Connect with us

BELTHANGADY

ನಿಶ್ಚಿತಾರ್ಥಗೊಂಡ ಯುವಕನ ಪೆಟ್ರೋಲ್‌ ಹಾಕಿ ಸುಟ್ಟ ಕಿರಾತಕರಿಗೆ ಜೀವಾವಧಿ ಶಿಕ್ಷೆ

Published

on

ಮಂಗಳೂರು: ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕನನ್ನು ಕಾರಿನಲ್ಲಿ ಅಪಹರಿಸಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿತ ಆರು ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಮಂಗಳೂರಿನ 1ನೇ ಜಿಲ್ಲಾ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಆರೋಪ ಸಾಬೀತಾಗಿದ್ದು, ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ ಪ್ರಕಟವಾಗಿದೆ.


ಬೆಳ್ತಂಗಡಿ ತಾಲೂಕಿನ ದಿಡುಪೆ ನಿವಾಸಿ ಸುರೇಶ್ ನಾಯ್ಕ (30) ಎಂಬವರು ಕೊಲೆಯಾದವರು. ಆನಂದ ನಾಯ್ಕ, ಪ್ರವೀಣ್ ನಾಯ್ಕ, ವಿನಯ ಕುಮಾರ್, ಪ್ರಕಾಶ್ , ಲೋಕೇಶ್, ಮೇಲಂತಬೆಟ್ಟು ನಿವಾಸಿ ನಾಗರಾಜ ಪ್ರಕರಣದ ಆರೋಪಿಗಳು.
ಪ್ರಕರಣದ ವಿವರ
ವಿವಾಹಿತನಾಗಿ ಮಕ್ಕಳನ್ನು ಹೊಂದಿದ್ದ ನಾವೂರ ಮೂಲದ ಆನಂದ ನಾಯ್ಕ ಎಂಬಾತ ಯುವತಿಯೊಬ್ಬಳನ್ನು ಪ್ರೀತಿಸಿ, ಆಕೆಯನ್ನು ಮದುವೆಯಾಗುವ ಸಂಬಂಧ ಯುವತಿಯ ತಂದೆಯಲ್ಲಿ ವಿಷಯ ಪ್ರಸ್ತಾಪಿಸಿದ್ದ. ಆದರೆ ಯುವತಿ ಮನೆಯವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು.
ಕೆಲವು ದಿನಗಳ ಬಳಿಕ ದಿಡುಪೆ ನಿವಾಸಿ ಸುರೇಶ್ ನಾಯ್ಕ ಎಂಬಾತನ ಜತೆ ಯುವತಿಯ ಮದುವೆ ಸಂಬಂಧ ಮಾತುಕತೆ ನಡೆದು, 2017ರ ಎಪ್ರಿಲ್ 30ರಂದು ನಿಶ್ಚಿತಾರ್ಥಕ್ಕೆ ದಿನ ನಿಗದಿಯಾಗಿತ್ತು. ಈ ವಿಷಯ ತಿಳಿದ ಆನಂದ ನಾಯ್ಕ ಯುವತಿಯ ಮನೆಯವರಲ್ಲಿ ವರ ಸುರೇಶ್ ನಾಯ್ಕನ ಮೊಬೈಲ್ ನಂಬರ್ ಪಡೆದು ‘ನೀನು ಮದುವೆಯಾಗುವ ಯುವತಿಯನ್ನು ನಾನು ಪ್ರೀತಿಸುತ್ತಿದ್ದು ಈ ಸಂಬಂಧವನ್ನು ಬಿಟ್ಟುಬಿಡು’ ಎಂದು ಒತ್ತಾಯಿಸಿದ್ದಾನೆ.


