Connect with us

MANGALORE

ಹಿಂಜಾವೇ ಸುರತ್ಕಲ್ ವತಿಯಿಂದ ಕಾಪ್ಟರ್‌ನಲ್ಲಿ ಮಡಿದವರಿಗೆ ಶ್ರದ್ದಾಂಜಲಿ

Published

on

ಮಂಗಳೂರು: ತಮಿಳುನಾಡಿನ ಕುನ್ನೂರಿನಲ್ಲಿ ನಡೆದ ಹೆಲಿಕಾಪ್ಟರ್‌ ದುರಂತದಲ್ಲಿ, ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ (CDS) ಬಿಪಿನ್‌ ರಾವತ್‌ ಸಹಿತ ಅವರ ಪತ್ನಿ ಮತ್ತು ಇತರ ವೀರ ಯೋಧರು ಮರಣಕ್ಕೀಡಾಗಿರುವುದು ಬಹಳ ದುರದೃಷ್ಟಕರ.

ಹಾಗೂ ತೀವ್ರ ದುಃಖದ ಸಂಗತಿ, ಇದು ಭಾರತ ದೇಶಕ್ಕೆ ತುಂಬಲಾಗದ ನಷ್ಟ ಮಾತ್ರವಲ್ಲದೆ ಭಾರತದ ರಕ್ಷಣಾ ವ್ಯವಸ್ಧೆಗೆ ನಿಜಕ್ಕೂ ಆಘಾತಕಾರಿ ವಿಷಯವಾಗಿದೆ.

ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಕುಟುಂಬ ವರ್ಗಕ್ಕೆ ಈ ನೋವು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಆಶಿಸಲಿ ಮಡಿದಂತಹ ವೀರರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಮರ್ಪಣೆಯನ್ನು ಹಿಂದು ಜಾಗರಣ ವೇದಿಕೆ ಸುರತ್ಕಲ್ ನಗರದ ವತಿಯಿಂದ ಕಾಟಿಪಳ್ಳದಲ್ಲಿ ನಡೆಸಲಾಯಿತು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ವಸಂತ ಕಾಟಿಪಳ್ಳ,

ತುಕರಾಮ್ ಕಾಟಿಪಳ್ಳ, ಹಿಂಜಾವೇ ಪ್ರಮುಖರಾದ ಬಾಲಕೃಷ್ಣ ಮುಂಚೂರು, ಭಾವನಿ ಶಂಕರ್, ದೀಪಕ್ ಚೇಳರ್, ನಿತಿನ್ ಕಾಟಿಪಳ್ಳ, ಬಾಲು ಗುರುನಗರ,

ಭರತ್ ಜನತಾ ಕಾಲೋನಿ, ರೂಪೇಶ್ ಇಡ್ಯ, ಬಾಬಿನ್, ಪ್ರಮುಖರಾದ ಲೋಕೇಶ್ ಬೊಳ್ಳಾಜೆ, ರಮೇಶ್ ಕುಳಾಯಿ, ರವಿಂದ್ರ ತೋಕುರು,

ರಾಮಚಂದ್ರ ಶೆಟ್ಟಿಗಾರ್, ಕೇಶವ ಕುಳಾಯಿ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

DAKSHINA KANNADA

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ

Published

on

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.

Continue Reading

DAKSHINA KANNADA

ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ

Published

on

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಮಂಗಳೂರಿನಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಮಂಗಳೂರಿನ ಕಪಿತಾನಿಯೋ ಶಾಲೆಯ ಮತಗಟ್ಟೆಗೆ ತನ್ನ ಪತ್ನಿ ಹಾಗೂ ಮಗಳ ಜೊತೆ ಆಗಮಿಸಿ ಮತ ಚಲಾಯಿಸಿದ್ದಾರೆ.

ಮುಂಜಾನೆ ಏಳುಗಂಟೆಗೆ ಮತಗಟ್ಟೆಗೆ ಆಗಮಿಸಿದ ಪದ್ಮರಾಜ್ ಅವರು ಬರುವ ವೇಳೆಗೆ ಜನರು ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದರು. ಹೀಗಾಗಿ ಪದ್ಮರಾಜ್ ಹಾಗೂ ಅವರ ಪತ್ನಿ ಮತ್ತು ಮಗಳು ಸರತಿ ಸಾಲಿನಲ್ಲಿ ನಿಂತೇ ಮತ ಚಲಾಯಿಸಿದ್ದಾರೆ. ಪದ್ಮರಾಜ್ ಆಗಮಿಸುವ ವೇಳೆ ಅವರ ಸಾಕಷ್ಟು ಅಭಿಮಾನಿಗಳು ಮತಗಟ್ಟೆಯ  ಹೊರಗೆ ನಿಂತು ಅವರಿಗೆ ಶುಭ ಕೋರಿದ್ದಾರೆ.

 

ಮತದಾನ ಮಾಡಿದ ಪದ್ಮರಾಜ್ ಬಳಿಕ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ವೀಕ್ಷಣೆಗೆ ತೆರಳಿದ್ದಾರೆ.

Continue Reading

LATEST NEWS

Trending