Connect with us

    BELTHANGADY

    ಡಾ, ಬಿ. ಯಶೋವರ್ಮಾ ಪಾರ್ಥಿವ ಶರೀರ ನಾಳೆ ಉಜಿರೆಗೆ : ಎಸ್‌ಡಿಎಂ ಕಾಲೇಜಿನ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ..

    Published

    on

    ಬೆಳ್ತಂಗಡಿ :  ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಹಾಗೂ ಎಸ್‌ ಡಿಎಂ ಕಾಲೇಜಿನ ಮಾಜಿ ಪ್ರಾಂಸುಪಾಲ ಡಾ, ಬಿ. ಯಶೋವರ್ಮಾ ಅವರು ನಿಧನರಾಗಿದ್ದಾರೆ.

    ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಕೆಲವು ತಿಂಗಳಿನಿಂದ ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದ್ದಾರೆ. ಪಾರ್ಥೀವ ಶರೀರವನ್ನು ನಾಳೆ ಉಜಿರೆಗೆ ತರಲಾಗುತ್ತಿದೆ.

    ಶಿಸ್ತಿನ ಮಾರ್ಗದರ್ಶಕರಾದ ಡಾ.ಬಿ.ಯಶೋವರ್ಮರನ್ನು ಗೌರವಯುತವಾಗಿ ಬೀಳ್ಕೊಡುವ ಕುರಿತು ಉಜಿರೆ ಎಸ್ ಡಿ ಎಂ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಸಮಾಲೋಚನ ಸಭೆ ನಡೆಯಿತು.

    ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಯಶೋವರ್ಮರ ಪಾರ್ಥೀವ ಶರೀರದ ಅಂತಿಮ ದರ್ಶನದ ವ್ಯವಸ್ಥೆ ಬಗ್ಗೆ ಚರ್ಚಿಸಲಾಯಿತು.

    ಈ ಸಂಬಂಧ ಉಜಿರೆ ಕಾಲೇಜಿನಲ್ಲಿ ನಡೆದ ಸಮಾಲೋಚನಾ ಸಭೆಯ ನೇತೃತ್ವ ವಹಿಸಿ ಮಾತನಾಡಿದ ಶಾಸಕರು ಉಜಿರೆ ಗ್ರಾಮವಲ್ಲದೆ ಇಡೀ ನಾಡಿನ ಶಿಕ್ಷಣ ವ್ಯವಸ್ಥೆಗೆ ಪ್ರೊಫೆಸರ್ ಯಶೋವರ್ಮರವರು ಅನನ್ಯ ಕಾಣಿಕೆಯನ್ನು ನೀಡಿದ್ದು, ಅವರ ಅಂತಿಮ ಯಾತ್ರೆಯು ಗೌರವಯುತವಾಗಿ ನಡೆಸುವಂತೆ ಸಹಕಾರ ನೀಡಬೇಕೆಂದು ಕೋರಿದರು.

    ಪಾರ್ಥೀವ ಶರೀರ ಬೆಂಗಳೂರಿನಿಂದ ಬೆಳಗ್ಗೆ ಹೊರಟು ಮಧ್ಯಾಹ್ನ 12.30 ರ ಸುಮಾರಿಗೆ ಚಾರ್ಮಾಡಿ ತಲುಪಲಿದೆ.

    ನಂತರ ಚಾರ್ಮಾಡಿಯಿಂದ ವಾಹನ ಜಾಥದ ಮೂಲಕ ಉಜಿರೆಗೆ ತಲುಪಿ, ಉಜಿರೆಯಿಂದ ಪಾದಯಾತ್ರೆಯ ಮೂಲಕ ಕಾಲೇಜಿನ ಆವರಣಕ್ಕೆ ಕರೆತಂದು ಅಂತಿಮ‌ ದರ್ಶನಕ್ಕೆ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ.

    ಮಧ್ಯಾಹ್ನ 2 ರಿಂದ 5:30 ರವರೆಗೆ ಕಾಲೇಜಿನ ಆವರಣದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಂತಿಮ ದರ್ಶನದ ನಂತರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ನಡೆಯಲಿದೆ.

