Tuesday, January 19, 2021

ದಾಂಪತ್ಯಕ್ಕೆ ಕಾಲಿರಿಸಿದ ದಿನವೇ ಬಡ ಕುಟುಂಬಕ್ಕೆ ಬೆಳಕಾದ ಉಡುಪಿಯ ನವದಂಪತಿ..!

ದಾಂಪತ್ಯಕ್ಕೆ ಕಾಲಿರಿಸಿದ ದಿನವೇ ಬಡ ಕುಟುಂಬಕ್ಕೆ ಬೆಳಕಾದ ಉಡುಪಿಯ ನವದಂಪತಿ..!

ಉಡುಪಿ:ದಾಂಪತ್ಯಕ್ಕೆ ಕಾಲಿರಿಸಿದ ದಿನವೇ ನವದಂಪತಿ ಸಾರ್ಥಕ ಕೆಲಸ ಮಾಡಿದ್ದಾರೆ. ವಿದ್ಯುತ್ ಸಂಪರ್ಕವಿಲ್ಲದೆ ಸಮಸ್ಯೆಯಲ್ಲಿದ್ದ ದಲಿತ ಕುಟುಂಬವೊಂದಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಿ ಉಡುಪಿ ಜಿಲ್ಲೆಯ ಈ ದಂಪತಿ ಮಾನವವೀಯತೆ ಮೆರೆದಿದ್ದಾರೆ.

ಉಡುಪಿ ಕನ್ನರ್ಪಾಡಿ ನಿವಾಸಿ ಶರಣ್ ಶೆಟ್ಟಿ, ಮತ್ತು ನವ್ಯ ಶೆಟ್ಟಿ ಈ ವಿಶಿಷ್ಟ ಕಾರ್ಯ ಮಾಡಿ ಮಾದರಿಯಾದ ನವದಂಪತಿಯಾಗಿದ್ದಾರೆ.

ಕಳೆದ 30 ವರ್ಷಗಳಿಂದ ವಿದ್ಯುತ್ ಸಂಪರ್ಕ ಇಲ್ಲದ ದಲಿತ ಸಮುದಾಯದ ಶ್ರೀಮತಿ ಲೀಲಾ ಇವರ ಮನೆಗೆ ಕೊಡಲಾದ ವಿದ್ಯುತ್ ಸಂಪರ್ಕವನ್ನು ದಂಪತಿ ಬಂದು ಉದ್ಘಾಟಿಸಿದರು.

ಉಡುಪಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಡಿಯಾಳಿ ಮತ್ತು ಆಸರೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಈ ಮನೆಗೆ ವಿದ್ಯುತ್ ಸಂಪರ್ಕ ನೀಡಲಾಗಿತ್ತು.

ಉಡುಪಿ ಭಾಷೆಲ್ ಮಿಷನರಿ ಹಾಲಿನಲ್ಲಿ ತಮ್ಮ ಮದುವೆ ಸಂಪ್ರದಾಯ ಮುಗಿದ ತಕ್ಷಣ ವಧು- ವರರು ನೇರವಾಗಿ ಪೆರಂಪಳ್ಳಿಗೆ ಬಂದು, ಲೀಲಾ ಅವರ ಮನೆಗೆ ಬೆಳಕು ನೀಡಿದರು.

ಈ ಮನೆಗೆ ತಗಲಿದ ವಿದ್ಯುತ್ ಸಂಪರ್ಕದ ಸಂಪೂರ್ಣ ವೆಚ್ಚವನ್ನು ನವದಂಪತಿಗಳು ಆಸರೆ ಚಾರಿಟೇಬಲ್ ಟ್ರಸ್ಟ್ ಗೆ ಹಸ್ತಾಂತರಿಸಿದರು.

ದಾಂಪತ್ಯಕ್ಕೆ ಕಾಲಿರಿಸಿದ ದಿನವೇ ನವದಂಪತಿಯಾದ ಶರಣ್ ಮತ್ತು ನವ್ಯರ ಈ ಅಶಕ್ತರ ಮನೆ ಬೆಳಕುವ ಕಾರ್ಯ ನಿಜಕ್ಕೂ ಪ್ರಶಂಸನೀಯವಾಗಿದೆ.

 

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...
Copy Protected by Chetans WP-Copyprotect.