Sunday, November 27, 2022

ಎಲ್‌ಇಡಿ ಟಿ.ವಿ ಬ್ಲಾಸ್ಟ್‌..! : ಬಾಲಕ ಸಾವು-ಮನೆ ಗೋಡೆ ಕುಸಿತ

ಲಕ್ನೋ: ಎಲ್‌ಇಡಿ ಟಿ.ವಿ ಸ್ಪೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.


ಮೃತ ಬಾಲಕನನ್ನು ಓಮೇಂದ್ರ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಎಲ್ ಐಡಿ ಟಿವಿ ಸ್ಪೋಟಗೊಂಡಿದ್ದು,

ಓಮೇಂದ್ರನ ಮುಖ, ಎದೆ ಮತ್ತು ಕತ್ತಿನ ಮೇಲೆ ತೀವ್ರವಾಗಿ ಗಾಯವಾಗಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗಿದೇ ಸಾವನ್ನಪ್ಪಿದ್ದಾನೆ.

ಸ್ಪೋಟದ ತೀವ್ರತೆಗೆ ಮನೆ ಗೋಡೆಯ ಒಂದು ಭಾಗವೇ ಕುಸಿದಿದ್ದು, ಮೊದಲು ಮನೆಯವರು ಸಿಲಿಂಡರ್ ಸ್ಪೋಟ ಎಂದು ಭಾವಿಸಿದ್ದರು.

ಘಟನೆ ಸಂಭವಿಸಿದಾಗ ಓಮೇಂದ್ರನ ತಾಯಿ, ಅತ್ತಿಗೆ ಹಾಗೂ ಸ್ನೇಹಿತ ಇನ್ನೊಂದು ಕೋಣೆಯಲ್ಲಿದ್ದರು. ಇದರಿಂದಾಗಿ ಅವರಿಗೆ ಚಿಕ್ಕಪುಟ್ಟ ಗಾಯಗಳಾಗಿದೆ. ಅವರೆಲ್ಲರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here

Hot Topics

ನಂತೂರಿನಲ್ಲಿ ಜೋಡಿ ಮೇಲೆ ದಾಳಿ-ಮೂವರು ಹಿಂದೂ ಕಾರ್ಯಕರ್ತರು ಅರೆಸ್ಟ್

ಮಂಗಳೂರು:ಮಂಗಳೂರಿನ ನಂತೂರು ಸರ್ಕಲ್‌ ಬಳಿ ಗುರುವಾರ ಸಂಜೆ ಭಿನ್ನ ಕೋಮಿನ ಜೋಡಿ ಮೇಲೆ ದಾಳಿ ನಡೆಸಿದ್ದ ಘಟನೆಗೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.ಸುರತ್ಕಲ್‌ ನಿವಾಸಿ ಮುತ್ತು(18), ಪ್ರಕಾಶ್‌(21) ಮತ್ತು ಅಸೈಗೋಳಿ...

ಮಂಗಳೂರಿನಲ್ಲಿ ಹಣದ ಆಮಿಷವೊಡ್ಡಿ ಮತಾಂತರಕ್ಕೆ ಯತ್ನ-ಖ್ಯಾತ ವೈದ್ಯೆ ಸಹಿತ ಮೂವರ ವಿರುದ್ಧ ಸಂತ್ರಸ್ತ ಯುವತಿಯಿಂದಲೇ ದೂರು ದಾಖಲು

ಮಂಗಳೂರು: ಮುಸ್ಲಿಂ ಯುವಕನೊಬ್ಬ ಮತಾಂತರಗೊಳಿಸಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಯುವತಿಯೋರ್ವಳು ಮಂಗಳೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.ಆಕೆ ನೀಡಿರುವ ದೂರಿನಲ್ಲಿ 'ಮಂಗಳೂರಿನ ಬಿಕರ್ನಕಟ್ಟೆಯಲ್ಲಿರುವ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾಗ ಬಿಕರ್ನಕಟ್ಟೆಯ ಕೈಕಂಬದಲ್ಲಿರುವ ಖಲೀಲ್‌ನ...

ಇನ್ಮುಂದೆ ಬಾಡಿಗೆ ಮನೆ ಪಡೆಯಲು ಕ್ಲಿಯರೆನ್ಸ್‌ ಸರ್ಟಿಫಿಕೇಟ್‌ ಅಗತ್ಯ-ಮೈಸೂರು ನಗರ ಪೊಲೀಸ್ ಕಮಿಷನರ್ ಹೊಸ ಸುತ್ತೋಲೆ

ಮಂಗಳೂರು: ಮಂಗಳೂರಿನಲ್ಲಿ ಬಾಂಬ್‌ ಬ್ಲಾಸ್ಟ್ ಆಗಿರುವ ಘಟನೆ ಬೆನ್ನಲ್ಲೇ ಆರೋಪಿ ವಾಸವಾಗಿದ್ದ ಮೈಸೂರಿನ ಬಾಡಿಗೆ ಮನೆಯಲ್ಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈ ನಡುವೆ ಬಾಡಿಗೆ ಮನೆ ನೀಡುವ ಮಾಲಕರು ಯಾರೂ ಗುರುತು ಪರಿಚಯ...