DAKSHINA KANNADA
ಮೂಡುಬಿದಿರೆಯಲ್ಲಿ ಮನೆ ನಿರ್ಮಾಣಕ್ಕೆ ಲೈಸೆನ್ಸ್ ಪಡೆದು ಮತೀಯ ಶಿಕ್ಷಣ ಕೇಂದ್ರ-ಹಿಂಜಾವೇ ಆರೋಪ
ಮೂಡುಬಿದಿರೆ: ಮೂಡುಬಿದಿರೆಯ ಪ್ರಾಂತ್ಯಗ್ರಾಮದ ಸರ್ವೆ ನಂಬ್ರ 20/5ರ ಜಮೀನಿನಲ್ಲಿ ವಾಸ್ತವ್ಯಕ್ಕೆ ಮನೆ ಕಟ್ಟಲು ಪರವಾನಗಿ ಪಡೆದು ಈ ಜಮೀನಿನಲ್ಲಿ ಈಗ ಕಾನೂನುಬಾಹಿರವಾಗಿ ಜರಾತುಲ್ ಕುರಾನ್ ಕುರಾನಿಕ್ ಪ್ರೀಸ್ಕೂಲ್ ಮತ್ತು ಅಲ್ ಮಫಾಝ್ ವುಮೆನ್ಸ್ ಶರಿಯತ್ ಕಾಲೇಜನ್ನು ನಡೆಸಲು ಮುಂದಾಗಿದ್ದು, ಈ ಕಾನೂನು ಬಾಹಿರ ಶಿಕ್ಷಣ ಸಂಸ್ಥೆ ವಿರುದ್ಧ ಮೂಡುಬಿದಿರೆ ಹಿಂದು ಜಾಗರಣ ವೇದಿಕೆ ಉಗ್ರ ಹೋರಾಟ ನಡೆಸಲಿದೆ ಎಂದು ಹಿಂದು ಜಾಗರಣ ವೇದಿಕೆ ದಕ್ಷಿಣ ಪ್ರಾಂತ್ಯ ಪ್ರಶಿಕ್ಷಣ ಪ್ರಮುಖ ರಾಧಾಕೃಷ್ಣ ಅಡ್ಯಂತಾಯ ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, 2020ರಲ್ಲಿ ಇಲ್ಲಿ ತಪ್ಸೀನಾ ಎಂಬವರ ಹೆಸರಿನಲ್ಲಿ ಮನೆಗಾಗಿ ಪರವಾನಗಿ ಪಡೆದು ಮನೆ ಕಟ್ಟುವ ಬದಲಾಗಿ ಅಕ್ರಮವಾಗಿ ಕಟ್ಟಡ ಕಟ್ಟಿ, ಅದಕ್ಕೆ ಯಾವುದೇ ಕಟ್ಟಡ ಸಂಖ್ಯೆ ಪಡೆದುಕೊಳ್ಳದೇ ಸರಕಾರದ ಯಾವುದೇ ಅನುಮತಿ, ಪರವಾನಿಗೆಯೂ ಇಲ್ಲದೇ, ಶಿಕ್ಷಣ ಸಂಸ್ಥೆಯ ಅನುಮತಿಯನ್ನೂ ಪಡೆಯದೇ ಶಾಲೆ ನಿರ್ಮಿಸಲಾಗಿದೆ.
ಇಲ್ಲಿ ಮುಸ್ಲಿಮರ ಮತೀಯ ಶಿಕ್ಷಣ ನೀಡಲಾಗುತ್ತಿದ್ದು ಇಲ್ಲಿನ ಚಟುವಟಿಕೆಗಳ ವಿರುದ್ಧ ಹಿಂದೂ ಜಾಗರಣ ವೇದಿಕೆ ಮೂಡುಬಿದಿರೆ ಪುರಸಭೆಗೆ ದೂರು ನೀಡಿದೆ.
