Connect with us

    DAKSHINA KANNADA

    ಕುತ್ತಾರು: ಸರಣಿ ಅಪಘಾತ-ರಿಕ್ಷಾ ಚಾಲಕ ಗಂಭೀರ

    Published

    on

    ಉಳ್ಳಾಲ: ಕಾರು ಚಾಲಕನ ಆವಾಂತರದಿಂದ ರಿಕ್ಷಾ ಸಹಿತ ಕಾರೊಂದು ಜಖಂಗೊಂಡು ಸರಣಿ ಅಪಘಾತ ನಡೆದು, ರಿಕ್ಷಾ ಚಾಲಕ ಗಾಯಗೊಂಡಿರುವ ಘಟನೆ ಕುತ್ತಾರು ಮದನಿನಗರದಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದೆ.


    ದೇರಳಕಟ್ಟೆ ಕಡೆಯಿಂದ ಮಂಗಳೂರು ಕಡೆಗೆ ಅತೀವೇಗದಿಂದ ಹೋಂಡ ಸಿವಿಕ್ ಕಾರೊಂದು ಧಾವಿಸಿ ಎದುರಿನಿಂದ ಬರುತ್ತಿದ್ದ ರಿಕ್ಷಾಗೆ ಢಿಕ್ಕಿ ಹೊಡೆದು ಅದರ ಹಿಂದಿದ್ದ ವೈದ್ಯ ವಿದ್ಯಾರ್ಥಿಗಳಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ರಿಕ್ಷಾ ಚಾಲಕ ದೇರಳಕಟ್ಟೆ ಬದ್ಯಾರ್ ನಿವಾಸಿ ಮೊಹಮ್ಮದ್ ಮನ್ಸೂರ್ (35) ಗಂಭೀರ ಗಾಯಗೊಂಡಿದ್ದಾರೆ.

    ಅಪಘಾತದ ರಭಸಕ್ಕೆ ವೈದ್ಯ ವಿದ್ಯಾರ್ಥಿನಿಯರಿದ್ದ ಕಾರು ಹಾಗೂ ರಿಕ್ಷಾ ಸಂಪೂರ್ಣ ನುಜ್ಜುಗುಜ್ಜಾಗಿದೆ. ಆದರೆ ಕಾರಿನಲ್ಲಿದ್ದ ವಿದ್ಯಾರ್ಥಿಗಳು ಪವಾಡಸದೃಶ ಪಾರಾಗಿದ್ದಾರೆ. ಘಟನೆಗೆ ಕಾರಣವಾದ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

    ಕುಡಿತದ ಮಂಪರಿನಲ್ಲಿದ್ದ ಕಾರು ಚಾಲಕ‌ನ ಆವಾಂತರದಿಂದ ಘಟನೆ ನಡೆದಿದೆ ಅನ್ನುವ ಆರೋಪ ಸ್ಥಳೀಯರು ಮಾಡಿದ್ದಾರೆ. ನಾಗುರಿ ಸಂಚಾರಿ ಠಾಣಾ ಪೊಲೀಸರು ಕಾರು ವಶ ಪಡೆದುಕೊಂಡಿದ್ದಾರೆ. ಕಾರು ಚಾಲಾಯಿಸುತ್ತಿದ್ದಾತನನ್ನು ವಿಟ್ಲ ಕೇಪು ನಿವಾಸಿ ಕರಾಟೆ ಮಾಸ್ಟರ್ ಧರಣಪ್ಪ ಎಂದು ಗುರುತಿಸಲಾಗಿದೆ.

    DAKSHINA KANNADA

    ಕೋಲ್ನಾಡು ಆಟೋರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ : ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

    Published

    on

    ಮಂಗಳೂರು : ಕೋಲ್ನಾಡು ಆಟೋರಿಕ್ಷಾ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ ಮಂಗಳವಾರ(ಜೂ.18) ಕೆಎಸ್ ರಾವ್ ನಗರದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಿಸಲಾಯಿತು.


