Connect with us

DAKSHINA KANNADA

ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಯತ್ನ ಪ್ರಕರಣ : ತಲೆಮರೆಸಿಕೊಂಡ ವಕೀಲ ರಾಜೇಶ್ ಪತ್ತೆಗಾಗಿ ಲುಕ್‌ ಔಟ್ ನೋಟೀಸ್..!

Published

on

ಮಂಗಳೂರು : ಮಂಗಳೂರಿನ ಕಾನೂನು ವಿದ್ಯಾರ್ಥಿನಿಗೆ ವಕೀಲನಿಂದಲೇ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಲೆಮರೆಸಿಕೊಂಡಿರುವ ವಕೀಲ ಕೆ.ಎಸ್.ಎನ್ ರಾಜೇಶ್ ಗಾಗಿ  ಮಂಗಳೂರು ಪೊಲಿಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.

ದೇಶ ಬಿಟ್ಟು ತೆರಳದಂತೆ ವಿಮಾನ ನಿಲ್ದಾಣಗಳಿಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ ಮತ್ತು ಎಲ್ಲಾ ಬ್ಯಾಂಕ್ ಅಕೌಂಟ್ ಗಳನ್ನು ಫ್ರೀಝ್ ಮಾಡಿದ್ದಾರೆ.

ಸಂತ್ರಸ್ಥೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಒಂದು ತಿಂಗಳಾಗಿದ್ದರೂ ಇನ್ನು ಕೂಡ ಆರೋಪಿಯನ್ನು ಪತ್ತೆ ಹಚ್ಚಲು ಮಂಗಳೂರು ಪೊಲೀಸರು ವಿಫಲರಾಗಿದ್ದಾರೆ.

ಪೊಲೀಸರೊಂದಿಗೆ ಕಣ್ಣಮುಚ್ಚಾಲೆ ಆಟ ಆಡುತ್ತಿರುವ ಅತ್ಯಾಚಾರ ಯತ್ನದ ಆರೋಪಿ ರಾಜೇಶ್ ಬಂಧನ ವಿಳಂಬ ಆನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಈಗಾಗಲೇ ಮಂಗಳೂರು ಪೊಲೀಸ್ ಕಮಿಷನರ್ ನಾಲ್ಕು ತಂಡಗಳನ್ನು ರಚನೆ ಮಾಡಿದ್ರೂ ಆರೋಪಿ ರಾಜೆಶ್ ಬಂಧನ ಸಾಧ್ಯವಾಗಿಲ್ಲ.

ಇದೀಗ ಆತನ ಪತ್ತೆ ಇದೀಗ ಆರು ತಂಡಗಳನ್ನು ರಚನೆ ಮಾಡಲಾಗಿದೆ. ತಮಿಳುನಾಡು, ಆಂಧ್ರ ಪ್ರದೇಶ, ಕೇರಳ, ಮಹಾರಾಷ್ಟ್ರ ಪೊಲೀಸರ ನೆರವನ್ನು ಕೋರಲಾಗಿದೆ.

ಈ ಮಧ್ಯೆ ವಿದಾರ್ಥಿ ಸಂಘಟನೆಗಳು ಹೋರಾಟ ತೀವ್ರಗೊಳಿಸಲು ರೂಪು ರೇಷೆಗಳನ್ನು ಸಿದ್ದಪಡಿಸುತ್ತಿದ್ದು ಇನ್ನೆರಡು ದಿನಗಳಲ್ಲಿ ಈ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುವುದು ಎಂದು ವಿದ್ಯಾರ್ಥಿ ನಾಯಕರು ಮಾಹಿತಿ ನೀಡಿದ್ದಾರೆ.

ಘಟನೆಯ ಹಿನ್ನೆಲೆ : ನಗರದ ಕಾನೂನು ಮಹಾ ವಿದ್ಯಾಲಯದಲ್ಲಿ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ ಆಗಸ್ಟ್‌ 8ರಿಂದ ನ್ಯಾಯವಾದಿಯ ಕರಂಗಲ್ಪಾಡಿ ಕಚೇರಿಯಲ್ಲಿ ಇಂಟರ್ನ್‌ಶಿಪ್‌ಗೆ ಸೇರಿದ್ದರು.

