LATEST NEWS
‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದಂತೆ ‘ದಿ ಲಖಿಂಪುರ ಫೈಲ್ಸ್’ ಯಾಕೆ ಮಾಡಬಾರದು: ಅಖಿಲೇಶ್ ಯಾದವ್ ಪ್ರಶ್ನೆ
ಲಕ್ನೋ: ದೇಶದೆಲ್ಲೆಡೆ ಸದ್ಯ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಚರ್ಚೆ ನಡೆಯುತ್ತಿದೆ. ಕಾಶ್ಮೀರಿ ಪಂಡಿತರ ಹತ್ಯಾಕಾಂಡದ ಭೀಕರತೆಯನ್ನು ತೆರೆದಿಟ್ಟ ಚಿತ್ರ ಇದು. ಯಾವ ಸಿನಿಮಾವೂ ಮಾಡದಷ್ಟು ದಾಖಲೆಗಳನ್ನು ಇದು ಮಾಡುತ್ತಿದೆ.
ಇದೆಲ್ಲದರ ಮಧ್ಯೆ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಚಿತ್ರದ ಬಗ್ಗೆ ಪ್ರತಿಕ್ರಿಯೆ ನೀಡಿ, ಕಾಶ್ಮೀರಕ್ಕೆ ಸಂಬಂಧಪಟ್ಟಂತೆ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಮಾಡಲು ಸಾಧ್ಯ ಎಂದಾದ ಮೇಲೆ,
ಉತ್ತರ ಪ್ರದೇಶದ ಲಖಿಂಪುರ ಖೇರಿ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ‘ದಿ ಲಖಿಂಪುರ ಫೈಲ್ಸ್’ ಎಂಬ ಚಲನಚಿತ್ರವನ್ನೂ ಯಾಕೆ ಮಾಡಬಾರದು ಎಂದು ಪ್ರಶ್ನಿಸಿದ್ದಾರೆ. ಕಾಶ್ಮೀರಿ ಪಂಡಿತರ ಹತ್ಯಾಕಾಂಡದ ಕತೆಯನ್ನು ತೋರಿಸಲು ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಮಾಡಿದ್ದಾರೆ.
ಹಾಗೇ, ಲಖಿಂಪುರ ಖೇರಿಯಲ್ಲಿ ರೈತರ ಮೇಲೆ ಜೀಪು ಹತ್ತಿಸಿ, ಅವರನ್ನು ಕೊಲ್ಲಲಾಗಿತ್ತು. ಈ ವಿಚಾರಕ್ಕೆ ಸಂಬಂಧಪಟ್ಟಂತೆಯೂ ಒಂದು ಸಿನಿಮಾವನ್ನು ಯಾಕೆ ಮಾಡಬಾರದು ಎಂದು ಕೇಳಿದ್ದಾರೆ.
ಅಕ್ಟೋಬರ್ 3ರಂದು ಲಖಿಂಪುರ ಖೇರಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ರೈತರ ಮೇಲೆ ಕಾರು ಹರಿದಿತ್ತು. ಈ ಘಟನೆ ಬೆನ್ನಲ್ಲೇ ಹಿಂಸಾಚಾರ ಭುಗಿಲೆದ್ದಿತ್ತು. ರೈತರಿಗೆ ಡಿಕ್ಕಿ ಹೊಡೆದ ಕಾರಿನಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶೀಶ್ ಮಿಶ್ರಾ ಇದ್ದಿದ್ದನ್ನು ಕಣ್ಣಾರೆ ನೋಡಿದ್ದೇವೆ.
ಇವರೆಲ್ಲ ಕಾರನ್ನು ಹರಿಸಿದ್ದಲ್ಲದೆ ಗುಂಡಿನ ದಾಳಿಯನ್ನೂ ನಡೆಸಿದ್ದಾರೆ ಎಂದು ಸ್ಥಳದಲ್ಲಿದ್ದ ರೈತರು ಹೇಳಿದ್ದರು. ವೈರಲ್ ಆದ ವಿಡಿಯೋದಲ್ಲಿ ಒಬ್ಬರು ಕಾರಿನಿಂದ ಇಳಿದು ಓಡಿದ ದೃಶ್ಯ ಕಂಡುಬಂದಿತ್ತು. ಅದಯ ಆಶಿಶ್ ಮಿಶ್ರಾ ಎಂದೇ ರೈತರು ಪ್ರತಿಪಾದಿಸಿದ್ದರು.
