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ರಾಮಕೃಷ್ಣ ತಪೋವನದ ಸ್ವಾಮಿ ವಿವೇಕಾಚೈತನ್ಯನಂದ ಸ್ವಾಮೀಜಿ , ಪೊಳಲಿ ಅಡ್ಡೂರು ಫಲ್ಗುಣಿ ಹೋರಾಟ ಸಮಿತಿಯ ಅಧ್ಯಕ್ಷ ವೆಂಕಟೇಶ್ ನಾವುಡ, ಚಂದ್ರಹಾಸ್ ಪಲ್ಲಿಪಾಡಿ, ಜಯರಾಮಕೃಷ್ಣ ಪೊಳಲಿ, ನೂಯಿ ಬಾಲಕೃಷ್ಣ ರಾವ್, ಅಬೂಬಕ್ಕರ್ ಅಮ್ಮುಂಜೆ ಉಪಸ್ಥಿತರಿದ್ದು ಹೋರಾಟದ ಬಗ್ಗೆ ಜನಾಭಿಪ್ರಾಯ ಪಡೆದುಕೊಂಡಿದ್ದಾರೆ.

    Continue Reading

    LATEST NEWS

    ಮದರಸ ಹಾಸ್ಟೇಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ

    Published

    on

    ಬ್ರಹ್ಮಾವರ: ಹೇರಾಡಿ ಖಾಸಗಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಯೊಬ್ಬ ಮದರಸ ಹಾಸ್ಟೇಲ್‌ನಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
    ಮೃತ ವಿದ್ಯಾರ್ಥಿಯು ಮೊಹಮ್ಮದ್ ಜಹೀದ (12) ಎಂದು ಗುರುತಿಸಲಾಗಿದೆ.


    ಕಳೆದ 4 ತಿಂಗಳಿನಿಂದ ಬ್ರಹ್ಮಾವರ ತಾಲೂಕಿನ ರಂಗನಕೆರೆಯ ಮಾಲಿಕ್ ದಿನಾರ್ ಮದರಸ ಹಾಸ್ಟೇಲ್‌ನಲ್ಲಿ ಉಳಿದು ವಿದ್ಯಾಭ್ಯಾಸ ಮಾಡುತ್ತಿದ್ದು, ರಜೆಯನ್ನು ಮುಗಿಸಿ ಅ.11 ರಂದು ಹಾಸ್ಟೇಲ್‌ಗೆ ಮರಳಿದ್ದಾನೆ.

    ರಾತ್ರಿ 9 ಗಂಟೆಗೆ ಊಟಕ್ಕೆ ಬಾರದಿದ್ದನ್ನು ಗಮನಿಸಿ ಹಾಡುಕಿದಾಗ ಹಾಸ್ಟೇಲ್‌ನ ಬಾತ್‌ರೂಮ್‌ನಲ್ಲಿ ಸರಳಿಗೆ ಬೈರಾಸ್‌ನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವುದು ತಿಳಿದು ಬಂದಿದೆ.

    ಕೂಡಲೇ ಆತನನ್ನು ಚಿಕಿತ್ಸೆಗಾಗಿ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದು, ವೈದ್ಯರು ರಾತ್ರಿ 10.40 ರ ಸುಮಾರಿಗೆ ಆತನನ್ನು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮೃತನ ಮರಣದಲ್ಲಿ ಸಂಶಯವಿರುವುದಾಗಿ ಬಾಲಕನ ತಾಯಿ ರಿಹಾನ ಬೇಗಂ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಬಾಲಕನಿಗೆ ಹಾಸ್ಟೇಲ್‌ಗೆ ಹೋಗಲು ಮನಸ್ಸಿಲ್ಲವೆಂದು, ಹಾಸ್ಟೇಲ್‌ನ ಇತರ ವಿದ್ಯಾರ್ಥಿಗಳೊಂದಿಗೆ ಸಣ್ನ ಮಟ್ಟಿನ ಜಗಳ ಆಗಿತ್ತು ಎಂದು ತಿಳಿದು ಬಂದಿದದೆ.

    Continue Reading

    LATEST NEWS

    Trending