Monday, July 4, 2022

ಬಂಟ್ವಾಳ: ಜೀವ ಬೆದರಿಕೆ ಪ್ರಕರಣ-ನಾಲ್ಕು ಜನರ ಬಂಧನ

ವಿಟ್ಲ: ಕಾರಿನಲ್ಲಿ ಬಂದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ನಾಲ್ಕು ಮಂದಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಕುದ್ದುಪದವು ನಿವಾಸಿ ಎಂ. ಕೃಷ್ಣ, ಉಕ್ಕುಡ ದರ್ಬೆ ನಿವಾಸಿ ಕೇಶವ ಬಂಗೇರ, ಬಾಯಾರು ನಿವಾಸಿ ಅಶೋಕ್ ಕುಮಾರ್ ಟಿ, ಕಾಸರಗೋಡು ನಿವಾಸಿ ಚಂದ್ರಶೇಖರ ಸಿ ಬಂಧಿತ ಆರೋಪಿಗಳು

ಘಟನೆ ವಿವರ

ಕೆಲವು ದಿನಗಳ ಹಿಂದೆ ಅಳಿಕೆ ಬರೆಂಗೊಡಿ ತರವಾಡು ಮನೆಯ ವಿಚಾರದಲ್ಲಿ ದೂರವಾಣಿ ಕರೆ ಮಾಡಿ ಜಾಗ ನೋಡಲು ಬರುವುದಾಗಿ ಹೇಳಿದ್ದು, ದಾರಿ ಹೇಳುವ ನಿಟ್ಟಿನಲ್ಲಿ ರಸ್ತೆಗೆ ಬರ ಹೇಳಿದ್ದರು.

ಈ ಹಿನ್ನೆಲೆಯಲ್ಲಿ ಬರಂಗೋಡಿ ನಿವಾಸಿ ರಾಜೀವ ಬಿ. ಶಾರದಾ ವಿಹಾರ -ಬೈರಿಕಟ್ಟೆ ರಸ್ತೆಯ ಬರೆಂಗೋಡಿಯಲ್ಲಿ ಇದ್ದಾಗ ಓಮ್ನಿ ಕಾರಿನಲ್ಲಿ ಆಗಮಿಸಿದ ಅಪರಿಚಿತರು ಹಲ್ಲೆ ನಡೆಸಿ, ಅವಾಚ್ಯವಾಗಿ ಬೈದು, ಜೀವ ಬೆದರಿಕೆ ಹಾಕಿದ್ದಾರೆ.
ಈ ಸಮಯ ಬೈಕ್ ಆಗಮಿಸಿದ್ದನ್ನು ಕಂಡು ಅಪರಿಚಿತರು ಪಲಾಯನ ಮಾಡಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

LEAVE A REPLY

Please enter your comment!
Please enter your name here

Hot Topics

ವಿಟ್ಲದಲ್ಲಿ ನಿರಂತರ ಮಳೆಗೆ ನೀರುಪಾಲಾದ ತೋಡು-ಮನೆ ಕುಸಿಯುವ ಭೀತಿ

ವಿಟ್ಲ: ವಿಟ್ಲ ಮುಡ್ನೂರು ಗ್ರಾಮದ ಪಿಲಿಂಜ ಎಂಬಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ತೋಡಿನ ಬದಿ ಕುಸಿದು ಮನೆ ಅಪಾಯದಂಚಿನಲ್ಲಿದೆ.ವಿಟ್ಲ ಮುಡ್ನೂರು ಗ್ರಾಮದ ಪಿಲಿಂಜ ನಿವಾಸಿ ರಾಮಣ್ಣ ಪಿಲಿಂಜ ಅವರಿಗೆ ಸೇರಿದ ಮನೆಯ ಪಕ್ಕದಲ್ಲಿ...

ಮಂಗಳೂರಿನ ‘ಕದ್ರಿ‌ ರೋಲರ್ಸ್ ಸ್ಕೇಟಿಂಗ್ ಕ್ಲಬ್’ ಅಧ್ಯಕ್ಷರಾಗಿ ಡಾ.ರಾಜೇಶ್ ಹುಕ್ಕೇರಿ ಆಯ್ಕೆ

ಮಂಗಳೂರು: ಮಂಗಳೂರಿನಲ್ಲಿ‌ ನೂತನವಾಗಿ "ಕದ್ರಿ‌ ರೋಲರ್ಸ್ ಸ್ಕೇಟಿಂಗ್ ಕ್ಲಬ್(ರಿ)" ಆರಂಭಗೊಂಡಿದ್ದು, ಇದರ ಸ್ಥಾಪಕಾಧ್ಯಕ್ಷರಾಗಿ ಡಾ.ರಾಜೇಶ್ ಹುಕ್ಕೇರಿ ಆಯ್ಕೆಯಾಗಿದ್ದಾರೆ.ನಗರದ ಕೆಪಿಟಿ‌ ಸರ್ಕಲ್ ನ ಬಳಿಯ ಕದ್ರಿ ಪಾರ್ಕ್ ನಲ್ಲಿರುವ "ಅನಘಾಸ್ ಸ್ಕೇಟಿಂಗ್ ಅಕಾಡೆಮಿ"ಯಲ್ಲಿ ಇತ್ತೀಚೆಗೆ...

ಬೆಳ್ತಂಗಡಿ: ಕೆರೆಗೆ ಕಾಲು ಜಾರಿ ಬಿದ್ದು ವ್ಯಕ್ತಿ ಕೊನೆಯುಸಿರು

ಬೆಳ್ತಂಗಡಿ: ಕೆರೆಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ನ್ಯಾಯತರ್ಪು ಗ್ರಾಮದ ಬದ್ಯಾರು ಬಳಿ ಇಂದು ನಡೆದಿದೆ.ಕುಶಾಲಪ್ಪ ಗೌಡ (46) ಮೃತ ವ್ಯಕ್ತಿ. ಮೃತ ಕುಶಾಲಪ್ಪ ಗೌಡ ಮನೆಯ...