Wednesday, October 20, 2021

ವೃದ್ದ ತಾಯಿಯನ್ನು ಮನೆಯೊಳಗೆ ಕೂಡಿ ಹಾಕಿ ಊರು ಬಿಟ್ಟ ದಂಪತಿ : ಸುಳ್ಯದಲ್ಲೊಂದು ಅಮಾನವೀಯ ಘಟನೆ..!

ಸುಳ್ಯ: ಕೊರೊನಾ ಪಾಸಿಟಿವ್ ಬಂದಿರುವ ದಂಪತಿ ಗಳು ವೃದ್ಧ ತಾಯಿಯನ್ನು ಮನೆಯೊಳಗೆ ಕೂಡಿ ಹಾಕಿ ಊರು ಬಿಟ್ಟಿರುವ ಅಮಾನವೀಯ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಗಾಂಧಿನಗರದಲ್ಲಿ ನಡೆದಿದೆ.

ಹಿರಿ ಜೀವವನ್ನು ಏಕಾಂಕಿಯಾಗಿ ಮನೆಯಲ್ಲಿ ಕೂಡಿಟ್ಟು ಊರು ಬಿಟ್ಟಿ  ದಂಪತಿಯನ್ನು ಪೊಲೀಸರು ಹುಡುಕುತ್ತಿದ್ದಾರೆ.

ಸುಳ್ಯದ ಆಸುಪಾಸಿನಲ್ಲಿ ಬಳೆ ಮಾರಿ ಜೀವನ ಸಾಗಿಸುತ್ತಿದ್ಧ ದಂಪತಿಗಳಿಬ್ಬರು ವೃದ್ದ ತಾಯಿಯ ಜತೆ ಗಾಂಧಿನಗರದಲ್ಲಿನ ಕಟ್ಟಡದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ದಂಪತಿಗಳಿಬ್ಬರಿಗೆ ಕಳೆದ ವಾರ ಕೊರೊನಾ ಪರೀಕ್ಷೆ ನಡೆಸಿದಾಗ ವರದಿ ಪಾಸಿಟಿವ್ ಆಗಿ ಬಂದಿತ್ತು.

ಈ ವಿಷಯ ಅರಿತ ಆ ದಂಪತಿಗಳು ಶನಿವಾರ ತಾವಿದ್ದ ಕೊಠಡಿಗೆ ಹೊರಗಿನಿಂದ ಬೀಗ ಹಾಕಿ ಹೋಗಿದ್ದಾರೆ .

ನಿನ್ನೆ ಮನೆಯೊಳಗಿದ್ದ ವೃದ್ದೆ ಮನೆಯೊಳಗೆ ಬೊಬ್ಬಿಡುತ್ತಿರುವುದನ್ನು ಕಂಡ ಸ್ಥಳೀಯರು ಪೋಲೀಸರಿಗೆ ವಿಷಯ ತಿಳಿಸಿದ್ದಾರೆ.

ಎಸ್. ಐ. ಹರೀಶ್ ರ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಹಾಗೂ ಸ್ಥಳೀಯರು ಬಾಗಿಲು ತೆರೆದು ವೃದ್ದೆಯನ್ನು ವಿಚಾರಿಸಿದ್ದಾರೆ.

ಮೂರು ದಿನದಿಂದ ಉಪವಾಸದಲ್ಲಿದ್ದ ವೃದ್ದೆಗೆ ಆಹಾರದ ವ್ಯವಸ್ಥೆ ಮಾಡಿದ್ದಾರೆ.

ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್ ರ ನೇತ್ರತ್ವದಲ್ಲಿ ವೃದ್ದೆಯ ಆರೋಗ್ಯ ತಪಾಸಣೆ ನಡೆಸಲಾಗಿದ್ದು ಇದೀಗ ಏಕಾಎಕಿ ಕಣ್ಮರೆಯಾದ ದಂಪತಿ ಹುಡುಕಾಟಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...