ಬೆಳಗಾವಿ: ಉಪನ್ಯಾಸಕಿಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಕಾಮುಕ ಉಪನ್ಯಾಸಕನನ್ನು ಕಾಲೇಜಿನಲ್ಲೇ ಉಪನ್ಯಾಸಕಿಯರೆಲ್ಲ ಸೇರಿ ಥಳಿಸಿದ ಘಟನೆ ಬೆಳಗಾವಿಯ ಸರ್ಕಾರಿ ಸರ್ದಾರ್ ಪಿಯು ಕಾಲೇಜಿನಲ್ಲಿ ನಡೆದಿದೆ.
ಕಾಲೇಜಿನ ಇಂಗ್ಲೀಷ್ ವಿಭಾಗದ ಖಾಯಂ ಉಪನ್ಯಾಸಕ ಅಮಿತ್ ಬಸವಮೂರ್ತಿ ಎಂಬವನನ್ನು ಅತಿಥಿ ಉಪನ್ಯಾಸಕರು ಸೇರಿ ಹಿಗ್ಗಾಮುಗ್ಗಾ ಥಳಿಸಿರುವ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗ್ತಿದೆ.
ಅಮಿತ್ ಬಸವಮೂರ್ತಿಯವರು ಪ್ರತಿದಿನ ಕಾಲೇಜಿಗೆಡ ಬರುವಾಗ ಮದ್ಯ ಸೇವಿಸಿ ಬರುತ್ತಿದ್ದರು. ಅಷ್ಟೇ ಅಲ್ಲದೆ ಮಹಿಳಾ ಸಿಬ್ಬಂದಿ ಇರುವ ವಿಶ್ರಾಂತಿ ಕೊಠಡಿಗೆ ಹೋಗಿ ಅನುಚಿತವಾಗಿ ವರ್ತಿಸುತ್ತಿದ್ದರು. ಮತ್ತು ಅವ್ಯಾಚ್ಯ ಶಬ್ಧಗಳಿಂದ ನಿಂದಿಸುತ್ತಿದ್ದರು.
ಈ ಬಗ್ಗೆ ಕಾಲೇಜಿನ ಪ್ರಾಚಾರ್ಯರಲ್ಲಿ ದೂರು ನೀಡಿದರೂ ಕೂಡ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆ ನಾವೇ ಅವನಿಗೆ ಧರ್ಮದೇಟು ನೀಡಿದೆವು ಎಂದು ಉಪನ್ಯಾಸಕಿ ಒಬ್ಬರು ಹೇಳಿದ್ದಾರೆ.
ಇದೀಗ ಉಪನ್ಯಾಸಕನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬೆಳಗಾವಿ ಮಹಿಳಾ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದು ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.
ಮಂಗಳೂರು/ಬೆಂಗಳೂರು : ಡಿಸೆಂಬರ್ 19ರಂದು ಬೆಳಗಾವಿಯ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿದ ಪ್ರಕರಣದಲ್ಲಿ ಪರಿಷತ್ ಸದಸ್ಯ ಸಿ.ಟಿ ರವಿಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ.
ಪ್ರಕರಣ ಸಂಬಂಧ ಪರಿಷತ್‌ನ ಕಾಂಗ್ರೆಸ್ ಸದಸ್ಯರಾದ ಉಮಾಶ್ರೀ ಮತ್ತು ನಾಗರಾಜ್ ಯಾದವ್ ಗುರುವಾರ ಸಿಐಡಿ ವಿಚಾರಣೆಗೆ ಹಾಜರಾಗಿದ್ದು, ಕಲಾಪದ ಸಂದರ್ಭದಲ್ಲಿ ಸಿ.ಟಿ. ರವಿ ಅವರು ಸಚಿವೆ ಹೆಬ್ಬಾಳ್ಕರ್‌ಗೆ ಅಶ್ಲೀಲ ಪದ ಬಳಸಿದ್ದು ನಿಜ ಮತ್ತು ಅದನ್ನು ನಾವುಗಳು ವಿರೋಧಿಸಿದ್ದೆವು ಎಂದು ಹೇಳಿಕೆ ದಾಖಲಿಸಿದ್ದಾರೆ.