ಈ ನಡುವೆ ವಕೀಲ ರಾಜೇಶ್‌ ಭಟ್ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದನೆಂದು ಆರೋಪಿಸಲಾಗಿದೆ. ಸೆ. 25ರಂದು ತನ್ನ ಚೇಂಬರ್‌ಗೆ ಕರೆದು ಅಸಭ್ಯವಾಗಿ ವರ್ತಿಸಿದ್ದು, ಅತ್ಯಾಚಾರಕ್ಕೆ ಯತ್ನಿಸಿದ್ದಾಗಿ ಯುವತಿ ದೂರಿನಲ್ಲಿ ತಿಳಿಸಿದ್ದರು.

DAKSHINA KANNADA

‘ರಾಷ್ಟ್ರೀಯ ಯುವ ದಿನ’ ವನ್ನು ಆಚರಿಸುವ ಉದ್ದೇಶವೇನು ಗೊತ್ತಾ ?

Published

on

ರಾಷ್ಟ್ರೀಯ ಯುವ ದಿನ 2025 : ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನವನ್ನು ರಾಷ್ಟ್ರೀಯ ಯುವ ದಿವಸ್ ಎಂದು ಆಚರಿಸಲಾಗುತ್ತದೆ. ಯುವಕರನ್ನು ಪ್ರೇರೇಪಿಸುವಂತಹ ಸ್ವಾಮಿ ವಿವೇಕಾನಂದರ ವಿಚಾರಗಳನ್ನು ಸುತ್ತ ಹರಡಿಸಿ ದೇಶಕ್ಕೆ ಉತ್ತಮ ಭವಿಷ್ಯವನ್ನು ರೂಪಿಸುವುದು ಈ ಆಚರಣೆಯ ಹಿಂದಿನ ಮುಖ್ಯ ಉದ್ದೇಶವಾಗಿದೆ.

‘ರಾಷ್ಟ್ರೀಯ ಯುವ ದಿನ’ ದ ಇತಿಹಾಸ:

