Friday, August 12, 2022

ಕಾಶ್ಮೀರದಲ್ಲಿ ಭೂ ಕುಸಿತ: ಭಾರತದ ಯೋಧ ಹುತಾತ್ಮ

ಜಮ್ಮು: ಉತ್ತರಾಖಂಡದಲ್ಲಿ ಭೂಕುಸಿತ ಉಂಟಾಗಿ ಗುಡ್ಡದಿಂದ ಉರುಳಿದ ದೊಡ್ಡ ಬಂಡೆ ಬಿದ್ದು ಯೋಧ ಹುತಾತ್ಮರಾಗಿ, ಇನ್ನಿಬ್ಬರು ಗಾಯಗೊಂಡ ಘಟನೆ ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಭಾರತ – ಚೀನಾ ಗಡಿಯ ಬಳಿ ನಡೆದಿದೆ.

ಜಮ್ಮು ಕಾಶ್ಮೀರದ ಸುಖಜಿಂದರ್​ ಸಿಂಗ್​ ಹುತಾತ್ಮ ಯೋಧ.


ಇವರ ಪಾರ್ಥಿವ ಶರೀರವನ್ನು ಸ್ವಗ್ರಾಮಕ್ಕೆ ರವಾನಿಸಲಾಗುತ್ತಿದ್ದು, ಯೋಧನ ಸಾವಿನ ಸುದ್ದಿ ಹುಟ್ಟೂರಿನಲ್ಲಿ ನೀರವ ಮೌನ ಆವರಿಸಿದೆ.

ರಕ್ಷಣಾ ಮೂಲಗಳ ಪ್ರಕಾರ, ಭಾರತ – ಚೀನಾ ಗಡಿಯಲ್ಲಿ ಭೂಕುಸಿತ ಉಂಟಾಗಿದೆ. ಈ ವೇಳೆ, ಗುಡ್ಡದಿಂದ ದೊಡ್ಡ ಬಂಡೆಯೊಂದ ಉರುಳಿ, ಅದೇ ಮಾರ್ಗದಲ್ಲಿ ಗಸ್ತು ತಿರುಗುತ್ತಿದ್ದ ಯೋಧರ ಮೇಲೆ ಬಿದ್ದಿದೆ.


ಇದರಿಂದ ಸುಖಜಿಂದರ್ ಸಿಂಗ್​ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಯೋಧರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರಿನಲ್ಲಿರುವ ರಸ್ತೆ ಹೊಂಡ ಗುಂಡಿಗಳ ವಿರುದ್ಧ patholeseazaadi ಅಭಿಯಾನ

ಮಂಗಳೂರು: ನಗರದ ಬಿಕರ್ನಕಟ್ಟೆ ಕಂಡೆಟ್ಟು ಕ್ರಾಸ್ ಬಳಿ ಕಳೆದ ಆ.5 ರಂದು ರಸ್ತೆ ಗುಂಡಿ ತಪ್ಪಿಸಲು ಹೋಗಿ ಎಂಜಿನಿಯರಿಂಗ್‌ ವಿದ್ಯಾರ್ಥಿ ಆತಿಶ್ (20) ಮೃತಪಟ್ಟ ನಂತರ ರಾಷ್ಟ್ರೀಯ ಹೆದ್ದಾರಿ ಸಹಿತ ಮಂಗಳೂರು ನಗರದಲ್ಲಿರುವ...

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಹಿಟ್‌ ಆ್ಯಂಡ್‌ ರನ್‌: ಓರ್ವ ಸ್ಪಾಟ್‌ ಡೆತ್‌, ಮತ್ತೋರ್ವನಿಗೆ ಗಾಯ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಬದಿ ಹುಲ್ಲು ಕಟಾವು ಮಾಡುತ್ತಿದ್ದ ಕಾರ್ಮಿಕರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಸ್ಥಳದಲ್ಲಿ ನಿಲ್ಲಿಸದೇ ಪರಾರಿಯಾದ ಘಟನೆ ಮಂಗಳೂರು ನಗರದ ಜೆಪ್ಪಿನಮೊಗರುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು...

ಸಂಸದ ಡಾ. ಡಿ.ವಿ ಹೆಗ್ಗಡೆಯವರ ನೂತನ ಕಾರ್ಯಾಲಯ ಉದ್ಘಾಟನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥನ ಕ್ಷೇತ್ರದ ಧರ್ಮಾಧಿಕಾರಿಗಳು ಆಗಿರುವ ಹಾಗು ರಾಜ್ಯ ಸಭೆಯ ಸಂಸದರಾಗಿ ಆಯ್ಕೆಯಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ನೂತನ 'ಸಂಸದರ ಕಾರ್ಯಾಲಯ'ವು ಧರ್ಮಸ್ಥಳದ ಮಂಜೂಷಾ ವಸ್ತು ಸಂಗ್ರಹಾಲಯದ ಬಳಿ ಉದ್ಘಾಟನೆಗೊಂಡಿತು.ಸ್ಥಳೀಯ...