ಕಳೆದ 2 ವರ್ಷಗಳಿಂದ ಅಕ್ರಮವಾಗಿ ಈ ಶಿಕ್ಷಣ ಸಂಸ್ಥೆಯನ್ನು ನಡೆಸಲಾಗುತ್ತಿದೆ. ಸುಳ್ಳು ಪರವಾನಗಿ ಪಡೆದುಕೊಂಡು ಮತೀಯ ಶಿಕ್ಷಣ ನೀಡಿ ಉದ್ವಿಗ್ನ ವಾತಾವರಣ ಮಾಡಲಾಗುತ್ತಿದ್ದು, ಇದನ್ನು ನಾವು ಸಹಿಸುವುದಿಲ್ಲ. ದೂರು ನೀಡಿದರೂ 10 ದಿನ ಕಳೆದರೂ ಶಿಕ್ಷಣ ಸಂಸ್ಥೆ ವಿರುದ್ಧ ಪುರಸಭೆ ಏನೂ ಕ್ರಮ ಕೈಗೊಂಡಿಲ್ಲ. ಹೀಗಾಗಿ ನಾವು ಪ್ರತಿಭಟನೆ ನಡೆಸಲು ಮುಂದಾಗಿದ್ದೇವೆ ಎಂದು ಗೊತ್ತಾಗುತ್ತಲೇ ನಮ್ಮನ್ನು ಮಾತುಕತೆಗೆ ಕರೆಸಿದ್ದಾರೆ.
ಹೀಗಾಗಿ ನಾವು ಇಂದಿನ ಪ್ರತಿಭಟನೆ ಕೈಬಿಟ್ಟಿದ್ದೇವೆ. ಕಾನೂನುಬಾಹಿರವಾಗಿ ನಿರ್ಮಿಸಿದ ಈ ಕಟ್ಟಡದ ವಿರುದ್ಧ ಪುರಸಭೆ ಕಾನೂನು ಕ್ರಮ ಕೈಗೊಳ್ಳದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ಮಾಡಲಿದ್ದೇವೆ ಎಂದರು. ಇದು ಲ್ಯಾಂಡ್ ಜಿಹಾದ್ನ ಒಂದು ಭಾಗವಾಗಿದೆ.
ಸರಕಾರಿ ಜಾಗವನ್ನು ಅತಿಕ್ರಮಣ, ಒತ್ತುವರಿ ಮಾಡಿಕೊಂಡು ಜಿಲ್ಲೆಯಾದ್ಯಂತ ವ್ಯಾಪಕವಾಗಿ ನಡೆದಿದೆ. ಇದನ್ನು ನಾವು ಸಹಿಸಲ್ಲ.
ಇದು ಕರ್ನಾಟಕದ ಉದ್ದಗಲಕ್ಕೂ ನಡೆಯುತ್ತಿದೆ ಎಂದು ರಾಧಾಕೃಷ್ಣ ದೂರಿದರು. ಸುದ್ದಿಗೋಷ್ಠಿಯಲ್ಲಿ ಮಂಗಳೂರು ಗ್ರಾಮಾಂತರ ಜಿಲ್ಲಾ ಸಂಚಾಲಕ ಪ್ರಕಾಶ್ ಕುಂಪಲ, ರತ್ನಾಕರ ಶೆಟ್ಟಿ ಕಲ್ಲಡ್ಕ , ಸಂದೀಪ್, ಸಂದೀಪ್ ಹೆಗ್ಡೆ, ಚಿನ್ಮಯ್ ಮೊದಲಾದವರಿದ್ದರು.
DAKSHINA KANNADA
ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿ ಹೆಸರು ಉಲ್ಲೇಖಿಸಿದ್ದ ವರ..! ವರನ ಮೇಲೆ ದೂರು ದಾಖಲು..!
