Connect with us

MANGALORE

ಹಿಜಾಬ್‌ ವಿವಾದ: ದ.ಕ ಜಿಲ್ಲಾ ಯುವ ಜನತಾದಳ ಅಧ್ಯಕ್ಷನಿಗೆ ಬೆದರಿಕೆ-ದೂರು

Published

on

ಮಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್‌ ವಿವಾದದ ಕುರಿತು ಮಾಧ್ಯಮ ಹೇಳಿಕೆ ನೀಡಿದ ದ.ಕ ಜಿಲ್ಲಾ ಯುವ ಜನತಾದಳ ಅಧ್ಯಕ್ಷ ಅಕ್ಷಿತ್‌ ಸುವರ್ಣ ಅವರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಕೊಲೆ ಬೆದರಿಕೆ ಹಾಕಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್‌ ಆಯುಕ್ತರಿಗೆ ಇಂದು ದೂರು ನೀಡಲಾಯಿತು.

ಇತ್ತೀಚೆಗೆ ಹಿಜಾಬ್‌ ವಿಚಾರವಾಗಿ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ ನಂತರ ಸಾಮಾಜಿಕ ಜಾಲತಾಣದಲ್ಲಿ ಕೆಲವು ಕಿಡಿಗೇಡಿಗಳು ಕೆಟ್ಟಪದಗಳನ್ನು ಬಳಸಿ ನಿಂದಿಸಿದ್ದು, ಕೊಲೆ ಬೆದರಿಕೆ ಕೂಡ ಹಾಕಿದ್ದಾರೆ. ಈ ಬಗ್ಗೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.

ಈ ಸಂಧರ್ಭದಲ್ಲಿ ಜೆಡಿಎಸ್ ರಾಜ್ಯ ಯುವ ನಾಯಕರಾದ ಫೈಝಲ್ ರೆಹಮಾನ್, ಜಿಲ್ಲಾ ನಾಯಕರುಗಳಾದ ಸತ್ತಾರ್ ಬಂದರ್, ಮೊಹಮ್ಮದ್ ಫೈಝಲ್, ಶ್ರೀನಾಥ್, ಯಶು, ಸಿನಾನ್ ಉಪಸ್ಥಿತರಿದ್ದರು.

BANTWAL

ಬಯಲಾಯ್ತು ಅಕ್ರಮ ಸಂಬಂಧ; ನೇಣಿಗೆ ಶರಣಾದ ವಿವಾಹಿತ!

Published

on

ಪುತ್ತೂರು : ವ್ಯಕ್ತಿಗಳು ಸಾಲಬಾಧೆಯಿಂದಲೋ, ಅನಾರೋಗ್ಯದಿಂದಲೋ ಅಥವಾ ಜೀವನದಲ್ಲಿ ಜಿಗುಪ್ಸೆ ಹೊಂದಿಯೋ ಜೀವಾಂತ್ಯಗೊಳಿಸುವುದನ್ನು ಕಾಣುತ್ತೇವೆ. ಆದರೆ, ಇಲ್ಲೊಬ್ಬ,
ಅಕ್ರಮ ಪ್ರೇಮ ಸಂಬಂಧದ ಹಿನ್ನಲೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಸಮೀಪ ಶನಿವಾರ ಘಟನೆ ಸಂಭವಿಸಿದೆ.

ಈಶ್ವರಮಂಗಲ ಸಮೀಪದ ಕತ್ರಿಬೈಲುವಿನ ಪ್ರಶಾಂತ್ ಮುಖಾರಿ (೩೮) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ ತನ್ನ ಮನೆಯಿಂದ ಸುಮಾರು ಒಂದು ಕಿಲೋಮೀಟರ್ ಅಂತರದಲ್ಲಿರುವ ಚಿಮುಣಿಗುಡ್ಡೆ ಎಂಬಲ್ಲಿನ ಗುಡ್ಡದ ರಸ್ತೆ ಬದಿಯಲ್ಲಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

 

ಇದನ್ನು ಓದಿ: ಈ ವೀಡಿಯೋವನ್ನು ವೈರಲ್ ಮಾಡುವ ಧೈರ್ಯ ನಿಮ್ಮಲ್ಲಿ ಇದ್ಯಾ ? ವೀಡಿಯೋವೊಂದನ್ನು ಹಂಚಿಕೊಂಡು ಸವಾಲೆಸೆದ ನಟಿ ಜ್ಯೋತಿ ರೈ

ಅಕ್ರಮ ಸಂಬಂಧ ಬಯಲು – ನೇಣಿಗೆ ಶರಣು :

ಪ್ರಶಾoತ್ ಮುಖಾರಿ ಅವರಿಗೆ ಪತ್ನಿ ಮತ್ತು ಎಳೆಯ ವಯಸ್ಸಿನ ಪುತ್ರನಿದ್ದಾನೆ. ಈ ನಡುವೆ ಇನ್ನೊಬ್ಬಳು ಯುವತಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಈ ವಿಚಾರ ಬಹಿರಂಗಗೊಂಡಿದ್ದ ಹಿನ್ನೆಲೆಯಲ್ಲಿ ಅವರು ಅಪಮಾನಗೊಂಡು ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ.
ಮೃತರ ಪತ್ನಿ ನೀಡಿರುವ ದೂರಿನಂತೆ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BANTWAL