ಇದಕ್ಕೆ ಒಪ್ಪದಿದ್ದಾಗ ಸುರೇಶ್ ನಾಯ್ಕರಿಗೆ ಜೀವ ಬೆದರಿಕೆಯನ್ನೂ ಆರೋಪಿ ಹಾಕಿದ್ದಾನೆ. ನಂತರ 2017 ಜುಲೈ 29ರಂದು ಎರಡನೇ ಆರೋಪಿ ಪ್ರವೀಣ್ ನಾಯ್ಕ ಎಂಬಾತನು ಸುರೇಶ್ ಗೆ ಕರೆ ಮಾಡಿ ಮಾತನಾಡಿ ‘ಗಂಗಾ ಕಲ್ಯಾಣ ಯೋಜನೆಯಡಿ ಹಣ ಸಿಗುವ ಬಗ್ಗೆ ಮಾಹಿತಿ ನೀಡಿ, ನೀವು ಉಜಿರೆಗೆ ಬನ್ನಿ’ ಎಂದು ತಿಳಿಸಿದ್ದಾನೆ.
ಅದರಂತೆ ಸುರೇಶ್ ನಾಯ್ಕ ಉಜಿರೆಗೆ ಬಂದಾಗ ಆರೋಪಿಗಳಾದ ಪ್ರವೀಣ್ ನಾಯ್ಕ, ವಿನಯ್, ಪ್ರಕಾಶ್, ಲೋಕೇಶ್, ನಾಗರಾಜ್ ಸೇರಿ ಮಾರುತಿ ಓಮ್ನಿಯಲ್ಲಿ ಸುರೇಶ್ ನನ್ನು ಪಟ್ರಮೆ-ಧರ್ಮಸ್ಥಳ ರಸ್ತೆಯಲ್ಲಿ ಕರೆದುಕೊಂಡು ಹೋಗಿದ್ದಾರೆ. ಈ ಸಂದರ್ಭ ಯುವಕನಲ್ಲಿ ಮದುವೆ ನಿರಾಕರಿಸಲು ತಂಡ ಒತ್ತಡ ಹಾಕಿದ್ದು, ಇದಕ್ಕೆ ಒಪ್ಪದಿದ್ದಾಗ ಕುತ್ತಿಗೆಗೆ ಹಗ್ಗದಿಂದ ಬಿಗಿದು ಕೊಲೆ ಮಾಡಿದ್ದಾರೆ.
ಬಳಿಕ ಆನಂದ್ ನಾಯ್ಕ ಸೇರಿ ಧರ್ಮಸ್ಥಳದ ಅವೆಕ್ಕಿಯ ತಗ್ಗು ಪ್ರದೇಶದಲ್ಲಿ ಮೃತದೇಹಕ್ಕೆ ಗೋಣಿ ಚೀಲವನ್ನು ಸುತ್ತಿ ಪೆಟ್ರೋಲ್ ಹಾಕಿ ಗುರುತು ಸಿಗದಂತೆ ಸುಟ್ಟು ಹಾಕಿದ್ದಾರೆ.

ಮೃತಪಟ್ಟ ವ್ಯಕ್ತಿಯ ಸೊತ್ತುಗಳನ್ನು ಕೊಯ್ಯೂರು ಕಟ್ಟ ಎಂಬಲ್ಲಿ ಮೋರಿಯ ಕೆಳಗೆ ಸುಟ್ಟು ಹಾಕಿದ್ದರು. ಘಟನೆ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರು ಮಂದಿ ಆರೋಪಿಗಳನ್ನು ಮೇ 4ರಂದು ಬಂಧಿಸಲಾಗಿತ್ತು.

ಧರ್ಮಸ್ಥಳ ಪೊಲೀಸ್ ಠಾಣೆಯ ಅಂದಿನ ಇನ್‌ಸ್ಪೆಕ್ಟರ್ ಟಿ.ಪಿ. ರಾಮಲಿಂಗೇ ಗೌಡ ಪ್ರಕರಣದ ಸಮಗ್ರ ವಿಚಾರಣೆ ನಡೆಸಿ ದೋಷಾರೋಪಣ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಪ್ರಕರಣದ ಸಮಗ್ರ ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಟಿ.ಪಿ. ರಾಮಲಿಂಗೇಗೌಡ ಅವರ ಆರೋಪ ಸಾಬೀತುಪಡಿಸಿ ತೀರ್ಪು ನೀಡಿದ್ದಾರೆ. ಅಪರಾಧಿಗಳ ವಿರುದ್ಧ ಐಪಿಸಿ 302 (ಕೊಲೆ), 201 (ಸಾಕ್ಷ್ಯನಾಶ), 120ಬಿ (ಸಂಚು), 149 (ಸಮಾನ ಉದ್ದೇಶಿತ ಕೃತ್ಯ) ಪ್ರಕರಣ ಸಾಬೀತುಗೊಂಡಿದೆ.

ಪ್ರಕರಣದಲ್ಲಿ 33 ಮಂದಿ ಸಾಕ್ಷಿ ವಿಚಾರಣೆ ನಡೆಸಲಾಗಿದೆ. ಸರಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಶೇಖರ್ ಶೆಟ್ಟಿ ವಾದಿಸಿದ್ದರು. ಆರೋಪಿಗಳ ಪತ್ತೆ ಕಾರ್ಯಾಚರಣೆಯಲ್ಲಿ ಬಂಟ್ವಾಳ ವಿಭಾಗದ ಅಂದಿನ ಡಿವೈಎಸ್ಪಿ ರವೀಶ್ ಸಿ.ಆರ್ ನೇತೃತ್ವದಲ್ಲಿ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ, ಪ್ರವೀಣ್ ದೇವಾಡಿಗ, ವೆಂಕಟೇಶ್ ನಾಯ್ಕ್, ಬೆನ್ನಿಚನ್, ಪ್ರಮೋದ್ ನಾಯ್ಕ್, ಬಿಜು, ತಾಂತ್ರಿಕ ವಿಭಾಗದ ದಿವಕರ್, ಸಂಪತ್, ತಾರಾನಾಥ್ ಭಾಗಿಯಾಗಿದ್ದರು.