ಒಂದು ದೇಶದ ಅಭಿವೃದ್ಧಿಯು ಆ ದೇಶದ ಯುವ ಜನತೆಯ ಮೇಲೆ ಅವಲಂಬಿತವಾಗಿದೆ. ಹೀಗಿರುವಾಗ ಸರಿಯಾದ ದಾರಿಯಲ್ಲಿ ಸಾಗಲು ಯುವ ಜನತೆಯನ್ನು ಪ್ರೇರೇಪಿಸಲು ಸರಿಯಾದ ಮಾರ್ಗದರ್ಶನ ನೀಡುವುದು ಬಹಳ ಮುಖ್ಯವಾಗಿದೆ. ಈ ಉದ್ದೇಶದಿಂದ ಭಾರತ ಸರ್ಕಾರವು 1984 ರಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನವನ್ನು ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸಲು ನಿರ್ಧರಿಸಿತು. ಈ ಬಳಿಕ 1985 ರಲ್ಲಿ ಮೊದಲ ಬಾರಿಗೆ ಭಾರತದಲ್ಲಿ ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು. ಅಂದಿನಿಂದ ಪ್ರತಿವರ್ಷ ಸ್ವಾಮಿ ವಿವೇಕಾನಂದರ ಜನ್ಮದಿನವಾದ ಜನವರಿ 12 ರಂದು ರಾಷ್ಟ್ರೀಯ ಯುವ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ಸ್ವಾಮಿ ವಿವೇಕಾನಂದರ ಜನ್ಮದಿನದಂದು ಪ್ರತಿ ವರ್ಷ ರಾಮಕೃಷ್ಣ ಮಠ, ರಾಮಕೃಷ್ಣ ಮಿಷನ್ ಮತ್ತು ಅವರ ಶಾಖೆಗಳ ಅನೇಕ ಕೇಂದ್ರಗಳಲ್ಲಿ ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯದ ಪ್ರಕಾರ ಸಂಭ್ರಮದಿಂದ ಆಚರಿಸಲಾಗುತ್ತದೆ. ಮಹಾ ಮಂಗಳ ಆರತಿ, ಭಕ್ತಿಗೀತೆಗಳು, ಧ್ಯಾನ, ಧಾರ್ಮಿಕ ಭಾಷಣ, ಸಂಧ್ಯಾ ಆರತಿ ಮುಂತಾದವುಗಳನ್ನು ನಡೆಸಲಾಗುತ್ತದೆ. ಅಲ್ಲದೆ, ವಿವಿಧ ಶಾಲಾ-ಕಾಲೇಜುಗಳಲ್ಲಿ ಮೆರವಣಿಗೆ, ಸ್ವಾಮಿ ವಿವೇಕಾನಂದರ ಕುರಿತು ಭಾಷಣ, ವಾಚನಗೋಷ್ಠಿಗಳು, ಹಾಡುಗಳು, ಸಮಾವೇಶಗಳು, ಪ್ರಬಂಧ-ಬರಹ ಸ್ಪರ್ಧೆಗಳು, ಸೆಮಿನಾರ್‌ಗಳು ಇತ್ಯಾದಿಗಳನ್ನು ಪ್ರದರ್ಶಿಸುವ ಮೂಲಕ ಆಚರಿಸಲಾಗುತ್ತದೆ. ಭಾರತೀಯ ಯುವಜನರ ಬರಹಗಳು ಮತ್ತು ಸ್ವಾಮಿ ವಿವೇಕಾನಂದರ ಉಪನ್ಯಾಸಗಳನ್ನು ಪ್ರೇರೇಪಿಸಲು ಸಹ ನಡೆಸಲಾಗುತ್ತದೆ. ವಿದ್ಯಾರ್ಥಿಗಳಿಂದ. ಶಿಕ್ಷಣವನ್ನು ಉತ್ತೇಜಿಸಲು, ಯುವಕರಲ್ಲಿ ನಂಬಿಕೆಯನ್ನು ಉತ್ತೇಜಿಸಲು, ದೇಶವನ್ನು ಅಭಿವೃದ್ಧಿಪಡಿಸಲು ಭಾರತದಲ್ಲಿ ಮಾತ್ರವಲ್ಲದೆ ದೇಶದ ಹೊರಗೆ ಹಲವಾರು ಸ್ಪರ್ಧೆಗಳನ್ನು ನಡೆಸಲಾಗುತ್ತದೆ.

Continue Reading

DAKSHINA KANNADA

ಯಕ್ಷಬೊಳ್ಳಿ ಕಡಬ ದಿನೇಶ್ ರೈ ಕಲಾಯಾನದ ರಜತ ಸಂಭ್ರಮ ದಿನ ಮುಂದೂಡಿಕೆ

Published

on

ಮಂಗಳೂರು : ಯಕ್ಷಬೊಳ್ಳಿ ಅಭಿಮಾನಿ ಬಳಗ ಮತ್ತು ಯಕ್ಷಾಭಿಮಾನಿಗಳು ಕಡಬ ನೇತೃತ್ವದಲ್ಲಿ ಯಕ್ಷಗಾನ ಹಾಸ್ಯ ಕಲಾವಿದ ಯಕ್ಷಬೊಳ್ಳಿ ಕಡಬ ದಿನೇಶ್ ರೈ ‘ಕಲಾ ಯಾನದ ರಜತ ಸಂಭ್ರಮ- ಬೊಳ್ಳಿ ಪರ್ಬ- 25’ ಕಾರ್ಯಕ್ರಮ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ಕ್ಷೇತ್ರದ ವಠಾರದಲ್ಲಿ ಆಯೋಜಿಸಲಾಗಿದ್ದು, ಇದೀಗ ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ.