    ಈ ಸಂದರ್ಭ ಸರ್ವೋತ್ತಮ ಅಂಚನ್, ಜಯಕೃಷ್ಣ ಕೋಟ್ಯಾನ್ ಹಳೆಯಂಗಡಿ, ಹಿಂದುಸ್ತಾನ್ ಪೆಟ್ರೋಲಿಯಂನ ರವಿ ಎಸ್ ಶೆಟ್ಟಿ, ಶಾಲೆಯ ಮುಖ್ಯೋಪಾಧ್ಯಾಯ ದಿನೇಶ್ ಕೆ, ಹಾಗೂ ಆಟೋರಿಕ್ಷಾ ಚಾಲಕರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

    ಇದನ್ನೂ ಓದಿ : ಯುವಕನ ಜೊತೆ ಓಡಿಹೋದ ತಾಯಿ..! ಅಮ್ಮಾ ಬಾರಮ್ಮ..ಎಂದು ಮಕ್ಕಳು ಅಂಗಲಾಚಿದ್ರೂ ಕ್ಯಾರೇ ಅನ್ನದ ತಾಯಿ..!!

    Continue Reading

    DAKSHINA KANNADA

    ಚಿಕ್ಕಮೇಳದ ಹೆಸರಿನಲ್ಲಿ ಯಕ್ಷಗಾನ ಕಲೆಗೆ ಅಪಚಾರ ಮಾಡದಿರಿ; ಒಕ್ಕೂಟ ಮನವಿ

    Published

    on

    ಮಂಗಳೂರು: ಇಂದು ದೇಶ, ವಿದೇಶಗಳಲ್ಲಿ ಯಕ್ಷಗಾನದ ಹಿರಿಮೆ ಸಾರಲಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕಲೆಯ ಹೆಸರಿನಲ್ಲಿ ಕಲೆಯ ಗಂಧಗಾಳಿ ಇಲ್ಲದವರು ಕೂಡಾ ಯಕ್ಷ ಕಲೆಯನ್ನು ವಿರೂಪಗೊಳಿಸುತ್ತಿವುದು ವಿಷಾದನೀಯ ಸಂಗತಿ. ಇತ್ತೀಚಿನ ದಿನಗಳಲ್ಲಿ ಮಳೆಗಾಲದಲ್ಲಿ ತಿರುಗಾಟದ ಇಲ್ಲದ ಸಂದರ್ಭದಲ್ಲಿ ಮನೆ ಮನೆಗೆ ಚಿಕ್ಕ ಮೇಳಗಳು ಹೊರಡುತ್ತವೆ. ಆದರೆ ಯಕ್ಷಗಾನದ ಬಾಲಪಾಠವೂ ಆಗದವರಿಂದ ಚಿಕ್ಕ ಮೇಳ ಎಂದು ಹೆಸರಿಟ್ಟುಕೊಂಡು ಅದೊಂದು ದಂಧೆಯಾಗಿ ವ್ಯಾಪಕವಾಗಿರುವುದು ನೋವಿನ ಸಂಗತಿ ಎಂದು ತೆಂಕುತಿಟ್ಟು ಚಿಕ್ಕಮೇಳಗಳ ಒಕ್ಕೂಟ ದಕ್ಷಿಣ ಕನ್ನಡ ಜಿಲ್ಲೆ ಕೇಂದ್ರ ಸಮಿತಿ ದೂರಿದೆ.

    ಸಂಪ್ರದಾಯಕ್ಕೆ ಬದ್ಧವಾಗಿ, ಶಿಸ್ತುಬದ್ಧವಾಗಿ ಯಕ್ಷಗಾನ ಮಾಡಲು ಕಲಾವಿದರಲ್ಲಿ ಒಟ್ಟು ಮಾಡಿಕೊಂಡು ತೆಂಕುತಿಟ್ಟು ಚಿಕ್ಕಮೇಳ ಹೆಸರಿನಲ್ಲಿ ತಿರುಗಾಟವನ್ನು ಆರಂಭಿಸಲಾಗಿದೆ. ಒಕ್ಕೂಟದ ಪರವಾನಿಗೆ ಇದ್ದವರಿಗೆ ಮಾತ್ರ ಮನೆಯಲ್ಲಿ ಆಟವಾಡಿಸಲು ಜನತೆ ಅನುವು ಮಾಡಿಕೊಡಬೇಕು ಎಂದು ಒಕ್ಕೂಟದ ಅಧ್ಯಕ್ಷ ಸರಪಾಡಿ ಅಶೋಕ್ ಶೆಟ್ಟಿ ಹೇಳಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು ನಿಜವಾದ ಕಲಾವಿದರಿಗೆ ಅನ್ಯಾಯವಾಗಬಾರದು ಎನ್ನುವ ನಿಟ್ಟಿನಲ್ಲಿ ಒಕ್ಕೂಟವನ್ನು ರಚನೆ ಮಾಡಲಾಗಿದೆ. ಒಕ್ಕೂಟದ ಅಧಿಕೃತ ಪರವಾಣಿಗೆ ಪಡೆದು ತಿರುಗಾಟ ಮಾಡುವವರು ಸಂಜೆ 6ರಿಂದ ರಾತ್ರಿ 10.30ರವರೆಗೆ ಕನ್ನಡ ಇಲ್ಲವೇ ತುಳುಭಾಷೆಗಳ ಗರಿಷ್ಠ 20 ನಿಮಿಷಗಳ ಸಂದೇಶ ಇರುವ ಸನ್ನಿವೇಶದ ಪ್ರದರ್ಶನ ಮಾಡಲಿರುವರು ಎಂದರು.