ಬಳಿಕ ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ತನಿಖೆ ನಡೆಸಲು ಉತ್ತರ ಪ್ರದೇಶ ಸರ್ಕಾರ ಎಸ್ಐಟಿಯನ್ನೂ ರಚಿಸಿತ್ತು. ಅದೆಲ್ಲ ಆದ ಬಳಿಕ ಆಶಿಶ್ ಮಿಶ್ರಾ ಬಂಧನವಾಗಿ, ಇದೀಗ ಅವರು ಜಾಮಿನಿನ ಮೇಲೆ ಹೊರಗಡೆ ಬಂದಿದ್ದಾರೆ.
LATEST NEWS
ಏಪ್ರಿಲ್ 3 ರ ವರೆಗೆ ಭಾರೀ ಮಳೆ ಮುನ್ಸೂಚನೆ; ಎಲ್ಲೆಲ್ಲಿ ಮಳೆ?
ದೇಶದ ಬಹುತೇಕ ಭಾಗಗಳಲ್ಲಿ ಬಿಸಿಲಿನ ಧಗೆ ಹೆಚ್ಚಾಗಿದೆ. ಮಳೆ ಬಂದರೆ ಸಾಕು ಅನ್ನೋ ಮನೋಭಾವನೆ ಇದೆ. ಈ ನಡುವೆ ಏಪ್ರಿಲ್ 3ರವರೆಗೆ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ಮಳೆ?
ಮಾರ್ಚ್ 29 ಮತ್ತು 30 ರಂದು ಪಶ್ಚಿಮ ಹಿಮಾಲಯ ಪ್ರದೇಶದ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಯಿದೆ. ಮಾರ್ಚ್ 29 ರಿಂದ 31 ರ ವರೆಗೆ ವಾಯುವ್ಯ ಮತ್ತು ಈಶಾನ್ಯ ಭಾರತದಲ್ಲಿ ಗುಡುಗು ಸಹಿತ ಸಾಧರಾಣ ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ : ಈ ದೇವಸ್ಥಾನದಲ್ಲಿ ಒಂದು ಲಿಂಬೆಹಣ್ಣಿಗೆ ಲಕ್ಷಾಂತರ ರೂ. ಬೇಡಿಕೆ..! ಅಂತದ್ದೇನಿದೆ ಈ ಲಿಂಬೆ ಹಣ್ಣಲ್ಲಿ?
ಚಂಡಮಾರುತದ ಪರಿಣಾಮವಾಗಿ, ಬಿಹಾರದ, ದಕ್ಷಿಣ ಅಸ್ಸಾಂ, ಅರುಣಾಚಲ ಪ್ರದೇಶ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಚದುರಿದ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪಶ್ಚಿಮ ಬಂಗಾಳ, ಒಡಿಶಾ ಮತ್ತು ಸಿಕ್ಕಿಂನಲ್ಲಿ ಮಾರ್ಚ್ 30 ರಿಂದ ಏಪ್ರಿಲ್ 3ರ ವರೆಗೆ ಆರ್ದ್ರ ವಾತಾವರಣವನ್ನು ನಿರೀಕ್ಷಿಸಲಾಗಿದೆ. ಬಿಹಾರ ಮತ್ತು ಜಾರ್ಖಂಡ್ಗಳು ಮುಂದಿನ ಕೆಲವು ದಿನಗಳವರೆಗೆ ಮಳೆ ಸಾಧ್ಯತೆ ಇದೆ.
ಮಾರ್ಚ್ 31 ರಂದು ಹಿಮಾಲಯ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ವ್ಯಾಪಕವಾದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮುಂದಿನ ಕೆಲವು ದಿನಗಳ ವರೆಗೆ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ.
ಇದಲ್ಲದೆ, ಅರುಣಾಚಲ ಪ್ರದೇಶದದಲ್ಲಿ ಏಪ್ರಿಲ್ 1 ರಂದು ಅಲ್ಲಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
DAKSHINA KANNADA
ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಲಕ್ಷಾಧಿಪತಿ….ಅವರ ಆಸ್ತಿ ವಿವರ ಇಲ್ಲಿದೆ!
