Connect with us

    DAKSHINA KANNADA

    ಮೂಲ್ಕಿಯಲ್ಲಿ ಚಿರತೆ ಹೆಜ್ಜೆ; ಜನರಲ್ಲಿ ಆತಂಕ

    Published

    on

    ಮೂಲ್ಕಿ :  ಮೂಲ್ಕಿ ನಗರ ಪಂಚಾಯತ್ ವ್ಯಾಪ್ತಿಯ ಅಕ್ಕಸಾಲಿಗರ ಕೇರಿ ಬಳಿ ಬುಧವಾರ(ಅ.23) ಸಂಜೆ ವೇಳೆಗೆ ನಾಲ್ಕು ಚಿರತೆ ಮರಿಗಳು ಕಂಡು ಬಂದಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

    ನಾಲ್ಕು ದಿನಗಳ ಹಿಂದೆ ಅಕ್ಟೋಬರ್ 19 ರಂದು ರಾತ್ರಿ ಸ್ಥಳೀಯರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ಚಿರತೆ ಸೆರೆ ಹಿಡಿದ ಸ್ಥಳದ ಸಮೀಪದ ತೋಟದಲ್ಲಿ ಇದೀಗ ನಾಲ್ಕು ಚಿರತೆ ಮರಿಗಳು ಓಡಾಡಿರುವ ಹೆಜ್ಜೆಗಳ ಗುರುತು ಕಂಡು ಬಂದಿವೆ. ಇದರಿಂದಾಗಿ ಸ್ಥಳೀಯರು ಮತ್ತಷ್ಟು ಆತಂಕಗೊಂಡಿದ್ದು, ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ.

    ಇದನ್ನೂ ಓದಿ : ಬಾಯ್ಸ್.. ನಿಮಗೆ ಈ ಅಭ್ಯಾಸ ಇದೆಯಾ ?? ಹಾಗಾದ್ರೆ ಮಕ್ಕಳಾಗೋದು ಡೌಟ್ !!!

    ಅಕ್ಟೋಬರ್‌ 19 ರಂದು ರಾತ್ರಿ ಮೂಲ್ಕಿಯ  ಅಕ್ಕಸಾಲಿಗರ ಕೇರಿ ಬಳಿಯ ಸದಾನಂದ ಕೋಟ್ಯಾನ್ ಎಂಬವರ ಮನೆಯ ಅಡುಗೆ ಕೋಣೆಯೊಳಗೆ ಏಕಾಏಕಿ ನುಗ್ಗಿದ್ದ ಚಿರತೆಯನ್ನು ಮೂಡುಬಿದಿರೆ ವಲಯ ಅರಣ್ಯ ಅಧಿಕಾರಿಗಳು ಸ್ಥಳೀಯ ಜನರ ಸಹಕಾರದಲ್ಲಿ ಸಕಾಲದಲ್ಲಿ ಕಾರ್ಯಾಚರಣೆ ನಡೆಸಿ ಬೋನು ಮೂಲಕ ಸೆರೆ ಹಿಡಿದು ಜನರ ಆತಂಕವನ್ನು ದೂರ ಮಾಡಿದರು

     

     

    DAKSHINA KANNADA

    ಮಂಗಳೂರು – ನಿರೀಕ್ಷಣ ಮಂದಿರ ಆವರಣದಿಂದ ಅಕ್ರಮ ಮರ ಸಾಗಾಟ: ಪ್ರಕರಣ ದಾಖಲು

    Published

    on

    ಮಂಗಳೂರು: ಮಲ್ಲಿಕಟ್ಟೆ ಲೋಕೋಪಯೋಗಿ ನಿರೀಕ್ಷಣ ಮಂದಿರ ಆವರಣದ ಬೆಲೆಬಾಳುವ ಸಾಗುವಾನಿ, ದೇವದಾರು ಮರಗಳನ್ನು ಕಡಿದು ಸಾಗಿಸಿರುವ ಕುರಿತು ರಾಷ್ಟ್ರೀಯ ಪರಿಸರ ಸಂರಕ್ಷಣ ಒಕ್ಕೂಟ(ಎನ್‌ಇಸಿಎಫ್‌) ನೀಡಿದ ದೂರಿನಂತೆ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿಕೊಂಡಿದೆ.

    ನಿರೀಕ್ಷಣ ಮಂದಿರಕ್ಕೆ ಅಪಾಯವಿದೆ ಎಂದು ಹೇಳಿ ಲೋಕೋಪಯೋಗಿ ಇಲಾಖೆ ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ 3 ಸಾಗುವಾನಿ, 1 ಉಪ್ಪಳಿಗೆ, 1 ಕಂಬ ಅಶೋಕ, ಹಾಗೂ 1 ದೇವದಾರು ಮರ ಕಡಿಯಲು ಅನುಮತಿ ನೀಡಲಾಗಿತ್ತು. ಆದರೆ ಇಲಾಖೆಯ ಅನುಮತಿ ಇಲ್ಲದೆ ದೇವದಾರು ಮರವನ್ನು ಸ್ಥಳದಿಂದ ಸಾಗಿಸಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಮರ ಕಡಿಯಲು ಗುತ್ತಿಗೆ ಪಡೆದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕ್ಲಿಫರ್ಡ್‌ ಲೋಬೋ ತಿಳಿಸಿದ್ದಾರೆ.

