Connect with us

    LATEST NEWS

    ಮಂಗಳೂರು: ಲಿಪ್‌ಲಾಕ್‌ ವೀಡಿಯೋ ವೈರಲ್‌ ಪ್ರಕರಣ: ಓರ್ವ ವಶಕ್ಕೆ-ಹಲವರು ಸಸ್ಪೆಂಡ್‌

    Published

    on

    ಮಂಗಳೂರು: ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಲಿಪ್‌ಲಾಕ್‌ ವೀಡಿಯೋ ವೈರಲ್‌ ಪ್ರಕರಣಕ್ಕೆ ಸಂಬಂಧಿಸಿದಂತೆ.

    ಓರ್ವನನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಂಗಳೂರು ನಗರ ಪೊಲೀಸ್‌ ಕಮೀಷನರ್ ಎನ್‌.ಶಶಿಕುಮಾರ್‌ ಮಾಹಿತಿ ನೀಡಿದ್ದಾರೆ.


    ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ನಮಗೆ ಸಿಕ್ಕ ಪ್ರಾಥಮಿಕ ಮಾಹಿತಿಯ ಪ್ರಕಾರ ಈ ಘಟನೆಯು 3-4 ತಿಂಗಳ ಹಿಂದೆ ನಡೆದಿದೆ.

    ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜು ಪಕ್ಕದ ಅಪಾರ್ಟ್‌ಮೆಂಟ್‌ವೊಂದರಲ್ಲಿ ರೂಂ ಬಾಡಿಗೆ ಪಡೆದು ಅಲ್ಲಿ ವಾಸ್ತವ್ಯ ನಡೆಸುತ್ತಿದ್ದರು.

    ಅಲ್ಲಿ ವಿದ್ಯಾರ್ಥಿನಿಯರನ್ನು ಕರೆದು ಈ ಕೃತ್ಯದಲ್ಲಿ ತೊಡಗಿದ್ದಾರೆ. ಈ ಬಗ್ಗೆ ಈಗಾಗಲೇ ಓರ್ವನನ್ನು ವಶಕ್ಕೆ ಪಡೆಯಲಾಗಿದ್ದು, ಟ್ರುತ್‌ ಆ್ಯಂಡ್‌ ಡೇರ್‌ ಗೇಮ್‌ನಲ್ಲಿ ಈ ರೀತಿ ಮಾಡಿದ್ದಾರೆಂದು ಪ್ರಾಥಮಿಕವಾಗಿ ತಿಳಿದು ಬಂದಿದೆ.

    ವೀಡಿಯೋದಲ್ಲಿರುವವರು ಅಪ್ರಾಪ್ತರೋ ಅಥವಾ ವಯಸ್ಕರೋ ಎಂಬ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಈ ಬಗ್ಗೆ ಬಾಲಕಿಯರನ್ನು ಠಾಣೆಗೆ ಕರೆಸಿ ಮಾಹಿತಿ ಪಡೆಯಾಗುವುದು ಎಂದರು.

    ಕೆಲ ತಿಂಗಳ ಹಿಂದೆ ನಡೆದ ಈ ವೀಡಿಯೋವನ್ನು ತನ್ನದೇ ಕಾಲೇಜಿನ ವಾಟ್ಸಪ್‌ ಗ್ರೂಪಿನಲ್ಲಿ ಅದೇ ತಂಡದಲ್ಲಿದ್ದ ಓರ್ವ ವಿದ್ಯಾರ್ಥಿ ಷೇರ್‌ ಮಾಡಿದ್ದ.

    ಈ ವೇಳೆ ಅದೇ ಗ್ರೂಪಿನಲ್ಲಿದ್ದ ಶಿಕ್ಷಕಿಯ ಗಮನಕ್ಕೆ ಬಂದು ಕಾಲೇಜು ಆಡಳಿತ ಮಂಡಳಿಗೆ ಮಾಹಿತಿ ನೀಡಿದ್ದಾರೆ.

    ಸದ್ಯ ಕಾಲೇಜು ಆಡಳಿತ ಮಂಡಳಿ ಇದರಲ್ಲಿ ಕೆಲವರನ್ನು ಸಸ್ಪೆಂಡ್‌ ಮಾಡಿದೆ. ಘಟನೆ ನಡೆದ ಸ್ಥಳಕ್ಕೆ ಕಮೀಷನರ್‌ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಸದ್ಯ ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಕಮೀಷನರ್‌ ತಿಳಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಹಳ್ಳ ಹಿಡಿದ ಸ್ಮಾರ್ಟ್‌ ಸಿಟಿಯ ಕಾಮಗಾರಿ; ಕುಂಟುತ್ತಾ ಸಾಗಿದ ಮಹಾಕಾಳಿ ಪಡ್ಪು ಅಂಡರ್ ಪಾಸ್

    Published

    on

    ಮಂಗಳೂರು: ಮಂಗಳೂರು ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಕೈಗೆತ್ತಿಕೊಂಡಿರುವ ಮಹಾಕಾಳಿ ಪಡ್ಪುವಿನ ರೈಲ್ವೇ ಅಂಡರ್‌ ಪಾಸ್‌ ಕಾಮಗಾರಿ ಸದ್ಯಕ್ಕಂತು ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ. ಈ ಕಾಮಗಾರಿ ಕೈಗೆತ್ತಿಕೊಂಡು ವರ್ಷಗಳೇ ಕಳೆದರೂ ಕಾಮಗಾರಿ ಮುಗಿಸಬೇಕು ಅನ್ನೋ ಇಚ್ಚೆ ಸ್ಮಾರ್ಟ್‌ ಸಿಟಿ ಯೋಜನೆಯವರಿಗೂ ಇದ್ದಂತಿಲ್ಲ.