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಆಸ್ತಿ ವಿವರ ಘೋಷಣೆ ಮಾಡಿದ್ದಾರೆ. ಅವರ ಸ್ಥಿರ ಮತ್ತು ಚರಾಸ್ತಿ ಒಟ್ಟು ಮೊತ್ತ 70,81,365 ಲಕ್ಷ ರೂ. ಆಗಿದೆ. ಸ್ಥಿರ ಆಸ್ತಿಯ ಒಟ್ಟು ಮೊತ್ತ 27,31,365 ಲಕ್ಷ ರೂ. ಆಗಿದೆ. ಚರಾಸ್ತಿಯ ಒಟ್ಟು ಮೊತ್ತ 43,50,000 ಲಕ್ಷ ರೂ., ಇನ್ನು ಒಟ್ಟು 9,62,010 ರೂ. ಅನ್ನು ಇನ್ನೋವಾ ಕಾರಿಗಾಗಿ ಸಾಲ ಮಾಡಿದ್ದಾರೆ.
ಇನ್ನು ಬಿಎಸ್ಸಿ ಶಿಕ್ಷಣದ ಜೊತೆಗೆ ಐಐಎಂ ಅನ್ನು ಇಂದೋರ್ನಲ್ಲಿ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಡಿಫೆನ್ಸ್ ಆಫೀಸರ್ ಸರ್ಟಿಫಿಕೇಟ್ ಕೋರ್ಸ್ ಮಾಡಿದ್ದಾರೆ. ಅವರು, ಅವಿವಾಹಿತರಾಗಿದ್ದು 42 ವರ್ಷ ಪ್ರಾಯದವರಾಗಿದ್ದಾರೆ.
ಬ್ರಿಜೇಶ್ ಚೌಟ ಯಾರು?
ಮಂಗಳೂರಿನ ರಥಬೀದಿಯಲ್ಲಿ ನೆಲೆಸಿರುವ ಕ್ಯಾಪ್ಟನ್ ಬೃಜೇಶ್ ಚೌಟ ಕಾಲೇಜು ದಿನಗಳಲ್ಲಿಯೇ ಎನ್ ಸಿಸಿಯಲ್ಲಿ ತೊಡಗಿಕೊಂಡಿದ್ದು, ಮಂಗಳೂರು ವಿವಿಯಲ್ಲಿ ಅತ್ಯುತ್ತಮ ಕೆಡೆಟ್ ಎಂಬ ಹೆಗ್ಗಳಿಕೆ ಪಡೆದಿದ್ದರು. ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ವಿಜ್ಞಾನ ಪದವಿಯನ್ನು ಪಡೆದ ಅವರು ಇಂದೋರ್ನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನಿಂದ ಆಡಳಿತ ವ್ಯವಹಾರ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ.
ಯುಪಿಎಸ್ಸಿ ಮೂಲಕ ಡಿಫೆನ್ಸ್ ಪರೀಕ್ಷೆ ಬರೆದು ತೇರ್ಗಡೆಗೊಂಡು ಚೆನ್ನೈನಲ್ಲಿ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಭೂಸೇನೆ ಸೇರಿದ್ದರು. ಪ್ರತಿಷ್ಠಿತ ಎಂಟನೇ ಗೋರ್ಖಾ ರೈಫಲ್ಸ್ 7ನೇ ಬೆಟಾಲಿಯನ್ ನಲ್ಲಿ ಉತ್ತರ ಭಾರತ ಮತ್ತು ಈಶಾನ್ಯ ರಾಜ್ಯಗಳಲ್ಲಿ ಸೇವೆ ಸಲ್ಲಿಸಿ ಕ್ಯಾಪ್ಟನ್ ಹುದ್ದೆಗೇರಿದ್ದರು.
ಇದನ್ನೂ ಓದಿ ಐದು ವರ್ಷದಲ್ಲಿ ನಾಲ್ಕು ಪಟ್ಟು ಏರಿದ ಆಸ್ತಿ…! ಪ್ರಜ್ವಲ್ ರೇವಣ್ಣ ಘೋಷಿಸಿದ ಆಸ್ತಿ ವಿವರದಲ್ಲಿ ಬಹಿರಂಗ..!!