ಅಶ್ಲೀಲ ಪದ ಬಳಕೆ ನಿಜ ಎಂದ ಪರಿಷತ್ ಸದಸ್ಯರು
ಕಲಾಪದ ಸಂದರ್ಭದಲ್ಲಿ ಸಿ.ಟಿ. ರವಿ ಅವರು ವಿಚಾರವೊಂದರ ಚರ್ಚೆ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿದ್ದು ನಿಜ. ಆ ಪದವನ್ನು ಸ್ಪಷ್ಟವಾಗಿ ಕೇಳಿದ್ದೇವೆ. ಅದಕ್ಕೆ ಸಚಿವರು ಆಕ್ಷೇಪ ವ್ಯಕ್ತಪಡಿಸಿದರು. ಜತೆಗೆ ಸ್ಥಳದಲ್ಲಿದ್ದ ನಾವು ಕೂಡಲೇ ರವಿ ವಿರುದ್ದ ಪ್ರತಿಭಟನೆ ನಡೆಸಿದ್ದೆವು. ಅಲ್ಲದೇ ಅವರ ವಿರುದ್ದ ಕ್ರಮಕ್ಕೆ ಸಭಾಪತಿಗಳಿಗೂ ದೂರು ನೀಡಿದ್ದೇವೆ. ಆದರೆ ರವಿ ಅವರು ಈ ಪದ ಬಳಕೆಯೇ ಮಾಡಿಲ್ಲ ಎಂದು ಹೇಳಿದರು. ಸಿ.ಟಿ. ರವಿ ಬಳಸಿದ ಅಶ್ಲೀಲ ಪದ ಕಡತದಲ್ಲಿ ದಾಖಲಾಗಿತ್ತು ಎಂದು ಇಬ್ಬರು ಸದಸ್ಯರು ಹೇಳಿಕೆ ದಾಖಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಉಮಾಶ್ರೀ ಅವರನ್ನು ಮಹಿಳಾ ಡಿವೈಎಸ್ಪಿಯೊಬ್ಬರು ಮತ್ತು ನಾಗರಾಜ್ ಯಾದವ್ ಅವರನ್ನು ಡಿವೈಎಸ್ಪಿ ಕೇಶವಮೂರ್ತಿ ವಿಚಾರಣೆ ನಡೆಸಿದ್ದು, ಲಿಖಿತ ಮತ್ತು ಮೌಖಿಕ ರೂಪದಲ್ಲಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಜತೆಗೆ ವೀಡಿಯೋ ಚಿತ್ರೀಕರಣ ಮಾಡಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ರವಿ ಬೇಷರತ್ ಕ್ಷಮೆ ಕೇಳಬೇಕು ಎಂದ ನಾಗರಾಜ್
ವಿಚಾರಣೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪರಿಷತ್ ಸದಸ್ಯ ನಾಗರಾಜ್ ಯಾದವ್, “ಪರಿಷತ್ ಕಲಾಪದಲ್ಲಿ ನಡೆದ ಘಟನೆಯನ್ನು ತನಿಖಾಧಿಕಾರಿಗಳಿಗೆ ಸಮರ್ಪಕವಾಗಿ ವಿವರಿಸಿದ್ದೇನೆ. ಯಾವ ಮಹಿಳೆಗೂ ಆ ರೀತಿಯ ಅಶ್ಲೀಲ ಪದ ಬಳಸಬಾರದು. ರವಿ ಅವರು ಮೊಂಡುತನ ಬಿಟ್ಟು ಬೇಷರತ್ ಕ್ಷಮೆ ಕೇಳಬೇಕು” ಎಂದರು
ಕುಂದಾಪುರ : ಕಾರು ಡಿ*ಕ್ಕಿ ಹೊಡೆದು ಪಾದಚಾರಿ ಮಹಿಳೆಯೊಬ್ಬರು ಗಂಭೀ*ರ ಗಾ*ಯಗೊಂಡ ಘಟನೆ ಕುಂದಾಪುರ ತಾಲೂಕಿನ ತ್ರಾಸಿಯ ರಾಷ್ಟ್ರೀಯ ಹೆದ್ದಾರಿಯ 66 ರಲ್ಲಿ ಸಂಭವಿಸಿದೆ. ತ್ರಾಸಿ ನಿವಾಸಿ ಗೌರಿ ಶೆಟ್ಟಿಗಾರ್ (60) ಗಾ*ಯಗೊಂಡ ಮಹಿಳೆ.
ಗೌರಿ ಶೆಟ್ಟಿಗಾರ್ ಅವರು ರಸ್ತೆ ದಾಟುತ್ತಿದ್ದಾಗ ಅವಘ*ಡ ಸಂಭವಿಸಿದೆ. ಕಾರು ಬೈಂದೂರು ಕಡೆಯಿಂದ ಕುಂದಾಪುರದತ್ತ ಸಂಚರಿಸುತ್ತಿತ್ತು. ಡಿ*ಕ್ಕಿ ಹೊಡೆದ ರಭಸಕ್ಕೆ ಮಹಿಳೆ ಸ್ವಲ್ಪ ದೂರಕ್ಕೆ ಎಸೆಯಲ್ಪಟ್ಟಿದ್ದು, ಪ್ರಜ್ಞೆ ತಪ್ಪಿ ಬಿದ್ದಿದ್ದರು.
