LATEST NEWS
ಫೇಸ್‌ಬುಕ್ ಪೋಸ್ಟ್ ಹಾಕಿ ಜೀವಾಂತ್ಯಗೊಳಿಸಿದ ಸಾಹಿತಿ, ಪರಿಸರವಾದಿ ಪುಟ್ಟಸ್ವಾಮಿ..!
ಮೈಸೂರು/ಮಂಗಳೂರು: ಕವಿ ಸಾಹಿತಿ ಪರಿಸರವಾದಿಯಾಗಿ ಗುರುತಿಸಿಕೊಂಡಿರುವ ಭೂಹಳ್ಳಿ ಪುಟ್ಟಸ್ವಾಮಿ(76 ವ) ಆತ್ಮಹತ್ಯೆಗೆ ಶರಣಾಗಿದ್ದಾರೆ. ಭಾನುವಾರ ರಾತ್ರಿ ಚನ್ನಪಟ್ಟಣದಲ್ಲಿರುವ ತನ್ನ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಪುಟ್ಟಸ್ವಾಮಿ ಅವರು ವೃತ್ತಿಯಲ್ಲಿ ಇತಿಹಾಸ ಉಪನ್ಯಾಸಕರಾಗಿ, ಪ್ರವೃತ್ತಿಯಲ್ಲಿ ಸಾಹಿತಿಯಾಗಿರುವ ಇವರು ಸುಮಾರು 25 ಕ್ಕೂ ಹೆಚ್ಚು ಕವನ ಸಂಕಲಗಳನ್ನು ಪ್ರಕಟಿಸಿದ್ದಾರೆ. ಗೊರೂರು ಸಾಹಿತ್ಯ ಪ್ರಶಸ್ತಿ, ಚುಟುಕು ಸಾಹಿತ್ಯ ಪ್ರಶಸ್ತಿ, ಕೆಎಸ್‌ಆರ್‌ಟಿಸಿ ಕನ್ನಡ ಕ್ರಿಯಾ ಸಮಿತಿಯಿಂದ ಸಾಹಿತ್ಯ ಕೌಸ್ತುಭ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಪುಟ್ಟಸ್ವಾಮಿಯವರು ಭಾಜನರಾಗಿದ್ದರು.
ಇನ್ನು ಪರಿಸರವಾದಿಯೂ ಆಗಿರುವ ಇವರು ಸಮಾಜಮುಖಿ ಕೆಲಸಗಳಲ್ಲಿ ತನ್ನನ್ನು ತಾನೂ ತೊಡಗಿಸಿಕೊಳ್ಳುತ್ತಿದ್ದರು. ಕವಿ, ವಿವೃತ್ತ ಉಪನ್ಯಾಸಕರೂ ಆಗಿರುವ ಪುಟ್ಟಸ್ವಾಮಿ ಅವರು ತಮ್ಮ ಸ್ವಂತ ದುಡಿಮೆಯಿಂದ ಬಂದ ಹಣದಿಂದ ತಾಲೂಕಿನ ವಿವಿಧ ಸರಕಾರಿ ಜಾಗಗಳಲ್ಲಿ ಗಿಡಗಳನ್ನು ನೆಟ್ಟು ಬರಡು ಭೂಮಿಯನ್ನು ಹಸಿರಾಗಿಸುತ್ತಿದ್ದರು. ಇವರ ಕುಟುಂಬ ಮೈಸೂರಿನಲ್ಲಿ ನೆಲೆಸಿದ್ದು, ಇವರು ಚೆನ್ನಪಟ್ಟಣದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸ ಮಾಡುತ್ತಿದ್ದರು. ಆಗಾಗ ಮೈಸೂರಿನ ಮನೆಗೆ ಹೋಗಿ ಕುಟುಂಬದವರ ಜೊತೆ ಇದ್ದು ಬರುತ್ತಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಅನಾರೋಗ್ಯದಿಂದ ವಿದ್ಯಾರ್ಥಿನಿ ಸಾ*ವು
ಆತ್ಮಹತ್ಯೆಗೂ ಮುಂಚೆ ಫೇಸ್‌ಬುಕ್ ಪೋಸ್ಟ್
ಅನಾರೋಗ್ಯದಿಂದ ಬಳಲುತ್ತಿದ್ದ ಪುಟ್ಟಸ್ವಾಮಿ ಅವರು, ಆತ್ಮಹತ್ಯೆಗೂ ಮೊದಲು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ‘ನನ್ನ ಸಾವಿಗೆ ನಾನೇ ಕಾರಣ. ಅನಾರೋಗ್ಯದಿಂದ ಬೇಸರಗೊಂಡು ಜೀವನ ಯಾತ್ರೆ
ಮುಗಿಸುತ್ತಿದ್ದೇನೆ. 28-07-20 ರಾತ್ರಿ 2.40 ಇತೀ ಭೂ ಹಳ್ಳಿ ಪುಟ್ಟಸ್ವಾಮಿ’ ಎಂದು ಬರೆದುಕೊಂಡಿದ್ದಾರೆ.
