Tuesday, October 19, 2021

ಉಗ್ರಪ್ಪ ಎಲ್ಲಿ? ಅವನಿಗೆ ಚಪ್ಪಲಿ ತೆಗೆದುಕೊಂಡು ಹೊಡಿಬೇಕು ಎಂದು ಕೆಪಿಸಿಸಿ ಕಚೇರಿ ಒಳನುಗ್ಗಿದ ಮಹಿಳೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಪಿಸುಗುಟ್ಟಿದ ಮುಖಂಡರಾದ ಸಲೀಂ ಹಾಗೂ ಮಾಜಿ ಸಂಸದ ಉಗ್ರಪ್ಪ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಅಸಮಾಧಾನಗೊಂಡಿದ್ದರು. ಅದಕ್ಕೆ ನಿದರ್ಶನವೆಂಬಂತೆ ಕೆಪಿಸಿಸಿ ಕಚೇರಿಯಲ್ಲಿ

ಮಹಿಳಾ ಕಾರ್ಯಕರ್ತೆಯೊಬ್ಬರು ಸಂಸದ ಉಗ್ರಪ್ಪರಿಗಾಗಿ ಹುಡುಕಾಡಿ, ಉಗ್ರಪ್ಪ ಎಲ್ಲಿ ಚಪ್ಪಲಿ ತಗೊಂಡು ಹೊಡೆಯಬೇಕು ಎಂದು ಕೂಗಾಡುತ್ತಾ ಹುಡುಕಾಡಿದ ಪ್ರಸಂಗ ಇಂದು ಮಧ್ಯಾಹ್ನ ನಡೆಯಿತು.


ಕೆಪಿಸಿಸಿ ಕಚೇರಿಯಲ್ಲಿ ವಿ.ಎಸ್​. ಉಗ್ರಪ್ಪ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ ಅವರ ಮೇಲೆ ದಾಳಿ ಮಾಡಲು ಕಾಂಗ್ರೆಸ್​ ಕಾರ್ಯಕರ್ತರು ಯತ್ನಿದರು. ನಿಮ್ಮನ್ನು ಸಂಸದರನ್ನಾಗಿ ಮಾಡಿದ್ದು ಡಿಕೆಶಿ. ಮತ್ಯಾರೂ ಅಲ್ಲ ಎಂದು ತರಾಟೆಗೆ ತೆಗೆದುಕೊಂಡರು.

ನಾನೇನು ಮಾಡಿಲ್ಲ ಎಂದು ಉಗ್ರಪ್ಪ ಸಮಜಾಯಿಷಿ ಕೊಡಲು ಯತ್ನಿಸಿದ್ದರಾದರೂ ಕಾಂಗ್ರೆಸ್​ ಕಾರ್ಯಕರ್ತರು ಕೋಪ ತಣ್ಣಗಾಗಲೇ ಇಲ್ಲ. ಸಲೀಂ ಮತ್ತು ಉಗ್ರಪ್ಪ ವಿರುದ್ಧ ಕಿಡಿಕಾರಿದ ಮಹಿಳಾ ಕಾರ್ಯಕರ್ತೆ ಮಂಜುಳಾ ನಾಗರಾಜ್​, ಇವರನ್ನೆಲ್ಲ ಬೆಂಕಿಗೆ ಎಸೆಯಬೇಕು. ಕಾಂಗ್ರೆಸ್​ನಲ್ಲಿ ಇರೋಕೆ ಇವರು ನಾಲಾಯಕ್​.

ಬಿಜೆಪಿ ಏಜೆಂಟ್​ಗಳು ಇವ್ರು. ಕೋಪ ಬರ್ತಿದೆ ಎನ್ನುತ್ತಲೇ ಹಲ್ಲುಕಚ್ಚಿ ಆಕ್ರೋಶ ಹೊರಹಾಕಿದರು. ಅಲ್ಲೇ ಇದ್ದ ಉಗ್ರಪ್ಪ ತೀವ್ರ ಮುಜುಗರ ಅನುಭವಿಸಬೇಕಾಗಿ ಬಂತು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...