Sunday, July 3, 2022

ನೂಪುರ್ ಶರ್ಮಾ ಹೇಳಿಕೆ ಖಂಡಿಸಿ ಪ್ರತಿಭಟಿಸಿದವರನ್ನು ಗಡಿಪಾರು ಮಾಡಲಿದೆ ಕುವೈತ್‌..!

ಕುವೈತ್: ಭಾರತದಲ್ಲಿ ನೂಪುರ್ ಶರ್ಮಾ ಪ್ರವಾದಿ ಮೊಹಮದ್ ಕುರಿತು ನೀಡಿದ್ದ ಹೇಳಿಕೆಯನ್ನು ಪ್ರತಿಭಟಿಸಿದ್ದ ರಾಷ್ಟ್ರಗಳ ಪೈಕಿ ಕುವೈತ್ ಕೂಡ ಒಂದಾಗಿತ್ತು.

ಈಗ ಅದೇ ಕುವೈತ್ ತನ್ನ ದೇಶದಲ್ಲಿ ನೂಪುರ್ ಶರ್ಮಾ ಹೇಳಿಕೆಯನ್ನು ಖಂಡಿಸಿ ಪ್ರತಿಭಟಿಸಿದ್ದ ವಲಸಿಗರನ್ನು ಗಡಿಪಾರು ಮಾಡಲು ಮುಂದಾಗಿದೆ.


ಗಲ್ಫ್ ರಾಷ್ಟ್ರಗಳಲ್ಲಿ ಇಂತಹ ಪ್ರತಿಭಟನೆಗಳಿಗೆ ಅವಕಾಶವಿಲ್ಲದ ಹಿನ್ನೆಲೆಯಲ್ಲಿ ಕುವೈತ್ ಈ ನಿರ್ಧಾರ ಕೈಗೊಂಡಿದೆ.

ಶುಕ್ರವಾರದ ಪ್ರಾರ್ಥನೆಯ ಬಳಿಕ ಪ್ರತಿಭಟನೆ ನಡೆಸಿದ ವಲಸಿಗರನ್ನು ಬಂಧಿಸಿ, ಗಡಿಪಾರು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು ಅವರ ದೇಶಗಳಿಗೆ ಗಡಿಪಾರು ಮಾಡಲಾಗುತ್ತದೆ.
ಗಲ್ಫ್ ರಾಷ್ಟ್ರಗಳಲ್ಲಿ ವಲಸಿಗರಿಗೆ ಪ್ರತಿಭಟನೆ ನಡೆಸುವ ಅವಕಾಶವಿಲ್ಲ. ಈ ರೀತಿ ಪ್ರತಿಭಟನೆ ಮಾಡಿದವರನ್ನು ಗಡಿಪಾರು ಮಾಡಲಾಗುತ್ತದೆ ಹಾಗೂ ಮತ್ತೆ ಕುವೈತ್ ಗೆ ಬರುವುದಕ್ಕೆ ಅವಕಾಶವಿರುವುದಿಲ್ಲ.

ಪ್ರತಿಭಟನೆಯಲ್ಲಿ ಯಾವೆಲ್ಲಾ ರಾಷ್ಟ್ರದ ಮಂದಿ ಭಾಗಿಯಾಗಿದ್ದರು ಎಂಬ ಬಗ್ಗೆ ಮಾಹಿತಿ ಇಲ್ಲ.

ಕುವೈತ್ ನಲ್ಲಿ ವಲಸೆ ಹೋಗಿರುವ ಭಾರತೀಯರ ಸಂಖ್ಯೆ 2019 ರಲ್ಲೇ 10 ಲಕ್ಷ ದಾಟಿತ್ತು. ಈ ದೇಶದಲ್ಲಿ ಭಾರತೀಯರ ಸಂಖ್ಯೆ ವಾರ್ಷಿಕ ಶೇ.5-6 ರಷ್ಟು ಏರಿಕೆಯಾಗುತ್ತಿದೆ.

LEAVE A REPLY

Please enter your comment!
Please enter your name here

Hot Topics

ಮರವಂತೆಯಲ್ಲಿ ಸಮುದ್ರಪಾಲಾದ ಕಾರು: ಓರ್ವ ಸ್ಪಾಟ್ ಡೆತ್-ಓರ್ವ ನಾಪತ್ತೆ

ಕುಂದಾಪುರ: ಚಲಿಸುತ್ತಿದ್ದ ಕಾರೊಂದು ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸಮುದ್ರ ಪಾಲಾಗಿ ಕಾರಿನೊಳಗಿದ್ದ ನಾಲ್ವರ ಪೈಕಿ ಚಾಲಕ ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿ ಇಬ್ಬರು ಪ್ರಯಾಣಿಕರು ಗಾಯಾಳುಗಳಾಗಿ ಆಸ್ಪತ್ರೆಗೆ ಸೇರಿದಂತಹ ದಾರುಣ ಘಟನೆ ಉಡುಪಿ...

“ಮದರಸ ಬಗ್ಗೆ ಹೇಳಿಕೆಯನ್ನು ಉದುರುವಾಗ ನಾಲಗೆ ಹದ್ದು ಬಸ್ತಿನಲ್ಲಿ ಇಟ್ಟು ಮಾತನಾಡುವುದು ಒಳಿತು”

ಮಂಗಳೂರು: ಪ್ರವಾದಿ ನಿಂದನೆಗೈದ ನೂಪುರ್ ಶರ್ಮಾ ರನ್ನು ಬೆಂಬಲಿಸಿ ಹೇಳಿಕೆ ನೀಡಿದ ಕನ್ನಯ್ಯ ಲಾಲ್ ನನ್ನು ಇತ್ತೀಚೆಗೆ ರಾಜಸ್ತಾನದ ಉದಯಪುರದಲ್ಲಿ ಹತ್ಯೆ ಮಾಡಿದ ಆರೋಪಿಗಳು ಸ್ಥಳೀಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಸದಸ್ಯರು ಆಗಿದ್ದು,ಅಂತಹ...

ಮಂಗಳೂರು: ದೋಣಿ ಮೇಲೆತ್ತುವಾಗ ನೇತ್ರಾವತಿ ನದಿಗೆ ಬಿದ್ದ ಓರ್ವ ನಾಪತ್ತೆ ಮತ್ತಿಬ್ಬರ ರಕ್ಷಣೆ

ಬಂಟ್ವಾಳ: ದೋಣಿ ಮೇಲೆತ್ತುವಾಗ ಪ್ರವಾಹದ ರಭಸಕ್ಕೆ ದೋಣಿ ಸಮೇತ ನದಿಗೆ ಬಿದ್ದು ಓರ್ವ ನಾಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಅರ್ಕುಳ ಗ್ರಾಮದ ಶಶಿರಾಜ್ ಧಕ್ಕೆಯಲ್ಲಿ ನಿನ್ನೆ ಸಂಜೆ ನಡೆದಿದೆ.ನಾಪತ್ತೆಯಾದ ಯುವಕನನ್ನು ರಾಜು ಸಾಹ್...