Connect with us

    BELTHANGADY

    ಚಾರ್ಮಾಡಿಯಲ್ಲಿ ಮತ್ತೆ ಭೂ ಕುಸಿತ

    Published

    on

    ಬೆಳ್ತಂಗಡಿ: ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನದಿಗಳು ತುಂಬಿ ಹರಿಯುತ್ತಿದ್ದು, ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಮತ್ತೆ ಗುಡ್ಡ ಕುಸಿತ ಆರಂಭಗೊಂಡಿದ್ದು, ವಾಹನ ಸಂಚಾರಕ್ಕೆ ತೊಡಕಾಗಿದೆ.

    ಮಳೆಗಾಲ ಪ್ರಾರಂಭವಾಗುತ್ತಿದ್ದಂತೆ ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಸಂಚಾರ ನಿಷೇಧಗೊಂಡಿದ್ದು, ನಿನ್ನೆ ಅಲೆಖಾನ್ ಸಮೀಪ ಗುಡ್ಡ ಕುಸಿತಗೊಂಡ ಪರಿಣಾಮ ಮುಂಜಾನೆ ವೇಳೆ ವಾಹನ ಸಂಚಾರಕ್ಕೆ ಮತ್ತೆ ಅಡ್ಡಿಯಾಗಿದೆ. ಸದ್ಯ ಸ್ಥಳದಲ್ಲಿ ತೆರವು ಕಾರ್ಯಾಚರಣೆ ಸಾಗುತ್ತಿದೆ.

    ಇನ್ನು ಕೊಟ್ಟಿಗೆಹಾರ ಬಳಿಯೂ ಭಾರೀ ಮಳೆಯಿಂದ ಚಾರ್ಮಾಡಿ ಘಾಟ್‍ನ ಮಣ್ಣು ರಸ್ತೆ ಕುಸಿದಿದೆ. ರಸ್ತೆಯ ಮೇಲೆ ಬಂಡೆಗಳು, ಮರಗಳು ಉರುಳಿ ಬೀಳುತ್ತಿದ್ದು, ಸವಾರರು ಎಚ್ಚರಿಕೆಯಾಗಿ ಪ್ರಯಾಣಿಸಬೇಕಾಗಿದೆ. ಕಳೆದ ವರ್ಷವೂ ಆಗಸ್ಟ್‌ ತಿಂಗಳಿನಲ್ಲಿ ಹೆಚ್ಚಿನ ಮಳೆಯಿಂದಾಗಿ ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿತ ಸಂಭವಿಸಿತ್ತು. ಇದೀಗ ಮತ್ತೆ ಗುಡ್ಡ ಕುಸಿತದ ಬಗ್ಗೆ ವರದಿಯಾಗುತ್ತಿದೆ.

    ತುಂಗೆಯ ಆರ್ಭಟ ಹೆಚ್ಚಾಗುತ್ತಿದ್ದು ಶೃಂಗೇರಿಯಲ್ಲಿ ನದಿ ತಟದ ಮನೆಗಳಿಗೆ ನೀರು ನುಗ್ಗಿದೆ. ಕಳೆದ ರಾತ್ರಿಯಿಂದಲೇ ತುಂಗಾ ನದಿ ಉಕ್ಕಿ ಹರಿಯುತ್ತಿದ್ದು, ಶೃಂಗೇರಿ ಪಟ್ಟಣದ ಹಲವು ಮನೆಗಳು ಜಲಾವೃತಗೊಂಡಿವೆ.

    ಮಂಗಳೂರು – ಶೃಂಗೇರಿ ಹೆದ್ದಾರಿ ಮೇಲೆ ನೀರು ಉಕ್ಕಿಹರಿಯುತ್ತಿದ್ದು ಸಂಚಾರ ಸ್ಥಗಿತಗೊಂಡಿದೆ. ರಾತ್ರಿಯಿಂದಲೇ ಪ್ರಯಾಣಿಕರು ಪರದಾಟ ನಡೆಸುತ್ತಿದ್ದಾರೆ. ಅಗತ್ಯ ವಸ್ತುಗಳ ಸಾಗಾಟಕ್ಕೆ ಮಳೆ ತೀವ್ರ ಅಡ್ಡಿ ಮಾಡಿದೆ.

    ಅಪಾಯದ ಮಟ್ಟ ಮೀರಿ ಭದ್ರಾ ನದಿ ಹರಿಯುತ್ತಿದ್ದು, ಎನ್ಆರ್ ಪುರ ತಾಲೂಕಿನ ಬಾಳೆಹೊನ್ನೂರು ಪಟ್ಟಣದಲ್ಲಿ ಪ್ರವಾಹ ಭೀತಿ ಸೃಷ್ಟಿಯಾಗಿದೆ. ಬಾಳೆಹೊನ್ನೂರಿನ ಸಂತೆ ಮೈದಾನದ ಕಟ್ಟಡಗಳು, ಮಳಿಗೆಗಳು ಜಲಾವೃತವಾಗಿದೆ. ಬಾಳೆಹೊನ್ನೂರು-ಕಳಸ ಸಂಪರ್ಕ ಕಡಿತಗೊಂಡಿದ್ದು, ರಾತ್ರಿ ಇಡೀ ಸುರಿದ ಮಳೆಗೆ ಜನ ಹೈರಾಣಾಗಿದ್ದಾರೆ.

