Wednesday, May 18, 2022

ರಸಮಂಜರಿ ಕಾರ್ಯಕ್ರಮ ನಡೆಯುತ್ತಿದ್ದಂತೆ ಉರುಳಿ ಬಿದ್ದ ಲೈಟಿಂಗ್ ಟ್ರೇಸ್ : ವೀಡಿಯೋ ವೈರಲ್

ಬೆಳಗಾವಿ: ರಸಮಂಜರಿ ಕಾರ್ಯಕ್ರಮ ನಡೆಯುತ್ತಿರುವಾಗ ನೋಡ ನೋಡುತ್ತಿದ್ದಂತೆ ವೇದಿಕೆ ಮೇಲೆ ಲೈಟಿಂಗ್ ಟ್ರೇಸ್ ಉರುಳಿ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದಲ್ಲಿ ನಡೆಯಿತು.

ವೇದಿಕೆ ಮೇಲಿದ್ದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅದೃಷ್ಟವಶಾತ್ ಅವಘಡದಿಂದ ಪಾರಾಗಿದ್ದಾರೆ.ರಾಜಾಪುರ ಗ್ರಾಮದಲ್ಲಿ ಚೂನಮ್ಮ ದೇವಿ ಜಾತ್ರೆಯ ಅಂಗವಾಗಿ ರಸಮಂಜರಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟನೆಗೊಳ್ಳುತ್ತಿದ್ದಾಗಲೇ ಲೈಟಿಂಗ್ ಟ್ರೇಸ್ ಮುರಿದುಬಿದ್ದಿದೆ. ಸುಮಾರು 20 ಮಂದಿ ಗಣ್ಯರು ವೇದಿಕೆಯ ಮೇಲೆ ಕುಳಿತಿದ್ದು, ಯಾವುದೇ ಪ್ರಾಣ ಹಾನಿಯಾಗಿಲ್ಲ. ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ‘ಲೈಟಿಂಗ್ ಅಳವಡಿಸಿದ್ದ ಕಂಬ ವೇದಿಕೆ ಮೇಲೆ ಉರುಳಿ ಆಕಸ್ಮಿಕ ಅವಘಡ ಸಂಭವಿಸಿತು. ಮೂವರಿಗೆ ಗಾಯಗಳಾಗಿದ್ದು, ನಾವೆಲ್ಲರೂ ಬಚಾವ್ ಆಗಿದ್ದೇವೆ.

ಗ್ರಾಮದ ಜಮೀನಿನಲ್ಲಿ ಕಾರ್ಯಕ್ರಮ ಇಟ್ಟುಕೊಂಡಿದ್ದಕ್ಕೆ ಅವಘಡ ಸಂಭವಿಸಿದೆ. ಸ್ವಲ್ಪ ಆಯ ತಪ್ಪಿದ್ರೂ ವೇದಿಕೆ ಮೇಲಿದ್ದ ಗಣ್ಯರ ಪ್ರಾಣ ಹಾನಿ ಆಗುತ್ತಿತ್ತು. ಜೊತೆಗೆ ವಿದ್ಯುತ್ ಅವಘಡ ಕೂಡ ಸಂಭವಿಸುವ ಸಾಧ್ಯತೆ ಇತ್ತು. ದೇವಿಯ ಆಶೀರ್ವಾದದಿಂದ ನಾವೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದೇವೆ’ ಎಂದರು.

 

LEAVE A REPLY

Please enter your comment!
Please enter your name here

Hot Topics

ಉಪ್ಪಿನಂಗಡಿ: ನಿಯಂತ್ರಣ ತಪ್ಪಿ ಬಸ್‌ ಪಲ್ಟಿ

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ಕಳೆದುಕೊಂಡು ಖಾಸಗಿ ಬಸ್ ರಸ್ತೆ ಬದಿಗೆ ಉರುಳಿದ ಬಿದ್ದ ಘಟನೆ ಉಪ್ಪಿನಂಗಡಿಯ ನೀರಕಟ್ಟೆ ಎಂಬಲ್ಲಿ ಸಂಭವಿಸಿದೆ.ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ 'ಭಾರತಿ' ಸಂಸ್ಥೆಗೆ ಸೇರಿದ ಖಾಸಗಿ ಬಸ್ ಪಲ್ಟಿ ಹೊಡೆದಿದೆ....

ಛೀ ಅಸಹ್ಯ: ಮಂಗಳೂರಿನಲ್ಲಿ ಗುದನಾಳದಲ್ಲಿಟ್ಟು ಸಾಗಿಸುತ್ತಿದ್ದ ಚಿನ್ನ ವಶಕ್ಕೆ

ಮಂಗಳೂರು: ಬೈಂದೂರಿನ ಪ್ರಯಾಣಿಕನೋರ್ವ ಬಹರೈನ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಸೋಮವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ.ಪ್ರಯಾಣಿಕನೋರ್ವ 736 ಗ್ರಾಂ ಚಿನ್ನವನ್ನು ಗುದನಾಳದಲ್ಲಿಟ್ಟು ಸಾಗಿಸುತ್ತಿದ್ದ ವೇಳೆ ಅಧಿಕಾರಿಗಳು ಪತ್ತೆ...

ರಾಜ್ಯ ಸರ್ಕಾರ ನಮ್ಮ ಅಧಿಕಾರ ಕಸಿದುಕೊಂಡಿದೆ: ಹೈಕೋರ್ಟ್‌ ಮುಂದೆ ಚುನಾವಣಾ ಆಯೋಗ ಅಳಲು

ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯತ್‌ಗಳಿಗೆ ಚುನಾವಣೆ ನಡೆಸಲು ಸಾಧ್ಯವಾಗದ ರೀತಿಯಲ್ಲಿ ರಾಜ್ಯ ಸರ್ಕಾರ ನಮ್ಮ ಅಧಿಕಾರ ಕಸಿದುಕೊಂಡಿದೆ ಎಂದು ರಾಜ್ಯ ಚುನಾವಣಾ ಆಯೋಗವು ಹೈಕೋರ್ಟ್‌ ಮುಂದೆ ತನ್ನ ಅಸಹಾಯಕತೆ...