Sunday, November 27, 2022

ಪುತ್ತೂರಿನಲ್ಲಿ ಜಾಗದ ತಕರಾರು: V.A ಕಚೇರಿಗೆ ನುಗ್ಗಿ ದಾಂಧಲೆ-ಮಾರಕಾಸ್ತ್ರಗಳಿಂದ ಹತ್ಯೆ ಯತ್ನ

ಪುತ್ತೂರು: ಜಾಗದ ತಕರಾರಿಗೆ ಸಂಬಂಧಪಟ್ಟಂತೆ ವ್ಯಕ್ತಿಯೊಬ್ಬ ಸವಣೂರು ಕಂದಾಯ ಕಛೇರಿಗೆ ನುಗ್ಗಿ ತಲವಾರಿನಿಂದ ಹಲ್ಲೆಗೆ ಮುಂದಾಗಿ, ಕಲ್ಲು ಎತ್ತುಹಾಕಿ ಕೊಲೆಗೆ ಯತ್ನಿಸಿದ ಘಟನೆ ಪುತ್ತೂರಿನ ಸವಣೂರು ಜಂಕ್ಷನ್ ನಲ್ಲಿ ಇಂದು ನಡೆದಿದೆ.


ಸವಣೂರು ಗ್ರಾಮದ ಇಡ್ಯಾಡಿ ನಿವಾಸಿ ಪ್ರಸಾದ್ ಎಂಬಾತ ಕೊಲೆಗೆ ಯತ್ನಿಸಿದವರು ಎನ್ನಲಾಗಿದೆ.


ಅಲ್ಲದೆ ಸವಣೂರು ಗ್ರಾ.ಪಂ.ಕಟ್ಟಡದಲ್ಲಿರುವ ಗುಣಪಾಲ ಗೌಡ ಇಡ್ಯಾಡಿ ಅವರಿಗೆ ಸೇರಿದ ಬೇಕರಿಯನ್ನು ತಲವಾರಿನಿಂದ ಪುಡಿಗೈದು ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ.

ಸ್ಥಳಕ್ಕೆ ಬೆಳ್ಳಾರೆ ಠಾಣೆಯ ಎಸೈ ಸುಹಾಸ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಸುಳ್ಯದಲ್ಲಿ ಪತ್ನಿಯನ್ನು ಕೊಂದು ಮೃತದೇಹವನ್ನು ಗೋಣಿಚೀಲದಲ್ಲಿಟ್ಟಿದ್ದ ಪಾಪಿ ಪತಿ ಪ.ಬಂಗಾಳದಲ್ಲಿ ಅರೆಸ್ಟ್

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೀರಮಂಗಲ ಸಮೀಪದ ಬಾಡಿಗೆ ಮನೆಯೊಂದರಲ್ಲಿ ಗೋಣಿಚೀಲದೊಳಗೆ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೊಲೀಸರು ಪಶ್ಚಿಮ ಬಂಗಾಲದಲ್ಲಿ ಬಂಧಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿ ಇಬ್ರಾನ್ ಶೇಖ್...

ನಂತೂರಿನಲ್ಲಿ ಜೋಡಿ ಮೇಲೆ ದಾಳಿ-ಮೂವರು ಹಿಂದೂ ಕಾರ್ಯಕರ್ತರು ಅರೆಸ್ಟ್

ಮಂಗಳೂರು:ಮಂಗಳೂರಿನ ನಂತೂರು ಸರ್ಕಲ್‌ ಬಳಿ ಗುರುವಾರ ಸಂಜೆ ಭಿನ್ನ ಕೋಮಿನ ಜೋಡಿ ಮೇಲೆ ದಾಳಿ ನಡೆಸಿದ್ದ ಘಟನೆಗೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.ಸುರತ್ಕಲ್‌ ನಿವಾಸಿ ಮುತ್ತು(18), ಪ್ರಕಾಶ್‌(21) ಮತ್ತು ಅಸೈಗೋಳಿ...

ಸುಳ್ಯ: ಸಚಿವ ಅಂಗಾರ ಅವರಿಗೆ ಡೆಂಗ್ಯೂ ದೃಢ-ಆಸ್ಪತ್ರೆಗೆ ದಾಖಲು

ಸುಳ್ಯ: ಶಾಸಕ, ಬಂದರು, ಮೀನುಗಾರಿಕೆ ಹಾಗೂ ಒಳ ನಾಡು ಜಲ ಸಾರಿಗೆ ಸಚಿವ ಎಸ್‌. ಅಂಗಾರ ಅವರಿಗೆ ಡೆಂಗ್ಯೂ ದೃಢಪಟ್ಟ ಕಾರಣ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.  ಈ ಹಿನ್ನೆಲೆ ಅವರು ಸುಳ್ಯ ಕೆವಿಜಿ ಆಸ್ಪತ್ರೆಗೆ ದಾಖಲಾಗಿರುವುದಾಗಿ...