ಕೂಡಲೇ ಗಂಗೊಳ್ಳಿಯ ಆ್ಯಂಬುಲೆನ್ಸ್‌ನ ಇಬ್ರಾಹಿಂ ಅವರು ಆಕೆಯನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾ*ತದ ದೃಶ್ಯಾವಳಿ ಮಳಿಗೆಯೊಂದರ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಡಬ : ಪಕ್ಕದ ಮನೆಯಿಂದ ಹಣ ಮತ್ತು ಚಿನ್ನ ಕದ್ದು, ಆ ಹಣದಿಂದ ಸಾಲ ತೀರಿಸಿದ ಬಳಿಕ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಕಳ್ಳನೊಬ್ಬ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.
ಅಂದ ಹಾಗೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಕಡಬ ತಾಲೂಕಿನ ಮರ್ದಾಳದ 102 ನೆಕ್ಕಿಲಾಡಿ ಗ್ರಾಮದ ಬಜಕೆರೆ ಎಂಬಲ್ಲಿ ಕಳೆದ ರವಿವಾರ ಅಟೋ ಚಾಲಕ ಕುರಿಯಕೋಸ್ ಯಾನೆ ಜೇಮ್ಸ್ ಅವರು ಪತ್ನಿ ಮತ್ತು ಮಗನೊಂದಿಗೆ ಮನೆಗೆ ಬೀಗ ಹಾಕಿ ಚರ್ಚ್ ಪ್ರಾರ್ಥನೆಗಾಗಿ ತೆರಳಿದ್ದ ವೇಳೆ ಅವರ ಮನೆಯ ಬಾಗಿಲು ಮುರಿದು ನಗದು ಮತ್ತು ಚಿನ್ನಾಭರಣ ಕಳ್ಳತನ ಮಾಡಲಾಗಿತ್ತು.
ಪ್ರಕರಣದ ಬೆನ್ನತ್ತಿದ ಕಡಬ ಪೊಲೀಸರು ಮಹತ್ವದ ಸುಳಿವುಗಳ ಆಧಾರದಲ್ಲಿಕಳ್ಳತನ ಆಗಿರುವ ಮನೆಯಿಂದ ಕೂಗಳತೆ ದೂರದಲ್ಲಿರುವ ಮನೆಯ ಯುವಕ ಬಜಕರೆಯ ಸಿನು ಕುರಿಯನ್ ಎಂಬಾತನನ್ನು ಬುಧವಾರ ರಾತ್ರಿ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ವೇಳೆ ಬೈಕ್ ನಲ್ಲಿ ಬಂದು ಕೊಟ್ಟಿಗೆಯಿಂದ ಪಿಕ್ಕಾಸು ತಂದು ಬಾಗಿಲು ಮುರಿದು ಕಳ್ಳತನ ಮಾಡಿರುವ ಬಗ್ಗೆ ಬಾಯ್ಬಿಟ್ಟಿದ್ದಾನೆ.
ಸಾಲದ ಸುಳಿಯಲ್ಲಿ ಸಿಲುಕಿದ ಕಾರಣ ಕಳ್ಳತನ ಮಾಡಿರುವುದಾಗಿ ಆತ ತಿಳಿಸಿದ್ದನು. ಕಡಬದ ಟೆಕ್ಸ್ ಟೈಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಆತನ ಬಳಿಯಿಂದ ಸದ್ಯ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಳ್ಳತನ ಮಾಡಿರುವ ಹಣದಲ್ಲಿ ಸಾಲವನ್ನು ತೀರಿಸಿ ಉಳಿದ ಹಣವನ್ನು ಸಿನು ಕುರಿಯನ್ ತನ್ನ ಬಳಿಯೇ ಇಟ್ಟುಕೊಂಡಿದ್ದ.
ಇದೀಗ ಪೊಲೀಸರು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕಳ್ಳತನ ಮಾಡಿದ ಬಳಿಕ ಪೊಲೀಸರಿಗೆ ಸಿಕ್ಕಿಬೀಳುವ ಹಿನ್ನೆಲೆಯಲ್ಲಿ ಸಿನು ಕುರಿಯನ್ ಮಾನಸಿಕವಾಗಿ ಕುಗ್ಗಿ ಹೋಗಿದ್ದ. ಆತ ರೈಲು ಹಳಿಯತ್ತ ತೆರಳಿ ಆತ್ಮಹತ್ಯೆ ಮಾಡಿಕೊಳ್ಳುವ ಹಂತಕ್ಕೆ ಹೋಗಿದ್ದ ಎಂದು ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ.
ಆದರೆ ಈ ವಿಚಾರವನ್ನು ಪೊಲೀಸರು ಇದನ್ನು ಖಚಿತ ಪಡಿಸಿಲ್ಲ. ಒಂದು ವೇಳೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೆ ಈ ಕಳ್ಳತನ ಪ್ರಕರಣ ಬೆಳಕಿಗೆ ಬರುತ್ತಿರಲಿಲ್ಲ ಎಂಬ ಮಾತು ಸಾರ್ವಜನಿಕರಿಂದ ಕೇಳಿ ಬರುತ್ತಿದೆ.