DAKSHINA KANNADA
ಮೈಸೂರು ಯುವತಿ ಅತ್ಯಾಚಾರ ಮತ್ತು ಲಕ್ಷಾಂತರ ರೂ. ವಂಚನೆ : ಆರೋಪಿ ಮುಹಮ್ಮದ್ ಬೆಂಗಳೂರಲ್ಲಿ ಬಂಧನ..!
ಮಂಗಳೂರು: ಮೈಸೂರು ಮೂಲದ ಯುವತಿಯ ಮೇಲೆ ಅತ್ಯಾಚಾರ ಜೊತೆಗೆ ಸುಮಾರು 35 ಲಕ್ಷ ರೂ. ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮುಡಿಪು ಮೂಲದ ಆರೋಪಿಯನ್ನು ಬೆಂಗಳೂರಿನ ದೊಡ್ಡಸಂದ್ರದಲ್ಲಿ ಮಂಗಳೂರು ಪೊಲೀಸರ ತಂಡ ಬಂಧಿಸಿದೆ.
ಬಂಧಿತ ಆರೋಪಿಯನ್ನು ಮುಹಮ್ಮದ್ ಅಜ್ವಾನ್ (32) ಎಂದು ಗುರುತಿಸಲಾಗಿದೆ.
ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಬುಧವಾರ ಯುವತಿಯ ಮೇಲೆ ಅತ್ಯಾಚಾರ, ಸುಲಿಗೆ ಪ್ರಕರಣ ದಾಖಲಾಗಿತ್ತು. ಮೈಸೂರಿನಲ್ಲಿ 2019ರಲ್ಲಿ ಅಜ್ವಾನ್ ಜತೆ ತಾನು ಸಂರ್ಪಕದಲ್ಲಿದ್ದುದಾಗಿ ಯುವತಿ ತನ್ನ ದೂರಿನಲ್ಲಿ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮೊಬೈಲ್ ರಿಚಾರ್ಜಿಂಗ್ ಶಾಪ್ನಲ್ಲಿ ಕೆಲಸಕ್ಕಿದ್ದ ಅಜ್ವಾನ್ ತನ್ನನ್ನು ಮದುವೆಯಾಗುವುದಾಗಿ ಹೇಳಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿರುವುದಾಗಿ ಯುವತಿ ತಿಳಿಸಿದ್ದಾರೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ಮುಡಿಪು ಮೂಲದ ಯುವಕನಿಂದ ದೌರ್ಜನ್ಯಕ್ಕೊಳಗಾದ ಯುವತಿ ಸೆ. 21ರಂದು ಮಧ್ಯಾಹ್ನ ಯುವಕನ ಮನೆಗೆ ತೆರಳಿದ್ದರು. ಆ ಸಂದರ್ಭ ಆತನ ತಂದೆ, ತಾಯಿ ಅಜ್ಜಿ ಹಾಗೂ ಇಬ್ಬರು ಸಹೋದರಿಯರು ಮನೆಯಲ್ಲಿದ್ದರು.
ಆತನನ್ನು ಮನೆಗೆ ಕರೆಸುವವರೆಗೆ ತಾನು ಇಲ್ಲಿಂದ ಹೋಗುವುದಿಲ್ಲ ಎಂದಾಗ ಮನೆಯವರಲ್ಲಿ ಒಬ್ಬರು ಆಕೆಯ ಕಪಾಳಕ್ಕೆ ಬಾರಿಸಿ ಕಳುಹಿಸಿದ್ದಾಗಿ ಯುವತಿ ದೂರಿನಲ್ಲಿ ತಿಳಿಸಿದ್ದಾರೆ.
ಆರೋಪಿಯ ಮನೆಯಿಂದ ಹೊರಟ ಆಕೆ ದು:ಖದಿಂದ ಬಸ್ಸು ನಿಲ್ದಾಣದಲ್ಲಿದ್ದಾಗ ಅಲ್ಲಿದ್ದ ಸಾರ್ವಜನಿಕರು 112ಗೆ ಕರೆ ಮಾಡಿದ್ದಾಗ ಕೊಣಾಜೆ ಠಾಣೆಯಿಂದ ಪೊಲೀಸರು ವಾಹನದ ಮೂಲಕ ಆಕೆಯನ್ನು ಸಂಪರ್ಕಿಸಿ ಠಾಣೆಗೆ ಕರೆತಂದು ಸಾಂತ್ವಾನ ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ಸದ್ಯ ಬೆಂಗಳೂರಿನಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಕಾನೂನು ಪ್ರಕಾರ ಕ್ರಮಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದಾರೆ.ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376, 384 ಮತ್ತು 323ರಡಿ ಪ್ರಕರಣ ದಾಖಲಿಸಲಾಗಿದೆ
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
DAKSHINA KANNADA
ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ
ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.
ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.
DAKSHINA KANNADA
ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ
ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.
ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.