LATEST NEWS
ರಾಜ್ಯದ ‘KSRTC’ ಬಸ್ ಸೇರಿದಂತೆ 4 ಬಸ್‌ಗಳ ಮೇಲೆ ಕಲ್ಲು ತೂರಾಟ; ಕಿಡಿಗೇಡಿಗಳು ಪರಾರಿ
ಮಂಗಲುರು/ಹೈದ್ರಾಬಾದ್ : ಆಂಧ್ರಪ್ರದೇಶದ ಹೈದರಾಬಾದ್ ನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್‌ಆರ್ಟಿಸಿ ಸಂಸ್ಥೆಯ ಐರಾವತ ಬಸ್ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಸಿರುವ ಘಟನೆ ಹೈದರಾಬಾದ್ ಸಮೀಪದ ಶಂಶಾಬಾದ್ ನಲ್ಲಿ ನಡೆದಿದೆ.
ಗುರುವಾರ (ನ.7) ರಾತ್ರಿ 11 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.
ಹೈದರಾಬಾದ್‌ನಿಂದ ಬೆಂಗಳೂರು ನಡುವೆ ಸಂಚರಿಸುವ ಸಾರಿಗೆ ಬಸ್ ರಾತ್ರಿ 10:45ರ ಸುಮಾರಿನಲ್ಲಿ ಹೈದರಾಬಾದ್‌ನಿಂದ ಬೆಂಗಳೂರಿನತ್ತ ಹೊರಟಿತ್ತು.
ಕರ್ನಾಟಕದ ಕೆಎಸ್‌ಆರ್‌ಟಿಸಿ ಬಸ್ ಮಾತ್ರವಲ್ಲದೇ ತೆಲಂಗಾಣದ ಒಂದು ಸರ್ಕಾರಿ ಬಸ್, ಖಾಸಗಿ ಬಸ್ ಸೇರಿದಂತೆ ಒಟ್ಟು 4 ಬಸ್‌ಗಳ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದಾರೆ. ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಬಸ್ಸಿನ ಕಿಟಕಿಯ ಗಾಜುಗಳು ಮಾತ್ರ ಒಡೆದು ಹೋಗಿವೆ.
ಈ ಪ್ರಕರಣದ ಸಂಬಂಧ ಶಂಶಾಬಾದ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
BIG BOSS
BBK 11: ಬಿಗ್‌ಬಾಸ್ ವಾರದ ಕತೆಯಲ್ಲಿ ಮೋಕ್ಷಿತಾಗೆ ಕ್ಲಾಸ್ ತಗೊಳ್ತಾರಾ ಕಿಚ್ಚ?
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್‌ಬಾಸ್ ಸೀಸನ್ 11, 41ನೇ ದಿನಕ್ಕೆ ಕಾಲಿಟ್ಟಿದೆ. ಇದೇ ಹೊತ್ತಲ್ಲಿ ವಾರದ ಕತೆ ಕಿಚ್ಚನ ಜೊತೆ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ನ ಆಗಮನ ಆಗಿದೆ. ವೈಟ್ ಅಂಡ್ ವೈಟ್ನಲ್ಲಿ ವೇದಿಕೆಗೆ ಬಂದ ಕಿಚ್ಚ ಸುದೀಪ್ ಈ ಯುದ್ಧದಲ್ಲಿ ಗೆದ್ದವರು ಯಾರು? ಬಿದ್ದವರು ಯಾರು? ತನ್ನ ತನವನ್ನು ಕಳೆದುಕೊಂಡವರು ಯಾರು ಅಂತ ಪ್ರಶ್ನೆ ಮಾಡಿದ್ದಾರೆ.
ಹೌದು, ಕಲರ್ಸ್ ಕನ್ನಡದಲ್ಲಿ ರಿಲೀಸ್ ಆದ ಹೊಸ ಪ್ರೋಮೋದಲ್ಲಿ ಕಿಚ್ಚ ಸುದೀಪ್ ಅವರು ಬಿಗ್‌ಬಾಸ್ ವೇದಿಕೆಗೆ ಬಂದಿದ್ದಾರೆ. ವಿಶೇಷ ಅಧಿಕಾರಗಳನ್ನು ಗೆಲ್ಲೋ ಉದ್ದೇಶವನ್ನು ಇಟ್ಟುಕೊಂಡಿತ್ತು ಇಡೀ ಮನೆ. ಈ ಯುದ್ಧದಲ್ಲಿ ಗೆದ್ದವರು ಯಾರು? ಬಿದ್ದವರು ಯಾರು? ತನ್ನ ತನವನ್ನು ಕಳೆದುಕೊಂಡವರು ಯಾರು ಅಂತ ಇಂದಿನ ಸಂಚಿಕೆಯಲ್ಲಿ ಚರ್ಚೆಯಾಗಲಿದೆ. ಸದ್ಯ ಇದೇ ಪ್ರೋಮೋ ವೀಕ್ಷಕರಲ್ಲಿ ಕುತೂಹಲ ಮೂಡಿಸಿದೆ. ಇನ್ನು ಈ ವಾರ ಕಿಚ್ಚ ಮೋಕ್ಷಿತಾಗೆ ಕ್ಲಾಸ್ ತೆಗೆದುಕೊಳ್ಳುತ್ತಾರಾ ಎಂದು ಕಾದುನೋಡಬೇಕಾಗಿದೆ.
