Wednesday, December 1, 2021

ಉಡುಪಿ: ಮಲ್ಪೆ ಬೀಚ್‌ನಲ್ಲಿ ನೀರುಪಾಲಾಗಿದ್ದ ಯುವತಿಯ ಶವ ಪತ್ತೆ

ಉಡುಪಿ: ಮಲ್ಪೆ ಬೀಚ್ ನಲ್ಲಿ ನೀರುಪಾಲಾಗಿದ್ದ ಯುವತಿಯ ಶವ ನಿನ್ನೆ ಸಂಜೆ ಪತ್ತೆಯಾಗಿದೆ.


ಘಟನೆ ವಿವರ
ನಿನ್ನೆ ಬೆಳಗ್ಗೆ ಯುವಕ ಹಾಗೂ ಯುವತಿಯರ ತಂಡ ನಿನ್ನೆ ನೀರಿನಲ್ಲಿ ಆಟವಾಡುವಾಗ ಕೊಡುಗು ಮೂಲದ ದೇಚ್ಚಮ್ಮ ಎಂಬ ಯುವತಿಯೊಬ್ಬಳು ನೀರುಪಾಲಾಗಿದ್ದಾಳು. ಇದೀಗ ಈಕೆಯ ಶವ ಮಲ್ಪೆ ಬೀಚ್ ನಲ್ಲಿ ಪತ್ತೆಯಾಗಿದ್ದು, ಸಮಾಜ ಸೇವಕ ಈಶ್ವರ್ ಅವರು ಮೃತದೇಹವವನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲು ಸಹಕರಿಸಿದ್ದರು.

ಅವಘಡ ನಡೆದಂತಹ ಸಂದರ್ಭ ಮೂವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ್ದು, ಮೂವರ ಸ್ಥಿತಿಯೂ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಮಲ್ಪೆ ಕಡಲ ತೀರಕ್ಕೆ ಕೊಡಗು ಹಾಗೂ ಮೈಸೂರು ಮೂಲದ ಮೂವರು ಯುವತಿಯರು ಹಾಗೂ ಒರ್ವ ಯುವಕ ನಿನ್ನೆ ಆಗಮಿಸಿದ್ದರು. ಮಲ್ಪೆ ಬೀಚ್ ನಲ್ಲಿ ನೀರಿನಲ್ಲಿ ಆಟವಾಡುತ್ತಿದ್ದರು. ಆದರೆ ಸ್ಥಳೀಯರು ನೀರಿಗೆ ಹೋಗದಂತೆ ಎಚ್ಚರಿಕೆ ನೀಡಿದ್ದರೂ ಹೋದ ಪರಿಣಾಮ ಈ ದುರಂತ ನಡೆದಿದೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...