Connect with us

DAKSHINA KANNADA

ಶಕ್ತಿನಗರದಲ್ಲಿ ಮಹಿಳೆ ಮನೆಗೆ ನುಗ್ಗಿ ದಾಂಧಲೆ : ರೌಡಿ ಶೀಟರುಗಳ ಸಹಿತ 7 ಆರೋಪಿಗಳ ಬಂಧನ..!

Published

on

ಮಂಗಳೂರು : ಮಹಿಳೆಯೊಬ್ಬಳ ಮನೆಗೆ ಮಾರಕಾಸ್ತ್ರಗಳೊಂದಿಗೆ ನುಗ್ಗಿ ದಾಂಧಲೆ ನಡೆಸಿ ಕೊಲೆ ಬೆದರಿಕೆ ಹಾಕಿದ ಆರೋಪದಡಿ ಏಳು ಮಂದಿ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಇದರಲ್ಲಿಅನೇಕರು ಮಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ರೌಡಿ ಶೀಟರ್ ಗಳಾಗಿದ್ದಾರೆ. ಮಂಗಳೂರಿನ ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಶಕ್ತಿನಗರ ಪರಿಸರದಲ್ಲಿ 20ರ ಹರೆಯದ ಯುವತಿಯೊಬ್ಬಳಿಗೆ ಹೇಮಂತ ಎಂಬಾತ ದಿನನಿತ್ಯ ಕೀಟಲೆ ನೀಡುತ್ತಿದ್ದ.

ಈ ಹಿನ್ನೆಲೆಯಲ್ಲಿ ಯುವತಿಯ ಪೋಷಕರು ಆಕೆಗೆ ತೊಂದರೆ ನೀಡಬೇಡ ಎಂದಾಗ ಅವರಿಗೆ ಫೋನ್ ಮಾಡಿ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಹೇಮಂತ್ ರೌಡಿಶೀಟರ್ ಗಳಾಗಿರುವ ತನ್ನ ಸ್ನೇಹಿತರನ್ನು ಆಕೆಯ ಮನೆಗೆ ಕರೆದುಕೊಂಡು ಹೋಗಿ ಹೋಗಿ ಆಕೆಯನ್ನು ಇಷ್ಟಪಟ್ಟಿದ್ದೇನೆ.

ಮದುವೆ ಮಾಡಬೇಕು ಎಂದು ಬೆದರಿಕೆ ಹಾಕಿದ್ದಾನೆ. ಜೊತೆಗೆ ಮನೆಯೊಳಗಡೆ ಇದ್ದ ಮಿಕ್ಸಿ, ಟಿವಿ ಸೇರಿದಂತೆ ಇತರ ಸೊತ್ತುಗಳನ್ನು ಒಡೆದು ಹಾಕಿ ದಾಂಧಲೆ ನಡೆಸಿದ್ದಾನೆ.

ಅಲ್ಲದೆ ಮನೆಯಲ್ಲಿದ್ದ ಯುವತಿಯ ಪೋಷಕರಿಗೆ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲು ಯತ್ನಿಸಿದ್ದರು. ಬಳಿಕ ಮನೆಯವರ ಬೊಬ್ಬೆ ಕೇಳಿ ಅಕ್ಕಪಕ್ಕದ ಮನೆಯವರು ಧಾವಿಸಿ ಬಂದಾಗ ಆರೋಪಿಗಳು ಬಂದ ದ್ವಿಚಕ್ರ ವಾಹನಗಳಲ್ಲಿ ಪರಾರಿಯಾಗಿದ್ದರು.

ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು, ಈ ಸಂಬಂಧ ಕಾರ್ಯಾಚರಣೆ ನಡೆಸಿದ ಕಂಕನಾಡಿ ನಗರ ಠಾಣೆಯ ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ರಂಜಿತ್ ಕೋಡಿಕಲ್, ಅವಿನಾಶ್ ಸುಂಕದಕಟ್ಟೆ, ಪ್ರಜ್ಞಾಸ್ ಆಲಿಯಾಸ್ ಪಜ್ಜು, ದೀಕ್ಷಿತ್ ಆಲಿಯಾಸ್ ದೀಚು, ಹೇಮಂತ್ ಬಾರೆಬೈಲ್, ಧನುಶ್ ಆಲಿಯಾಸ್ ಧನು, ಯತಿರಾಜ್ ಕುಂಜತ್ತಬೈಲ್ ಬಂಧಿತ ಆರೋಪಿಗಳಾಗಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಎನ್ ಶಶಿ ಕುಮಾರ್ ಪ್ರಕರಣದಲ್ಲಿ 7 ಮಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದೇವೆ.