ಕಡಬ: ವ್ಯಕ್ತಿಯೊಬ್ಬರು ತಮ್ಮ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿಯ ಕುರಿತಾಗಿ ಉಲ್ಲೇಖಿಸಿದ್ದು ಇದೀಗ ಇಕ್ಕಟ್ಟಿಗೆ ಸಿಲುಕಿರುವ ಘಟನೆ ನಡೆದಿದೆ. ಕಡಬ ತಾಲೂಕಿನ ಆಲಂತಾಯ ನಿವಾಸಿ ಶಿವಪ್ರಸಾದ್ ಎಂಬವರು ತಮ್ಮ ಮದುವೆಯ ಆಮಂತ್ರನ ಪತ್ರಿಕೆಯಲ್ಲಿ ಪ್ರಧಾನಿ ಮೋದಿಯನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡುವುದು ನಮಗೆ ನೀವು ನೀಡುವ ಉಡುಗೊರೆ ಎಂದು ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಉಲ್ಲೇಖಿಸಿದ್ದರು.
ಮುಂದೆ ಓದಿ..; ಮಕ್ಕಳ ಮುಂದೆಯೇ ದಾಂಪತ್ಯಕ್ಕೆ ಕಾಲಿಟ್ಟ ವೃದ್ದರು..!! ಅಚ್ಚರಿಯಾದ್ರು ಇದು ಸತ್ಯ..!!
ಮದುವೆ ನಡೆದ ಬಳಿಕ ವರನ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರನ್ನು ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಮಾರ್ಚ್1 ರಂದು ಮದುವೆ ಆಮಂತ್ರಣ ಪತ್ರಿಕೆ ಮುದ್ರಿಸಿ ಶಿವಪ್ರಸಾದ್ರವರು ಹಂಚಿದ್ದರು. ನೀತಿ ಸಂಹಿತಿ ಘೋಷಣೆಗೆ ಮೊದಲೇ ಈ ಆಮಂತ್ರಣ ಪತ್ರಿಕೆ ಮುದ್ರಣಗೊಂಡಿತ್ತಾದರೂ ಇದೀಗ ಚುನಾವಣಾ ಅಧಿಕಾರಿಗಳಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
DAKSHINA KANNADA
ಮೇ 3 ರಂದು ಗಬ್ಬರ್ ಸಿಂಗ್ ತುಳು ಸಿನಿಮಾ ತೆರೆಗೆ
ಮಂಗಳೂರು: ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ತಯಾರಾದ ಸತೀಶ್ ಬಾರ್ಕೂರು ನಿರ್ಮಾಣದ ಗಬ್ಬರ್ ಸಿಂಗ್ ತುಳು ಚಲನ ಚಿತ್ರ ಮೇ 3 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ.
ಉತ್ತರ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಆಧರಿಸಿ ಗಬ್ಬರ್ ಸಿಂಗ್ ತುಳು ಸಿನಿಮಾ ಕಥೆಯನ್ನು ಹೆಣೆಯಲಾಗಿದೆ. ಸಿನಿಮಾದಲ್ಲಿ ಆರು ಹಾಡು, ನಾಲ್ಕು ಫೈಟ್ಸ್ ಇದೆ. ಈ ಚಿತ್ರವನ್ನುಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ನಾಯಕ ನಟನಾಗಿ ಶರಣ್ ಶೆಟ್ಟಿ ನಾಯಕಿಯಾಗಿ ವೆನ್ಸಿಟಾ ಅಭಿನಯಿಸಿದ್ದಾರೆ. ಗಬ್ಬರ್ ಸಿಂಗ್ ಸಿನಿಮಾ ಈಗಾಗಲೇ ಮಸ್ಕತ್ ಮತ್ತು ಉಡುಪಿಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಎಂದು ನಿರ್ಮಾಪಕ ಸತೀಶ್ ಬಾರ್ಕೂರು ತಿಳಿಸಿದ್ದಾರೆ.
“ಗಬ್ಬರ್ ಸಿಂಗ್” ಆ್ಯಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಓರಿಯೆಂಟೆಡ್ ಫಿಲ್ಮ್ ಆಗಿದೆ. ಈ ಸಿನಿಮಾದ ಕಥೆ, ಚಿತ್ರಕಥೆ, ನಿರ್ಮಾಪಕರು ಸತೀಶ್ ಪೂಜಾರಿ ಬಾರ್ಕೂರ್ , ನಿರ್ದೇಶನದ ಜವಾಬ್ದಾರಿಯನ್ನು ಪ್ರದೀಪ್ ವಹಿಸಿದ್ದಾರೆ. ಮಧು ಸುರತ್ಕಲ್ ಸಂಭಾಷಣೆ ರಚಿಸಿದ್ದಾರೆ.