ಜನವರಿ 22ನೇ ತಾರೀಕು ಬುಧವಾರ ನಡೆಯಬೇಕಿದ್ದ ಕಾರ್ಯಕ್ರಮವನ್ನು ಇದೀಗ ಕಾರಣಾಂತರಗಳಿಂದ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಶೀಘ್ರವೇ ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಗುವುದು.

ಕಡಬ ದಿನೇಶ ರೈ ಕಲಾಸೇವೆ ವಿವರ :

ಕಡಬ ದಿನೇಶ ರೈ ಪ್ರಾರಂಭದಲ್ಲಿ ಶ್ರೀ ಧರ್ಮಸ್ಥಳ ಮೇಳದಲ್ಲಿ ಸೇವೆ ಸಲ್ಲಿಸಿ, ಬಳಿಕ ಶ್ರೀ ಕ್ಷೇತ್ರ ಕಟೀಲು, ಪುತ್ತೂರು ಮೇಳ, ಕುಂಟಾರು ಮೇಳ, ಮಂಗಳಾದೇವಿ ಮೇಳ, ತೆಂಕು – ಬಡಗು ಸಮ್ಮಿಶ್ರಗೊಂಡ ಹಿರಿಯಡ್ಕಮೇಳ, ತಳಕಲ ಮೇಳ, ಸುಂಕದಕಟ್ಟೆ ಮೇಳ, ಬಾಚಕೆರೆ ಮೇಳ, ಪ್ರಸ್ತುತ ಗೆಜ್ಜೆಗಿರಿ ಮೇಳದಲ್ಲಿ ಹಾಸ್ಯ ಕಲಾವಿದರಾಗಿ ಸೇವೆಗೈಯುತ್ತಿದ್ದಾರೆ.

ರವಿ ಕುಮಾರ್ ಸುರತ್ಕಲ್ ರಚಿಸಿದ ನಾಗತಂಬಿಲದ ಕೂಸಮ್ಮ (ನಂಜುಂಡ)ನ ಪಾತ್ರ ಯಕ್ಷ ರಂಗದಲ್ಲಿ ಹೊಸ ತಿರುವು ತಂದು ಕೊಟ್ಟಿತ್ತು. ನಾಗರಪಂಚಮಿಯ ನೋಣಯ್ಯ, ವಜ್ರ ಕುಟುಂಬದ ಕಪಟ ಸ್ವಾಮೀಜಿ, ಪವಿತ್ರ ಪಲ್ಲವಿಯ ಪದ್ಮಾವತಿ, (ಪದ್ದು) ಚೆನ್ನಿ- ಚೆನ್ನಮ್ಮದ ಪುರುಷೋತ್ತಮ, ವಿಜಯಕೇಸರಿಯ ಮಾರುತಿ, ಜೀವನಚಕ್ರದ ನಿಷ್ಠಾವಂತ ಸೇವಕ, ಗುಳಿಗೋದ್ಭವ ಪಂಜುರ್ಲಿ – ಪ್ರತಾಪ ದ ಗೋಪಾಲ, ಹಾಗೂ ಚಂದ್ರ, ಮನ ಸೂರೆಗೊಂಡ ಪಾತ್ರಗಳು. ತೆಂಕು -ಬಡಗಿನಲ್ಲಿ ತುಳು – ಕನ್ನಡದಲ್ಲಿ ಪೌರಾ ಣಿಕ, ಸಾಮಾಜಿಕ, ಐತಿಹಾಸಿಕ ಯಾವುದೇ ಪ್ರಸಂಗವಾದರೂ ಕಥೆಗೆ ಲೋಪ ಬಾರದಂತೆ ತಮ್ಮದೇ ಶೈಲಿಯ ಹಾಸ್ಯದಲ್ಲಿ ಜನರನ್ನು ರಂಜಿಸುತ್ತಿದ್ದಾರೆ. ಯಕ್ಷಗಾನ ಮಾತ್ರವಲ್ಲದೆ ನಾಟಕ, ತುಳು ಸಿನೆಮಾ, ಧಾರಾವಾಹಿಗಳಲ್ಲಿ ನಟಿಸಿದ್ದಾರೆ.

ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಕಡಬ ದಿನೇಶ ರೈ ಗೆ ಇರುವೈಲು ಶ್ರೀ ಸತ್ಯನಾರಾಯಣ ಪೂಜಾ ಸೇವಾ ಸಮಿತಿ ‘ಯಕ್ಷ ಬೊಳ್ಳಿ’ ಎಂಬ ಬಿರುದು ನೀಡಿ ಗೌರವಿಸಿದೆ.

Continue Reading

DAKSHINA KANNADA

ಪುತ್ತೂರು : ಖತರ್ನಾಕ್ ಮನೆಗಳ್ಳ ಅರೆಸ್ಟ್; ತನಿಖೆ ವೇಳೆ ಬಹಿರಂಗವಾಯ್ತು ಹಲವು ಪ್ರಕರಣ

Published

on

ಪುತ್ತೂರು : ಪುತ್ತೂರು ಗ್ರಾಮಾಂತರ, ವಿಟ್ಲ, ಕಡಬ ಪೊಲೀಸರು ಕಾರ್ಯಾಚರಣೆ ನಡೆಸಿ ಖತರ್ನಾಕ್ ಮನೆಗಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಸರಗೋಡಿನ ಸೂರಜ್ ಕೆ(36) ಬಂಧಿತ ಕಳ್ಳ.  ಡಿಸೆಂಬರ್ 20 ರಂದು ಭಕ್ತಕೋಡಿ ಎಂಬಲ್ಲಿ ಮನೆಯ ಹಿಂಬಾಗಿಲು ಮುರಿದು ಆರೋಪಿ ಸೂರಜ್ ಚಿನ್ನಾಭರಣಗಳನ್ನು ಕದ್ದಿದ್ದ. ಇದೇ ರೀತಿಯ ಪ್ರಕರಣಗಳು ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಬೆಳಕಿಗೆ ಬಂದಿತ್ತು.

ಕಳ್ಳನ ಜಾಡು ಹಿಡಿದು ಹೊರಟ ಪೊಲೀಸರು ಕಾರು ಸಮೇತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತನಿಖೆ ವೇಳೆ ಆತ ಹಲವು ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂಬುದು ಬಯಲಾಗಿದೆ.  ಪುತ್ತೂರು ಗ್ರಾಮಾಂತರ ಠಾಣಾ ಸರಹದ್ದಿನ ಸರ್ವೆ ಗ್ರಾಮದ ಭಕ್ತಕೋಡಿ, ಕಡಬ ಠಾಣಾ ವ್ಯಾಪ್ತಿಯ ಆಲಂಗಾರು ಗ್ರಾಮದ ಕಲ್ಲೇರಿ, ಬಂಟ್ವಾಳ ಗ್ರಾಮಾಂತರ ವ್ಯಾಪ್ತಿಯ ಇರಾ, ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕುಂಟು ಕುಡೇಲು, ಮಂಕುಡೆ, ಕಾಡುಮಠ, ಇಡ್ಕಿದು ಗ್ರಾಮದ ಅಳಕೆ ಮಜಲು ಎಂಬಲ್ಲಿ ಆರೋಪಿ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂಬುದಾಗಿ ತಿಳಿದುಬಂದಿದೆ.

ಇದನ್ನೂ ಓದಿ : ಮಂಗಳೂರಿಗೆ ಮೊದಲು ರೈಲು ಬಂದದ್ದು ಯಾವಾಗ ಗೊತ್ತಾ..?

ಆರೋಪಿಯಿಂದ 18,00000 ಮೌಲ್ಯದ 200 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ 3,00,000 ರೂ. ಮೌಲ್ಯದ ಕಾರು ಸೇರಿ ಒಟ್ಟು 21,00,000 ರೂ.ನ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

 

 

 

Continue Reading

LATEST NEWS

Trending

Exit mobile version