    ಕೆಲ ತಿಂಗಳ ಹಿಂದೆ ಕಳಪೆ ಕಾಮಗಾರಿಯಿಂದಾಗಿ ಇಲ್ಲಿ ಕಾಮಗಾರಿ ಕುಸಿತ ಕೂಡಾ ಉಂಟಾಗಿತ್ತು. ಇದೀಗ ಕೆಲ ದಿನಗಳಿಂದ ಯಾವುದೇ ಕಾಮಗಾರಿ ನಡೆಸದೆ ಕಾರ್ಮಿಕರು ಕೂಡಾ ಕೆಲಸ ಇಲ್ಲದೆ ಸುಮ್ಮನೆ ಕುಳಿತಿರುವ ದೃಶ್ಯ ಇಲ್ಲಿ ಮಾಮೂಲಾಗಿದೆ. ಮಾರ್ಗನ್‌ ಗೇಟ್ ಮೂಲಕವಾಗಿ ಜೆಪ್ಪಿನ ಮೊಗೆರು ಹೈವೆ ಸಂಪರ್ಕಿಸುವ ಈ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಓಡಾಡುತ್ತಿದೆ. ಸದ್ಯ ಈ ಕಾಮಗಾರಿ ಆರಂಭವಾದ ಬಳಿಕ ಇಲ್ಲಿ ದ್ವಿಚಕ್ರ ವಾಹನಕ್ಕಷ್ಟೇ ಓಡಾಡಲು ವ್ಯವಸ್ಥೆ ಮಾಡಲಾಗಿದೆ.

    ಉಪ್ಪಳದಲ್ಲಿ 3.5 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ ವಶ; ಓರ್ವ ಬಂಧನ

    ಹೀಗಾಗಿ ಈ ರಸ್ತೆಯ ಮೂಲಕ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಕಾಮಗಾರಿ ಯಾವಾಗ ಮುಗಿಸ್ತೀರಿ ಅಂತ ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ಇಲ್ಲಿ ನಡಿಯುತ್ತಿರುವ ಕಾಮಗಾರಿಯ ವೇಗ ನೋಡಿದರೆ ಇದು 2024 ರಲ್ಲಿ ಪೂರ್ಣಗೊಳ್ಳುವ ಯಾವುದೇ ಲಕ್ಷಣ ಇಲ್ಲ ಅನ್ನೋದು ಸ್ಪಷ್ಟವಾಗುತ್ತಿದೆ. ಹೀಗಾಗಿ ತಕ್ಷಣ ಅಂಡರ್ ಪಾಸ್ ಕೆಲಸ ಮಗಿಸಿ ಅಂತ ಜನ ಒತ್ತಾಯಿಸಿದ್ದಾರೆ.

    Continue Reading

    LATEST NEWS

    11 ವರ್ಷದ ಬಾಲಕ ಹೃದಯಘಾ*ತಕ್ಕೆ ಬ*ಲಿ

    Published

    on

    ಹಾಸನ : ಹೃದಯಾಘಾ*ತ ಎಂಬುದು ಇತ್ತೀಚೆಗೆ ಸಾಮಾನ್ಯವಾಗಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರೂ ಹೃದಯಾ*ಘಾತಕ್ಕೆ ಒಳಗಾಗುತ್ತಿದ್ದಾರೆ. ರಾಜ್ಯದಲ್ಲಿ ಮತ್ತೊಂದು ಕಳವಳಕಾರಿ ಘಟನೆ ನಡೆದಿದ್ದು, 11 ವರ್ಷದ ಬಾಲಕ ಹೃದಯಾ*ಘಾತಕ್ಕೆ ಬ*ಲಿಯಾಗಿದ್ದಾನೆ. ಈ  ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಸಚಿನ್ ಮೃ*ತ ಬಾಲಕ.

    ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಸಚಿನ್, ಮನೆಯಲ್ಲಿ ಟಿವಿ ನೋಡುತ್ತಿದ್ದ ವೇಳೆ ಹೃದಯಾ*ಘಾತವಾಗಿದೆ.