ಮುಖ್ಯ ಪಾತ್ರದಲ್ಲಿ ಕುಸೇಲ್ದರಸೆ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಾಯಿಕೃಷ್ಣ, ಉಮೇಶ್ ಮಿಜಾರ್, ರವಿರಾಮ ಕುಂಜ, ಗಿರೀಶ್ ಎಂ. ಶೆಟ್ಟಿ ಕಟೀಲ್, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್, ಉದಯ ಆಳ್ವ ಇಡ್ಯಾ, ಸಂದೀಪ್ ಭಕ್ತ, ಕಿರಣ್ ಮಲ್ಪೆ, ಪೂರ್ಣಿಮಾ ಶೆಟ್ಟಿ, ಪವಿತ್ರ ಶೆಟ್ಟಿ,ಚಂದ್ರಹಾಸ ಶೆಟ್ಟಿ ಮಾಣಿ, ಸಂಪತ್ ಲೋಬೋ, ಆಶಾ ಶೆಟ್ಟಿ ಶಿಬರೂರು, ಲಹರಿ ಶೆಟ್ಟಿ ಪಡ್ರೆ, ಶಿಲ್ಪಾ ಶೆಟ್ಟಿ, ಭವ್ಯಾ ಶೆಟ್ಟಿ ಸುರತ್ಕಲ್ ಸಂತೋಷ್, ಚಂದ್ರಹಾಸ ಶೆಟ್ಟಿ ಕಪ್ಪೆಟ್ಟು, ಫ್ರಾಂಕಿ ಕೊಳಲಗಿರಿ, ಉಮೇಶ್ ಶೆಟ್ಟಿ ಹಾವಂಜೆ, ಬೇಬಿ ಆಧ್ಯಾ ಉಡುಪಿ ಮೊದಲಾದವರಿದ್ದಾರೆ.
ಛಾಯಾಗ್ರಹಣ: ರವಿ ಸುವರ್ಣ, ಸಂಕಲನ: ಪ್ರಜ್ವಲ್ ಸುವರ್ಣ, ಕಲೆ: ವೆಂಕಟೇಶ್ ಬೆಂಗಳೂರು, ಸಂಗೀತ: ಡೊಲ್ಪಿನ್ ಕೊಳಲಗಿರಿ. ಹಿನ್ನಲೆ ಸಂಗೀತ: ಕಾರ್ತಿಕ್ ಮುಲ್ಕಿ, ಸಾಹಸ: ಅಲ್ಟಿಮೆಟ್ ಶಿವ್ ನೃತ್ಯ: ಅವಿನಾಶ್ ಬಂಗೇರ, ಶುಭಕಿರಣ್, ಮೇಕಪ್ ಪ್ರದೀಪ್, ವಸ್ತ್ರಾಲಂಕಾರ : ಶರತ್ ಬರ್ಕೆ, ಸಹ ನಿರ್ದೇಶನ: ಪುಷ್ಪರಾಜ ರೈ, ಜಯರಾಜ್, ಸಹಾಯ: ಭಾಗ್ಯರಾಜ್ ಮಾಡಿದ್ದಾರೆ.