    BELTHANGADY

    ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

    Published

    on

    ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ಫ್ಲಾಯ್ಡ್ ಮಿಸ್ಕಿತ್ ರಾಷ್ಟ್ರಮಟ್ಟದ ಟಾರ್ಗೆಟ್ ಬಾಲ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ನೇಪಾಳದ ಕಠ್ಮಂಡುವಿನಲ್ಲಿ ಜುಲೈ 8 ರಿಂದ ಜರುಗಿದ ಅಂತರಾಷ್ಟ್ರೀಯ ಮಟ್ಟದ ದಕ್ಷಿಣ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

    ಫ್ಲಾಯ್ಡ್ ಮಿಸ್ಕಿತ್ ಮಡಂತ್ಯಾರು ನಿವಾಸಿ ಬೇಬಿ ಡಯಾನ ಮಿಸ್ಕಿತ್ ಹಾಗೂ ಕ್ಲೌಡಿ ಫ್ರಾನ್ಸಿಸ್ ಮಿಸ್ಕಿತ್ ದಂಪತಿಗಳ ಪುತ್ರರಾಗಿದ್ದು, ಸಿದ್ಧಾರ್ಥ್ ಎಂ.ಸಿ ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಮಮಿತಾ ಹಾಗೂ ಬಿ.ಸಿ.ರೋಡ್ ನ ನ್ಯಾಯವಾದಿ ಪಿ.ಚೆನ್ನಪ್ಪ ಸಾಲಿಯಾನ್ ದಂಪತಿಗಳ ಪುತ್ರರಾಗಿದ್ದಾರೆ.

    ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ವಿಟ್ಲ ತರಬೇತಿ ನೀಡಿರುತ್ತಾರೆ.

    Continue Reading

    BELTHANGADY

    ಬೆಳ್ತಂಗಡಿ: ವಿದ್ಯುತ್‌ ತಗುಲಿ ಯುವಕ ಮೃ*ತ್ಯು

    Published

    on

    ಉಪ್ಪಿನಂಗಡಿ: ಮನೆಯಲ್ಲಿ ವಿದ್ಯುತ್ ಇಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ಫ್ಯೂಸ್ ಹಾಕಲು ತೆರಳಿದ ಯುವಕನೋರ್ವ ವಿದ್ಯುತ್ ಆಘಾ*ತಕ್ಕೆ ಬ*ಲಿಯಾದ ಘಟನೆ ಜು.15ರಂದು ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ.

    ಹರೀಶ (32) ಮೃ*ತ ಯುವಕ. ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ಈತ ಉತ್ತಮ ಕಬಡ್ಡಿ ಆಟಗಾರನೂ ಆಗಿದ್ದು, ತನ್ನ ಮನೆಗೆ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪ್ರವಹಿಸಿ ಈತ ಮೃ*ತಪಟ್ಟಿದ್ದಾರೆ.

    Continue Reading

    BELTHANGADY

    ವಿಧಾನಸಭಾ ಅಧಿವೇಶನ: ಫಝಲ್ ಕೋಯಮ್ಮ ತಂಙಳ್, ನಿರೂಪಕಿ ಅಪರ್ಣಾ ಸಹಿತ ಅಗಲಿದ ಗಣ್ಯರಿಗೆ ಸಂತಾಪ

    Published

    on

    ಬೆಂಗಳೂರು: ವಿಧಾನ ಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಇಂದು ಪೂರ್ವಾಹ್ನ 11 ಗಂಟೆಗೆ ಆರಂಭಗೊಂಡಿತು.

    ಸದನ ಆರಂಭಗೊಳ್ಳುತ್ತಿದ್ದಂತೆ ಸಭಾಧ್ಯಕ್ಷರಾದ ಯು.ಟಿ.ಖಾದರ್‌ ಅವರು ಸಂತಾಪ ಸೂಚಿಸುವ ನಿರ್ಣಯವನ್ನು ಮಂಡಿಸಿ, ಅಗಲಿದ ಗಣ್ಯರ ಕೊಡುಗೆಗಳನ್ನು ಸ್ಮರಿಸಿದರು.

    ಅಗಲಿದ ಗಣ್ಯರಾದ ಧಾರ್ಮಿಕ ಮುಖಂಡ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ (ಕೂರತ್ ತಂಙಳ್), ನಿರೂಪಕಿ ಅಪರ್ಣಾ, ಸಾಹಿತಿ ಕಮಲಾ ಹಂಪನಾ, ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರಿಗೆ ಸದನಗಳ ಸದಸ್ಯರು ಸಂತಾಪ ಅರ್ಪಿಸಿದರು.

    Continue Reading

    LATEST NEWS

    Trending