LATEST NEWS
ಉದ್ಯಮಿ ಎ.ಕೆ.ಜಯರಾಮ್ ಶೇಕರಿಗೆ ಜೀವಮಾನ ಶ್ರೇಷ್ಠ ಸಾಧಕ ಪ್ರಶಸ್ತಿ
ಮಂಗಳೂರು: ದಕ್ಷಿಣ ಕನ್ನಡ ಅಟೋಮೊಬೈಲ್ ಮತ್ತು ಟೈರ್ ಡೀಲರ್ಸ್ ಅಸೋಸಿಯೇಷನ್ ನ 40 ನೇ ವಾರ್ಷಿಕ ಮಹಾಸಭೆ ಸೈಂಟ್ ಸೆಬಾಸ್ಟಿನ್ ಪ್ಲಾಟಿನಂ ಜ್ಯುಬಿಲಿ ಸಭಾಂಗಣದಲ್ಲಿ ನಡೆಸಲಾಗಿದೆ. ಈ ವಾರ್ಷಿಕ ಮಹಾಸಭೆಯಲ್ಲಿ ವಿಶೇಷವಾಗಿ ಉದ್ಯಮದ ದಿಗ್ಗಜ ಎಂದು ಹೆಸರು ಗಳಿಸಿರುವ ಎ.ಕೆ.ಜಯರಾಮ್ ಶೇಕ ಅವರಿಗೆ ಜೀವಮಾನ ಸಾಧನೆಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಕೇವಲ 8 ನೇ ತರಗತಿ ಕಲಿತಿರುವ ಎ.ಕೆ.ಜಯರಾಮ್ ಶೇಕ ಅವರಿಗೆ ಈಗ 80 ವರ್ಷ ವಯಸ್ಸಾಗಿದ್ದು, ಬಸ್ ಕಂಡೆಕ್ಟರ್ ಆಗಿ ತಮ್ಮ ವೃತ್ತಿ ಜೀವನ ಆರಂಭಿಸಿದ್ದರು. 1972 ರಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಅವರಿಂದ 15 ಸಾವಿರಕ್ಕೆ ಬಸ್ ಖರೀದಿಸಿ ಮೊದಲ ಬಸ್ ಮಾಲಕರಾಗಿದ್ದರು. ಬಳಿಕ ತಮ್ಮ ಯಶಸ್ಸಿನ ಮೆಟ್ಟಿಲು ಏರುತ್ತಾ ಬಂದ ಇವರು ಮೆಹೇಶ್ ಮೋಟರ್ಸ್ ಮತ್ತು ಮಹೇಶ್ ಅಟೋ ಸ್ಟೋರ್ಸ್ ಕಟ್ಟಿ ಬೆಳೆಸಿದ ಯಶಸ್ವಿ ಉದ್ಯಮಿಯಾಗಿದ್ದಾರೆ.
ದಕ್ಷಿಣ ಕನ್ನಡ ಬಸ್ ಮಾಲೀಕರ ಸಂಘದ ಅಧ್ಯಕ್ಷರಾಗಿ, ಕರ್ನಾಟಕ ಬಸ್ ಮಾಲೀಕರ ಒಕ್ಕೂಟದ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸಂಘದ ಅಧ್ಯಕ್ಷೆ ಕಸ್ತೂರಿ ಪ್ರಭಾಕರ ಪೈ, ಇತರ ಪದಾಧಿಕಾರಿಗಳು ಪ್ರಶಸ್ತಿ ಪ್ರದಾನ ಮಾಡಿದರು. ಕಾರ್ಯದರ್ಶಿ ಕೆ. ವಿಲಾಸ್ ಕುಮಾರ್, ಉಪಾಧ್ಯಕ್ಷ ಹರ್ಷಕುಮಾರ್ ಕೇದಿಗೆ, ಕೋಶಾಧಿಕಾರಿ ಮಾರೂರು ಶಶಿಧರ ಪೈ, ಜಂಟಿ ಕೋಶಾಧಿಕಾರಿ ಕೆ.ಲಕ್ಷ್ಮೀನಾರಾಯಣ ನಾಯಕ್, ವ್ಯವಸ್ಥಾಪನಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
DAKSHINA KANNADA
ಫ್ರಾಡ್ ಕಾಲ್; ಬ್ಯಾಂಕ್ ಖಾತೆಯಿಂದ 76 ಸಾವಿರ ವಂಚನೆ
ಕಾರ್ಕಳ: ಬ್ಯಾಂಕ್ ಅಕೌಂಟ್‌ನಲ್ಲಿ ಸಮಸ್ಯೆಯಾಗಿದ್ದು, ಅದನ್ನು ನಿವಾರಿಸುವುದಾಗಿ ವ್ಯಕ್ತಿಯೊಬ್ಬರಿಗೆ 76 ಸಾವಿರ ರೂ. ವಂಚನೆ ಮಾಡಿರುವ ಘಟನೆ ಕಾರ್ಕಾಳದಲ್ಲಿ ನಡೆದಿದೆ.
