Connect with us

DAKSHINA KANNADA

ಕೇರಳ ಕರ್ನಾಟಕ ಗಡಿ ಮುಚ್ಚುವ ತೀರ್ಮಾನ ಕೈ ಬಿಡಿ. : ಡಿವೈಎಫ್ಐ..!

Published

on

ಕೇರಳ ಕರ್ನಾಟಕ ಗಡಿ ಮುಚ್ಚುವ ತೀರ್ಮಾನ ಕೈ ಬಿಡಿ. : ಡಿವೈಎಫ್ಐ..!

ಮಂಗಳೂರು: ಕೇರಳದಲ್ಲಿ ಕೊರೋನ ಸೋಂಕು ಹೆಚ್ಚಳ ಮುಂದಿಟ್ಟು ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೇರಳದ ಗಡಿಗಳನ್ನು ಮುಚ್ಚುವ ತೀರ್ಮಾನ ಹಾಗೂ ಕೊರೋನ ನೆಗಟಿವ್ ವರದಿ ಹೊಂದಿರುವುದು ಕಡ್ಡಾಯ ಪಡಿಸುವ ದಕ್ಷಿಣ ಕನ್ನಡ ಜಿಲ್ಲಾಡಳಿತದ ತೀರ್ಮಾನ‌ ಸರಿಯಿಲ್ಲ.

ಕಾಸರಗೋಡು ಸೇರಿದಂತೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜನರ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಲಿದ್ದು ಸರಕಾರ ತಕ್ಷಣವೇ ಗಡಿ ಮುಚ್ಚುವ, ಪರೀಕ್ಷಾ,ವರದಿ ಕಡ್ಡಾಯ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಡಿವೈಎಫ್ಐ ದ ಕ ಜಿಲ್ಲಾ ಸಮಿತಿ ಒತ್ತಾಯಿಸಿದೆ.

ಕೊರೋನ‌ ಮೊದಲ ಹಂತದಲ್ಲಿ ತಿಂಗಳುಗಳ ಕಾಲ ಗಡಿ ಮುಚ್ಚುಗಡೆಯಿಂದ ಮಂಗಳೂರಿನ ಮಾರುಕಟ್ಟೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿತ್ತು.

ಕಾಸರಗೋಡು ಭಾಗದ ಸಾವಿರಾರು ಜನ ಕನ್ನಡಿಗರು ಉದ್ಯೋಗ, ವ್ಯಾಪಾರಕ್ಕಾಗಿ ಮಂಗಳೂರನ್ನೇ ಅವಲಂಬಿಸಿದ್ದು ಆ ಸಂದರ್ಭದಲ್ಲಿ ತಮ್ಮ ದುಡಿಮೆಯ ಅವಕಾಶಗಳನ್ನೇ ಕಳೆದು ಕೊಂಡು ಬೀದಿಗೆ ಬಂದಿದ್ದರು.

ಈಗ ನಿಧಾನವಾಗಿ ಎಲ್ಲವೂ ಸಹಜ ಸ್ಥಿತಿಗೆ ಮರಳುತ್ತಿರುವಾಗ, ಗಡಿನಾಡಿನ ಸಾವಿರಾರು ವಿದ್ಯಾರ್ಥಿಗಳು ಫೀಸು ಕಟ್ಟಿ ಪರೀಕ್ಷೆಗಳಿಗೆ ಸಿದ್ದರಾಗುತ್ತಿರುವಾಗ ದಿಢೀರನೆ, ಏಕಾಏಕಿ ಗಡಿ ಮುಚ್ಚುವುದು ಆಘಾತಕಾರಿ ಮಾತ್ರವಲ್ಲ, ಅವೈಜ್ಞಾನಿಕವೂ ಹೌದು. ಈ ರೀತಿ ಜನಸಾಮಾನ್ಯರ ಬದುಕಿನ‌ ಜೊತೆ ಚೆಲ್ಲಾಟವಾಡುವುದು ಯಾವುದೇ ಕಾರಣಕ್ಕೂ ಸಮರ್ಥನೀಯವೂ ಅಲ್ಲ.

ಗಡಿಗಳನ್ನು ಮುಚ್ಚುವುದರಿಂದ ಕೊರೋನ ನಿಯಂತ್ರಣಕ್ಕೆ ಬರುತ್ತದೆ ಎಂಬುದಕ್ಕೆ ಯಾವುದೇ ಸರಿಯಾದ ಆಧಾರ ಇಲ್ಲ. ಈ ಹಿಂದೆ ತಿಂಗಳುಗಳ ಕಾಲ ಗಡಿ ಮುಚ್ಚಿದಾಗ ಕೊರೋನ ಸೋಂಕು ಅತ್ಯಂತ ವೇಗವಾಗಿ ಹರಡಿತ್ತು.

ಜಿಲ್ಲೆಯಲ್ಲಿ ಕೊರೋನ ಮುಂಜಾಗರೂಕತೆ ಕ್ರಮಗಳನ್ನು ಜಾರಿಗೊಳಿಸುವಲ್ಲಿ, ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವಿಧಾನಗಳನ್ನು ನಿಯಮಬದ್ದಗೊಳಿಸುವಲ್ಲಿ ವೈಫಲ್ಯಗಳು ಇನ್ನೂ ಮುಂದುವರಿದಿದೆ.

ಹಾಗಿರುವಾಗ ಗಡಿ ಮುಚ್ಚುವುದರಿಂದ ಪ್ರಾಯೋಗಿಕವಾಗಿ ಯಾವ ಪ್ರಯೋಜನವೂ ಆಗುವುದಿಲ್ಲ. ಬದಲಿಗೆ ಚೇತರಿಸಿಕೊಳ್ಳಲು ಪರದಾಡುತ್ತಿರುವ ಜನ ಸಾಮಾನ್ಯರ ಬದುಕಿಗೆ ಕೊಡಲಿ ಪೆಟ್ಟು ಬೀಳುತ್ತದೆ.

ಜಿಲ್ಲಾಡಳಿತ ಗಡಿ ಮುಚ್ಚುವ ತೀರ್ಮಾನ ಹಿಂಪಡೆದು ಜನರ ಆತಂಕ ದೂರ ಮಾಡಬೇಕು ಎಂದು ಡಿವೈಎಫ್ಐ ಆಗ್ರಹಿಸುತ್ತದೆ ಎಂದು ದ ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending