Monday, January 24, 2022

ಲಕ್ಷ್ಮೀ ಹೆಬ್ಬಾಳ್ಕರ್​ಗೆ ನೈಟ್​ ಪಾಲಿಟಿಕ್ಸ್​ ಗೊತ್ತು, ಅದಕ್ಕೆ ಎಂಎಲ್‌ಎ ಆಗಿದ್ದಾರೆ: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

ಬೆಳಗಾವಿ: ಜಿಲ್ಲೆಯ ಗ್ರಾಮಾಂತರ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ಗೆ ನೈಟ್​ ಪಾಲಿಟಿಕ್ಸ್​ ಸಂಸ್ಕೃತಿ ಗೊತ್ತು. ಅದೇ ಕಾರಣಕ್ಕೆ ಅವರು ಎಂಎಲ್​​ಎ ಆಗಿದ್ದಾರೆ ಎಂದು ಬಿಜೆಪಿ ಶಾಸಕ ಸಂಜಯ್ ಪಾಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ರಸ್ತೆ ಕಾಮಗಾರಿ ವಿಚಾರಕ್ಕೆ ಮಾಧ್ಯಮಗಳ ಜೊತೆ ಮಾತನಾಡಿರುವ ಸಂಜಯ್ ಪಾಟೀಲ್. ಬಿಜೆಪಿಯಲ್ಲಿ ನೈಟ್​ ಪಾಲಿಟಿಕ್ಸ್​ ಸಂಸ್ಕೃತಿ ಇಲ್ಲ.

ಅದು ಇರೋದು ಕಾಂಗ್ರೆಸ್​ನಲ್ಲಿ. ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಗೊತ್ತು. ಅದಕ್ಕೆ ಅವರು ಎಂಎಲ್​ಎ ಆಗಿದ್ದಾರೆ.

ಇಲ್ಲದಿದ್ರೆ ನೀವು ಎಂಎಲ್​ಎ ಕೂಡ ಆಗಲು ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ನೈಟ್ ಪೊಲಿಟಿಕ್ಸ್ ಮಾಡಿ ಗೆದ್ದು ಬಂದಿದ್ದಾರೆ ಎಂದು ಸಂಜಯ್ ಪಾಟೀಲ್ ಕಿಡಿಕಾರಿದ್ದಾರೆ.
ಜನರಿಗೆ ಸುಳ್ಳು ಭರವಸೆ ಕೊಟ್ಟು ಗೆದ್ದು ಬಂದಿದ್ದಾರೆ. ಇದೀಗ ಅವರಿಗೆ ಸತ್ಯದ ಎದುರು ನಿಲ್ಲಲು ಆಗುತ್ತಿಲ್ಲ.

ಮುಂದಿನ ದಿನಗಳಲ್ಲಿ ಇಲ್ಲಿಯ ಜನರು ಉತ್ತರ ನೀಡುತ್ತಾರೆ. ಕೆಲಸ ಮಾಡದೇ ಈಗ ಭಾವನಾತ್ಮಕ ಪಾಲಿಟಿಕ್ಸ್ ಮಾಡ್ತಿದ್ದಾರೆ ಎಂದು ಸಂಜಯ್ ಪಾಟೀಲ್ ಕಿಡಿಕಾರಿದ್ದಾರೆ.

Hot Topics

ಮಂಗಳೂರು: ಮಾಲೀಕನ ಎದುರೇ ಸ್ಕೂಟರ್‌ ಕದ್ದೊಯ್ದ ಕಳ್ಳ

ಮಂಗಳೂರು: ಮಾಲೀಕನ ಎದುರಿನಲ್ಲಿಯೇ ಕಳ್ಳನೊಬ್ಬ ಸ್ಕೂಟರ್‌ ಕಳವು ಮಾಡಿದ ಘಟನೆ ನಗರದಲ್ಲಿ ನಡೆದಿದೆ.ರಿನ್ಸ್‌ ಮೋನ್‌ ಕ್ಸೇವಿಯರ್‌ ಅವರು ಜ.7ರಂದು ಬೆಳಗ್ಗೆ 11.30ರ ವೇಳೆಗೆ ಪಾರ್ಸಲ್‌ ಬಸ್‌ಗೆ ನೀಡಲು ಜ್ಯೋತಿ ವೃತ್ತದ ಬಳಿ ಸ್ಕೂಟರ್‌...

ನಾಪತ್ತೆಯಾಗಿದ್ದ ಬಸ್ ಮಾಲಕ ಶವವಾಗಿ ಪತ್ತೆ: ಸಾಲದಿಂದ ಬೇಸತ್ತು ಆತ್ಮಹತ್ಯೆ ಶಂಕೆ

ಶಿವಮೊಗ್ಗ: ಶನಿವಾರದಂದು ನಾಪತ್ತೆಯಾಗಿದ್ದ ಸಾಗರದ ಪ್ರಕಾಶ್ ಟ್ರಾವೆಲ್ಸ್​ನ ಮಾಲೀಕ ಇಂದು ಶವವಾಗಿ ಪತ್ತೆಯಾಗಿದ್ದಾರೆ.ಹೊಸನಗರ ತಾಲೂಕಿನ ಪಟಗುಪ್ಪೆ ಸೇತುವೆ ಬಳಿ ಶನಿವಾರದಂದು ಅವರ ಕಾರು ಹಾಗೂ ಮೊಬೈಲ್ ಪತ್ತೆಯಾಗಿತ್ತು. ಅನುಮಾನಗೊಂಡು ಪಟಗುಪ್ಪ ಸೇತುವೆ ಬಳಿ...

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ ಕಾರ್ಯಕ್ರಮ ಸುರತ್ಕಲ್ ಗೋವಿಂದದಾದ ಕಾಲೇಜಿನಲ್ಲಿ ಜರಗಿತು‌. ಅಕಾಡಮಿಯ ಅಧ್ಯಕ್ಷ ಡಾ. ಜಿ.ಎಲ್.ಹೆಗಡೆ ಅಧ್ಯಕ್ಷತೆ ವಹಿಸಿದ್ದರು.ಮಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ,ಶಾಸಕ ಡಾ.ವೈ.ಭರತ್...