Sunday, May 22, 2022

ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ತುಸು ಚೇತರಿಕೆ: ‘ಸುಳ್ಳುಸುದ್ದಿಗೆ ಕಿವಿಗೊಡಬೇಡಿ’

ಮುಂಬೈ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯದಲ್ಲಿ ತುಸು ಚೇತರಿಕೆ ಕಂಡಿದೆ ಎಂದು ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ.ಪ್ರತೀತ್ ಸಮ್ದಾನಿ ಮಾಹಿತಿ ನೀಡಿದ್ದಾರೆ.


ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರೆಸಲಾಗುತ್ತಿದೆ. ಈ ತಿಂಗಳ ಆರಂಭದಲ್ಲಿ ಲತಾ ಮಂಗೇಶ್ಕರ್ ಅವರಿಗೆ ಕೊರೊನಾ ಪಾಸಿಟಿವ್ ಆಗಿತ್ತು.

ನಂತರ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿತ್ತು. ಇತ್ತೀಚೆಗೆ ಲತಾ ಅವರ ಆರೋಗ್ಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿ ಹಂಚಿಕೆಯಾಗಿತ್ತು.

ಅದನ್ನು ಉಲ್ಲೇಖಿಸಿ ಲತಾ ಮಂಗೇಶ್ಕರ್ ವಕ್ತಾರರು ಗಾಯಕಿಯ ಖಾತೆಯಿಂದ ಟ್ವೀಟ್ ಮಾಡಿ, ‘92 ವರ್ಷದ ಲತಾ ಅವರು ಐಸಿಯುವಿನಲ್ಲಿದ್ದಾರೆ. ಚಿಕಿತ್ಸೆ ಮುಂದುವರೆಯುತ್ತಿದೆ. ಯಾರೂ ತಪ್ಪು ಮಾಹಿತಿ ಅಥವಾ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ’’ ಎಂದು ತಿಳಿಸಿದ್ದರು

LEAVE A REPLY

Please enter your comment!
Please enter your name here

Hot Topics

ಯಮುನೋತ್ರಿ ದೇವಸ್ಥಾನಕ್ಕೆ ಹೋಗುವ ರಸ್ತೆ ಕುಸಿತ: ಸಂಕಷ್ಟದಲ್ಲಿ 10 ಸಾವಿರ ಯಾತ್ರಿಕರು

ಬಂದಾರ್: ಹಿಂದೂಗಳ ನಾಲ್ಕು ಪ್ರಮುಖ ಯಾತ್ರಾಸ್ಥಳಗಳಲ್ಲೊಂದಾದ ಉತ್ತರಾಖಂಡ್‌ನ ಯಮುನೋತ್ರಿ ದೇವಸ್ಥಾನಕ್ಕೆ ಹೋಗುವ ಹೆದ್ದಾರಿಯ ಭದ್ರತಾ ಗೋಡೆ ಕುಸಿದಿದ್ದು, ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಇದರಿಂದ 10,000 ಜನರು ಹೆದ್ದಾರಿಯ ವಿವಿಧೆಡೆ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.ಮೂಲಗಳ...

ಪೆಟ್ರೋಲ್‌-ಡೀಸೆಲ್‌ ದರ ಇಳಿಕೆ ಬೆನ್ನಲ್ಲೇ ಗ್ಯಾಸ್‌ಗೆ 200 ರೂ ಸಬ್ಸಿಡಿ ಘೋಷಿಸಿದ ಕೇಂದ್ರ

ನವದೆಹಲಿ: ಪೆಟ್ರೋಲ್‌-ಡೀಸೆಲ್‌ ಬೆಲೆ ಕಡಿಮೆ ಮಾಡಿದ ಬೆನ್ನಲ್ಲೇ ಮತ್ತೊಂದು ಮಹತ್ವದ ಘೋಷಣೆಯನ್ನು ಕೂಡ ನಿರ್ಮಲಾ ಸೀತಾರಾಮನ್ ಮಾಡಿದ್ದಾರೆ.ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ 12 ಎಲ್‌ಪಿಜಿ ಸಿಲಿಂಡರ್‌ಗಳವರೆಗೆ ಪ್ರತಿ ಸಿಲಿಂಡರ್‌ಗೆ 200 ರೂ...

ವಿಟ್ಲ: ಮನೆಯ ಹೆಂಚು ತೆಗೆದು ಒಳನುಗ್ಗಿ ಲಕ್ಷಾಂತರ ಸೊತ್ತು ಕಳವು

ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಹೆಂಚು ತೆಗೆದು ಮನೆಯೊಳಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವಾದ ಬಗ್ಗೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕಟ್ಟೆ ಮನೆಯ...