Friday, July 1, 2022

ಬಂಟ್ವಾಳ: ಜಾಗದ ತಕರಾರು- ತಂಡದಿಂದ ಹಲ್ಲೆ, ದೂರು

ಬಂಟ್ವಾಳ: ವಿವಾದಿತ ಜಾಗದ ವೀಕ್ಷಣೆಗೆ ತೆರಳಿದ್ದವರಿಗೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಬಂಟ್ವಾಳ ಸಮೀಪದ ಜಕ್ರಿಬೆಟ್ಟಿನಲ್ಲಿ ನಡೆದಿದೆ.


ಎ. 24ರಂದು ಸಂಜೆ 6 ಗಂಟೆಗೆ ಜಕ್ರಿಬೆಟ್ಟು ನಿವಾಸಿ ಭುವನೇಶ್ವರಿ ರೈ ಅವರು ತಮಗೂ ಹಾಗೂ ರೀಟಾ ಸಿಕ್ವೇರಾಗೆ ಇರುವ ವಿವಾದಿತ ಜಾಗಕ್ಕೆ ಮೈಸೂರಿನಿಂದ ಪರಿಚಯದ ಸಂಘಟನೆಯೊಂದರ ಶಿವು ಗೌಡ ಹಾಗೂ ಅವರ ಲಿಖಿತಾ ಅವರನ್ನು ಕರೆಸಿ ಜಾಗ ವೀಕ್ಷಣೆ ಮಾಡುತ್ತಿರುವಾಗ ತಂಡವೊಂದು ಆಗಮಿಸಿ ಹಲ್ಲೆ ನಡೆಸಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಆರೋಪಿಗಳಾದ ಸಂದೇಶ, ಸಂದೇಶನ ಪತ್ನಿ, ಆತನ ಸಹೋದರ, ಸುರೇಶ ಪೂಜಾರಿ, ಸುರೇಶ ಕುಲಾಲ್, ಶಾಲಿನಿ, ರೀಟಾ ಸಿಕ್ವೇರಾರ ಸಹೋದರಿ, ಸೀತಾರಾಮ ಶೆಟ್ಟಿ ಮತ್ತು ಇತರರು ಹಾರೆ, ಗುದ್ದಲಿ ಹಿಡಿದು ಹಲ್ಲೆ ನಡೆಸಿದ್ದಾರೆ.

ಜತೆಗೆ ಭುವನೇಶ್ವರಿ ರೈ ಅವರ ಬಟ್ಟೆ ಹರಿದು ಮಾನಭಂಗ ನಡೆಸಿದ್ದಾರೆ. ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ಬಲ್ಮಠ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೂಲಭೂತ ಸೌಕರ್ಯ ನೀಡದಿದ್ದರೆ ಉಗ್ರ ಹೋರಾಟ

ಮಂಗಳೂರು: ನಗರದ ಹೃದಯ ಭಾಗದಲ್ಲಿರುವ ಬಲ್ಮಠ ಸರಕಾರಿ ಹಿರಿಯ ಪ್ರಾಥಮಿಕ (ಟಿಟಿಐ) ಶಾಲೆಯಲ್ಲಿ ಯಾವುದೇ ಕನಿಷ್ಟ ಮೂಲಭೂತ ಸೌಕರ್ಯಗಳಿಲ್ಲದೆ ಅಲ್ಲಿನ ವಿದ್ಯಾರ್ಥಿಗಳು ದಿನನಿತ್ಯ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ.ಈ ಶಾಲೆಯಲ್ಲಿ ಕಲಿಯುತ್ತಿರುವ ಒಂದನೇ ತರಗತಿಯಿಂದ ಏಳನೇ...

ನನಗೆ ಸುಚೇಂದ್ರ ಪ್ರಸಾದ್‌ ಜೊತೆ ಮದುವೆಯೇ ಆಗಿಲ್ಲ: ನಟಿ ಪವಿತ್ರ ಲೋಕೇಶ್‌

ಬೆಂಗಳೂರು: ನನಗೆ ಸುಚೇಂದ್ರ ಪ್ರಸಾದ್‌ ಜೊತೆ ಮದುವೆಯೇ ಆಗಿಲ್ಲ. ಮದುವೆಯೇ ಆಗದಿದ್ದರೆ ನಾನು ಯಾಕೆ ಡಿವೋರ್ಸ್‌ ಕೊಡಬೇಕು ಎಂದು ಕನ್ನಡ ಚಿತ್ರನಟಿ ಪವಿತ್ರ ಲೋಕೇಶ್‌ ಹೇಳಿಕೆ ನೀಡಿದ್ದಾರೆ.ಕೆಲದಿನಗಳಿಂದ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ...

ಉಡುಪಿ: ನೀರಿನಿಂದ ಮುಳುಗಡೆಯಾದ ಕೃಷಿಭೂಮಿ-ಅಪಾರ ಬೆಳೆ ನಷ್ಟ

ಉಡುಪಿ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮೂರು ನಾಲ್ಕು ದಿನಗಳಿಂದ ಗ್ರಾಮ ಜಲಾವೃತಗೊಂಡು ಕೃಷಿ ಭೂಮಿಗೆ ನೀರು ನುಗ್ಗಿ ನೂರಾರು ಎಕರೆ ಕೃಷಿಭೂಮಿ ನೀರಿನಲ್ಲಿ ಮುಳುಗಡೆಯಾದ ಘಟನೆ ಉಡುಪಿಯ ಬೈಂದೂರಿನ ನಾವುಂದದಲ್ಲಿ ನಡೆದಿದೆ.ರೈಲ್ವೆ ಮಾರ್ಗದ...