Connect with us

DAKSHINA KANNADA

ಕಡಬ: ವಿಷ ಪದಾರ್ಥ ಸೇವಿಸಿದ ಮಹಿಳೆ ಸಾವು-ಪತಿ ಪರಾರಿ ಯತ್ನ, ವಶಕ್ಕೆ ಪಡೆದ ಪೊಲೀಸರು

Published

on

ಕಡಬ: ವಿಷ ಪದಾರ್ಥ ಸೇವಿಸಿ ತೀವ್ರ ಅಸ್ವಸ್ಥಗೊಂಡು ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಚ್ಲಂಪಾಡಿಯ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ನೆಲ್ಯಾಡಿಯ ಇಚ್ಲಂಪಾಡಿ ಗ್ರಾಮದ ನಿಡ್ಯಡ್ಕ ನಿವಾಸಿ ವೆಂಕಟೇಶ್ ಎಂಬವರ ಪತ್ನಿ ಸೌಮ್ಯ(36) ಮೃತ ಮಹಿಳೆ.

ಘಟನೆ ಹಿನ್ನೆಲೆ
ಮನೆ ಸಮೀಪದ ಗೋಳಿಯಡ್ಕದ ಗೇರುಬೀಜದ ಫ್ಯಾಕ್ಟರಿ ಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಸೌಮ್ಯ, ನವೆಂಬರ್ 9ರಂದು ಸಂಜೆ ಮನೆಯಲ್ಲಿ ವಿಷ ಪದಾರ್ಥ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದರು. ಪತ್ನಿ ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡ ಬೆನ್ನಲ್ಲೇ ಆಕೆಯ ಪತಿ ವೆಂಕಟೇಶ್ ಸಹ ಇಲಿ ಪಾಷಾಣ ಸೇವಿಸಿದ್ದರು.

ಈ ಹಿನ್ನೆಲೆ ಸ್ಥಳೀಯರು ಇಬ್ಬರನ್ನೂ ಕಡಬ ಸಮುದಾಯ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು.

ನಂತರ ಸೌಮ್ಯ ತೀವ್ರ ಅಸ್ವಸ್ಥಗೊಂಡ ಹಿನ್ನೆಲೆ ಅವರನ್ನು ಮರುದಿನ ಬೆಳಗ್ಗೆ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತ ಸೌಮ್ಯ ಮೃತಪಟ್ಟಿರುವ ಸುದ್ದಿ ತಿಳಿಯುತ್ತಿದ್ದಂತೆ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪತಿ ವೆಂಕಟೇಶ್ ಅಲ್ಲಿಂದ ಪರಾರಿಯಾಗಿದ್ದಾನೆ. ಈ ಕುರಿತು ವೈದ್ಯರು ಪುತ್ತೂರು ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಅದಾಗಲೇ ವೆಂಕಟೇಶ್, ತಮಿಳುನಾಡಿಗೆ ಹೋಗಲು ಮಂಗಳೂರು ರೈಲ್ವೆ ನಿಲ್ದಾಣಕ್ಕೆ ತೆರಳಿರುವ ಕುರಿತು ಮಾಹಿತಿ ಪಡೆದುಕೊಂಡ ಉಪ್ಪಿನಂಗಡಿ ಪೊಲೀಸರು,

ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವೆಂಕಟೇಶ್ ಮೂಲತಃ ತಮಿಳುನಾಡು ನಿವಾಸಿಯಾಗಿದ್ದು, ಈತ ತಮಿಳುನಾಡಿನ ಬಟ್ಟೆ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದ.

ಈ ವೇಳೆ ಅಲ್ಲಿಯೇ ಕೆಲಸ ಮಾಡುತ್ತಿದ್ದ ಇಚ್ಲಂಪಾಡಿಯ ಸೌಮ್ಯರನ್ನು ಪ್ರೀತಿಸಿ ಬಳಿಕ ಮದುವೆಯಾಗಿದ್ದರು. ಈ ದಂಪತಿಗೆ ಒಂದು ಗಂಡು ಹಾಗೂ ಒಂದು ಹೆಣ್ಣು ಮಗುವಿದೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

LATEST NEWS

Trending