ಇವರಲ್ಲಿ ಅನೆಕರು ಈ ಹಿಂದೆ ಕೂಡ ಅನೇಕ ಪ್ರಕರಣಗಳಲ್ಲಿ ಭಾಗಿಯಾಗಿದ್ದು ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಜೊತೆಗೆ ಅನೇಕರು ರೌಡಿ ಶೀಟರ್ ಗಳಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

DAKSHINA KANNADA

ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ

Published

on

ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಎ.26ರಂದು ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್‌ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವ ಮೊದಲು ಯೋಚಿಸಿ. ಏಕೆಂದರೆ, ಬೂತ್‌ಗಳ ಆವರಣದಲ್ಲಿ ಅವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಬೂತ್‌ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು. ಮತದಾರರು ಮತ ಚಲಾಯಿಸಲು ಹೋಗುವ ಮೊದಲು ಫೋನ್‌ಗಳನ್ನು ಇಡಲು ವಿಶೇಷ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

mobile not allowed

ಈ ಹಿಂದೆ ಮತಗಟ್ಟೆಗೆ ಮೊಬೈಲ್ ಕೊಂಡೊಯ್ದು ಫೊಟೊ ಹಾಗೂ ವೀಡಿಯೋಗಳನ್ನು ಮಾಡಿದ್ದ ಘಟನೆ ನಡೆದಿತ್ತು. ಹಾಗಾಗಿ ಈ ಬಾರಿ ಮೊಬೈಲ್ ಫೋನ್ ಗಳನ್ನು ಮತಗಟ್ಟೆಯ ಒಳಗಡೆ ಪ್ರವೇಶಿಸುವ ಮೊದಲು ಪ್ರಿಸೈಡಿಂಗ್ ಆಫೀಸರ್ ಬಳಿ ಟ್ರೇಯಲ್ಲಿ ಇಡುವ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಆ ಟ್ರೇಯನ್ನು ಪೊಲೀಸರು ಅಥವಾ ಚುನಾವಣಾ ಅಧಿಕಾರಿಗಳು ಕಾವಲು ಕಾಯುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮುಂದೆ ಓದಿ..; ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

ಮತದಾನ ಮಾಡುವಾಗ ಫೋನ್‌ಗಳನ್ನು ಟ್ರೇನಲ್ಲಿ ಇಡಲು ಸೂಚಿಸಬೇಕೇ ಅಥವಾ ಅವುಗಳನ್ನು ಸೈಲೆಂಟ್ ಮೋಡ್‌ನಲ್ಲಿ ಇಡುವಂತೆ ಹೇಳಬೇಕೇ ಎಂಬ ನಿರ್ಧಾರ ಕೈಗೊಳ್ಳುವುದನ್ನು ಪ್ರಿಸೈಡಿಂಗ್ ಆಫೀಸರ್ ವಿವೇಚನೆಗೆ ಬಿಡಲಾಗಿದೆ. ಕೆಲವು ಸಂದರ್ಭಗಳಲ್ಲಿ, ಮತಗಟ್ಟೆಯೊಳಗೆ ಫೋನ್‌ಗಳನ್ನು ಅನುಮತಿಸದಿರಲು ಚುನಾವಣಾಧಿಕಾರಿಗಳು ನಿರ್ಧರಿಸಿದ್ದಾರೆ. ಇದು ಕೆಲವೇ ಸೆಕೆಂಡುಗಳ ವಿಷಯವಷ್ಟೆ. ಮತದಾನದ ಸಮಯದಲ್ಲಿ ಗೋಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತದಾರರು ಮತದಾನ ಮಾಡುವಾಗ ಅವುಗಳನ್ನು ಬಳಸಬಾರದು ಎಂದು ಮಾತ್ರ ನಾವು ಹೇಳುತ್ತಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ. ಸಿಇಒ, ಜಿಲ್ಲಾಧಿಕಾರಿಗಳು ಮತ್ತು ಇತರ ಚುನಾವಣಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Continue Reading

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

LATEST NEWS

Trending