Connect with us

    LATEST NEWS

    ಶೀಘ್ರವೇ ಗೃಹಲಕ್ಷ್ಮಿ ಹಣ, ಯೋಜನೆ ನಿಲ್ಲುವ ಮಾತೇ ಇಲ್ಲ: ಲಕ್ಷ್ಮಿ ಹೆಬ್ಬಾಳ್ಕರ್‌

    Published

    on

    ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆಯ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲ ದಿನಗಳಲ್ಲೇ ಆಗಸ್ಟ್ ತಿಂಗಳ ಹಣವೂ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದರು.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆ ನಿರಂತರ ಪ್ರಕ್ರಿಯೆ ಸರ್ಕಾರ ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

    ಪಂಚಮಸಾಲಿ ಸಮುದಾಯಕ್ಕೆ ಮಾಜಿ ಸಚಿವ ಮುರುಗೇಶ್ ನಿರಾಣಿ ಅವರ ಕೊಡುಗೆ ಏನು ಎಂದು ಸಚಿವರು ಪ್ರಶ್ನಿಸಿದ ಹೆಬ್ಬಾಳ್ಕರ್‌ ನಾನು ಎಂದಿಗೂ ಪಂಚಮಸಾಲಿ ಮೀಸಲಾತಿ ಪರವಾಗಿದ್ದೇನೆ. 2ಎ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಸದಾ ನನ್ನ ಬೆಂಬಲ ಇರುತ್ತದೆ ಎಂದರು.

    ಮುರುಗೇಶ್ ನಿರಾಣಿ ಅವರು ಅಧಿಕಾರದಲ್ಲಿದ್ದಾಗ ಸಮುದಾಯದ ಬಗ್ಗೆ ಯೋಚಿಸಲಿಲ್ಲ. ಈಗ ಸುಖಾಸುಮ್ಮನೆ ನನ್ನ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಬೇರೆ ಸಮಾಜಕ್ಕೆ ಯಾವುದೇ ತೊಂದರೆಯಾಗದಂತೆ ಮೀಸಲಾತಿ ನೀಡಲಿ ಎಂಬುದೇ ನಮ್ಮ ಆಗ್ರಹವಾಗಿದೆ ಎಂದು ತಿಳಿಸಿದರು.

    kerala

    ಹಾಸ್ಟೆಲ್‌ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾ*ವು: ಮೂವರ ಬಂಧನ

    Published

    on

    ಮಂಗಳೂರು/ಕೇರಳ: ನರ್ಸಿಂಗ್ ವಿದ್ಯಾರ್ಥಿನಿಯೋಬ್ಬಳು ಹಾಸ್ಟೆಲ್‌ನ ಮೂರನೇ ಮಹಡಿಯಿಂದ ಬಿದ್ದು ಮೃ*ತಪಟ್ಟ ಘಟನೆ ಕೇರಳದ ಪತ್ತನಂತಟ್ಟದಲ್ಲಿ ನಡೆದಿದೆ. ಈ ಘಟನೆಗೆ ಸಹಪಾಠಿಗಳ ಪ್ರಚೋದನೆಯೇ ಕಾರಣವೆಂದು ಮೂವರು ಗೆಳತಿಯರನ್ನು ಬಂಧಿಸಲಾಗಿದೆ.

    ಅಮ್ಮು ಸಜೀವ್ (21) ಮೃ*ತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಪಠಾಣಪುರಂ ನಿವಾಸಿ ಅಲೀನಾ, ಚಂಗನಾಶ್ಶೇರಿ ನಿವಾಸಿ ಅಕ್ಷಿತಾ ಮತ್ತು ಕೊಟ್ಟಾಯಂ ನಿವಾಸಿ ಅಂಜನಾ ಬಂಧಿತ ಆರೋಪಿಗಳು ಎನ್ನಲಾಗಿದೆ. ಚುಟ್ಟಿಪಾರ ಎಸ್‌ಎಸ್‌ಇ ನರ್ಸಿಂಗ್ ಕಾಲೇಜಿನ ನಾಲ್ಕನೇ ವರ್ಷದ ವಿದ್ಯಾರ್ಥಿನಿ ಅಮ್ಮು ನವೆಂಬರ್ 15 ರಂದು ಹಾಸ್ಟೆಲ್ ಕಟ್ಟಡದ ಮೇಲಿನಿಂದ ಬಿದ್ದು ಸಾ*ವನ್ನಪ್ಪಿದ್ದರು. ಆದರೆ ಆಕೆ ಆ*ತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಕುಟುಂಬದವರು ಪಟ್ಟು ಹಿಡಿದು, ಸಹಪಾಠಿಗಳ ವಿರುದ್ಧ ಸಂಶಯ ವ್ಯಕ್ತಪಡಿಸಿದ್ದಾರೆ.

