Connect with us

    BANTWAL

    ವಿಟ್ಲ: ಕೋರೆಗೆ ನುಗ್ಗಿ ಕುತ್ತಿಗೆಗೆ ಕತ್ತಿ ಇಟ್ಟು ಹಣಕ್ಕಾಗಿ ಬೇಡಿಕೆ

    Published

    on

    ವಿಟ್ಲ: ಕಲ್ಲಿನ ಕೋರೆಗೆ ಅಕ್ರಮವಾಗಿ ಪ್ರವೇಶ ಮಾಡಿದ ತಂಡವೊಂದು ಕೋರೆ ನಿರ್ವಹಿಸುತ್ತಿದ್ದ ವ್ಯಕ್ತಿಗೆ ಕತ್ತಿ ತೋರಿಸಿ ಒಂದು ಲಕ್ಷ ರೂ. ಗೆ ಬೇಡಿಕೆ ಇಟ್ಟ ಘಟನೆ ಕರೋಪಾಡಿ ಗ್ರಾಮದ ಎಡಂಬಳದಲ್ಲಿ ನಿನ್ನೆ ನಡೆದಿದೆ.


    ಕರೋಪಾಡಿ ಗ್ರಾಮದ ಎಡಂಬಳ ನಿವಾಸಿ ಯು.ಕೆ ಅಬ್ದುಲ್ ಖಾದರ್ ನೀಡಿದ ದೂರಿನಂತೆ ಅಹಮ್ಮದ್ ನಿಝಾರ್ ಮತ್ತು ಶರಿಫ್ ಅವರು ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಯು.ಕೆ ಅಬ್ದುಲ್ ಖಾದರ್ ಅವರ ಮಾವ ಎ.ಎಂ ಇಸ್ಮಾಯಿಲ್ ರವರ ಅವರ ಮಾಲಕತ್ವದ ಕಲ್ಲಿನ ಕೋರೆ ಇದ್ದು, ಈ ಕೋರೆಯ ಉಸ್ತುವಾರಿಯನ್ನು ಯು ಕೆ ಅಬ್ದುಲ್ ಖಾದರ್ ಅವರು ಸುಮಾರು 5 ವರ್ಷದಿಂದ ನೋಡಿಕೊಳ್ಳುತ್ತಿದ್ದಾರೆ.

    bty

    ಯು ಕೆ ಅಬ್ದುಲ್ ಖಾದರ್ ನಿನ್ನೆ ಸಂಜೆ 4 ಗಂಟೆಗೆ ಕೋರೆಯ ಬಳಿ ಇರುವ ರೂಮ್‌ನಲ್ಲಿ ಇದ್ದ ಸಮಯ ಪಿಕಪ್ ನಲ್ಲಿ ಬಂದ ಪರಿಚಯದ ಅಹಮ್ಮದ್ ನಿಝಾರ್ ಮತ್ತು ಶರಿಫ್ ಎಂಬುವವರು ಏಕಾಏಕಿಯಾಗಿ ಯು ಕೆ ಅಬ್ದುಲ್ ಖಾದರ್ ಇರುವ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿದ್ದಾರೆ.

    ಈ ವೇಳೆ ಕತ್ತಿಯನ್ನು ಹಿಡಿದುಕೊಂಡು ಬಂದು ‘ನಮಗೆ ನೀನು ಒಂದು ಲಕ್ಷ ಹಣ ನೀಡಬೇಕು ಇಲ್ಲವಾದರೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ’ ಎಂದು ಬೆದರಿಕೆ ಹಾಕಿದ್ದಾರೆ.

    ಅದಕ್ಕೆ ಹಣ ಯಾಕೆ ನೀಡಬೇಕೆ ಎಂದು ಖಾದರ್ ಆಕ್ಷೇಪಿಸಿದಕ್ಕೆ ಅವರು ಕೈಯಲ್ಲಿ ಹಿಡಿದುಕೊಂಡು ಬಂದಿದ್ದ ಕತ್ತಿಯನ್ನು ತೋರಿಸಿ ನೀನು ನಮಗೆ ಹಣ ನೀಡದಿದ್ದರೆ ನಿನ್ನನ್ನು ಇದೇ ಕತ್ತಿಯಿಂದ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ.