    ಮರ ಕಡಿಯುತ್ತಿರುವುದು ಎನ್‌ಇಸಿಎಫ್‌ ಸದಸ್ಯರೊಬ್ಬರ ಗಮನಕ್ಕೆ ಬಂದಿದ್ದು, ಮಂಗಳವಾರ ವಾಹನದಲ್ಲಿ ಮರ ಸಾಗಾಟ ಮಾಡುವ ವೇಳೆ ಅರಣ್ಯ ಸಂಚಾರ ದಳಕ್ಕೆ ಮಾಹಿತಿ ನೀಡಿದ್ದಾರೆ. ಮರ ಸಾಗಾಟದ ವಾಹನ ಹೊಯ್ಗೆ ಬಜಾರ್‌ನ ಇಲಾಖಾ ನಾಟ ಸಂಗ್ರಹಾಲಯದಲ್ಲಿರುವುದು ಪತ್ತೆಯಾಗಿದೆ. ವಾಹನವನ್ನು ಪರಿಶೀಲಿ ಸಿದಾಗ ಅದರಲ್ಲಿ ದೇವದಾರು ಜಾತಿಯ ಮರದ ಕಟ್ಟಿಗೆ ಇರುವುದು ಕಂಡು ಬಂದಿದೆ. ಚಾಲಕನಲ್ಲಿ ವಿಚಾರಿಸಿದಾಗ ಮರ ಸಾಗಾಟಕ್ಕೆ ಪರವಾನಿಗೆ ಇಲ್ಲ ಎಂದು ತಿಳಿಸಿದ್ದಾನೆ.

    ಬುಧವಾರ(ಅ.23) ಬೆಳಗ್ಗೆ ಅರಣ್ಯ ಸಂಚಾರಿ ದಳ ಅಧಿಕಾರಿಗಳು ಮಲ್ಲಿಕಟ್ಟೆಯ ಲೋಕೋಪಯೋಗಿ ನಿರೀಕ್ಷಣ ಮಂದಿರಕ್ಕೆ ಭೇಟಿ ನೀಡಿದಾಗ 4 ಸಾಗುವಾನಿ, 1 ಉಪ್ಪಳಿಗೆ, 1 ಕಂಬ ಅಶೋಕ, ಹಾಗೂ 1 ದೇವದಾರು ಮರಗಳನ್ನು ಕಡಿದಿರುವುದು ಕಂಡು ಬಂದಿದೆ. ವಿವಿಧ ಅಳತೆಯ 24 ಸಾಗುವಾನಿ ದಿಮ್ಮಿಗಳನ್ನು ದಾಸ್ತಾನು ಇರಿಸಿರುವುದು ಕಂಡು ಬಂದಿದೆ.

    Continue Reading

    DAKSHINA KANNADA

    ಧರ್ಮಸ್ಥಳ: ಡಾ.ಡಿ.ವೀರೇಂದ್ರ ಹೆಗ್ಗಡೆಯವರ 57ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ

    Published

    on

    ಮಂಗಳೂರು:  ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಇಂದು (ಅ.24) 57ನೇ ವಸಂತದ ಪಟ್ಟಾಭಿಷೇಕ ವರ್ಧಂತ್ಯುತ್ಸವ ಹೊಸ್ತಿಲಲ್ಲಿದ್ದಾರೆ.

    ಧರ್ಮಸ್ಥಳದ ನೆಲ್ಯಾಡಿ ಬೀಡಿನಲ್ಲಿ ವೀರೇಂದ್ರ ಹೆಗ್ಗಡೆಯವರು 1968ರ ಅ. 24ರಂದು 21ನೇ ಧರ್ಮಾಧಿಕಾರಿಯಾಗಿ ಪಟ್ಟಾಭಿಷಿಕ್ತ ರಾಗಿದ್ದರು. ಶ್ರೀ ಕ್ಷೇತ್ರದಲ್ಲಿ ಪಾರಂಪರಿಕವಾಗಿ ನಡೆದುಕೊಂಡು ಬರುತ್ತಿರುವ ಚತುರ್ವಿಧ ದಾನ ಪರಂಪರೆಗೆ ಕಾಲದ ಆದ್ಯತೆಗೆ ಅನುಗುಣವಾಗಿ ಕ್ಷೇತ್ರದ ಹಾಗೂ ಸಮಾಜದ ಸರ್ವತೋಮುಖ ಪ್ರಗತಿಗೆ ಪೂರಕವಾಗಿ ಹೊಸ ರೂಪುರೇಷೆ ನೀಡಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಪರಂಪರೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾದರಿ ಕ್ಷೇತ್ರವಾಗಿ ಜನಮನ್ನಣೆಗೆ ಪಾತ್ರವಾಗಿಸಿದವರು ಡಾ.ವೀರೇಂದ್ರ ಹೆಗ್ಗಡೆಯವರು.

