Monday, January 24, 2022

ಪುತ್ತೂರು: ಸಿಡಿಲು ಬಡಿದು ಕೃಷಿಕ ಸಾವು

ಪುತ್ತೂರು: ಸಿಡಿಲು ಬಡಿದು ಕೃಷಿಕರೊಬ್ಬರು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ದರ್ಬೆತ್ತಡ್ಕ ಎಂಬಲ್ಲಿ ಶುಕ್ರವಾರ ನಡೆದಿದೆ.

ದರ್ಬೆತ್ತಡ್ಕ ನಿವಾಸಿ ಕೃಷಿಕ ಪುರುಷೋತ್ತಮ ಪೂಜಾರಿ(47) ಮೃತಪಟ್ಟವರು. ಪುರುಷೋತ್ತಮ ಪೂಜಾರಿ ಸಂಜೆ ಮನೆಯೊಳಗಿದ್ದ ವೇಳೆ ಸಿಡಿಲು ಬಡಿದು ಗಂಭೀರ ಅಸ್ವಸ್ಥಗೊಂಡಿದ್ದರು.

ತಕ್ಷಣ ಅವರನ್ನು ಮನೆ ಮಂದಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ದರಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು. ಮೃತರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ.

Hot Topics

‘ಸುಳ್ಳುಗಳ ಮೂಲಕ ನಾರಾಯಣಗುರುವಿಗೆ ಮಾಡಿದ ಅಪಚಾರವನ್ನು ಮುಚ್ಚಿಟ್ಟುಕೊಳ್ಳಲಾಗದು’

ಮಂಗಳೂರು: ಸುಳ್ಳುಗಳ ಮೂಲಕ ಸಾಮಾಜಿಕ ಸುಧಾರಣೆಯ ಹರಿಕಾರ  ನಾರಾಯಣ ಗುರು ಅವರಿಗೆ ಮಾಡಿದ ಅಪಚಾರವನ್ನು ಬಿಜೆಪಿ ಮುಚ್ಚಿಟ್ಟುಕೊಳ್ಳಲಾಗದು ಎಂದು ಸಿಪಿಐಎಂ ಹೇಳಿದೆ.ಕೇರಳ ರಾಜ್ಯ ಸರಕಾರ ಸೂಚಿಸಿದ ನಾರಾಯಣಗುರು ಇರುವ ಸ್ಥಬ್ದ ಚಿತ್ರವನ್ನು ಪರಿಗಣಿಸದೇ...

ಮಂಗಳೂರು: ಮಾಲೀಕನ ಎದುರೇ ಸ್ಕೂಟರ್‌ ಕದ್ದೊಯ್ದ ಕಳ್ಳ

ಮಂಗಳೂರು: ಮಾಲೀಕನ ಎದುರಿನಲ್ಲಿಯೇ ಕಳ್ಳನೊಬ್ಬ ಸ್ಕೂಟರ್‌ ಕಳವು ಮಾಡಿದ ಘಟನೆ ನಗರದಲ್ಲಿ ನಡೆದಿದೆ.ರಿನ್ಸ್‌ ಮೋನ್‌ ಕ್ಸೇವಿಯರ್‌ ಅವರು ಜ.7ರಂದು ಬೆಳಗ್ಗೆ 11.30ರ ವೇಳೆಗೆ ಪಾರ್ಸಲ್‌ ಬಸ್‌ಗೆ ನೀಡಲು ಜ್ಯೋತಿ ವೃತ್ತದ ಬಳಿ ಸ್ಕೂಟರ್‌...

ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 1ಕೆ.ಜಿ, 300ಗ್ರಾಂ ಚಿನ್ನ ವಶಕ್ಕೆ

ದೇವನಹಳ್ಳಿ: ದುಬೈನಿಂದ ಬೆಂಗಳೂರಿಗೆ ಬಂದಿಳಿದ ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ನಗರದ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.ಮುಂಬೈಗೆ ಬಂದು ನಂತರ ಮುಂಬೈನಿಂದ ಬೆಂಗಳೂರಿಗೆ...