ನಳಿನ್ ಬದಲು ಚೌಟ ಕಣಕ್ಕೆ :
ಕಳೆದ 15 ವರ್ಷಗಳ ಹಿಂದೆ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಹಿಡಿತದಲ್ಲಿದೆ. ಸತತ ಮೂರು ಬಾರಿ ನಳಿನ್ ಕುಮಾರ್ ಕಟೀಲ್ ಅವರು ಗೆದ್ದುಕೊಂಡು ಬಂದಿದ್ದರು. ಈ ಬಾರಿ ಮಾಜಿ ಯೋಧ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಆ ಮೂಲಕ ನಳಿನ್ ಕುಮಾರ್ ಕಟೀಲ್ಗೆ ಟಿಕೆಟ್ ಕೈತಪ್ಪಿ ಹೋಗಿದೆ. ಇದೀಗ ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಏಪ್ರಿಲ್ 4 ರಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಅವರು ಸಲ್ಲಿಸಿರುವ ನಾಮಪತ್ರ ಅಫಿಡವಿಟ್ನಲ್ಲಿ ಲಕ್ಷಾಧಿಪತಿ ಎಂದು ಘೋಷಿಸಿಕೊಂಡಿದ್ದಾರೆ.
bangalore
ಐದು ವರ್ಷದಲ್ಲಿ ನಾಲ್ಕು ಪಟ್ಟು ಏರಿದ ಆಸ್ತಿ…! ಪ್ರಜ್ವಲ್ ರೇವಣ್ಣ ಘೋಷಿಸಿದ ಆಸ್ತಿ ವಿವರದಲ್ಲಿ ಬಹಿರಂಗ..!!
ಬೆಂಗಳೂರು: ಲೋಕಸಭಾ ಕ್ಷೇತ್ರದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಂಸದ ಪ್ರಜ್ವಲ್ ರೇವಣ್ಣ ಅವರು ಗುರುವಾರ (ಮಾ.28) ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ನಾಮಪತ್ರದಲ್ಲಿ ಪ್ರಜ್ವಲ್ ಅವರು ತಮ್ಮ ಆಸ್ತಿ ಮೌಲ್ಯಗಳನ್ನು ಘೋಷಿಸಿದ್ದಾರೆ. ತಮ್ಮ ಒಟ್ಟು ಆಸ್ತಿ ಮೌಲ್ಯ 40.94 ಕೋಟಿ ಎಂದು ಘೋಷಿಸಿದ್ದಾರೆ.
2019ರ ಚುನಾವಣೆಯಲ್ಲಿ ಘೋಷಿಸಿದ ಆಸ್ತಿ ಮೌಲ್ಯಕ್ಕೆ ನಾಲ್ಕು ಪಟ್ಟು ಹೆಚ್ಚಳವಾಗಿದೆ. 2019 ರ ಲೋಕಸಭಾ ಚುನಾವಣೆ ವೇಳೆ ಸಲ್ಲಿಸಿದ್ದ ಅಫಿದವಿಟ್ನಲ್ಲಿ ಅವರು ತಮ್ಮ ಒಟ್ಟು ಆಸ್ತಿ ಮೌಲ್ಯ 9.78 ಕೋಟಿ ರೂಪಾಯಿ ಎಂದು ಘೋಷಿಸಿದ್ದರು. ಈ ಬಾರಿ ಪ್ರಜ್ವಲ್ ರೇವಣ್ಣ ಅವರು ಅಫಿಡವಿಟ್ನಲ್ಲಿ ತಮ್ಮ ಒಟ್ಟು ಆಸ್ತಿ ಮೌಲ್ಯ 40.94 ಕೋಟಿ ರೂಪಾಯಿ ಎಂದು ಘೋಷಿಸಿದ್ದಾರೆ. ಈ ಪೈಕಿ 5.44 ಕೋಟಿ ರೂಪಾಯಿ ಮೌಲ್ಯದ ಚರಾಸ್ತಿ, 35.40 ಕೋಟಿ ರೂಪಾಯಿ ಸ್ಥಿರಾಸ್ತಿ ಹೊಂದಿದ್ದಾರೆ. ಅಲ್ಲದೆ, 9.29 ಲಕ್ಷ ನಗದು ಹೊಂದಿರುವುದಾಗಿ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ವಿವಿಧ ಬ್ಯಾಂಕ್ಗಳ ಉಳಿತಾಯ ಖಾತೆಯಲ್ಲಿ 56 ಲಕ್ಷ ನಗದು ಇದ್ದು, 5 ವರ್ಷದಲ್ಲಿ ಕೃಷಿಯಿಂದ 2.75 ಕೋಟಿ ಆದಾಯ ಗಳಿಸಿದ್ದಾರೆ ಎಂದು ಅಫಿಡವಿಟ್ನಲ್ಲಿ ತಿಳಿಸಿದ್ದಾರೆ. ಕೃಷಿಯೇತರ ಮೂಲದಿಂದ 1.33 ಕೋಟಿ ಆದಾಯ ಗಳಿಸಿದ್ದು, 31 ಹಸುಗಳು, 4 ಎತ್ತುಗಳು, 1 ಟ್ರ್ಯಾಕ್ಟರ್ ಹೊಂದಿದ್ದಾರೆ.
