ಮಂಗಳೂರು: ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಎಆರ್) ಚುನಾವಣಾ ಸಮಯದಲ್ಲಿ ನೀಡಿದ ಅಫಿಡವಿಟ್ ಗಳನ್ನು ಪರಿಶೀಲಿಸಿ ದೇಶದ ಶ್ರೀಮಂತ ಸಿಎಂಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಎಡಿಆರ್ ತನ್ನ ವರದಿಯಲ್ಲಿ ಪ್ರತಿ ಮುಖ್ಯಮಂತ್ರಿಯ ಸರಾಸರಿ ಆಸ್ತಿ 52.59 ಕೋಟಿ ರೂ. 2023-2024ರಲ್ಲಿ ಭಾರತದ ತಲಾ ನಿವ್ವಳ ರಾಷ್ಟ್ರೀಯ ಆದಾಯವು ಸುಮಾರು 1,85,854 ರೂ. ಆಗಿದ್ದರೆ, ಒಬ್ಬ ಮುಖ್ಯಮಂತ್ರಿಯ ಸರಾಸರಿ ಆದಾಯ 13,64,310 ರೂ. ಆಗಿದೆ. ಇದು ಭಾರತದ ಸರಾಸರಿ ತಲಾ ಆದಾಯದ ಸುಮಾರು 7.3 ಪಟ್ಟು ಹೆಚ್ಚು. ಎಡಿಆರ್ ಮಾಹಿತಿ ಪ್ರಕಾರ ದೇಶದ 31 ಮುಖ್ಯಮಂತ್ರಿಗಳ ಒಟ್ಟು ಆಸ್ತಿ 1,630 ಕೋಟಿ ರೂ. ಆಗಿದೆ.
ಹಾಗಾದ್ರೆ, ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಮತ್ತು ಕಡಿಮೆ ಆಸ್ತಿ ಹೊಂದಿರುವ ಮುಖ್ಯಮಂತ್ರಿಯ ಡೇಟಾವನ್ನು ಬಿಡುಗಡೆ ಮಾಡಿದೆ.
ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ ಹಾಗೂ ನ್ಯಾಷನಲ್ ಎಲೆಕ್ಷನ್ ವಾಚ್ ಸಂಸ್ಥೆಗಳ ವರದಿ ಪ್ರಕಾರ, ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು 931 ಕೋಟಿ ರೂಪಾಯಿ ಮೌಲ್ಯದ ಆಸ್ತಿಯೊಂದಿಗೆ ಭಾರತದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇವಲ 15 ಲಕ್ಷ ರೂಪಾಯಿ ಆಸ್ತಿ ಮೌಲ್ಯ ಹೊಂದಿರುವ ಮುಖ್ಯಮಂತ್ರಿ ಎನಿಸಿಕೊಂಡಿದ್ದಾರೆ.
ಇದನ್ನೂ ಓದಿ: ಸಿದ್ಧರಾಮಯ್ಯ ಪರ ಪ್ರತಾಪ್ ಸಿಂಹ ಬ್ಯಾಟಿಂಗ್; ಕಾಂಗ್ರೆಸ್ ಸೇರ್ತಾರಾ ಮಾಜಿ ಸಂಸದ?
ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಅವರು 332 ಕೋಟಿ ರೂ.ಗೂ ಹೆಚ್ಚು ಆಸ್ತಿ ಹೊಂದಿರುವ ಎರಡನೇ ಶ್ರೀಮಂತ ಮುಖ್ಯಮಂತ್ರಿಯಾಗಿದ್ದಾರೆ. ಈ ಪಟ್ಟಿಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 51 ಕೋಟಿ ರೂಪಾಯಿಗೂ ಹೆಚ್ಚು ಆಸ್ತಿಯೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
ದೇಶದ ಬಡ ಸಿಎಂಗಳ ಪಟ್ಟಿಯಲ್ಲಿ ಮೂವರು
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇವಲ 15 ಲಕ್ಷ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವ ಮುಖ್ಯಮಂತ್ರಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು 55 ಲಕ್ಷ ರೂಪಾಯಿ ಮೌಲ್ಯದ ಆಸ್ತಿಯೊಂದಿಗೆ ಪಟ್ಟಿಯಲ್ಲಿ ಎರಡನೇ ಬಡ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ 1.18 ಕೋಟಿ ರೂಪಾಯಿ ಮೌಲ್ಯದ ಆಸ್ತಿಯೊಂದಿಗೆ ಮೂರನೇ ಬಡ ಮುಖ್ಯಮಂತ್ರಿಯಾಗಿದ್ದಾರೆ.
ಸಿಎಂಗಳ ಅಪರಾಧ ಪ್ರಕರಣಗಳು
13 ಜನ ಮುಖ್ಯಮಂತ್ರಿಗಳು (ಶೇ 42ರಷ್ಟು) ತಮ್ಮ ವಿರುದ್ದ ಕ್ರಿಮಿನಲ್ ಪ್ರಕರಣಗಳಿವೆ ಎಂದು ಘೋಷಿಸಿಕೊಂಡಿದ್ದಾರೆ. 10 ಮುಖ್ಯಮಂತ್ರಿಗಳು (ಶೇ 32ರಷ್ಟು) ತಮ್ಮ ವಿರುದ್ದ ಕೊಲೆ, ಅಪಹರಣ, ಲಂಚ ಮತ್ತು ಬೆದರಿಕೆ ಸೇರಿದಂತೆ ಗಂಭೀರ ಸ್ವರೂಪದ ಪ್ರಕರಣಗಳನ್ನು ಹೊಂದಿದ್ದಾರೆ.
ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಿರುದ್ದ 87 ಪ್ರಕರಣಗಳಿವೆ. ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ವಿರುದ್ದ 47 ಪ್ರಕರಣಗಳು ದಾಖಲಾಗಿದ್ದರೆ, ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರ ಮೇಲೆ 19 ಪ್ರಕರಣಗಳಿವೆ. ರಾಜ್ಯದ ಸಿಎಂ ಸಿದ್ದರಾಮಯ್ಯ ವಿರುದ್ದ 13 ಪ್ರಕರಣಗಳಿವೆ.
ದೇಶದ 31 ಮುಖ್ಯಮಂತ್ರಿಗಳ ಪೈಕಿ ಇಬ್ಬರು ಮಹಿಳೆಯರು ಮಾತ್ರ- ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಮತ್ತು ದೆಹಲಿಯ ಮುಖ್ಯಮಂತ್ರಿ ಅತಿಶಿ.
Pingback: ಸರ್ಕಾರದ ಹೊಸ ಕಾನೂನು; ಮನೆಗಳಿಗಿನ್ನು ಕಿಟಕಿ ಇಡಬಾರದು ! - NAMMAKUDLA NEWS - ನಮ್ಮಕುಡ್ಲ ನ್ಯೂಸ್