ಕಸಬಾ ಗ್ರಾಮದ ಬಾಲಚಂದ್ರ ಅವರು ಆಕ್ಸಿಸ್ ಬ್ಯಾಂಕ್ ಹಾಗೂ ಎಚ್‌ಡಿಎಫ್‌ಸಿ ಬ್ಯಾಂಕ್‌ಗಳಲ್ಲಿ ಕ್ರೆಡಿಟ್ ಕಾರ್ಡ್ ಹೊಂದಿದ್ದರು. ಸೆ. 30 ರಂದು ಮನೋಜ್ ಶರ್ಮಾ ಕರೆ ಮಾಡಿ, ಎಚ್‌ಡಿಎಫ್‌ಸಿ ಬ್ಯಾಂಕ್ ಸಮಸ್ಯೆಯನ್ನು ನಿವಾರಿಸುತ್ತೇವೆ ಎಂದು ಹೇಳಿ ಎಲ್ಲಾ ಮಾಹಿತಿಗಳನ್ನು ತೆಗೆದುಕೊಂಡು, ಕೊನೆಯದ್ದಾಗಿ ಒಟಿಪಿ ಪಡೆದುಕೊಂಡನು.
ಅ.1 ರಂದು ಸಂಜೆ 4 ರಿಂದ 6 ರ ಅವಧಿಯಲ್ಲಿ ಎರಡೂ ಬ್ಯಾಂಕ್‌ನ ಕ್ರೆಡೀಟ್ ಕಾರ್ಡ್ ಮೂಲಕ 76,118 ರೂ. ಕಡಿತವಾಗಿತ್ತು. ಈ ಬಗ್ಗೆ ಕಾರ್ಕಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಸುತ್ತಿದ್ದಾರೆ.
LATEST NEWS
SHOCKING NEWS : ಮತ್ತೆ ಮೂವರು ಪಾಕಿಸ್ತಾನಿ ಪ್ರಜೆಗಳ ಬಂಧನ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳ ಹಾವಳಿ ಹೆಚ್ಚಾಗುತ್ತಿದ್ದು, ಪೀಣ್ಯದಲ್ಲಿ ವಾಸವಿದ್ದ ಮೂವರು ಪಾಕಿಸ್ತಾನಿ ಪ್ರಜೆಗಳನ್ನು ಗುರುವಾರ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕೆಲವು ದಿನಗಳ ಹಿಂದೆ ಬೆಂಗಳೂರು ಹೊರವಲಯದ ಜಿಗಣಿಯಲ್ಲಿ ನಾಲ್ವರನ್ನು ಬಂಧಿಸಿಲಾಗಿತ್ತು. ಇದೀಗ ಪೀಣ್ಯದಲ್ಲಿ ಗಂಡ, ಹೆಂಡತಿ ಮತ್ತು ಅವರ ಮಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ಕೂಡಾ ಜಿಗಣಿಯಲ್ಲಿದ್ದಂತೆ ನಕಲಿ ಗುರುತಿನ ಚೀಟಿ ಬಳಸುತ್ತಿದ್ದರು ಎಂದು ತಿಳಿದು ಬಂದಿದೆ.