    ಇದನ್ನೂ ಓದಿ : ಮನೆಯಲ್ಲಿ ಹಲ್ಲಿ ಕಾಟವೇ? ಈ ಸಿಂಪಲ್​ ಮನೆಮದ್ದು ಟ್ರೈ ಮಾಡಿ

    ಟಿವಿ ನೋಡುತ್ತಲೇ ಕುಸಿ*ದು ಬಿದ್ದ ಮಗನನ್ನು ಮಾತನಾಡಿಸಲು ಮನೆಯವರು ಪ್ರಯತ್ನಿಸಿದ್ದು, ಏನು ಮಾತನಾಡದೆ ಇರೋದನ್ನು ಗಮನಿಸಿ ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಆಲೂಕು ಸರ್ಕಾರಿ ಆಸ್ಪತ್ರೆಗೆ ಕರೆತರುವ ಮುನ್ನವೇ ಬಾಲಕ ಸಾ*ವನ್ನಪ್ಪಿದ್ದ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.

    Continue Reading

    FILM

    ಕನ್ನಡದ ಸೀರಿಯಲ್‌ನಲ್ಲಿ ಮಿಂಚುತ್ತಿರುವ ಉಡುಪಿಯ ಬೆಡಗಿ

    Published

    on

    ಬೆಂಗಳೂರು/ಮಂಗಳೂರು: ಸಿನೆಮಾದಲ್ಲಿ ನಟಿಸಬೇಕು ಅನ್ನೋದು ಎಲ್ಲರ ಕನಸು. ಆದರೆ ಇಲ್ಲೊಬ್ಬಾಕೆ ನಟಿಗೆ ಸೀರಿಯಲ್‌ನಲ್ಲಿ ನಟಿಸಬೇಕು ಎಂಬ ಆಸೆ. ಆದರೆ ಆಕೆಗೆ ಮಾತ್ರ ಮೊದಲು ಒಲಿದು  ಬಂದಿದ್ದು ಸಿನೆಮಾದಲ್ಲಿ ನಟಿಸುವ ಅವಕಾಶ. ಇದೀಗ ಆ ನಟಿ ಸುರ್ವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅವನು ಮತ್ತು ಶ್ರಾವಣಿ’ ಧಾರವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೌದು, ಈ ಧಾರಾವಾಹಿಯಲ್ಲಿ ಶ್ರಾವಣಿಯಾಗಿ ಕಾಣಿಸಿಕೊಂಡಿರುವ ಇಶಿಕಾ ಶೆಟ್ಟಿಗಾರ್ ಮೂಲತಃ ಉಡುಪಿಯವರಾಗಿದ್ದಾರೆ.

    ಶ್ರಾವಣಿ ಪಾತ್ರದ ಇಶಿಕಾ ಶೆಟ್ಟಿಗಾರ್ ಮೂಲತಃ  ಉಡುಪಿಯವರಾಗಿದ್ದು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಈಕೆ 9 ನೇ ತರಗತಿಯಲ್ಲಿದ್ದಅಗಲೇ ಸಿನೆಮಾ ನಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಊರ್ವಿ, ಗರುಡ, ಮನದ ಮರೆಯಲಿ ಸೇರಿದಂತೆ ನಾಳ್ಕೈದು ಸಿನೆಮಾಗಳಲ್ಲಿ ನಟಿಸಿದ್ದಾರೆ. ಬಳಿಕ ಕಾನೂನು ಪದವಿ ಮುಗಿಸಿರುವ ಇವರು ಸೀರಿಯಲ್‌ ನಲ್ಲಿ ಆಭಿನಯಿಸುವತ್ತ ಒಲವು ಮಾಡಿದ್ದಾರೆ. ಹೀಗಾಗಿ ಲುಕ್‌ ಟೆಸ್ಟ್ ಕೂಡಾ ಕೊಟ್ಟಿದ್ದಾರೆ.

    ಜಾನಿ ಮಾಸ್ಟರ್ ಪತ್ನಿಗೂ ಬಂತು ಕಂಟಕ..! ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್..!!

    ಇದೇ ವೇಳೆ ‘ಅವನು ಮತ್ತು ಶ್ರಾವಣಿ’ ಧಾರಾವಾಹಿಗೆ ರಿಪ್ಲೇಸ್‌ಮೆಂಟ್‌ ಪಾತ್ರಕ್ಕೆ ಕರೆ ಬರುತ್ತದೆ. ರಿಪ್ಲೇಸ್‌ಮೆಂಟ್‌ ಪಾತ್ರ ಆಗಿದ್ದರಿಂದ ಜನರಿಗೆ ಇಷ್ಟ ಆಗ್ಬೋದಾ ಅನ್ನುವ ಮೈಂಡ್‌ ಸೆಟ್ ನಲ್ಲಿ ಇವರು ಕೊನೆಗೂ ಪಾತ್ರಕ್ಕೆ ಸೈ ಎಂದು ಹೇಳಿದ್ದಾರೆ. ಇದೀಗ ಧಾರಾವಾಹಿ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ. ಈ ಧಾರಾವಾಹಿಯಲ್ಲಿ ನಟನೆ ಆರಂಭಿಸಿದ ಮೇಲೆ ಆಫರ್‌ಗಳು ಬರುತ್ತಿದೆ ಎಂದು ಇಶಿಕಾ ಶೆಟ್ಟಿಗಾರ್ ಹೇಳಿದ್ದಾರೆ.

    Continue Reading

    LATEST NEWS

    Trending