ಮಂಗಳೂರು: ಹಾಸನ ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಅಬ್ಬರ, ಹಿನ್ನೆಲೆಯಲ್ಲಿ ಸಕಲೇಶಪುರದ ಶಿರಾಡಿಘಾಟ್ ರಸ್ತೆಯ ಕೆಲವೆಡೆ ಭೂಕುಸಿತ ಉಂಟಾಗಿದೆ. ಶಿರಾಡಿಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ.
ಮಂಗಳೂರು ತೆರಳುವವರು ಬೇಲೂರು ಮೂಲಕ ಚಾರ್ಮಡಿ ಘಾಟ್ ನಲ್ಲಿ ತೆರಳುವಂತೆ ಸೂಚನೆ ನೀಡಲಾಗಿದೆ. ಮಂಗಳೂರಿಗೆ ತೆರಳುವ ವಾಹನಗಳನ್ನು ಹಾಸನದಿಂದಲೇ ಚಾರ್ಮಾಡಿ ಘಾಟ್ ರಸ್ತೆಯ ಮೂಲಕ ಪೊಲೀಸರು ಕಳುಹಿಸುತ್ತಿದ್ದಾರೆ.
ಜೊತೆಗೆ ಮೂಡಿಗೆರೆ, ಹಾನಬಾಳು, ಕೊಟ್ಟಿಗೆಹಾರದ ಮೂಲಕ ಬದಲಿ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಸ್ಥಳಕ್ಕೆ ಎಸಿ ಪ್ರತೀಕ್, ತಹಶಿಲ್ದಾರ್ ಜಯಕುಮಾರ್, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಭಕ್ತಾದಿಗಳಿಗೆ ತೊಂದರೆ
ಕೆಲದಿನಗಳ ಹಿಂದೆ ದೇವಸ್ಥಾನ ಬಾಗಿಲು ತೆರೆಯಲು ಅವಕಾಶ ಮಾಡಿಕೊಡಲಾಗಿತ್ತು. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಇದೇ ರಸ್ತೆಯ ಮೂಲಕ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಹಾಗೂ ಮಂಗಳೂರು-ಬೆಂಗಳೂರು ಸಂಪರ್ಕಿಸುವ ಹೆದ್ದಾರಿಯು ಸಂಪೂರ್ಣ ಬಂದ್ ಮಾಡಲಾಗಿದೆ.