ರಾಜ್ಯ ಹಾಗೂ ದೇಶದ ವಿವಿಧ ಭಾಗಗಳಲ್ಲಿ ನೆಲೆಸಿರುವ ಇತರರನ್ನು ಗುರುತಿಸಲು ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
DAKSHINA KANNADA
ಮಂಗಳೂರಿಗೆ ಬಂದ ಕರ್ನಾಟಕ ಸುವರ್ಣ ರಥ
ಮಂಗಳೂರು: ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರೈಸಿದ ಹಿನ್ನೆಯಲ್ಲಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ಸುವರ್ಣ ಕರ್ನಾಟಕ ರಥ ಮಂಗಳೂರಿಗೆ ಆಗಮಿಸಿದೆ.
ರಾಜ್ಯದ ಪ್ರತಿ ಜಿಲ್ಲೆ, ತಾಲೂಕಿನಲ್ಲಿ ಸಂಚರಿಸುವ ಈ ರಥವನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಸ್ವಾಗತಿಸುವ ಕಾರ್ಯಕ್ರಮ ಸರಳ ರೀತಿಯುಲ್ಲಿ ನಡೆಯಿತು. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವ ಕಾರಣ ಆಧಿಕಾರಿಗಳು ರಥವನ್ನು ಸ್ವಾಗತಿಸಿದ್ದಾರೆ. ಕುದ್ಮುಲ್ ರಂಗರಾವ್ ಸಭಾಂಗಣದಲ್ಲಿ ರಥಕ್ಕೆ ಸ್ವಾಗತ ಕೋರಲಾಗಿದ್ದು, ಅಧಿಕಾರಿಗಳಿಂದಲೇ ಸರಳ ಕಾರ್ಯಕ್ರಮ ಕೂಡಾ ಆಯೋಜಿಸಲಾಗಿದೆ.
ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್. ಆನಂದ್ ಅವರ ನೇತೃತ್ವದಲ್ಲಿ ರಥವನ್ನು ಸ್ವಾಗತಿಸಲಾಗಿದ್ದು, ಜಿಲ್ಲೆಯ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು. ಕಳೆದ ವರ್ಷ ನವೆಂಬರ್ 1 ರಿಂದ ಈ ರಥ ರಾಜ್ಯದಾದ್ಯಂತ ಸಂಚರಿಸಿ ಕರ್ನಾಟಕ ಸುವರ್ಣ ಸಂಭ್ರಮದ ಸಂದೇಶ ಸಾರುತ್ತಿದೆ.
- DAKSHINA KANNADA7 days ago
ಕೆಬಿಬಿಯಲ್ಲಿ ಮಿಂಚಿದ ಮಂಗಳೂರು ಬೆಡಗಿ; ಕೊನೆಗೂ ನನಸಾದ ಅಪೂರ್ವ ಶೆಟ್ಟಿ ಕನಸು
- BIG BOSS4 days ago
BBK11 ವೇದಿಕೆಗೆ ಬರುತ್ತಿದ್ದಂತೆ ರೀಲ್ಸ್ ಸ್ಟಾರ್ ಮೇಲೆ ಕೋಪಗೊಂಡ ಕಿಚ್ಚ: ಇಂತವರನ್ನ ಏಕೆ ಕರೆಸಿದ್ರಿ ಎಂದು ಗರಂ?
- BIG BOSS4 days ago
ಚೈತ್ರಾ ಕುಂದಾಪುರಗೆ ಮೊದಲ ದಿನವೇ ಹೊಸ ಬಿರುದು ಕೊಟ್ಟ ಲಾಯರ್ ಜಗದೀಶ್
- BIG BOSS4 days ago
ಭ್ರಷ್ಟರ ವಿರುದ್ಧ ಗುಡುಗಿದ ಸ್ಪರ್ಧಿ ಲಾಯರ್ ಜಗದೀಶ್ಗೆ ಕಿಚ್ಚ ವಾರ್ನಿಂಗ್..!