ಪ್ರೀಮಿಯರ್ ಶೋ
ಈಗಾಗಲೇ ಮಸ್ಕತ್, ಕತಾರ್ ಉಡುಪಿ, ಸುರತ್ಕಲ್ ನಲ್ಲಿ ಗಬ್ನರ್ ಸಿಂಗ್ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಲಭಿಸಿದೆ. ಸಾಂಸಾರಿಕ ಕತೆಯ ಜೊತೆ ಇಲ್ಲಿ ಹಾಸ್ಯವೂ ಚೆನ್ನಾಗಿ ವಕ್೯ಹೌಟ್ ಆಗಿದೆ. ನವೀನ್ ಪಡೀಲ್, ಬೋಜರಾಜ್ ವಾಮಂಜೂರು, ಅರವಿಂದ ಬೋಳಾರ್, ಸಾಯಿಕೃಷ್ಣ, ಉಮೇಶ್ ಮಿಜಾರ್, ಪ್ರಸನ್ನ ಶೆಟ್ಟಿ ಬೈಲೂರು, ರವಿರಾಮ ಕುಂಜ ಇವರ ಹಾಸ್ಯ ಸಕ್ಕತ್ತಾಗಿದೆ. ಜೊತೆಗೆ ಗಿರೀಶ್ ಶೆಟ್ಟಿ ಕಟೀಲು, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್ ಮೊದಲಾದವರ ಪಾತ್ರಗಳೂ ಕೂಡಾ ಇಲ್ಲಿ ಪ್ರಾಮುಖ್ಯತೆಯನ್ನು ಪಡೆದಿದೆ ಎಂದು ನಿರ್ಮಾಪಕ ಸತೀಶ್ ಬಾರ್ಕೂರು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ನಿರ್ಮಾಪಕ ಸತೀಶ್ ಪೂಜಾರಿ ಬಾರ್ಕೂರು, ನಟ ಭೋಜರಾಜ ವಾಮಂಜೂರು, ಮಧು ಸುರತ್ಕಲ್, ಚಂದ್ರ ಶೇಖರ ನಾನಿಲ್ ಹಳೆಯಂಗಡಿ, ನಟ ಶರಣ್ ಶೆಟ್ಟಿ
ನಟಿ ವೆನ್ಸಿಟಾ ಇದ್ದರು.
DAKSHINA KANNADA
ಸಾವಿನಲ್ಲೂ ಒಂದಾದ ಸಹೋದರರು! ಅಣ್ಣನ ನಿಧನದ ಸುದ್ದಿ ಕೇಳಿ ಇಹಲೋಕ ತ್ಯಜಿಸಿದ ತಮ್ಮ
ಸುಳ್ಯ : ಸಹೋದರರಿಬ್ಬರು ಸಾ*ವಿನಲ್ಲೂ ಒಂದಾದ ಘಟನೆ ಸುಳ್ಯದ ಅರಂತೋಡಿನಲ್ಲಿ ನಡೆದಿದೆ. ಅರಂತೋಡು ಗ್ರಾಮದ 82 ವರ್ಷದ ಎಸ್. ಇ. ಅಬ್ದುಲ್ಲಾ ಹಾಗೂ ಮಹಮ್ಮದ್ ಎಸ್. ಇ ಮೃ*ತ ಸಹೋದರರು.
ಅಬ್ದುಲ್ಲಾ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧ*ನರಾಗಿದ್ದಾರೆ. ಈ ವಿಚಾರ ತಿಳಿದ ಅವರ ಸಹೋದರ ಮಹಮ್ಮದ್ ಕುಸಿದು ಬಿದ್ದು ಸಾ*ವನ್ನಪ್ಪಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆ ಅಡ್ಡ ಪರಿಣಾಮ ಬೀರಲಿದೆ; ಸತ್ಯ ಒಪ್ಪಿಕೊಂಡ ಆಸ್ಟ್ರಾಜೆನಿಕಾ! ಏನಿದರ ಪರಿಣಾಮ?
ಇಬ್ಬರನ್ನು ಕಳೆದುಕೊಂಡ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.
- FILM6 days ago
“ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?
- DAKSHINA KANNADA6 days ago
ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?
- LATEST NEWS7 days ago
ಖತರ್ನಾಕ್ ಕಳ್ಳನನ್ನು ಬಂಧಿಸಿದ ಕೋಟ ಪೊಲೀಸರು; ‘ನನ್ನ ಬಗ್ಗೆ ಮಾಹಿತಿ ಬೇಕಾದ್ರೆ ಯೂಟ್ಯೂಬ್ ನೋಡಿ’ ಎಂದ ಖದೀಮ!
- bangalore7 days ago
ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮಳೆಯಾಗಲಿದೆ: ಹವಾಮಾನ ಇಲಾಖೆ ಮುನ್ಸೂಚನೆ