    ಸುದ್ದಿಗೋಷ್ಠಿಯಲ್ಲಿ ಪದಾಧಿಕಾರಿಗಳಾದ ರಮೇಶ ಕುಲಶೇಖರ, ಕುಮಾರ್ ಮಾಲೆಮಾರ್‌, ದಿವಾಕರ ದಾಸ್, ಕಡಬ ದಿನೇಶ ರೈ ಮೊದಲಾದವರಿದ್ದರು.

    Continue Reading

    DAKSHINA KANNADA

    ಉಪ್ಪಿನಂಗಡಿ: ಮಹಿಳೆ ಸಾ*ವಿನಲ್ಲಿ ಅನುಮಾನ; ಕೊ*ಲೆ ಶಂಕೆ

    Published

    on

    ಉಪ್ಪಿನಂಗಡಿ : ಇಲ್ಲಿನ ಪೆರ್ನೆ ಬಳಿಯ ಬಿಳಿಯೂರು ದರ್ಖಾಸ್ ಎಂಬಲ್ಲಿ ಮಹಿಳೆಯೋರ್ವರು ಮೃ*ತಪಟ್ಟಿದ್ದು ಕೊ*ಲೆ ಶಂಕೆ ವ್ಯಕ್ತವಾಗಿದೆ. ಹೇಮಾವತಿ (37) ಮೃ*ತ ಮಹಿಳೆ.


    ಈಕೆ ತಾಯಿ, ಅಕ್ಕನ ಮಗನೊಂದಿಗೆ ಮನೆಯಲ್ಲಿದ್ದ ವೇಳೆ ಭಾನುವಾರ(ಜೂ.16) ರಾತ್ರಿ ಕೃತ್ಯ ನಡೆದಿದೆ. ಮೊದಲಿಗೆ ಪರಿಸರದಲ್ಲಿ ಹೃದಯಾಘಾ*ತವೆಂಬ ಸುದ್ದಿ ಹರಡಿತ್ತು. ಆದರೆ ಬಳಿಕ ಈ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

    ಇದನ್ನೂ ಓದಿ : ಕಡಬ : ವಿದ್ಯುತ್ ಶಾಕ್ ಹೊಡೆದು ಯುವಕ ಸಾ*ವು

    ವಿಚಾರಣೆಗಾಗಿ ಮೃ*ತಳ ಅಕ್ಕನ ಮಗ ಎಸ್ ಎಸ್ ಎಲ್ ಸಿ ಓದುತ್ತಿರುವ ಅಪ್ರಾಪ್ತ ಬಾಲಕನನ್ನು, ಆತನ ತಂದೆ ಶಂಕರ ಎಂಬವರನ್ನು ಕರೆದೊಯ್ದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಉಪ್ಪಿನಂಗಡಿ ಪೊಲೀಸರ ತನಿಖೆಯಿಂದಷ್ಟೇ ಬೆಳಕಿಗೆ ಬರಬೇಕಷ್ಟೇ. ಮೃ*ತರು ಹೊಟೇಲ್ ಕಾರ್ಮಿಕೆಯಾಗಿದ್ದರು.

    Continue Reading

    LATEST NEWS

    Trending