ಸದ್ಯ ಬಿಗ್‌ಬಾಸ್ ಮನೆಯಲ್ಲಿ ಒಟ್ಟು 13 ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ನಾಳಿನ ಸಂಚಿಕೆಯಲ್ಲಿ ಓರ್ವ ಸ್ಪರ್ಧಿ ಬಿಗ್‌ಬಾಸ್ ಮನೆಗೆ ಗುಡ್ಬೈ ಹೇಳಬೇಕು. ಬಿಗ್‌ಬಾಸ್ ಮನೆಯಿಂದ ಯಾವ ಸ್ಪರ್ಧಿ ಆಚೆ ಹೋಗಲಿದ್ದಾರೆ ಅಂತ ಕಾದು ನೋಡಬೇಕಿದೆ.
LATEST NEWS
ಚಾರ್ಮಾಡಿ ಘಾಟ್ ಹೆದ್ದಾರಿ ದ್ವಿಪಥಗೊಳಿಸಲು 343.74 ಕೋಟಿ ರೂ. ಬಿಡುಗಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ
ಮಂಗಳೂರು: ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಮಂಗಳೂರಿನಿಂದ ಮೂಡಿಗೆರೆಯಾಗಿ ತುಮಕೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-73ರ ಚಾರ್ಮಾಡಿ ಘಾಟಿಯಲ್ಲಿ 75 ಕಿ.ಮೀ ನಿಂದ 86.20 ಕಿ.ಮೀ. ಅಂತರದವರೆಗೆ ಅಭಿವೃದ್ದಿಯಾಗಲಿದೆ. ಆ ಮೂಲಕ ಚಾರ್ಮಾಡಿ ಘಾಟ್ ಪ್ರದೇಶದ ರಸ್ತೆಯು ದ್ವಿಪಥವಾಗಿ ಅಗಲೀಕರಣಗೊಳ್ಳಲಿದೆ. ಈ ಹೆದ್ದಾರಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಕೂಡ ಪೂರ್ಣಗೊಂಡಿದೆ ಎಂದು ಸಂಸದರು ಹೇಳಿದ್ದಾರೆ.
ರಾಜ್ಯದ ಪ್ರಮುಖ ಹೆದ್ದಾರಿಯಾದ ಚಾರ್ಮಾಡಿ ಘಾಟ್‌ನ್ನು ಮೇಲ್ದರ್ಜೆಗೇರಿಸುವುದರಿಂದ ಕರಾವಳಿ ಭಾಗದ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಜತೆಗೆ ಸುಗಮ ಸರಕು ಸಾಗಾಣೆಯೊಂದಿಗೆ ಈ ಭಾಗದ ವ್ಯಾಪಾರ-ವಹಿವಾಟು ಕೂಡ ವೃದ್ಧಿಸಲಿದೆ. ಆ ಮೂಲಕ, ಕರ್ನಾಟಕದ ವಾಣಿಜ್ಯ ಹೆಬ್ಬಾಗಿಲು ಎಂದು ಗುರುತಿಸಿಕೊಂಡಿರುವ ಕರಾವಳಿ ಮತ್ತಷ್ಟು ಪ್ರಗತಿ ಪಥದಲ್ಲಿ ಮುನ್ನಡೆಯಲಿದೆ ಎಂದರು.
ಹೀಗಾಗಿ, ಚಾರ್ಮಾಡಿ ಘಾಟ್ ಹೆದ್ದಾರಿ ದ್ವಿಪಥಗೊಳಿಸಲು 343,74,00,000 ರೂ. ಬಿಡುಗಡೆಗೊಳಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಾಗೂ ಇಲಾಖೆ ಅಧಿಕಾರಿಗಳಿಗೆ ಜಿಲ್ಲೆಯ ಜನತೆ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ಕ್ಯಾ. ಚೌಟ ಹೇಳಿದ್ದಾರೆ.
- LATEST NEWS2 days ago
ವಧುವಿನಿಂದ ʼಮೊದಲ ರಾತ್ರಿʼ ನಿರಾಕರಣೆ; ಕಾರಣ ತಿಳಿದು ವರನಿಗೆ ಶಾ*ಕ್
- FILM3 days ago
ಕೋರ್ಟ್ ಮೆಟ್ಟಿಲೇರಿದ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್
- LATEST NEWS4 days ago
ರೈಲ್ವೆ ನಿಲ್ದಾಣದಲ್ಲಿ ಸೂಟ್ಕೇಸ್ನಲ್ಲಿ ಮಹಿಳೆಯ ಶ*ವ ಪತ್ತೆ; ತನಿಖೆ ವೇಳೆ ಬಯಲಾಯ್ತು ಸತ್ಯ!
- LATEST NEWS5 days ago
ಮಹಿಳೆಯರಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ 450 ರೂ.ಗೆ ಗ್ಯಾಸ್ ಸಿಲಿಂಡರ್