    Click to comment

    Leave a Reply

    Your email address will not be published. Required fields are marked *

    BELTHANGADY

    ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

    Published

    on

    ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ಫ್ಲಾಯ್ಡ್ ಮಿಸ್ಕಿತ್ ರಾಷ್ಟ್ರಮಟ್ಟದ ಟಾರ್ಗೆಟ್ ಬಾಲ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ನೇಪಾಳದ ಕಠ್ಮಂಡುವಿನಲ್ಲಿ ಜುಲೈ 8 ರಿಂದ ಜರುಗಿದ ಅಂತರಾಷ್ಟ್ರೀಯ ಮಟ್ಟದ ದಕ್ಷಿಣ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

    ಫ್ಲಾಯ್ಡ್ ಮಿಸ್ಕಿತ್ ಮಡಂತ್ಯಾರು ನಿವಾಸಿ ಬೇಬಿ ಡಯಾನ ಮಿಸ್ಕಿತ್ ಹಾಗೂ ಕ್ಲೌಡಿ ಫ್ರಾನ್ಸಿಸ್ ಮಿಸ್ಕಿತ್ ದಂಪತಿಗಳ ಪುತ್ರರಾಗಿದ್ದು, ಸಿದ್ಧಾರ್ಥ್ ಎಂ.ಸಿ ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಮಮಿತಾ ಹಾಗೂ ಬಿ.ಸಿ.ರೋಡ್ ನ ನ್ಯಾಯವಾದಿ ಪಿ.ಚೆನ್ನಪ್ಪ ಸಾಲಿಯಾನ್ ದಂಪತಿಗಳ ಪುತ್ರರಾಗಿದ್ದಾರೆ.

    ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ವಿಟ್ಲ ತರಬೇತಿ ನೀಡಿರುತ್ತಾರೆ.

    Continue Reading

    BELTHANGADY

    ಬೆಳ್ತಂಗಡಿ: ವಿದ್ಯುತ್‌ ತಗುಲಿ ಯುವಕ ಮೃ*ತ್ಯು

    Published

    on

    ಉಪ್ಪಿನಂಗಡಿ: ಮನೆಯಲ್ಲಿ ವಿದ್ಯುತ್ ಇಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ಫ್ಯೂಸ್ ಹಾಕಲು ತೆರಳಿದ ಯುವಕನೋರ್ವ ವಿದ್ಯುತ್ ಆಘಾ*ತಕ್ಕೆ ಬ*ಲಿಯಾದ ಘಟನೆ ಜು.15ರಂದು ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ.

    ಹರೀಶ (32) ಮೃ*ತ ಯುವಕ. ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ಈತ ಉತ್ತಮ ಕಬಡ್ಡಿ ಆಟಗಾರನೂ ಆಗಿದ್ದು, ತನ್ನ ಮನೆಗೆ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪ್ರವಹಿಸಿ ಈತ ಮೃ*ತಪಟ್ಟಿದ್ದಾರೆ.

    Continue Reading

    BELTHANGADY

    ವಿಧಾನಸಭಾ ಅಧಿವೇಶನ: ಫಝಲ್ ಕೋಯಮ್ಮ ತಂಙಳ್, ನಿರೂಪಕಿ ಅಪರ್ಣಾ ಸಹಿತ ಅಗಲಿದ ಗಣ್ಯರಿಗೆ ಸಂತಾಪ

    Published

    on

    ಬೆಂಗಳೂರು: ವಿಧಾನ ಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಇಂದು ಪೂರ್ವಾಹ್ನ 11 ಗಂಟೆಗೆ ಆರಂಭಗೊಂಡಿತು.

    ಸದನ ಆರಂಭಗೊಳ್ಳುತ್ತಿದ್ದಂತೆ ಸಭಾಧ್ಯಕ್ಷರಾದ ಯು.ಟಿ.ಖಾದರ್‌ ಅವರು ಸಂತಾಪ ಸೂಚಿಸುವ ನಿರ್ಣಯವನ್ನು ಮಂಡಿಸಿ, ಅಗಲಿದ ಗಣ್ಯರ ಕೊಡುಗೆಗಳನ್ನು ಸ್ಮರಿಸಿದರು.

    ಅಗಲಿದ ಗಣ್ಯರಾದ ಧಾರ್ಮಿಕ ಮುಖಂಡ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ (ಕೂರತ್ ತಂಙಳ್), ನಿರೂಪಕಿ ಅಪರ್ಣಾ, ಸಾಹಿತಿ ಕಮಲಾ ಹಂಪನಾ, ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರಿಗೆ ಸದನಗಳ ಸದಸ್ಯರು ಸಂತಾಪ ಅರ್ಪಿಸಿದರು.

    Continue Reading

    LATEST NEWS

    Trending