     

    ಇದನ್ನೂ ಓದಿ : ಎಕ್ಸ್ಪ್ರೆಸ್ ರೈಲು ಡಿ*ಕ್ಕಿ; ವಿದ್ಯಾರ್ಥಿನಿಯ ದು*ರಂತ ಅಂ*ತ್ಯ

     

    ಅಮ್ಮು ನರ್ಸಿಂಗ್ ಕೋರ್ಸ್ ಪೂರ್ಣಗೊಳಿಸಲು ಕೇವಲ ಒಂದೇ ಒಂದು ತಿಂಗಳು ಬಾಕಿ ಇದ್ದು, ಸಾವಿಗೆ ಶರಣಾಗುವ ಮೂಲಕ ತನ್ನ ಆಸೆ, ಕನಸ್ಸುಗಳನ್ನು ನುಚ್ಚನೂರು ಮಾಡಿಕೊಂಡಿದ್ದಾಳೆ.  ಈ ಬಗ್ಗೆ ತನಿಖೆ ಆಗಬೇಕು. ಸಾ*ವಿನಲ್ಲಿ ನಿಗೂಢತೆ ಇದೆ ಎಂದು ಪೋಷಕರು ಆರೋಪಿಸಿದ್ದಾರೆ. ಹಾಸ್ಟೆಲ್‌ನಲ್ಲಿದ್ದ  ವಿದ್ಯಾರ್ಥಿಗಳ ಕಿರುಕುಳವೇ ಮಗಳ ಸಾ*ವಿಗೆ ಕಾರಣ ಎಂದು ಕುಟುಂಬಸ್ಥರು ವಾದಿಸಿದ್ದಾರೆ. ಸದ್ಯ ಮೂವರು ವಿದ್ಯಾರ್ಥಿನಿಯರನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್.

    Continue Reading

    Baindooru

    ಕಾಸರಗೋಡು: ಮಹಿಳಾ ಪೊಲೀಸ್‌ಗೆ ಚಾಕುವಿನಿಂದ ಇರಿದು ಕೊಲೆಗೈದ ಪತಿ

    Published

    on

    ಕಾಸರಗೋಡು: ಪೋಲೀಸ್‌ ಉದ್ಯೋಗದಲ್ಲಿರುವ ಪತ್ನಿಯನ್ನು ಸ್ವತಃ ಪತಿಯೇ ಅಟ್ಟಾಡಿಸಿ ಕೊಚ್ಚಿ ಕೊಲೆಗೈದು, ಪತ್ನಿಯ ಅಪ್ಪನಾದ ಮಾವನನ್ನೂ ಕೊಲೆಗೆಯತ್ನಿಸಿದ ಘಟನೆ ಕಾಸರಗೋಡು ಜಿಲ್ಲೆಯ ಗಡಿಯಲ್ಲೇ ನಡೆದಿದೆ.

    ಕಾಸರಗೋಡು ಜಿಲ್ಲೆಯ ಚಂದೇರ ಪೋಲೀಸ್‌ ಠಾಣಾ ಸಿಪಿಒ ಉದ್ಯೋಗಿ ದಿವ್ಯಶ್ರೀ ಎಂಬಾಕೆ ತನ್ನ ಪತಿಯಿಂದಲೇ ಕೊಲೆಗೀಡಾದ ಮಹಿಳೆ. ಈಕೆ ಕೊಲೆ ನಡೆಯುವಾಗ ತಡೆಯಲು ಬಂದ ಆಕೆಯ ತಂದೆ ವಾಸು ಎಂಬವರ ಕೊರಳು, ಹೊಟ್ಟೆಗೆ ಕತ್ತಿ ಇರಿತ, ಕಡಿತಗಳ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಗುರುವಾರ (ನ.21) ಮುಸ್ಸಂಜೆ ಈ ದುಷ್ಕೃತ್ಯ ನಡೆದಿದ್ದು, ಆರೋಪಿ ರಾಜೇಶ್ ಎಂಬಾತನನ್ನು ಪೋಲೀಸರು ಬಂಧಿಸಿದ್ದಾರೆ.

    ಪತಿ-ಪತ್ನಿಯರಾದ ರಾಜೇಶ ಮತ್ತು ದಿವ್ಯಶ್ರೀ ಕಳೆದ ಕೆಲ ಸಮಯಗಳಿಂದ ಒಟ್ಟಿಗೆ ಬದುಕುತ್ತಿರಲಿಲ್ಲ. ಅವರ ದಾಂಪತ್ಯದಲ್ಲಿ ಸಮಸ್ಯೆಗಳಿದ್ದ ಕಾರಣ ಈರ್ವರೂ ಬೇರೆಯೇ ವಾಸಿಸುತ್ತಿದ್ದರು. ಗುರುವಾರ ಸಂಜೆ ಪತ್ನಿ ಮನೆಯಲ್ಲಿದ್ದಾಳೆಂದು ತಿಳಿದೇ ಬಂದ ಆರೋಪಿ ಆಕೆಯನ್ನು ಆಕ್ರಮಿಸಿ, ಓಡಿಸಿ ಕೊಲೆಗೈದನೆಂದೂ, ಈ ವೇಳೆ ತಡೆಯಲು ಬಂದ ಮಾವನನ್ನೂ ಆಕ್ರಮಿಸಿ ಕೊಲೆಗೆತ್ನಿಸಿದನೆಂದೂ ಮಾಹಿತಿ ಲಭಿಸಿದೆ.

