Connect with us

    DAKSHINA KANNADA

    ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕಾಲನ್ನೇ ಕಳೆದುಕೊಂಡ

    Published

    on

    ಶಿವಮೊಗ್ಗ: ಚಲಿಸುತ್ತಿದ್ದ ರೈಲನ್ನು ಹತ್ತಲು ಹೋದ ಯುವಕನ ಕಾಲು ತುಂಡಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ಬಳಿಯ ತಾಳಗುಪ್ಪದಲ್ಲಿ ಸೋಮವಾರ ರಾತ್ರಿ ನಡೆದಿದೆ. ಸೋಮವಾರ ರಾತ್ರಿ ತಾಳಗುಪ್ಪ ಎಕ್ಸ್​ಪ್ರೆಸ್ ರೈಲನ್ನು ಹತ್ತಲು ಹೋದ ಯುವಕ ಪ್ಲಾಟ್​ಫಾರ್ಮ್​ನಿಂದ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಇದರಿಂದ ಆತನ ಕಾಲು ರೈಲಿನ ಚಕ್ರಕ್ಕೆ ಸಿಲುಕಿ ತುಂಡಾಗಿದೆ.

    ತಾಳಗುಪ್ಪ- ಬೆಂಗಳೂರು ಮಾರ್ಗದ ರೈಲನ್ನು ಹತ್ತಲು ಮುಂದಾಗಿದ್ದ 18 ವರ್ಷದ ಯುವಕ ನವೀನ್ ಕಾಲು ಮುರಿದುಕೊಂಡಿದ್ದಾನೆ. ಸಿದ್ಧಾಪುರ ತಾಲೂಕಿನ ಕವಚೂರಿನ ನವೀನ್ ತಾಳಗುಪ್ಪದಿಂದ ಬೆಂಗಳೂರಿಗೆ ಹೋಗುವ ರೈಲಿಗೆ ಟಿಕೆಟ್ ಬುಕ್ ಮಾಡಿಸಿಕೊಂಡಿದ್ದ. ನಿನ್ನೆ ರಾತ್ರಿ ಸುಮಾರು 8.20ರ ವೇಳೆಗೆ ಚಲಿಸುತ್ತಿದ್ದ ರೈಲನ್ನು ಹತ್ತಲು ಪ್ಲಾಟ್​ಫಾರ್ಮ್​ನಲ್ಲಿ ಓಡುವಾಗ ಕೆಳಗೆ ಬಿದ್ದ ಆತನ ಕಾಲು ರೈಲಿನ ಚಕ್ರಕ್ಕೆ ಸಿಲುಕಿ ತುಂಡಾಗಿ ಬಿದ್ದಿದೆ. ಮಳೆ ನೀರು ಬಿದ್ದು ಪ್ಲಾಟ್ ಫಾರ್ಮ್ ಜಾರುತ್ತಿದ್ದುದರಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ.

    ಪ್ಲಾಟ್ ಫಾರ್ಮ್ ಮೇಲೆ ಓಡಿ ಬಂದು ರೈಲನ್ನು ಹತ್ತಲು ಯತ್ನಿಸಿದ ನವೀನ್ ಕಾಲು ಜಾರಿ ಬಿದ್ದಿದ್ದಾನೆ. ಆಗ ಆತನ ಕಾಲು ರೈಲಿನ ಚಕ್ರಕ್ಕೆ ಸಿಲುಕಿಕೊಂಡಿದೆ. ನವೀನ್ ಕೈಗೆ ಕೂಡ ಗಂಭೀರ ಗಾಯಗಳಾಗಿವೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ನವೀನ್ ಒಂದು ಕಾಲನ್ನೇ ಕಳೆದುಕೊಂಡಿದ್ದಾನೆ. ಸಾಗರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನವೀನ್ ಜೊತೆಗೆ ಇನ್ನೋರ್ವ ಯುವಕ ಕೂಡ ಇದ್ದು, ನವೀನ್​ಗಿಂತ ಮೊದಲೇ ರೈಲು ಹತ್ತಿದ್ದ ಆತ ತನ್ನ ಗೆಳೆಯ ರೈಲಿನ ಚಕ್ರಕ್ಕೆ ಸಿಲುಕುತ್ತಿದ್ದಂತೆ ರೈಲಿನಿಂದ ಕೆಳಗೆ ಹಾರಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

    BIG BOSS

    ಮಂಗಳೂರು: ಮುಂಜಾನೆಯೇ ಸರಣಿ ಅ*ಪಘಾತ; ವಿದ್ಯಾರ್ಥಿಗಳಿದ್ದ ಬಸ್ ಪ*ಲ್ಟಿ

    Published

    on

    ಮಂಗಳೂರು: ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪರದ ಅಡ್ಡಹೊಳೆ ಎಂಬಲ್ಲಿ ಬೆಳ್ಳಂಬೆಳಗ್ಗೆ ಸರಣಿ ಅ*ಪಘಾತ ಸಂಭವಿಸಿದೆ. ಕುಂದಾಪುರ ಪ್ರವಾಸಕ್ಕೆ ತೆರಳಿ ಹಿಂದಿರುಗುತ್ತಿದ್ದ ಬೆಂಗಳೂರು ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಟೂರಿಸ್ಟ್ ಬಸ್ ಉರುಳಿ ಬಿದ್ದಿದೆ.

    ಇಂದು (ನ.23) ಬೆಳಗಿನ ಜಾವ ಕಾರೊಂದು ಹಿಂದಿನಿಂದ ಬಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿ*ಕ್ಕಿ ಹೊಡೆದಿದೆ. ನಂತರ, ಬೆಂಗಳೂರು ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ಕೆಎಸ್‌ಆರ್‌ಟಿಸಿ ಬಸ್‌ಗೆ ಗು*ದ್ದಿದೆ.

    ಟೂರಿಸ್ಟ್ ಬಸ್ ರಸ್ತೆಗೆ ಉರುಳಿದ್ದು, ವಿದ್ಯಾರ್ಥಿಗಳು ಗಾ*ಯಗೊಂಡಿದ್ದಾರೆ. ಗಾ*ಯಾಳುಗಳನ್ನು ನೆಲ್ಯಾಡಿ ಮತ್ತು ಕಡಬದ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಉಪ್ಪಿನಂಗಡಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

    Continue Reading

    DAKSHINA KANNADA

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    LATEST NEWS

    Trending