    57ನೇ ವರ್ಧಂತಿಯು ಸಂಭ್ರಮದ ವಾತಾವರಣ ಮೂಡಿಸಿದೆ. ಊರಿನ ನಾಗರಿಕರು ದೇಗುಲ ನೌಕರರು ಎಸ್‌.ಡಿ.ಎಂ. ಶಿಕ್ಷಣ ಸಂಸ್ಥೆಗಳ ನೌಕರರು, ಆಪ್ತರು, ಬಂಧುಗಳು, ಅಭಿಮಾನಿಗಳು ಹಾಗೂ ಧರ್ಮಸ್ಥಳದ ಭಕ್ತರು ಹೆಗ್ಗಡೆಯವರಿಗೆ ಶ್ರದ್ಧಾಭಕ್ತಿಯಿಂದ ಗೌರವಾರ್ಪಣೆ ಮಾಡುವರು. ಈ ಪ್ರಯುಕ್ತ ಗುರುವಾರ ಬೆಳಗ್ಗೆ 10ರಿಂದ ಅಮೃತವರ್ಷಿಣಿ ಸಭಾಭವನದಲ್ಲಿ ದೇಗುಲದ ನೌಕರರಿಗೆ ಛದ್ಮವೇಷ ಸ್ಪರ್ಧೆ ಆಯೋಜಿಸಲಾಗಿದೆ.

    ಸಂಜೆ 4 ಗಂಟೆಗೆ ಮಹೋತ್ಸವ ಸಭಾಭವನದಲ್ಲಿ ನಡೆಯುವ ಅಭಿನಂದನ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ| ಸಿ.ಎನ್‌.ಮಂಜುನಾಥ್‌ ಅಧ್ಯಕ್ಷತೆ ವಹಿಸುವರು. ಶಾಸಕರಾದ ಹರೀಶ್‌ ಪೂಂಜ ಮತ್ತು ಕೆ. ಪ್ರತಾಪಸಿಂಹ ನಾಯಕ್‌ ಹಾಗೂ ಕೆಪಿಸಿಸಿ ಅಧ್ಯಕ್ಷ ಕೆ.ಹರೀಶ್‌ ಕುಮಾರ್‌ ಶುಭಾಶಂಸನೆ ಮಾಡುವರು.

    Continue Reading

    DAKSHINA KANNADA

    ಪುತ್ತೂರಿನಲ್ಲಿ ವಿಶ್ವ ಹಿಂದೂ ಪರಿಷತ್ ಹೊಸ ಕಚೇರಿಗೆ ಶಿಲಾನ್ಯಾಸ

    Published

    on

    ಪುತ್ತೂರು: ದೇಶದಲ್ಲೇ ಎಲ್ಲಾ ಗ್ರಾಮಗಳಲ್ಲಿ ಶಾಖೆಗಳನ್ನು ತೆರೆದ ಸಂಘಟನೆಯ ಮೊದಲ ತಾಲೂಕು ಪುತ್ತೂರು ಎಂದು ವಿಶ್ವ ಹಿಂದೂ ಪರಿಷದ್ ಕೇಂದ್ರೀಯ ಕಾರ್ಯದರ್ಶಿ ಗೋಪಾಲ್ ಜೀ ಹೇಳಿದರು.

    ವಿಶ್ವ ಹಿಂದೂ ಪರಿಷದ್ ಕರ್ನಾಟಕ, ವಿಶ್ವ ಹಿಂದೂ ಪರಿಷದ್ ಪುತ್ತೂರು ಕಟ್ಟಡ ನಿರ್ಮಾಣ ಸಮಿತಿ ವತಿಯಿಂದ ಪುತ್ತೂರಿನಲ್ಲಿ ನಿರ್ಮಾಣಗೊಳ್ಳಲಿರುವ ಹೊಸ ಕಾರ್ಯಾಲಯಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

    “ಧಾರ್ಮಿಕ ವಿಚಾರದಲ್ಲಿ ವಿಶ್ವ ಹಿಂದೂ ಪರಿಷತ್‌ ಕೆಲಸ ಮಾಡಿಕೊಂಡು ಬಂದಿದೆ. ಸಾಮಾಜಿಕ ಪರಿವರ್ತನೆ ತರುವಲ್ಲಿ ವಿಹಿಂಪ ಸಾಕಷ್ಟು ಕೆಲಸ ಮಾಡಿದೆ. ಅಸ್ಪೃಶ್ಯತೆ ವಿರುದ್ಧ ಸಮಾನತೆಯ ಕಾರ್ಯ, ೧೫ ಲಕ್ಷ ಕ್ರೈಸ್ತ ಮತ್ತು ಮುಸ್ಲಿಮರನ್ನು ವಾಪಸ್ ಹಿಂದೂ ಧರ್ಮಕ್ಕೆ ತರುವಲ್ಲಿ, ಜಿಹಾದಿ ಕೆಲಸಗಳ ವಿರುದ್ಧ ನಿರಂತರ ಕೆಲಸ ಮಾಡಿದೆ” ಎಂದು ಹೇಳಿದರು.

    Continue Reading

    LATEST NEWS

    Trending