    ಪ್ರಕರಣಕ್ಕೆ ಸಂಬಂಧಿಸಿ ಮೃತ ಪೋಲೀಸ್ ಉದ್ಯೋಗಿ ದಿವ್ಯಶ್ರೀಯ ಪತಿ ರಾಜೇಶನನ್ನು ಪೋಲೀಸರು ಬಂಧಿಸಿದ್ದಾರೆ.

    Continue Reading

    Baindooru

    ವಾಟ್ಸಾಪ್ ಗ್ರೂಪ್ ನೋಡಿ ಪತ್ನಿಗೆ ಮನೆಯಲ್ಲೇ ಹೆರಿಗೆ ಮಾಡಿಸಿದ ಪತಿ..!

    Published

    on

    ಚೆನ್ನೈ: ವಾಟ್ಸಪ್ ಗ್ರೂಪ್‌ನ ಸಹಾಯದಿಂದ ದಂಪತಿಗಳು ಮನೆಯಲ್ಲಿಯೇ ಹೆರಿಗೆ ನಡೆಸಿರುವಂತಹ ಘಟನೆ ತಮಿಳುನಾಡಿನ ಕುಂದ್ರತ್ತೂರಿನಲ್ಲಿ ನಡೆದಿದೆ.

    ನವೆಂಬರ್ 17 ರಂದು ಸುಕನ್ಯಾಗೆ ಮನೆಯಲ್ಲಿ ಅನಿರೀಕ್ಷಿತವಾಗಿ ಹೆರಿಗೆ ನೋವು ಕಾಣಿಸಿಕೊಂಡಿದೆ. ತಕ್ಷಣದ ವೈದ್ಯಕೀಯ ಸಹಾಯವನ್ನು ಪಡೆಯುವ ಬದಲು ಮನೋಹರನ್ ತಾನೇ ಹೆರಿಗೆ ನಡೆಸಲು ಮುಂದಾಗಿದ್ದಾರೆ. ಅವರು ವಾಟ್ಸಪ್ ಗ್ರೂಪ್‌ನಲ್ಲಿ ಬಂದ ಹಂತ-ಹಂತದ ಮಾರ್ಗದರ್ಶನವನ್ನು ಅನುಸರಿಸಿದ್ದಾರೆ. ಹೆರಿಗೆ ಪ್ರಕ್ರಿಯೆಯಲ್ಲಿ ಅವರ ಪತ್ನಿಗೆ ಸಹಾಯ ಮಾಡಲು ಗುಂಪಿನ ಸದಸ್ಯರು ಒದಗಿಸಿದ ಸೂಚನೆಗಳು ಮತ್ತು ವಿವರಣೆಗಳನ್ನು ಬಳಸಿದ್ದಾರೆ ಎಂದು ವರದಿಯಾಗಿದೆ.

    ದಂಪತಿ ವಾಟ್ಸಪ್‌ನ “ಹೋಮ್ ಬರ್ತ್ ಎಕ್ಸ್‌ ಪೀರಿಯನ್ಸ್” ಎಂಬ ಗುಂಪಿನಲ್ಲಿ ಹಂಚಿಕೊಂಡ ಸಲಹೆಯನ್ನು ಅವಲಂಬಿಸಿ ಹೆರಿಗೆಯನ್ನು ನಡೆಸಿದ್ದಾರೆ. ಯಾವುದೇ ವೈದ್ಯಕೀಯ ಪರಿಶೀಲನೆ ಇಲ್ಲದೇ ಅಪಾಯಕಾರಿಯಾಗಿ ಹೆರಿಗೆ ನಡೆಸಿರುವ ಬಗ್ಗೆ ಅಧಿಕಾರಿಗಳು ಈಗ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಹೆರಿಗೆ

    ಯ ನಂತರ, ಸುರಕ್ಷತೆಯ ಉಲ್ಲಂಘನೆಯನ್ನು ಉಲ್ಲೇಖಿಸಿ ಸ್ಥಳೀಯ ಸಾರ್ವಜನಿಕ ಆರೋಗ್ಯ ಅಧಿಕಾರಿಯಿಂದ ದೂರು ದಾಖಲಿಸಲಾಗಿದೆ.

    ಮಗುವಿನ ಜನನದ ಬಳಿಕ ದಂಪತಿಗಳು ನವಜಾತ ಶಿಶುವಿನೊಂದಿಗೆ ತಮ್ಮ ಚಿತ್ರವನ್ನು ಹಂಚಿಕೊಂಡಿದ್ದಾರೆ. ಬಳಿಕ ಈ ವಿಚಾರ ಬೆಳಕಿಗೆ ಬಂದಿದ್ದು, ಇದು ಸ್ಥಳೀಯ ಆರೋಗ್ಯ ಅಧಿಕಾರಿಗಳ ಗಮನ ಸೆಳೆಯಿತು. ಇದೀಗ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.

    Continue Reading

    LATEST NEWS

    Trending