Connect with us

BELTHANGADY

ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು- ಕಳ್ಳ ಅರೆಸ್ಟ್..!

Published

on

ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡು ಮೂಲದ ನಿವಾಸಿ ಉಮೇಶ್‌ ಬಳೇಗಾರ್‌(47) ಬಂಧಿತ ಆರೋಪಿ.

ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಅಜಿತ್ ನಗರ ಕೆಲ್ಲೆ ನಿವಾಸಿ ಫೆಲಿಕ್ಸ್ ರೋಡ್ರಿಗಸ್ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಗಲು ಹೊತ್ತಿನಲ್ಲಿ ಮನೆಯ ಬಾಗಿಲು ಮುರಿದು ನುಗ್ಗಿ ಸುಮಾರು 7 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಆಗಿದೆ.

ಈ ಕೂಡಲೇ ಮನೆಯವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು.

ಆರೋಪಿ ವಿರುದ್ಧ ತಮಿಳುನಾಡು, ಕೇರಳದ ವಿವಿಧ ಠಾಣೆಗಳಲ್ಲಿ ಕಳ್ಳತನದ ಪ್ರಕರಣಗಳು ದಾಖಲಿಸಲಾಗಿದೆ.

ಅಲ್ಲದೆ ಕರ್ನಾಟಕದ ಪುತ್ತೂರು, ಬಂಟ್ವಾಳ, ಮಂಗಳೂರು, ಮೂಡಬಿದ್ರೆ ಠಾಣೆಯಲ್ಲಿಯೂ ಹಲವಾರು ಪ್ರಕರಣಗಳ ಆರೋಪಿಯಾಗಿದ್ದಾನೆ.

ಈತನಿಗಾಗಿ ಮೂರೂ ರಾಜ್ಯಗಳ ಪೊಲೀಸರು ಹುಡುಕಾಟ ನಡೆಸುತ್ತಿರುವಾಗಲೇ ಆರೋಪಿಯನ್ನು ಬಂಧಿಸುವಲ್ಲಿ ಬೆಳ್ತಂಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಈತನಿಂದ ಕಳ್ಳತನ ಮಾಡಲಾದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

BELTHANGADY

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಪದಾಧಿಕಾರಿಗಳ ಆಯ್ಕೆ

Published

on

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ವೇದಿಕೆ ಬೆಳ್ತಂಗಡಿ ಇದರ 2023-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ವಾಣಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.


ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ, ಕೋಶಾಧಿಕಾರಿಯಾಗಿ ರಂಜಿತ್ ಕಳೆಂಜ, ಜೊತೆ ಕಾರ್ಯದರ್ಶಿಯಾಗಿ ತೀಕ್ಷಿತ್ ಕೆ.ಕಲ್ಬೆಟ್ಟು ದಿಡುಪೆ, ಉಪಾಧ್ಯಕ್ಷರುಗಳಾಗಿ ನಿತಿನ್ ಕಲ್ಮಂಜ ಮತ್ತು ಪ್ರಶಾಂತ್ ಅಂತರ ಕಡಿರುದ್ಯಾವರ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಮೋದ್ ದಿಡುಪೆ, ಕಾನೂನು ಸಲಹೆಗಾರರಾಗಿ ನವೀನ್ ಬಿ.ಕೆ.ಕಲ್ಮಂಜ, ಯಶವಂತ್ ಬನಂದೂರು ಮತ್ತು ಜಯಾನಂದ ಗೌಡ ಬೆಳ್ತಂಗಡಿ ಆಯ್ಕೆಯಾದರು.

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಯಶವಂತ ಗೌಡ ಪುದುವೆಟ್ಟು, ಮಂಜುನಾಥ ಗೌಡ ಚಾರ್ಮಾಡಿ, ವಿಕ್ರಮ್ ಧರ್ಮಸ್ಥಳ, ಸತೀಶ್ ಬೆಳಾಲು, ಪ್ರಸಾದ್ ಅಡಿಮಾರ್ ಚಾರ್ಮಾಡಿ, ಹೇಮಂತ್ ಕಳಿಯ, ದಿನೇಶ್ ದೇಂತ್ಯಾರು ಕೊಯ್ಯೂರು, ಪ್ರದೀಪ್ ನಾಗಾಜೆ ನಾವೂರು, ಭರತ್ ಗೌಡ ಪುದುವೆಟ್ಟು, ನಿತೇಶ್ ಬೆಳ್ತಂಗಡಿ, ಅಕ್ಷಯ್ ಕುಮಾರ್ ಮಾಚಾರ್, ಕರುಣಾಕರ ಗೌಡ ಉಜಿರೆ, ಗಿರೀಶ್ ನಿಡ್ಲೆ ಮತ್ತು ಕಿಶಾನ್ ಗೌಡ ಸವಣಾಲು ಇವರನ್ನು ಆಯ್ಕೆ ಮಾಡಲಾಯಿತು. ಈ ಸಂಧರ್ಭದಲ್ಲಿ ತಾಲೂಕು ಸಂಘದ ನಿಕಟ ಪೂರ್ವ ಕಾರ್ಯದರ್ಶಿ ಮೋಹನ್ ಗೌಡ ಕೊಯ್ಯೂರು ಉಪಸ್ಥಿತರಿದ್ದರು. ಯಶವಂತ್ ಬನಂದೂರು ಸ್ವಾಗತಿಸಿದರು.ಕಾರ್ಯದರ್ಶಿ ಸುರೇಶ್ ಕೌಡಂಗೆ ವಂದಿಸಿದರು.

