Wednesday, May 18, 2022

ಮಲ್ಲೂರು ಬಳಿ ಮನೆ ಮೇಲೆ ಕುಸಿದ ಗುಡ್ಡ : ಮಹಿಳೆಗೆ ಗಾಯ

ಮಂಗಳೂರು:ನಗರ ಹೊರವಲಯದ ಮಲ್ಲೂರು ಜಂಕ್ಷನ್ ಬಳಿ ಮನೆಯೊಂದರ ಮೇಲೆ ಗುಡ್ಡ ಕುಸಿದು ಹಾನಿಯಾಗಿದೆ. ಘಟನೆಯಿಂದ ಬೀಪಾತುಮ್ಮ (72) ಗಾಯಗೊಂಡಿದ್ದಾರೆ. ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದೊಂದು ತಿಂಗಳಿನಿಂದ ಸುರಿಯುತ್ತಿರುವ ಭಾರೀ ಮಳೆಗೆ ಗುಡ್ಡ ಕುಸಿತ ಸಂಭವಿಸಿದೆ. ಕರಾವಳಿಯಲ್ಲಿ ಭಾಗದಲ್ಲಿ ಮಳೆಯಿಂದ ಸೋಮವಾರ ಬೆಳಗ್ಗೆ 5.30ರ ವೇಳೆಗೆ ಮಲ್ಲೂರು ಜಂಕ್ಷನ್ ಸಮೀಪ ಝುಬೇರ್ ಎಂಬರ ಮನೆಯ ಹಿಂಭಾಗವಿದ್ದ ಭಾರೀ ಗಾತ್ರದ ಗುಡ್ಡ ಕುಸಿದು ಬಿದ್ದಿದೆ. ಇದರಿಂದ ಮನೆ ಗೋಡೆ ಕುಸಿದು ಬಿದ್ದು ಮನೆಯಲ್ಲಿದ್ದ ಬೀಪಾತುಮ್ಮ ಕಣ್ಣಿನ ಭಾಗಕ್ಕೆ ಗಾಯವಾಗಿದೆ. ಮನೆಯಲ್ಲಿ ಒಬ್ಬರೇ ಇದ್ದ ಕಾರಣ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಅಪಾರ ನಷ್ಟ ಸಂಭವಿಸಿದೆ.

LEAVE A REPLY

Please enter your comment!
Please enter your name here

Hot Topics

ಕಾಂಗ್ರೆಸ್‌ ಪಕ್ಷಕ್ಕೆ ‘ಕೈ’ ಕೊಟ್ಟ ಹಾರ್ದಿಕ್‌ ಪಟೇಲ್‌: ಟ್ವಿಟ್ಟರ್‌ನಲ್ಲಿ ಘೋಷಣೆ

ಅಹಮದಾಬಾದ್‌: ಕಾಂಗ್ರೆಸ್‌ ಯುವ ಮುಖಂಡ ಹಾಗೂ ಗುಜರಾತ್‌ನ ಪಾಟಿದಾರ್‌ ಸಮುದಾಯದ ನಾಯಕ ಹಾರ್ದಿಕ್‌ ಪಟೇಲ್‌ ಕಾಂಗ್ರೆಸ್‌ ಪಕ್ಷಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ.ಪಾಟಿದಾರ್ ಸಮುದಾಯದ ಪ್ರಭಾವಿ ನಾಯಕ ನರೇಶ್ ಪಟೇಲ್ ಅವರನ್ನು ಭೇಟಿಯಾಗಿಮಾತುಕತೆ ನಡೆಸಿದ...

ಬಂಟ್ವಾಳದಲ್ಲಿ ಬೈಕ್ ಕಳವು ಪ್ರಕರಣ: ಮೂವರು ಆರೋಪಿಗಳ ಬಂಧನ

ಬಂಟ್ವಾಳ: ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸ್ ಠಾಣೆಯ ‌ಇನ್ಸ್‌ಪೆಕ್ಟರ್ ವಿವೇಕಾನಂದ ಅವರ ನೇತೃತ್ವದ ತಂಡ ಬಂಧಿಸಿದೆ.ಅಕ್ಬರ್, ಸಿದ್ದೀಕ್, ಸಮೀರ್ ಬಂಧಿತ ಆರೋಪಿಗಳು. ಇತ್ತೀಚೆಗೆ ಬಂಟ್ವಾಳ ನಗರ...

ವಿಟ್ಲ: ಭಾರೀ ಮಳೆಗೆ ರಸ್ತೆಗೆ ಬಿದ್ದ ವಿದ್ಯುತ್ ಕಂಬ-ಸಂಚಾರ ಸ್ಥಗಿತ

ವಿಟ್ಲ: ಸುರಿದ ಭಾರೀ ಗಾಳಿ ಮಳೆಯಿಂದಾಗಿ ವಿದ್ಯುತ್ ಕಂಬ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾದ ಘಟನೆ ವಿಟ್ಲ- ಕಲ್ಲಡ್ಕ ರಸ್ತೆಯಲ್ಲಿ ನಡೆದಿದೆ.- ನಿನ್ನೆ ಸುರಿದ ಮಳೆಗೆ ಇಂದು ಮುಂಜಾನೆ...