ಇದನ್ನೂ ಓದಿ : ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಲಕ್ಷಾಧಿಪತಿ;ಅವರ ಆಸ್ತಿ ವಿವರ ಇಲ್ಲಿದೆ!
ಪ್ರಜ್ವಲ್ ರೇವಣ್ಣ ಮಾಡಿದ ಸಾಲ
ಬೆಂಗಳೂರು ನಗರ, ಮೈಸೂರು ಸೇರಿದಂತೆ ವಿವಿಧೆಡೆ ವಾಣಿಜ್ಯ ಕಟ್ಟಡ, ಹೊಳೆನರಸೀಪುರ, ನೆಲಮಂಗಲದಲ್ಲಿ ಆಸ್ತಿ ಹೊಂದಿದ್ದಾರೆ. ಅತ್ತೆ ಅನುಸೂಯಾರಿಂದ 22 ಲಕ್ಷ, ಅತ್ತೆ ಶೈಲಜಾರಿಂದ 10 ಲಕ್ಷ ಸಾಲ ಪಡೆದಿದ್ದು, ತಂದೆ ರೇವಣ್ಣರಿಂದ 86 ಲಕ್ಷ, ಸೋದರ ಸೂರಜ್ರಿಂದ 1 ಕೋಟಿ ಸಾಲ ಮಾಡಿದ್ದಾರೆ. ಹೀಗೆ ಒಟ್ಟು 4.48 ಕೋಟಿ ಸಾಲ ಹೊಂದಿದ್ದಾರೆ.
ತೆರಿಗೆ ಬಾಕಿ ಉಳಿಸಿಕೊಂಡ ಪ್ರಜ್ವಲ್ ರೇವಣ್ಣ
ಸರ್ಕಾರಕ್ಕೆ 3.4 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಾರೆ. ಈ ಬಗ್ಗೆ ಕಾನೂನು ಹೋರಾಟ ನಡೆಸುತ್ತಿರುವ ಬಗ್ಗೆಯೂ ಉಲ್ಲೇಖ ಮಾಡಿದ್ದಾರೆ. 67 ಲಕ್ಷ ಮೌಲ್ಯದ 1 ಕೆ.ಜಿ. 100 ಗ್ರಾಂ ಚಿನ್ನ ಹೊಂದಿದ್ದಾರೆ. 17.48 ಲಕ್ಷ ಮೌಲ್ಯದ 23 ಕೆ.ಜಿ. ಬೆಳ್ಳಿ, 1.90 ಲಕ್ಷ ಮೌಲ್ಯದ ವಜ್ರಾಭರಣ ಹೊಂದಿದ್ದಾರೆ ಎಂದು ನಾಮಪತ್ರ ಸಲ್ಲಿಕೆ ವೇಳೆ ಘೋಷಿಸಿದ್ದಾರೆ.
- LATEST NEWS7 days ago
ಅಬ್ ಕೀ ಬಾರ್ 500 ಪಾರ್… ! ಪ್ರಚಾರ ಕಣಕ್ಕಿಳಿದ ಗ್ರೇಟ್ ಕಲಿ..!
- FILM4 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ವರ್ಯ ರೈ- ಅಭಿಷೇಕ್ ಬಚ್ಚನ್ ಫೋಟೋ!
- DAKSHINA KANNADA3 days ago
ಖತರ್ನಾಕ್ ಲ್ಯಾಪ್ಟಾಪ್ ಕಳ್ಳಿ…! ಈಕೆ ಬ್ಯಾಂಕ್ ಉದ್ಯೋಗಿ… !
- DAKSHINA KANNADA4 days ago
ಪಾರ್ಟ್ ಟೈಮ್ ಜಾಬ್ ಕೊಡಿಸುವುದಾಗಿ ನಂಬಿಸಿ ವಂಚನೆ; ಆರೋಪಿ ರಾಜಸ್ಥಾನದ ಸದ್ದಾಂ ಗೌರಿ ಬಂಧನ