Continue Reading

BELTHANGADY

ಖೋಟ ನೋಟು ಪ್ರಕರಣ: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ..!

Published

on

ಧರ್ಮಸ್ಥಳ: ಖೋಟ ನೋಟು ಪ್ರಕರಣದಲ್ಲಿ ಕಳೆದ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮೋಹನ ಕುಮಾ‌ರ್ ಎಂಬಾತನನ್ನು ಬೆಂಗಳೂರು ಗೊಲ್ಲಹಳ್ಳಿ ಬಸ್ಸು ತಂಗುದಾಣದ ಬಳಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿರುವ ಘಟನೆ ನಡೆದಿದೆ.

ಖೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸುಮಾರು 4 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡಿದ್ದ ಆರೋಪಿ ಕೆಂಪೆರಾಜ್ ಎಂಬಾತನನ್ನು ಚಿಕ್ಕನಾಯಕನಹಳ್ಳಿ ತಾಲೂಕು ಮುಳಬಾಗಿಲು ಬಸ್ಸು ತಂಗುದಾಣದ ಬಳಿಯಿಂದ ಧರ್ಮಸ್ಥಳ ಠಾಣಾ ಪಿ.ಎಸ್.ಐ ಸಮರ್ಥ ಆರ್ ಗಾಣಿಗೇ‌ರ್, ಹೆಚ್ ಸಿ 607 ರಾಜೇಶ್ ಎನ್, ಪಿ.ಸಿ 2406 ವಿನಯ ಕುಮಾರ್ ರವರುಗಳ ತಂಡ ವಶಕ್ಕೆ ಪಡೆದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದೆ.

Continue Reading

BELTHANGADY

ಅಯ್ಯಪ್ಪ ಸ್ವಾಮಿ ವೇಷ ಹಾಕಿಕೊಂಡು ಹಣ ವಸೂಲಿ- ಕಳ್ಳರನ್ನು ಹಿಡಿದ ಗ್ರಾಮಸ್ಥರು..!

Published

on

ಮಂಗಳೂರು: ಶಬರಿಮಲೆ ಅಯ್ಯಪ್ಪ ಸ್ವಾಮಿ ಮಾಲಾಧಾರಿಯ ವೇಷ ಹಾಕಿಕೊಂಡು ಮನೆ ಮನೆಗೆ ತೆರಳಿ ಹಣ ಸಂಗ್ರಹ ಮಾಡುತ್ತಿದ್ದ ಇಬ್ಬರು ಯುವಕರನ್ನು ಗ್ರಾಮಸ್ಥರು ಹಿಡಿದು ಪ್ರಶ್ನಿಸುತ್ತಿರುವ ವೀಡಿಯೋವೊಂದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಈ ನಕಲಿ ಸ್ವಾಮಿಗಳ ಬಳಿ ಗುರುತು ಚೀಟಿ, ರಶೀದಿ ಪುಸ್ತಕ, ಫೋಟೊಗಳು, ಸರ್ಟಿಫಿಕೆಟ್‌ಗಳು. ಆಧಾರ್‌ ಕಾರ್ಡ್ ಪ್ರತಿಗಳು ಪತ್ತೆಯಾಗಿದ್ದು, ಅವೆಲ್ಲವೂ ನಕಲಿ ಎನ್ನಲಾಗಿದೆ. ಈ ಯುವಕರನ್ನು ಎಲ್ಲಿಂದ ಬಂದಿದ್ದೀರಿ ಎಂದು ಪ್ರಶ್ನಿಸಿದಾಗ ಮೂಡುಬಿದಿರೆ, ವಿಟ್ಲ, ಮಂಜೇಶ್ವರ, ಧರ್ಮಸ್ಥಳ ಮುಂತಾದ ಹೆಸರುಗಳನ್ನು ಅವರು ಹೇಳುತ್ತಾರೆ. ಸೇವಾಲಯ ಎಂಬ ಹೆಸರಿನ ಮೂಲಕ ಧನಸಹಾಯಕ್ಕೆ ಬರುವ ಈ ಸ್ವಾಮಿಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು, ಯಾರೂ ಮೋಸ ಹೋಗ ಬಾರದು ಎಂದು ಗ್ರಾಮಸ್ಥರು ಮನವಿ ಮಾಡುತ್ತಿರುವುದು ಈ ವೀಡಿಯೋದಲ್ಲಿದೆ.

Continue Reading

LATEST NEWS

Trending