    ಆ ಸಮಯ ಖಾದರ್ ಬೊಬ್ಬೆ ಹಾಕಿದಾಗ ಕಲ್ಲಿನ ಕೋರೆಯಲ್ಲಿ ಕೆಲಸ ಮಾಡುತ್ತಿದ್ದ ಕೀರ್ತಿ ಭಟ್ ರಕ್ಷಣೆಗೆ ಬಂದಾಗ ಕೀರ್ತಿಭಟ್‌ರವರ ಕುತ್ತಿಗೆಯ ಬಳಿ ಕತ್ತಿಯನ್ನಿಟ್ಟು ನಮಗೆ ಹಣ ನೀಡದೆ ಕೋರೆಯನ್ನು ನಡೆಸಿದರೆ ನಿನ್ನನ್ನು ಕೂಡಾ ಕೊಲ್ಲದೆ ಬಿಡುವುದಿಲ್ಲವಾಗಿ ಬೆದರಿಕೆ ಹಾಕಿದ್ದಾರೆ.

    ಆ ಸಮಯಕ್ಕೆ ಕಲ್ಲಿನ ಕೋರೆಯಲ್ಲಿ ಕೆಲಸ ಮಾಡುತ್ತಿದ್ದ ಪವಾಝ್ ಹಾಗೂ ಇತರ ಜನರು ಬಳಿಗೆ ಬರುವುದನ್ನು ಕಂಡು ಪಿಕಪ್ ವಾಹನ ಬಿಟ್ಟು ಓಡಿ ಪರಾರಿಯಾಗಿದ್ದಾರೆಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

    BANTWAL

    ಕಲ್ಲಡ್ಕದಲ್ಲಿ ಸರ್ವೀಸ್ ರಸ್ತೆಗೆ ಡಾಮರು

    Published

    on

    ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.

    ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    Continue Reading

    BANTWAL

    ಮಂಗಳೂರು: ಯುವತಿ ವಿಚಾರದಲ್ಲಿ ಯುವಕನಿಗೆ ಥಳಿತ; ಆರೋಪಿಗಳು ಅರೆಸ್ಟ್

    Published

    on

    ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ ಆರೋಪಿಗಳಾದ ಕಂಚಿನಡ್ಕದ ನಿವಾಸಿಗಳಾಗಿರುವ ಮಹಮ್ಮದ್‌ ಸಪ್ವಾನ್( 25), ಮಹಮ್ಮದ್‌ ರಿಜ್ವಾನ್‌ (25), ಇರ್ಪಾನ್‍(27), ಅನೀಸ್‍ ಅಹಮ್ಮದ್‍ (19), ನಾಸೀರ್‍ (27), ಇಬ್ರಾಹಿಂ, ಶಾಕೀರ್‍ (18)ನನ್ನು ಬಂಧಿಸಲಾಗಿದೆ.

    ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್‍ ಮುಸ್ತಾಫ್‍ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.

     

    ಇದನ್ನೂ ಓದಿ : ಬಂಟ್ವಾಳ : ಮನೆಗೆ ಬಂದಿದ್ದ ಪ್ರಿಯಕರನ್ನು ಅ*ರೆಬೆತ್ತಲು ಮಾಡಿ ಹ*ಲ್ಲೆ

     

    ಮಹಮ್ಮದ್‍ ಮುಸ್ತಾಫ್‍ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್‍ ಮುಸ್ತಾಫ್‍ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.

    Continue Reading

    BANTWAL

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕ ಆತ್ಮಹ*ತ್ಯೆ

    Published

    on

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕನೋರ್ವ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಕಡೇಶಿವಾಲಯದಲ್ಲಿ ನಡೆದಿದೆ.

    ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಕಂಡಿಗ ನಿವಾಸಿ ಗಣೇಶ್(25) ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಗಣೇಶ್ ಅವರು ಸೋಮವಾರ ಮನೆಯಲ್ಲಿಯೇ ಸಂಜೆ ಹುಲ್ಲಿಗೆ ಬಿಡುವ ವಿಷವನ್ನು ಸೇವಿಸಿದ್ದರು.

    ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    Continue Reading

    LATEST NEWS

    Trending