ಕಡಬ : ಸಿಡಿಲು ಬಡಿದು ಓರ್ವ ಸಾವು; ಇಬ್ಬರಿಗೆ ಗಾಯ

Published

on

ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ವರುಣ ಕೃಪೆ ತೋರಿದ್ದಾನೆ. ಇನ್ನೊಂದೆಡೆ ಸಿಡಿಲಾರ್ಭಟಕ್ಕೆ ವ್ಯಕ್ತಿ ಬಲಿಯಾಗಿದ್ದಾರೆ.. ಕಡಬ ತಾಲೂಕಿನಲ್ಲಿ ಸಿಡಿಲು ಬಡಿದು ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಾಯಗಳಾಗಿವೆ. ಉತ್ತರ ಪ್ರದೇಶ,ಚೈನ್‌ಪುರ್ ಮೂಲದ ಶ್ರೀಕಿಶುನ್ ಮೃತ ವ್ಯಕ್ತಿ.

ಇದನ್ನು ಓದಿ:ಪುತ್ತೂರಿನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವಕ! 

ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ನದಿ ಬದಿಯ ಶೆಡ್ ನಲ್ಲಿದ್ದ ವೇಳೆ ಶೆಡ್ ಗೇ ಸಿಡಿಲು ಬಡಿದಿದೆ. ಪರಿಣಾಮ ಮರಳು ತೆಗೆಯುವ ಉತ್ತರ ಪ್ರದೇಶ ಮೂಲದ ಕಾರ್ಮಿಕ ಸಾವನ್ನಪ್ಪಿದ್ದಾನೆ.
ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

Continue Reading

DAKSHINA KANNADA

ಪುತ್ತೂರಿನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವಕ!

Published

on

ಪುತ್ತೂರು : ಪುತ್ತೂರಿನ ಬೆಟ್ಟಂಪ್ಪಾಡಿಯಲ್ಲಿ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾ*ವನ್ನಪ್ಪಿದ್ದು, ಈ ಬಗ್ಗೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿ ಮೃ*ತ ಯುವಕನ ತಾಯಿ ಸೇರಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

 ಪಕ್ಕದ ಮನೆ ಕದ ತಟ್ಟಿದ ಮಗ; ಸಂಕೋಲೆ ಹಾಕಿ ಎಳೆತಂದ ತಾಯಿ :  

ಬೆಟ್ಟಂಪ್ಪಾಡಿಯ ನಿವಾಸಿ ಚೇತನ್ (33) ಮೃ*ತ ಪಟ್ಟಿರುವ ಯುವಕ. ನಿನ್ನೆ ರಾತ್ರಿ ಕುಡಿದು ಮನೆಗೆ ಬಂದಿದ್ದ ಚೇತನ್ ತಾಯಿ ಜತೆ ಜಗಳವಾಡಿದ್ದ.  ಬಳಿಕ ಪಕ್ಕದ ಯೂಸುಫ್ ಎನ್ನುವವರ ಮನೆ ಬಾಗಿಲು ಬಡಿದಿದ್ದ. ಈ ಬಗ್ಗೆ ಯೂಸುಫ್ ಅವರು ಚೇತನ್ ತಾಯಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು.

ಕೂಡಲೇ ಯೂಸುಫ್ ಮನೆಗೆ ಬಂದ ಚೇತನ್ ತಾಯಿ ನಾಯಿಯನ್ನು ಕಟ್ಟುವ ಸಂಕೊಲೆಯನ್ನು ಚೇತನ್ ಸೊಂಟಕ್ಕೆ ಕಟ್ಟಿ ಮನೆಗೆ ಎಳೆದೊಯ್ದಿದ್ದರು. ಇದಕ್ಕೆ ಯೂಸುಫ್ ಸೇರಿದಂತೆ ಸ್ಥಳೀಯ ನಿವಾಸಿಗಳು ಸಾಥ್‌ ನೀಡಿದ್ದರು. ಎಳೆದೊಯ್ಯುವ ಸಂದರ್ಭದಲ್ಲಿ ಚೇತನ್‌ನ ಕುತ್ತಿಗೆಗೆ ಸಂಕೋಲೆ ಸುತ್ತಿಕೊಂಡಿದೆ ಎನ್ನಲಾಗಿದೆ.  ಇದರಿಂದಾಗಿ ಚೇತನ್‌ ಸಾ*ವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಆದರೆ ಚೇತನ್ ನೇಣು ಬಿಗಿದು ಸಾ*ವನ್ನಪ್ಪಿದ್ದಾನೆ ಎಂದು ತಾಯಿ ಪೊಲೀಸರಿಗೆ ದೂರು ನೀಡಿದ್ದರು.

ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ಪ್ರಕರಣ; ವೀಡಿಯೋ, ಫೋಟೋ ಅಪ್ಲೋಡ್ ಮಾಡಿದ್ದಾತ ಅರೆಸ್ಟ್

ಮೃ*ತ ದೇಹ ನೋಡಿ ಅನುಮಾನಗೊಂಡ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಕೊಂಡಿದ್ದರು. ಘಟನೆಗೆ ಸಂಬಂಧಿಸಿ ತಾಯಿ ಉಮಾವತಿ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿರುವ ಪೋಲೀಸರು ಮೃ*ತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಳೂರಿಗೆ ರವಾನಿಸಿದ್ದಾರೆ. ಪುತ್ತೂರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಾಗಿದೆ.

Continue Reading

LATEST NEWS

Trending