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

BELTHANGADY

ಬೆಳ್ತಂಗಡಿ: ಕೆರೆಗೆ ಬಿದ್ದು ಕಾಡುಕೋಣ ಸಾ*ವು.. ಸಾರ್ವಜನಿಕರಿಂದ ಅಂತ್ಯಸಂಸ್ಕಾರ

Published

on

ಬೆಳ್ತಂಗಡಿ: ಇಲ್ಲಿನ ಬೆಳಾಲು ಗ್ರಾಮಕ್ಕೆ ಸಂಬಂಧಪಟ್ಟಂತೆ ಕೊಯ್ಯೂರು ರಸ್ತೆಯ ಬದ್ಯಾರು ಎಂಬಲ್ಲಿ ಹೆಚ್ ಪದ್ಮ‌ಗೌಡ ಎಂಬವರ ತೋಟದ ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತ*ದೇಹ ಪತ್ತೆಯಾಗಿದೆ.

bison

ಮುಂದೆ ನೋಡಿ..; ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷದಿಂದ ಉಚ್ಛಾಟನೆ..!

ಈ ಕೆರೆಗೆ ಸುತ್ತ ಕಾಂಕ್ರೀಟ್ ರಿಂಗ್ ಅಳವಡಿಸಿದ್ದು ನೀರು ಕುಡಿಯಲು ಬಂದ ಕಾಡುಕೋಣ ಮೂರ್ನಾಲ್ಕು ದಿನಗಳ ಹಿಂದೆಯೇ ಬಿದ್ದು ಸಾವನ್ನಪ್ಪಿರುವ ಸಾಧ್ಯತೆ ಇದೆ. ಹೆಚ್ಚೂ ಕಮ್ಮಿ 10 ಕ್ವಿಂಟಾಲ್ ತೂಕ ಹೊಂದಿರಬಹುದೆಂದು ಅಂದಾಜಿಸಲಾಗಿದ್ದು, ಕೊಳೆತು ವಾಸನೆ ಬೀರುತ್ತಿತ್ತು. ಶೌರ್ಯ ವಿಪತ್ತು ತಂಡಕ್ಕೆ ಬಂದ ಮಾಹಿತಿಯಂತೆ ಉಜಿರೆ- ಬೆಳಾಲು ಘಟಕದ ಸಂಯೋಜಕ ಸುಲೈಮಾನ್ ಬೆಳಾಲು, ಮುಳುಗು ಪರಿಣತ ಹರೀಶ ಕೂಡುಗೆ, ಮುಹಮ್ಮದ್ ಶರೀಫ್ ಬೆಳಾಲು, ಅವಿನಾಶ್ ಭಿಡೆ ಅರಸಿಮನಕ್ಕಿ, ರವೀಂದ್ರ ಉಜಿರೆ, ಸುರೇಂದ್ರ ಉಜಿರೆ, ಅನಿಲ್ ಚಾರ್ಮಾಡಿ, ಶೌರ್ಯ ಘಟಕದ ಮಾಸ್ಟರ್ ಪ್ರಕಾಶ್ ಧರ್ಮಸ್ಥಳ, ನಳಿನ್ ಕುಮಾರ್ ಧರ್ಮಸ್ಥಳ ಮೊದಲಾದವರು ಸಾರ್ವಜನಿಕರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ ಕಾಡುಕೋಣದ ಕಳೇಬರವನ್ನು ಮೇಲೆತ್ತಿದ್ದಾರೆ. ಬಳಿಕ ಪಶುವೈದ್ಯಾಧಿಕಾರಿ ಮರಣೋತ್ತರ ಪರೀಕ್ಷೆ ಪ್ರಕ್ರೀಯೆ ನಡೆಸಿದ್ದು, ತೋಟದಲ್ಲೇ ಹೊಂಡ ತೋಡಿ ಅಂತ್ಯಸಂಸ್ಕಾರ ನಡೆಸಲಾಗಿದೆ.

Continue Reading

LATEST NEWS

Trending