Monday, August 8, 2022

ಪುತ್ತೂರಿನಲ್ಲಿ ಬಾಣಂತಿ ಸಾವು

ಪುತ್ತೂರು: 2 ತಿಂಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದ ಬಾಣಂತಿಯೊಬ್ಬರು ಅನಾರೋಗ್ಯದಿಂದಾಗಿ ಮೃತಪಟ್ಟ ಘಟನೆ ಕೃಷ್ಣನಗರದಲ್ಲಿ ನಡೆದಿದೆ.

ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಿಬ್ಬಂದಿಯಾಗಿರುವ ದಿಲೀಪ್ ಅವರ ಪತ್ನಿ ಅಕ್ಷತಾ ನಾಯ್ಕ್ ಮೃತಪಟ್ಟವರು. 2 ತಿಂಗಳ ಹಿಂದೆಯಷ್ಟೆ ಅವರು ಮಗುವಿಗೆ ಜನ್ಮ ನೀಡಿದ ಬಳಿಕ ಅನಾರೋಗ್ಯದಿಂದಾಗಿ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಅಕ್ಷತಾ ಪುತ್ತೂರು ನ್ಯಾಯಾಲಯದಲ್ಲಿ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸಂಬಂಧಿಸಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಕ್ಷತಾರ ತವರು ಮನೆ ಉಪ್ಪಿನಂಗಡಿಯಾಗಿದ್ದು, ಇವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿಯಲ್ಲಿ ಬಿ.ಕಾಂ ಪದವಿಯನ್ನು ಪಡೆದಿದ್ದರು.

LEAVE A REPLY

Please enter your comment!
Please enter your name here

Hot Topics

ಬೆಳ್ತಂಗಡಿ: ಬಿಲ್ಲವ ಸಂಘಗಳ ಆಶ್ರಯದಲ್ಲಿ ‘ಆಟಿಡೊಂಜಿ ದಿನ ಕೂಟ’ & ಸಾಧಕರಿಗೆ ಸನ್ಮಾನ

ಬೆಳ್ತಂಗಡಿ: ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ -ಮಹಿಳಾ ಬಿಲ್ಲವ ವೇದಿಕೆ -ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಇದರ ಅಶ್ರಯದಲ್ಲಿ ಆಟಿಡೊಂಜಿ ದಿನ ಕೂಟ ಹಾಗೂ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು.ಈ...

ಇನ್ನೂ 3-4 ದಿನ ಭಾರೀ ಮಳೆ: ಹಲವು ಕಡೆಗಳಲ್ಲಿ ಪ್ರವಾಹ ಭೀತಿ-ಹವಾಮಾನ ಇಲಾಖೆ ಎಚ್ಚರಿಕೆ

ಹೊಸದಿಲ್ಲಿ: ಕೇಂದ್ರ ಭಾರತ ಮತ್ತು ಪಶ್ಚಿಮ ಕರಾವಳಿ ಪ್ರದೇಶದಲ್ಲಿ ಮುಂದಿನ 3-4 ದಿನಗಳವರೆಗೆ 200 ಮಿಲಿಮೀಟರ್ ಮಳೆಯಾಗುವ ಸಾಧ್ಯತೆಯಿದ್ದು, ಹಲವು ಕಡೆಗಳಲ್ಲಿ ಪ್ರವಾಹ ಭೀತಿ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.ಶನಿವಾರ...

ಕಾಪು: ಲಕ್ಷ್ಮೀ ಜನಾರ್ದನ ದೇವಸ್ಥಾನದ ಬೀಗ ಒಡೆದು ಹುಂಡಿ ಕಳವು

ಉಡುಪಿ: ಜಿಲ್ಲೆಯ ಕಾಪು ತಾಲೂಕಿನ ಮಲ್ಲಾರು ಗ್ರಾಮದ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಬೀಗ ಒಡೆದು ಕಾಣಿಕೆ ಹುಂಡಿ ಕಳವು ಮಾಡಿದ ಬಗ್ಗೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದೂರಿನ ವಿವರ ಮಲ್ಲಾರು ಗ್ರಾಮದ...